ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಣ್ಣಿಗೆ ಕಾಣುವ ಕಲ್ಲು ಎಲ್ಲರಿಗೂ ಸಾಮಾನ್ಯವಾಗಿ ಕಂಡರೂ ಶಿಲ್ಪಿಗೆ ಮಾತ್ರ ಅದರೊಳಗಿನ ಅದಮ್ಯ ಶಕ್ತಿ ಎದ್ದು ಕಾಣುತ್ತದೆ. ಶಿಲ್ಪಿ ಕಲ್ಲಿನಲ್ಲಿರುವ ಬೇಡದಿರುವ ಅಂಶಗಳನ್ನು ಕೆತ್ತಿ ತೆಗೆದು ಸುಂದರ ಶಿಲ್ಪಕ್ಕೆ ರೂಪು ನೀಡುವಂತೆ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ .ಈ ಹಿನ್ನಲೆಯಲ್ಲಿ ಶಿಕ್ಷಕರ ಕಾರ್ಯ ಮಹತ್ವದಾಗಿದೆ ಎಂದು ಕರ್ನಾಟಕ ಬ್ಯಾಂಕ್, ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿಯ ಸಹಾಯಕ ಮಹಾ ಪ್ರಬಂಧಕ ವಾದಿರಾಜ.ಕೆ ಹೇಳಿದರು. ಅವರು ಗುರುವಾರ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘದ ಆಸರೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದಲ್ಲಿ ನಡೆದ ಕನ್ನಡ ಕಾರ್ಯಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ ಉಪನ್ಯಾಸಕರಿಗೆ ಪಾಠವನ್ನು ಮಾಡುವ ಮೊದಲು ಅದರ ಹಿಂದಿನ ತಯಾರಿ ಮುಖ್ಯವಾದುದು. ಹೆಚ್ಚು ಪುಸ್ತಕಗಳನ್ನು ಓದಿ ಹೊಸತನವನ್ನು ರೂಪಿಸಿಕೊಂಡು ಮಕ್ಕಳಲ್ಲೂ ಆ ಗುಣಗಳನ್ನು ಬೆಳೆಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಹಯೋಗದೊಂದಿಗೆ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಸನತ್ ಆರ್. ಸಿರಿಯಾನ್ ವಿಜಯಶಾಲಿಯಾಗುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು. ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವನಿಧಿ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರಪಡಿಸುವುದರೊಂದಿಗೆ ನಿರುದ್ಯೋಗ ಹೊಂದಿದ ಯುವಜನರು ಇದರ ಫಲಾನುಭವಿಗಳಾನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅನುಷ್ಠಾನ ಹಾಗೂ ಐ. ಟಿ. ಐ ಪ್ರವೇಶಾತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಾದ ಅರ್ಹ ಯುವಜನರಿಗೆ ಯುವನಿಧಿ ಯೋಜನೆಯಡಿ ಪ್ರತೀ ತಿಂಗಳು ಪದವಿ ಹೊಂದಿದವರಿಗೆ 3,000ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ನೇರ ನಗದು ಹಣವನ್ನು ನಿರುದ್ಯೋಗ ಭತ್ಯೆ ರೀತಿಯಲ್ಲಿ ನೀಡುತ್ತಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಇದರ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿದವರು ಹಾಗೂ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬೀಚ್ಗಳ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡಲತೀರಗಳಿಗೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೀಚ್ಗಳ ಸ್ಥಳೀಯ ಭೌಗೋಳಿಕ ಪ್ರದೇಶದ ಮಾಹಿತಿ ಕೊರತೆಯಿಂದ ಜೀವಹಾನಿಗಳು ಉಂಟಾಗುತ್ತವೆ. ಈ ಬಗ್ಗೆ ಪ್ರವಾಸಿಗರಿಗೆ ಸರ್ವಋತುಗಳಲ್ಲಿ ಸ್ಥಳೀಯ ಭೌಗೋಳಿಕ ಮಾಹಿತಿ ನೀಡುವುದು, ಅವರ ಭದ್ರತೆ, ಸುರಕ್ಷತೆ ಸೇರಿದಂತೆ ಮೂಲಸೌಲಭ್ಯಗಳ ವ್ಯವಸ್ಥೆಗಳನ್ನು ಕಲ್ಪಿಸುವುದನ್ನು ಒಳಗೊಂಡಂತೆ ಯೋಜನೆಯನ್ನು ರೂಪಿಸಬೇಕು ಎಂದರು. ಜಿಲ್ಲೆಯ ಪ್ರಾಕೃತಿಕ, ಧಾರ್ಮಿಕ ಪ್ರವಾಸೋದ್ಯಮಗಳ ಬಗ್ಗೆ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸುವ ಮಾಹಿತಿಯನ್ನು ಒಳಗೊಂಡ ನೂತನ ವೆಬ್ಸೈಟ್ ಅನ್ನು ಸೃಜನಪಡಿಸಬೇಕು. ಇದರಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳು, ಅಲ್ಲಿ ಪ್ರವಾಸಿಗರಿಗೆ ಸಿಗುವ ಸೌಲಭ್ಯಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.1: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 02ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜುಲೈ 31ರಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 5ರ ತನಕವೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿಗೆ ವಯೋನಿವೃತ್ತಿ ಹೊಂದಿದ ಸಹಕಾರ ಇಲಾಖೆ ಕುಂದಾಪುರ ಉಪವಿಭಾಗದಲ್ಲಿ ಸಹಾಯಕ ನಿಬಂಧಕರಾಗಿ ಸೇವೆ ಸಲ್ಲಿಸಿದ ಅರುಣ್ ಕುಮಾರ್ ಎಸ್. ವಿ. ಅವರನ್ನು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಆನಂದ ಬಿಲ್ಲವ ಅವರ ಸನ್ಮಾನಿತರ ಸೇವಾವಧಿ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಸನ್ಮಾನಿತರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಂಡರು. ನಿರ್ದೇಶಕರಾದ ಶ್ರೀನಿವಾಸ ಜತ್ತನ್ ಪೂಜಾರಿ, ಹರೀಶ ಮೇಸ್ತ, ಕೆ. ಮಾಧವ ಖಾರ್ವಿ, ಸುಭಾಶ್ಚಂದ್ರ ಪೂಜಾರಿ, ಜಿ. ಗೋಪಾಲ ನಾಯ್ಕ್, ಪ್ರೇಮಾ ಸಿ. ಪೂಜಾರಿ, ಯಮುನಾ, ಚಂದ್ರಮತಿ ಡಿ. ಹೆಗ್ಡೆ, ನಾಗರಾಜ ಎಂ., ಲಕ್ಷ್ಮಣ, ಬ್ಯಾಂಕಿನ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮಗಳ ಸವಾಂಗೀಣ ಅಭಿವೃದ್ಧಿ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಕಂಡ ಕನಸು. ಇದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯನ್ನು ಕಟ್ಟಿ ಇದರ ಮೂಲಕ ನನಸು ಮಾಡುವ ಮಹತ್ತರ ಕೆಲಸವನ್ನು ಕಳೆದ 42 ವರ್ಷಗಳಿಂದ ನಿರಂತರವಾಗಿ ಪೂಜ್ಯ ಹೆಗ್ಗಡೆ ಅವರು ಮಾಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಕಾರ್ಯಕ್ರಮ, ಘಟಕಗಳನ್ನು ಪ್ರಾರಂಭ ಮಾಡಿ ಇದರ ಮೂಲಕ ಸಮಾಜವನ್ನು ಸದೃಢಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಮರವಂತೆಯ ಸಾಧನಾ ಸಭಾ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸಭೆಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಅವರು ಜನಜಾಗೃತಿ ಕಾರ್ಯಕ್ರಮದ ಧ್ಯೇಯೋದ್ದೇಶಗಳ ಬಗ್ಗೆ, ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿಯ ಸಭೆಯನ್ನು ಪರಿಣಾಮಕಾರಿಯಾಗಿ ಮಾಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ್ ಸ್ವಾಮೀಜಿ ಅವರು ಬೆಂಗಳೂರಿನ ಬಸವನಗುಡಿಯ ಶ್ರೀ ದ್ವಾರಕಾನಾಥ ಭವನದಲ್ಲಿ ಕ್ರೋಧಿ ನಾಮ ಸಂವತ್ಸರದ ಚತುರ್ಮಾಸ ವೃತವನ್ನು ಶನಿವಾರ ಆರಂಭಿಸಿದರು. ಅಂದು ಬೆಳಿಗ್ಗೆ ಆರಂಭವಾದ ಚಾತುರ್ಮಾಸ ಸ್ವೀಕಾರದ ಧಾರ್ಮಿಕ ವಿಧಿ ವಿಧಾನಗಳು, ಗಣಪತಿ ಪೂಜಾ, ಮೃತ್ತಿಕಾ ಪೂಜಾ, ವ್ಯಾಸ ಪೂಜಾ, ಚಾತುರ್ಮಾಸ ವೃತ ಸ್ವೀಕಾರ ವಿಧಿ ವಿಧಾನನಗಳು ನಡೆಯಿತು. ಸಂಜೆ ದ್ವಾರಕಾನಾಥ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ್ ಸ್ವಾಮೀಜಿ ಅವರು, ಈ ಹಿಂದೆ 1979ರಲ್ಲಿ ಹಿರಿಯ ಸ್ವಾಮೀಜಿ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಅವರು ಬೆಂಗಳೂರಿನ ಶ್ರೀ ದ್ವಾರಕಾನಾಥ ಭವನದಲ್ಲಿ ಚಾತುರ್ಮಾಸ ಕಾರ್ಯಕ್ರಮವನ್ನು ಕೈಗೊಂಡಿದ್ದರು. ಇದೀಗ 45 ವರ್ಷಗಳ ಬಳಿಕ ಬೆಂಗಳೂರಿನ ಗೌಡ ಸಾರಸ್ವತ ಸಮಾಜ ಬಾಂಧವರಿಗೆ ಶ್ರೀ ರಾಮ್ ದೇವ್ ವೀರ ವಿಠಲ ದೇವರ ಹಾಗೂ ಸ್ವಾಮೀಜಿಗಳ ಸೇವಾ ಕೈಂಕರ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ’ಸಪ್ತಸ್ವರ’ ವೇದಿಕೆಯಲ್ಲಿ ಎನ್. ಎಸ್. ಎಸ್. ಘಟಕದ 2024 – 25ನೇ ಶೈಕ್ಷಣಿಕ ವರ್ಷದ ತನ್ನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಜು.31ರಂದು ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಜಯಶಂಕರ್ ಕಂಗ್ಗಣ್ಣಾರ್ ಅವರು ಮಾತನಾಡಿ, ಎನ್. ಎಸ್. ಎಸ್. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಅರಳಿಸುವುದರ ಜೊತೆಗೆ ಚಾರಿತ್ರ್ಯ ಬೆಳೆಸುತ್ತದೆ. ಸದ್ಗುಣಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಎನ್. ಎಸ್. ಎಸ್. ಪಾತ್ರ ಅತಿಮುಖ್ಯ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಬಿ. ಅವರು ʼಪ್ರೀತಿ, ತ್ಯಾಗ, ಶಾಂತಿ, ಸಹಬಾಳ್ವೆ, ಬಂಧುತ್ವ ಮುಂತಾದ ಉದಾತ್ತ ಗುಣಗಳನ್ನು ಮನುಷ್ಯ ಹೊಂದಿರಬೇಕು. ಮಮತೆ ಮತ್ತು ಮಾನವತೆಯನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ, ನೈರ್ಮಲ್ಯ, ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಎನ್. ಎಸ್. ಎಸ್. ಘಟಕ ಪೂರಕವಾಗಿ ಕೆಲಸ ಮಾಡುತ್ತದೆ’ ಎಂದರು.…
