Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ 3,000 ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.1,500 ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ:ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ 25ನೇ ತಾರೀಕಿನ ಒಳಗಾಗಿ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು. ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಸಂಚರಿಸುವ ಖಾಸಗಿ ಬಸ್ ಮತ್ತು ಶಾಲಾ ವಾಹನಗಳಲ್ಲಿ ಅಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ/ಪ್ರಯಾಣಿಕರು ಸಂಚರಿಸುತ್ತಿರುವುದು ಹಾಗೂ ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ವಾಹನಗಳನ್ನು ಚಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಈ ಹಿನ್ನಲೆ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಿಕರಿಗೆ ಮತ್ತು ಶಾಲಾ ವಾಹನಗಳನ್ನು ಹೊಂದಿರುವ ಶಾಲಾ ಮುಖ್ಯಸ್ಥರುಗಳು ಈ ಕೆಳಕಂಡ ಸಲಹೆ-ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿರುತ್ತಾರೆ. ಸಂಚರಿಸುವ ಬಸ್‌ಗಳು ಫಿಟ್‌ನೆಸ್ ಪ್ರಮಾಣಪತ್ರ ಮತ್ತು ವಿಮಾ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಅನುಮತಿಸುವ ಮಿತಿಯನ್ನು ಮೀರಿ ಹೊಗೆಯನ್ನು ಹೊರಸೂಸಬಾರದು. ನೊಂದಾಯಿತ ಆಸನ ಸಾಮರ್ಥ್ಯದ ನಿಗದಿತ ಸಂಖ್ಯೆಗಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಸಂಚರಿಸುವಂತಿಲ್ಲ. ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ಬಸ್‌ಗಳನ್ನು ಚಲಿಸುವಂತಿಲ್ಲ. ವೇಗದ ಮಿತಿಯನ್ನು ಅನುಸರಿಸಬೇಕು. ಚಾಲನಾ ಅನುಭವ ಇರುವ ಬಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು ಜನನ ಮರಣ ನೋಂದಣಿ ಅಧಿನಿಯಮಗಳ ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದರು. ಈ ದಾಖಲಾತಿಗಳು ಅಗತ್ಯವಾಗಿರುತ್ತದೆ. ಜನನ-ಮರಣ ಘಟನೆಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳು, ಇ- ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯವನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದ ಅವರು, ಜನನ-ಮರಣ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದಾಗ ವಿಳಂಬವಿಲ್ಲದೇ ಕಾಲಮಿತಿಯೊಳಗೆ ಜನನ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎಸ್‌ಇಇಟಿ – ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು ಸಿಎಸ್‌ ಎಕ್ಸಿಕ್ಯೂಟಿವ್ ಪ್ರೋಗ್ರಾಮ್‌ಗೆ ಅರ್ಹತೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ನಗರ ಪ್ರದೇಶದಲ್ಲಿ 2020ರ ಮಾರ್ಚ್ 24ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ /ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.10,000 ರೂ.20,000 ಮತ್ತು ರೂ.50,000 ಸಾಲ ಸೌಲಭ್ಯವನ್ನು 7% ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಸೋಮವಾರ ಅತ್ಯಂತ ವೈಭವದಿಂದ ಜರುಗಿತು. ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕೆ.ಅವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ. ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. ಅಂಕಗಳ ಜೊತೆಗೆ ಒಳ್ಳೆಯ ಮೌಲ್ಯ, ಆದರ್ಶಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಮನುಷ್ಯರಾಗಲು ಸಾಧ್ಯ. ಸ್ವಾಭಿಮಾನದ ಮೂಲಕ ಬದುಕುವುದು ಹೇಗೆ ಎನ್ನುವುದನ್ನು ಪೋಷಕರಿಂದ ಕಲಿತುಕೊಳ್ಳಲು ಸಾಧ್ಯವಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ನಮ್ಮ ಕಾಲೇಜು ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಸೆಸ್ಸೆಲ್ಸಿಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಥಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಮಂಡಿಸಿರುವ ಬಜೆಟ್ ಸರ್ವ ವ್ಯಾಪಿ, ಸರ್ವಸ್ಪರ್ಶಿಯಾಗಿದ್ದು, ದೇಶವು ವಿಶ್ವದಲ್ಲಿ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಪೂರಕವಾದ ಬಡ್ಜೆಟ್ ಆಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಹಣದುಬ್ಬರ ಪ್ರಮಾಣವು ಕಳೆದ ವರ್ಷ 5.8% ಇದ್ದು, 4.5 % ಇಳಿಯುವಲ್ಲಿ ಈ ಬಡ್ಜೆಟ್ ಸಹಕಾರಿಯಾಗಲಿದೆ. ಅಲ್ಲದೇ ಪ್ರಸ್ತುತ ಈಗಿರುವ 3 ಟ್ರಿಲಿಯನ್ ಆರ್ಥಿಕ ವ್ಯವಹಾರವು 5 ಟ್ರಿಲಿಯನ್ ಅಷ್ಟಾಗುವ ಎಲ್ಲಾ ನಿರೀಕ್ಷೆಯಿದ್ದು ಜಿಡಿಪಿ ಪ್ರಮಾಣವು ಶೇ. 6.5 ರಿಂದ 7 ಕ್ಕೆ ಏರಿಕೆಯಾಗುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2030ರವರೆಗೆ ಭಾರತದಲ್ಲಿ ಪ್ರತಿ ವರ್ಷ 78 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗ ದೊರೆಯುವಲ್ಲಿ ಈ ಬಾರಿಯ ಬಡ್ಜೆಟ್ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಕೈಗಾರಿಕಾ ಉತ್ಪನ್ನ ವಲಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ಬಾರಿ ಕೃಷಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಅಂತರಾಷ್ಟ್ರೀಯ ಚದುರಂಗ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಮೇಸ್ತ ಶುಭಾಂಶನೆಗೈದರು. ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಅಂತರಾಷ್ಟ್ರೀಯ ಚದುರಂಗ ದಿನಾಚರಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಹಾಗೂ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರಿಗೆ ಚೆಸ್ ಪಂದ್ಯಾಟ ನಡೆಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಸೋಮವಾರ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಪುಟಾಣಿಗಳು ಸಂತರು, ಗುರುಗಳ ಪೋಷಾಕು ಧರಿಸಿ, ಗುರುವಿನ ಮಹತ್ವ, ಗುರುಪೂರ್ಣಿಮೆಯ ಅರ್ಥವನ್ನು ಭಾಷಣ, ನೃತ್ಯ, ಹಾಡುಗಳು ಮೂಲಕ ಪ್ರಸ್ತುತ ಪಡಿಸಿದರು. ಶಾಲಾ ಆಡಳಿತಾದಿಕಾರಿ ಚೈತ್ರ ಯಡಿಯಾಳ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ ಶಿಕ್ಷಕರು ತಮ್ಮ ವೃತ್ತಿ ಜೀವನಕ್ಕೆ ನ್ಯಾಯ ಒದಗಿಸಲು ಅನೇಕ ತ್ಯಾಗ ಮಾಡಿರುತ್ತಾರೆ ಅವರಿಗೆ ಗೌರವ, ಪ್ರೀತಿ, ತೋರುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು ಮತ್ತು ಪುರಾಣ ಪ್ರಸಿದ್ಧ ಗುರು ಶಿಷ್ಯರ ಕಥೆ ಹೇಳುವ ಮೂಲಕ ಗುರುವಿನ ಮಹಿಮೆ ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ ಆಶೀರ್ವಾದ ಪಡೆಯುವ ಮೂಲಕ ಆಚರಣೆಗೆ ಮತ್ತಷ್ಟು ಮೆರಗು ನೀಡಿದರು. ಮುಖ್ಯ ಅತಿಥಿಗಳಾಗಿ ಟ್ರಸ್ಟ್‌ನ ಅದ್ಯಕ್ಷರಾದ ಬಲಾಡಿ ಸಂತೋಷ ಕುಮಾರ ಶೆಟ್ಟಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು ಈ ಸಂಸ್ಥೆಯು ಕಳೆದ ಒಂದು ವರ್ಷದಿಂದ…

Read More