ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಬೈಂದೂರಿನ ಸುರಭಿ ಸಂಸ್ಥೆ ಪ್ರತಿವರ್ಷದಂತೆ ನಾಲ್ಕು ದಿನಗಳ ರಂಗ ಹಬ್ಬವನ್ನು ಆಯೋಜಿಸಿದೆ. ಫೆಬ್ರವರಿ 04ರಿಂದ 07ರ ವರೆಗೆ ಪ್ರತಿದಿನ ಸಂಜೆ ಗಂಟೆ 6-30ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ನಾಟಕೋತ್ಸವ ನಡೆಯಲಿದೆ. ಫೆ.04ರಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದು, ಸಾಹಿತ್ಯ ಸಮುದಾಯ ಶಿವಮೊಗ್ಗದ ಕಾರ್ಯದರ್ಶಿ ಕೆ. ಪ್ರಭಾಕರನ್ ಜ್ಯೋತಿ ಪ್ರಜ್ವಲನಗೈಯಲಿದ್ದಾರೆ. ಕಾರ್ಯಕ್ರಮದ ನಾಲ್ಕು ದಿನಗಳ ಕಾಲ ರಂಗಭೂಮಿ ಚಿತ್ರನಟಿ ಚಂದ್ರಕಲಾ ರಾವ್, ಹಿರಿಯ ರಂಗನಟ ಗಣೇಶ್ ಕಾರಂತ್, ರಂಗನಟ ಹಾಗೂ ಚಲನಚಿತ್ರ ನಟ ರಘು ಪಾಂಡೇಶ್ವರ, ರಂಗನಟ ಯತೀಶ್ ಕೊಳ್ಳೆಗಾಲ ಅವರನ್ನು ಸನ್ಮಾನಿಸಲಾಗುತ್ತದೆ. ಫೆಬ್ರವರಿ 04ರ ಶನಿವಾರ ನಟ ಮಿತ್ರರು ತೀರ್ಥಹಳ್ಳಿ (ರಿ.) ಪ್ರಸ್ತುತಿಯ ನಾಟಕ ತುರುಬ ಕಟ್ಟುವ ಹದನ’ (ರಚನೆ : ಪಂಪ – ರನ್ನ – ಕುಮಾರವ್ಯಾಸ – ಪುರಂದರದಾಸರು, ಪರಿಕಲ್ಪನೆ/ನಿರ್ದೇಶನ: ಶ್ರೀಕಾಂತ್ ಕುಮಟಾ), ಫೆಬ್ರವರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಿತ ಮಧುಸೂದನ ಡಿ ಕುಶೆ ಪ್ರೌಢಶಾಲೆ ವಡೆರಹೋಬಳಿ ಕುಂದಾಪುರ ಇದರ ಇಂಟರಾಕ್ಟ್ ಕ್ಲಬ್ ವತಿಯಿಮಧ ಹತ್ತನೆ ತರಗತಿಯ ವಿದ್ಯಾರ್ಥಿಯರಿಗೆ 2022-23ನೇ ಸಾಲಿನ ಪರಿಕ್ಷೆ ಎದುರಿಸುವ ಕುರಿತು ಮಾಹಿತಿ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರೊ. ಕುಮಾರ್ ಎಸ್ ಕಾಂಚನ್ ಪರೀಕ್ಷೆ ಭಯ, ಪರೀಕ್ಷೆ ಎದುರಿಸುವ ರೀತಿ, ಪರೀಕ್ಷೆಗೆ ತಯಾರಿ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಮಕ್ಕಳ ಮನಸ್ಸು ನಾಟುವ ರೀತಿಯಲ್ಲಿ ಮಾತನಾಡಿ ಶುಭ ಹಾರೈಸಿದರು. ರೋಟರಿ ಕುಂದಾಪುರದ ಅಧ್ಯಕ್ಷರು ರೊ.ವೆಂಕಟೇಶ್ ನಾವುಂದ ಇಂಟರಾಕ್ಟ್ ಚೇರ್ಮನ್ ರೊ ರಾಘವೇಂದ್ರ ಗೋಪಾಡಿ ಶುಭಾಶಯಗೈದರು. ಮುಖ್ಯ ಶಿಕ್ಷಕಿ ತೇಜಸ್ವಿನಿ ಸ್ವಾಗತಿಸಿದರು, ಶಿಕ್ಷಕಿ ಜ್ಯೋತಿ ಧನ್ಯವಾದ ಮಾಡುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿವಿಧ ಕಾರಣಗಳಿಗಾಗಿ ಜನರು ಹಿಂದೂ ಧರ್ಮವನ್ನು ತೊರೆದು ಬೇರೆ ಮತದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮಾತೃ ಧರ್ಮವನ್ನು ತೊರೆಯುತ್ತಿರುವುದಕ್ಕೆ ನಾನಾ ಕಾರಣಗಳಿರಬಹುದು. ವಿಶೇಷವಾಗಿ ಮಕ್ಕಳು ಈ ಮತಾಂತರಕ್ಕೆ ಒಳಗಾಗುತ್ತಿದ್ದು, ಇದನ್ನು ತಡೆಯುವ ಪ್ರಯತ್ನವನ್ನು ಎಲ್ಲರೂ ಮಾಡಬೇಕು ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದರು. ತೆಂಕಬೆಟ್ಟು ನವೀಕೃತ ಶ್ರೀ ಕಾಲಭೈರವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಹಿಂದುತ್ವ ರಾಷ್ಟ್ರೀಯತೆಯ ಮೂಲಮಂತ್ರ. ಸಂಸ್ಕೃತಿ, ಸಂಸ್ಕಾರ ಮತ್ತು ಸಂಸ್ಕೃತದಿಂದ ನಮ್ಮ ದೇಶ ಜಗತ್ತಿನ ವಿಶ್ವಗುರುವಾಗಿದೆ. ಹಿಂದು ಸಮಾಜವನ್ನು ಸಂಕುಚಿತಗೊಳಿಸುವ, ವಿಕೃತಗೊಳಿಸುವ ಕೆಲಸಗಳು ನಿತ್ಯ ನಿರಂತರವಾಗಿ ನಡೆಯುತ್ತಿದೆ. ಹಿಂದುಗಳು ಪ್ರತಿಯೊಂದು ಕ್ಷಣದಲ್ಲೂ ಒಗ್ಗಟ್ಟು ಪ್ರದರ್ಶಿಸಬೇಕು. ಎಲ್ಲಿಯವರೆಗೆ ಹಿಂದುಗಳು ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಜಾಗೃತವಾಗಿರುವ ಹಿಂದು ಸಮಾಜವನ್ನು ನಾಶ ಮಾಡಲು ಯಾವ ಶಕ್ತಿಗಳಿಂದಲೂ ಸಾಧ್ಯವಿಲ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾದ ಬಳಿಕ ನಮ್ಮ ರಾಷ್ಟ್ರ ಹಿಂದು ರಾಷ್ಟ್ರವಾಗಲಿದೆ ಎಂದು ಭವಿಷ್ಯ ನುಡಿದರು. ನಂತರ ಮಾತನಾಡಿದ ಕರ್ನಾಟಕ ಹಿಂದುಳಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.01: ಪರಿಸರ ಸ್ವಚ್ಚತೆ ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಬೇಕು. ವೈಯಕ್ತಿಕ ಸ್ವಚ್ಚತೆ ಜೊತೆಗೆ ಪರಿಸರದ ಕಾಳಜಿ ಮೈಗೂಡಿಸಿಕೊಂಡಾಗ ಉತ್ತಮ ಆರೋಗ್ಯದ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಬ್ದುಲ್ ಹುಸೇನ್ ರಹೀಮ್ ಶೇಖ್ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀಲರ ಸಂಘ, ಪುರಸಭೆ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ತಾಲ್ಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಸೋಮವಾರದಂದು ಕುಂದಾಪುರದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭ ನ್ಯಾಯಾಧೀಶರು, ನ್ಯಾಯಾಲಯ, ಕಂದಾಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಕುಂದಾಪುರದ ನ್ಯಾಯಾಲಯದ ಆವರಣ ಹಾಗೂ ಬ್ಲೂವಾಟರ್ ಬಳಿಯಿಂದ ಫೆರ್ರಿ ಪಾರ್ಕ್ ತನಕ ಪಂಚ ಗಂಗಾವಳಿ ನದಿ ತೀರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜು ಎನ್., ಹೆಚ್ಚುವರಿ ಸಿವಿಲ್ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾವಾಡುವ ಭಾಷೆಗಳು ನಮ್ಮ ಪ್ರಾದೇಶಿಕ ಸಂಸ್ಕೃತಿಯ ಭಾಗವೇ ಆಗಿರುತ್ತದೆ. ಭಾಷೆಯ ಬಗ್ಗೆ ಕೀಳರಿಮೆ ತೋರಿಸದೆ ಉಪಯೋಗಿಸಿದಷ್ಟು ಸಮೃದ್ಧವಾಗಿ ಭಾಷೆಯ ಬೆಳವಣಿಗೆ ಸಾಧ್ಯ. ಕುಂದಾಪ್ರ ಭಾಷೆಗೆ ತನ್ನದೇ ಸ್ಥಾನಮಾನ ಹೊಂದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಖ್ಯಾತಿ ಹೊಂದಿರುವುದು ಹೆಮ್ಮೆಯ ವಿಷಯ ಎಂದು ಹಾಸ್ಯ ಕಲಾವಿದ, ರಂಗಕರ್ಮಿ ನಾಗರಾಜ್ ತೆಕ್ಕಟ್ಟೆ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಇವರ ಆಶ್ರಯದಲ್ಲಿ ನಡೆದ ವಿಚಾರ ಸಂಕಿರಣ, ದತ್ತಿ ಪುರಸ್ಕಾರ, ನಾಟಕ ಪ್ರದರ್ಶನ ಆಹ್ಲಾದ-೨೦೨೩ (ಸಂತಸದ ಕರೆಗಾಳಿ) ಕಾರ್ಯಕ್ರಮದಲ್ಲಿ ದಿ. ಮಂಜುನಾಥ ಕೋಟ ಸ್ಮಾರಕ ದತ್ತಿ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ಇಬ್ರಾಹೀಂ ಸಾಬೇಬ್ ಕೋಟ ಅವರು ಸಾಂಸ್ಕೃತಿಕ -ಸಾಹಿತ್ಯಿಕ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿರುವ ಕಾರಂತ ಥೀಮ್ ಪಾರ್ಕ್ ದತ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.01: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಇವರ ಸಹಯೋಗದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸವಿತಾ ಸಮುದಾಯಕ್ಕೆ ಸದಾ ಸಹಕಾರ ನೀಡುವುದಾಗಿ ತಿಳಿಸಿದರು. ಉಡುಪಿ ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸವಿತಾ ಮಹರ್ಷಿಗಳ ಬಗ್ಗೆ ಉಪನ್ಯಾಸ ನೀಡಿದರು. ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುಭಾಸ್ ಭಂಡಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇ?ನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ ೩೬ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾ? ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿತ್ತು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನರಾಮ್ ಸುಳ್ಯ ಮಾರ್ಗದರ್ಶನದಲ್ಲಿ ಭುವನ್ ಮಣಿಪಾಲ್ ನಿರ್ದೇಶಿಸಿದ ಹಾಗೂ ಉಜ್ವಲ್ ಯುವಿ ವಿನ್ಯಾಸ ಮಾಡಿದ ’ದುರ್ಯೋಧ’ ನಾಟಕ ಪ್ರಥಮ ಬಹುಮಾನ ಪಡೆಯಿತು. ಸುರೇಶ್ ಕುಮಾರ್ ನಿರ್ದೇಶನದ ಜಾನಪದ ನೃತ್ಯವು ದ್ವಿತೀಯ ಸ್ಥಾನ ಪಡೆಯಿತು. ಸಾಂಸ್ಕೃತಿಕ ಪ್ರತಿಭೆಗಳಿಗೆ ದತ್ತು ಯೋಜನೆ ಅಡಿಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ವಿಜೇತರನ್ನು ಅಭಿನಂದಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ೧೧ ಬಾರಿ ರಾಷ್ಟ್ರೀಯ ರಂಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು.ಜ.31: ಕೇವಲ ಅಭಿವೃದ್ದಿ ಕಾರ್ಯಗಳು ಮಾತ್ರ ಊರಿನ ಬೆಳವಣಿಗೆಯನ್ನು ಬಿಂಬಿಸಿವುದಿಲ್ಲ ಬದಲಾಗಿ ಆ ಊರಿನ ಕಲೆ, ಸಂಸ್ಕ್ರತಿಯ ಜೊತೆಗೆ ಚಟುವಟಿಕೆ ಕೂಡ ಊರಿನ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು ಅವರು ಯುವಶಕ್ತಿ ಕರಾವಳಿ ಹಾಗೂ ಅರುಣ್ ಪಬ್ಲಿಸಿಟಿ ಇವರ ಸಹಯೋಗದಲ್ಲಿ ನಡೆದ ಕರಾವಳಿ ಸಂಭ್ರಮ – 2023 ಎರಡನೇ ದಿನದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕರಾವಳಿ ಸಂಭ್ರಮ ಮಾದರಿ ಉತ್ಸವವಾಗಿದೆ ಎಂದರು. ಜಿ.ಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ ಮಾತನಾಡಿ ಶಿರೂರಿನಲ್ಲಿ ನಡೆದ ಕರಾವಳಿ ಉತ್ಸವದ ಕಾರ್ಯಕ್ರಮ ಸಂಘಟಿಸುವ ಇತರ ಸಂಯೋಜಕರಿಗೆ ಮಾದರಿಯಾಗಿದೆ. ಅದ್ಬುತ ಕಾರ್ಯಕ್ರಮದ ಮೂಲಕ ಊರಿನ ಅಭಿವೃದ್ದಿಗೆ ಶ್ರಮಿಸುವ ಯುವಶಕ್ತಿ ಒಗ್ಗಟ್ಟು ಪ್ರಶಂಶನೀಯ ಎಂದರು. ಯುವಶಕ್ತಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರ ಮೊಗೇರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ ದೇಶದ ಎಲ್ಲಾ ಕಾಂಗ್ರೆಸ್ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಉದಯ ಜಿ.ಪೂಜಾರಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ರತ್ನಾಕರ ಶೆಟ್ಟಿ, ಗೋವರ್ಧನ್ ಜೋಗಿ, ಚಂದ್ರ ರಾಯಪ್ಪನಡಿ, ಕೊರಗು ಬಿಲ್ಲವ, ರೋಶನ್ ಕುಮಾರ್ ಶೆಟ್ಟಿ, ನಾಗರಾಜ ಪೂಜಾರಿ, ಸಂಪತ್ ಶೆಟ್ಟಿ, ಶೇಷ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ :ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕೋ. ಶಿವಾನಂದ ಕಾರಂತರನ್ನು ಆಯ್ಕೆ ಮಾಡಲಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಉಮೇಶ್ ಪುತ್ರನ್ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ಕೋಶಾಧ್ಯಕ್ಷ ಮನೋಹರ ಪಿ., ತಾಲೂಕು ಪದಾಧಿಕಾರಿಗಳಾದ ದಿನಕರ ಶೆಟ್ಟಿ, ಕೆ. ಎಸ್. ಮಂಜುನಾಥ್, ಅಕ್ಷತಾ ಗಿರೀಶ್ ಐತಾಳ ಅವರು ಭಾಗವಹಿಸಿದ ಸಭೆಯಲ್ಲಿ ಕೋ. ಶಿವಾನಂದ ಕಾರಂತರನ್ನು ಆಯ್ಕೆ ಮಾಡಲಾಯಿತು ಹಾಗೂ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ವಠಾರದಲ್ಲಿ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಯಿತು. ಕೋ. ಶಿವಾನಂದ ಕಾರಂತರು ನಿವೃತ್ತ ಉಪನ್ಯಾಸಕರಾಗಿದ್ದು, ಗಂಗೊಳ್ಳಿ ಸ.ವಿ. ಶಿಕ್ಷಣ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ರಂಗ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನೀಡಿರುವ ಅವರು ನಟರಾಗಿಯೂ ಖ್ಯಾತರಾದವರು. ಆಕಾಶವಾಣಿಯ ಚಿಂತನ ವಿಭಾಗದ ಸಂಪನ್ಮೂಲ ವ್ಯಕ್ತಿ. ಸಾಹಿತಿಯಾಗಿ ಕಥೆ,…
