Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನಸಾಮಾನ್ಯರ ಪ್ರತಿ ವಿಚಾರ ಹಾಗೂ ವಿಶೇಷ ಸಂದರ್ಭಗಳಿಗೆ ಧ್ವನಿ ಕೊಡುವ, ಉತ್ತಮವಾದ ಕಲೆಗಳಿಗೆ ಬೆಳಕನ್ನು ನೀಡುವ ಮೂಲಕ ಉದ್ಯಮದಲ್ಲಿ ಕೇವಲ ವೃತ್ತಿಪರರಾಗದೆ ಧ್ವನಿ ಬೆಳಕಿನ ಕಲಾವಿದರಾಗಿದ್ದೀರಿ. ನಿಮ್ಮಲ್ಲಿನ ವಿಶಿಷ್ಟ ಕಲೆಯ ಮೂಲಕ ಬೇರೆಯವರ ಮನಮುಟ್ಟುವಂತೆ, ಕಣ್ಮನ ತಣಿಸುವಂತೆ ಮಾಡುವ ನಿಮ್ಮ ಕಾಯಕ ಅಭಿನಂದನಾರ್ಹವಾದದ್ದು ಎಂದು ಕಿರಿಮಂಜೇಶ್ವರ ಅಗಸ್ಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ವಿ. ಪ್ರಕಾಶ್ ಐತಾಳ್ ಹೇಳಿದರು. ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 13ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಬೈಂದೂರು ವಲಯದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು, ಬೈಂದೂರು ಆರಕ್ಷಕ ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್. ಕಾನೂನು ಮಾಹಿತಿ ನೀಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ನಯನಾ ಇವರನ್ನು ಸನ್ಮಾನಿಸಲಾಯಿತು. ಎಸ್‌ ಎಸ್‌ ಎಲ್‌ ಸಿ ಅಲ್ಲಿ ಗರಿಷ್ಠ ಅಂಕಗಳಿಸಿದ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕತಾರ್‌ನ ಪ್ರತಿಷ್ಠಿತ ಗಾಲ್ಫರ್‌ ಟೋಸ್ಟ್‌ ಮಾಸ್ಟರ್ಸ್‌ ಕ್ಲಬ್‌ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷರಾಗಿ ಮೊಹಮ್ಮದ್‌ ಸಮದ್‌ ಇಮ್ರಾನ್‌ ಎಂ, ಜಾನ್‌ ಹೆನ್ರಿ, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಫೈ ಸುದ್ದೀನ್‌ ಕಣ್ಣೋತ್‌, ಕಾರ್ಯದರ್ಶಿಯಾಗಿ ಹನಸ್‌ ಅಜೀಜ್‌, ಖಂಜಾಜಿಯಾಗಿ ರಿಜ್ವಾನ್‌ ಹಸೀಬ್‌ , ಸಾರ್ಜೆಂಟ್‌ ಆಗಿ ಮಜರ್‌ ಹುಸೇನ್‌ ಖಾನ್‌ ಆಯ್ಕೆಯಾಗಿದ್ದಾರೆ ಎಂದು ಪ್ರಕರಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಅರ್ಬನ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ  ಅಧ್ಯಕ್ಷ ಮಣಿಕಂಠ ಎಸ್‌ ದೇವಾಡಿಗ ಅಧ್ಯಕ್ಷತೆಯಲ್ಲಿ ನಡೆಯಿತು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರ ತೇಜ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘವು 3ನೇ ಆರ್ಥಿಕ ವರ್ಷದಲ್ಲಿ ಲಾಭದೊಂದಿಗೆ ಉತ್ತಮ ಪ್ರಗತಿ ಸಾಧಿಸಿದ್ದು ಸಂಘದ ಅಧ್ಯಕ್ಷರು ಮಾನ್ಯ ಸದಸ್ಯರಿಗೆ 8% ಡಿವಿಡೆಂಟ್ ನೀಡುವುದಾಗಿ ಘೋಷಣೆ ಮಾಡಿದರು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸರ್ಕಾರಿ ನಿವೃತ್ತ ಸದಸ್ಯರಿಗೆ ಸನ್ಮಾನ, ಸ.ಪ.ಪೂ.ಕಾಲೇಜು ಬೈಂದೂರು ಇವರಿಗೆ ಶೈಕ್ಷಣಿಕ ಸಹಾಯಧನ ವಿತರಣೆ, ಸ್ವ ಸಹಾಯ ಗುಂಪಿನ ಸದಸ್ಯರಿಗೆ ವಿಶೇಷ ಪ್ರಶಸ್ತಿ ಮತ್ತು ಸಂಘದ ಸದಸ್ಯರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕರು ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವರದಿ ವಾಚಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ಕೊಲ್ಲೂರು ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ದಳಿ ಜಟ್ಟಿಗೇಶ್ವರ ಸಮುದಾಯ ಭವನದಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶೇರುಗಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಗಿಡ ನೆಡುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ. ಶ್ರೀಕಾಂತ್ , ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ್ ಜೆ. ರಾವ್, ಇವರು ಡೆಂಗ್ಯೂ ಮಲೇರಿಯದಿಂದ ಹರಡುವ ಕಾಯಿಲೆಗಳ ಬಗ್ಗೆ ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಮಾಹಿತಿಯನ್ನ ನೀಡಿದರು. ಸುಮತಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ವಾಗತಿಸಿದರು, ಕೊಲ್ಲೂರು ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯ ಅಧಿಕಾರಿ ಸಂಪತ್ ಶಾಸ್ತ್ರಿ ಧನ್ಯವಾದ ಸಮರ್ಪಣೆ ಮಾಡಿದರು. ಸಭೆಯಲ್ಲಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸ್ಥಳೀಯನಾಗರೀಕರು ಭಾಗವಹಿಸಿದ್ದರು.

