ಕುಂದಾಪ್ರ ಡಾಟ್ ಕಾಂ ಸದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅವನು ಮಂಜುನಾಥ ಖಾರ್ವಿ ಮತ್ತು ರೇಖಾ ಖಾರ್ವಿ ದಂಪತಿಯ ಪುತ್ರ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಕ್ರಮವಾಗಿ, ಯೋಗೇಶ್, ಸ್ರಜನ್, ಮೌನೇಶ್, ನಾಗರಾಜ, ಅರ್ಜುನ್, ಪ್ರಜ್ವಲ್, ಗೌತಮ್, ಮನು, ಹ್ರತ್ವಿಕ್, ಪನ್ನಗ, ನವನೀತ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಂದು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಒತ್ತಡ ಬಹಳ ಇರುತ್ತದೆ. ಆದರೆ ಪಾಠದ ಅಧ್ಯಯನದೊಂದಿಗೆ ಪಾಠೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡರೆ ಆತ್ಮ ವಿಶ್ವಾಸ ಬೆಳೆಯುತ್ತದೆ. ನಮ್ಮ ಭಾಷೆ, ಸಂಸ್ಕೃತಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದರೊಂದಿಗೆ ಆದಷ್ಟು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅನುಭವದ ವಿಕಾಸ ಮಾಡಿಕೊಳ್ಳಬೇಕು. ಕುಂದಾಪ್ರ ಕನ್ನಡದಲ್ಲಿ ಕವನ ಬರೆದ ಹಾಗೂ ಹಾಡುಗಳನ್ನು ಹಾಡಿದ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಖ್ಯಾತ ಸಾಮಾಜಿಕ ಧುರೀಣ, ಸುಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರರಾದ ಕೆ. ಆರ್. ನಾಯ್ಕ್ ಹೇಳಿದರು. ಭಂಡಾರ್ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ 89.6 ಹಾಗೂ ’ಕುಂದಪ್ರಭ’ ಸಂಸ್ಥೆ ಆಯೋಜಿಸಿದ ಕುಂದಾಪ್ರ ಕನ್ನಡ ಸ್ವರಚಿತ ಕವನ ವಾಚನ, ಹಾಡುಗಾರಿಕೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಪದವಿ, ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಬಹುಮಾನ ವಿತರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಶ್ವಸ್ಥರಾದ ರಾಜೇಂದ್ರ ತೋಳಾರ್ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲಾರ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಪ್ರದೀಪ್ ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಸ್ಯಾಂಪಲ್ನ್ನು ಟೆಸ್ಟ್ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾ ಅಧಿಕಾರಿಗಳು ಜನರಿಗೆ ಭರವಸೆ ನೀಡಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಭಾರತಿ, ತಾಲೂಕು ವೈದ್ಯಾಕಾರಿ ಡಾ. ರಾಜೇಶ್, ಬೈಂದೂರು ಠಾಣಾಕಾರಿ ತಿಮ್ಮೇಶ್, ಉಪ್ಪುಂದ ಗ್ರಾ.ಪಂ. ಪಿಡಿಓ ಸುದರ್ಶನ ಎಸ್., ಕಾರ್ಯದರ್ಶಿ ಗಿರಿಜಾ, ಕರಾವಳಿ ಕಾವಲುಪಡೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲುರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ನವೆಂಬರ ತಿಂಗಳಿನಲ್ಲಿ ಕೊಲ್ಲೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ದೇವಳದ ಅಭಿಯಂತರರಾದ ಪ್ರದೀಪ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ, ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ ಕುಮಾರ್ ಶೆಟ್ಟಿ ಹುಂಚನಿ, ಬೀಸಿನಪಾರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ, ಕಾಲೇಜಿನ ಸಮಾಜಶಾಸ್ತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿ ಕೋಟೇಶ್ವರದ ಕಡೆಗೆ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ತೆರಳುತ್ತಿದ್ದ ವಿದ್ಯಾರ್ಥಿಯ ಮೇಲೆ ಹಿಂದಿನಿಂದ ಬಂದ ಟಿಪ್ಪರ್ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಧನುಷ್ ತನ್ನ ತಾಯಿಯೊಂದಿಗೆ ನಾಗೂರಿನಲ್ಲಿ ವಾಸಮಾಡುತ್ತಿದ್ದ. ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ಧನುಷ್ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷಾ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ಹಾಗಾಗಿ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೈಂದೂರು ಹಾಗೂ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ಸೆ. 29ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ತನ್ವಿತಾ ಪೂಜಾರಿ ಹಾಗೂ ಧನ್ವಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 67 ಕೆ.ಜಿ.ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಆದರ್ಶ ಬೆಳ್ಳಿಯ ಪದಕ ಪಡೆದಿರುತ್ತಾನೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗೆ ’ನ್ಯೂಟ್ರಿಶಿಯನ್ ಡೇ’ ಆಚರಿಸಲಾಯಿತು. ಸಣ್ಣ ಮಕ್ಕಳಲ್ಲಿ ಆರೋಗ್ಯಕರ ಆಹಾರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿವಿಧ ಬಗೆಯ ಹಣ್ಣುಗಳ ಹಾಗೂ ತರಕಾರಿಗಳ ಸಲಾಡ್ಗಳನ್ನು ತಯಾರಿಸಿ ಹಂಚಲಾಯಿತು. ಪೌಷ್ಟಿಕ ಆಹಾರದ ಬಗ್ಗೆ ತಿಳಿ ಹೇಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.01: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಸೋಮವಾರದ(ಸೆ.30) ತನಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಹೈಕೋರ್ಟ್, ನಿನ್ನೆಯ ಕಲಾಪದಲ್ಲಿ ಅರ್ಜಿದಾರರು ಸಲ್ಲಿಸಿದ ವಿಷಯಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಮೂಲಕ ನೂತನ ವ್ಯವಸ್ಥಾಪನಾ ಸಮಿತಿ ಸಭೆ ಹಾಗೂ ಅಧ್ಯಕ್ಷರ ಆಯ್ಕೆಗಿದ್ದ ಆತಂಕ ನಿವಾರಣೆಯಾಗಿದೆ. ಹೈಕೋರ್ಟ್ ತಡೆ ನಿವಾರಣೆಯಾದ ಹಿನ್ನೆಲೆಯಲ್ಲಿ ಅಕ್ಟೋಬರ್ 04ರ ಬೆಳಿಗ್ಗೆ ದೇಗುಲದಲ್ಲಿ ಬೆಳಿಗ್ಗೆ ಸಭೆ ಕರೆಯಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಸೆ.20ರಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು 9 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದರು. ಆದರೆ ಸೆ.19ರಿಂದ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಲ್ಲದೇ ಓರ್ವ ಸದಸ್ಯರ ವಿರುದ್ದ ಅಪರಾಧ ಪ್ರಕರಣ ದಾಖಲಾಗಿದೆ.…
