ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. ಇಂದಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಕಾಯಿಲೆರಹಿತವಾಗಿ ಆರೋಗ್ಯವಂತರಾಗಿ ಬದುಕಲು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ದೇಹದ ರೋಗ ನಿರೋಧಕರ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಮ್ಮ ಸುತ್ತಮುತ್ತಲು ದೊರೆಯುವ ಔಷಧಿ ಸಸ್ಯಗಳನ್ನು ಆಹಾರ ರೂಪದಲ್ಲಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಮನೆ ಮದ್ದಾಗಿ ಉಪಯೋಗಿಸಬಹುದು ಎಂದು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಹೇಳಿದರು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರುಗಿದ ಉಚಿತ ಆರೋಗ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ. ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರೆತಿದ್ದು, ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಹಾಕಿದರೆ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಕಲಾವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ- ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ರ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಿದರು. ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ, ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ರಿಷಬ್ ಹೇಳಿದರು. ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೊಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ 24 ಗಂಟೆಗಳ ಕಾಲ ತುರ್ತು ಸೇವೆ ಹೊರತುಪಡಿಸಿ ಇತರ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು, ಶನಿವಾರ ಬೈಂದೂರು ಕುಂದಾಪುರ ಸೇರಿದಂತೆ ವಿವಿಧೆಡೆ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿದ್ದಾರೆ. ಬೈಂದೂರಿನಲ್ಲಿ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಯ ನೇತೃತ್ವದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಈ ವೇಳೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ ಅವರು ಮಾತನಾಡಿ, ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ವೈದ್ಯಕೀಯ ಸಮುದಾಯದ ಮನೋಸ್ಥೈರ್ಯವನ್ನು ಕುಗ್ಗಿಸಿದ್ದು, ವೈದ್ಯ ಸಮೂಹ ಇದನ್ನು ಗಂಭೀರವಾಗಿ ಖಂಡಿಸುತ್ತದೆ. ಘಟನೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ರಕ್ಷಣೆ ಮತ್ತು ಅವರ ಮನೋಸ್ಥೈರ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.17: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರಸ್ ಮುಖಂಡ ಜಾಕೋಬ್ ಡಿಸೋಜಾರವರು ಇಂದು ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನಗರದ ಸಂಗಮ್ ಬಳಿಯ ನಿವಾಸಿಯಾದ ಜಾಕೋಬ್ ಅವರು, ಕಾಂಗ್ರೇಸ್ನ ತಳಮಟ್ಟದ ಕಾರ್ಯಕರ್ತರಾಗಿ ಕುಂದಾಪುರ ನಗರದ ಪುರಸಭಾ ಸದಸ್ಯರಾಗಿ, ಕುಂದಾಪುರ ಪುರಸಭೆಯ ಉಪಾಧ್ಯಕ್ಷರಾಗಿ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಫಲವಾಗಿ ನಾವಿಂದು ದೇಶದಲ್ಲಿ ಶಾಂತಿಯಿಂದ ಸ್ವತಂತ್ರವಾಗಿ ನೆಲೆಸಲು ಸಾಧ್ಯವಾಗಿದೆ. ನಮ್ಮ ದೇಶ ಬಲಿಷ್ಠವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ ರಕ್ಷಣಾ ವ್ಯವಸ್ಥೆ ಅತ್ಯಂತ ಸದೃಢವಾಗಿದೆ. ಇತರ ಎಲ್ಲಾ ರಾಷ್ಟ್ರಗಳು ನಮ್ಮ ದೇಶವನ್ನು ನೋಡುವ ಸ್ಥಿತಿಗೆ ಬಂದಿರುವುದು ದೇಶವಾಸಿಗಳಾದ ನಮ್ಮೆಲ್ಲರ ಸೌಭಾಗ್ಯ. ದೇಶದ ಪ್ರತಿಯೊಬ್ಬ ನಾಗರಿಕನು ದೇಶಾಭಿಮಾನ ಬೆಳೆಸಿಕೊಂಡು ದೇಶ ಸೇವೆಗಾಗಿ ಸಂಕಲ್ಪ ಮಾಡಬೇಕಿದೆ ಎಂದು ನಿವೃತ್ತ ಯೋದ ರಾಜೇಶ ಮೊಗವೀರ ಗಂಗೊಳ್ಳಿ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ – 2024 ಸಮಾರಂಭ, ದೇಶದ 78ನೇ ಸ್ವಾತಂತ್ರ್ಯೋತ್ಸವ ಹಾಗೂ ಕಾರ್ಗಿಲ್ ವಿಜಯೋತ್ಸವದ ರಜತ ಸಂಭ್ರಮಾಚರಣೆ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸಂಜೆ ಜರಗಿದ ಭಾರತ ಮಾತಾ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿವೃತ್ತ ಪೊಲೀಸ್ ಉಪನಿರೀಕ್ಷಕ ವಾಸಪ್ಪ ನಾಯ್ಕ್ ಉಡುಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಬೆಳೆ ಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೆಳೆ ಸಾಲ ಹೊಂದಿದ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ಆಗಸ್ಟ್ 25 ರ ವರೆಗೆ ಅವಧಿ ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಲಾಗಿದ್ದು. ಬೆಳೆ ವಿಮೆಗೆ ಒಳಪಡದ ಬೆಳೆ ಸಾಲ ಹೊಂದಿರುವ ರೈತರು ಕೂಡಲೇ ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್ನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೊಳನಕಲ್ಲು ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಅಭಿವೃದ್ಧಿಯನ್ನು ಕಾಣುತ್ತಿದೆ. ಗ್ರಾಮೀಣ ಕನ್ನಡ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಹೆಚ್ಚು ಹೆಚ್ಚು ಅವಕಾಶ ನೀಡುತ್ತಾ, ದೇಶಭಕ್ತಿ ಬೆಳೆಯುವಂತೆ ಮಾಡಬೇಕು ಎಂದು ತಾಲೂಕು ಪಂಚಾಯತ್ ಕುಂದಾಪುರದ ಮಾಜಿ ಸದಸ್ಯರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ಕೊಳನಕಲ್ಲು ಶಾಲೆಯಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸುಬ್ರಹ್ಮಣ್ಯ ಕೆದ್ಲಾಯ ಅವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲಿ ವಿದ್ಯಾರ್ಥಿಗಳಿಗೆ ಉಲ್ಲಾಸ್ ಡಿಸಿಲ್ವಾ ಕೋಟೇಶ್ವರ ಮತ್ತು ಪಾರ್ವತಿ ಸಿಲ್ಕ್ಸ್ ಬಿದ್ಕಲ್ಕಟ್ಟೆ ಅವರು ಜಂಟಿಯಾಗಿ ನೀಡಿದ ಸಮವಸ್ತ್ರ ವಿತರಿಸಲಾಯಿತು. ಶಾಲೆಯ ಸೌಂದರ್ಯೀಕರಣಕ್ಕೆ ದೇಣಿಗೆ ನೀಡಿದ ಸತ್ಯನಾರಾಯಣ ಕೆದ್ಲಾಯ, ಸಮವಸ್ತ್ರದ ಭಾಗಶಃ ದೇಣಿಗೆ ನೀಡಿದ ಪಾರ್ವತಿ ಸಿಲ್ಕ್ಸ್ ಬಿದ್ಕಲ್ಕಟ್ಟೆ ಆಡಳಿತ ಪಾಲುದಾರರಾದ. ದಿನೇಶ್ ಕುಲಾಲ್ ಮತ್ತು ಪ್ರಶಾಂತ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಶಾಲಾ ಸುಣ್ಣ ಬಣ್ಣಕ್ಕೆ ದೇಣಿಗೆ ನೀಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ದೂ.ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