Read More

ಕುಂದಾಪು ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ಜುಲೈ 1 ರಂದು ನಾಡಿನ ಹೆಸರಾಂತ ಸಾಹಿತಿಗಳ 15 ಪುಸ್ತಕಗಳನ್ನು ಖ್ಯಾತ ಬರಹಗಾರ ಜೋಗಿ  ನಾಮಾಂಕಿತ ಗಿರೀಶ್ ರಾವ್ ಹತ್ವಾರ್ ಅವರ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಬಿಡುಗಡೆಗೊಂಡಿರುವ ಪುಸ್ತಕಗಳೆಂದರೆ ನರೇಂದ್ರ ಪೈ ಆಯ್ದ ವಿಮರ್ಶೆಗಳನ್ನು ಒಳಗೊಂಡ ಸಾವಿರದ ಒಂದು ಪುಸ್ತಕ, ಯಶೋದಾ ಮೋಹನ್ ಅವರ ಇಳಿ ಹಗಲಿನ ತೇವಗಳು ಎಂಬ ಕಥಾಸಂಕಲನ, ಸುಧಾ ನಾಗೇಶ್‌ ಅವರ ಹೊಂಬೆಳಕು ಎಂಬ ಚಿಂತನ ಬರಹಗಳು, ವಾಣಿ ರಾಜ್ ಅವರ ಕಥಾಸಂಕಲನ ಸವಿ ನೆನಪುಗಳ ಹಂದರ, ಡಾ. ಸುಬ್ರಹ್ಮಣ್ಯ ಸಿ ಕುಂದೂರು ಅವರ ಮಲೆನಾಡಿನ ಕಥನವಾದ ಜೀವನ ಯಾನ, ರಾಜೇಂದ್ರ ಭಟ್ ಅವರ ರಾಜ ಪಥ ಎಂಬ ಲೇಖನಗಳ ಪುಸ್ತಕ, ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅವರ ಸಾರ್ಥಕ ಜೀವನಕ್ಕೆ ಕಗ್ಗೋಪದೇಶ ಎಂಬ ಲೇಖನಗಳು, ದಿಗಂತ್ ಬಿಂಬೈಲ್ ಅವರ ಕೊಂದು ಪಾಪ ತಿಂದ್ ಪರಿಹಾರ ಎಂಬ ಕಥಾ ಪ್ರಸಂಗಗಳು, ರಾಜಶೇಖರ ಹಳೆ ಮನೆ ಅವರ…

Read More

ಕುಂದಾಪು ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ  ತಾಲೂಕಿನ ಕಂಡ್ಲೂರು ಸಮೀಪದ ಕಾವ್ರಾಡಿ ನಿವಾಸಿಯಾದ  ದೇವೇಂದ್ರ ಶೇಟ್  ಅವರ  ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10,000 ರೂಪಾಯಿಯನ್ನು  ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಸಂಘದ ಸದಸ್ಯರಾದ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಜೈರಾಂ ಗಡ್ಕರಿ ಅವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದ್ದಾರೆ. 1) ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ 2) ಕುಂದಾಪರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ 3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ 4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಬಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ 5) ರಾ.…

Read More

ಕುಂದಾಪ್ರ ಡಾಟ್‌ ಕಾಂ ಲೇಖನಯೋಗದಲ್ಲಿ ಹೇಳಲಾಗಿರುವ ಭಂಗಿಗಳು, ಉಸಿರಾಟ ಪ್ರಕ್ರಿಯೆ, ವ್ಯಾಯಾಮವು ನಮ್ಮ ದೇಹಕ್ಕೆ ಅಗತ್ಯವಾದ ಆರೋಗ್ಯಕರ ಅಂಶಗಳ ತರಲು ಸಹಕಾರಿಯಾಗಿವೆ. ನೀವು ನಿರಂತರ ಯೋಗಭ್ಯಾಸದಿಂದಾಗಿ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬಹುದು, ಕೊಬ್ಬು ಕರಗಿಸಬಹುದು, ಇಡೀ ದೇಹದ ಆರೋಗ್ಯ ಕಾಪಾಡಿಕೊಳ್ಳಬಹುದು. ಆದ್ರೆ ಯೋಗದಿಂದಾಗಿ ನಿಮ್ಮ ಕೂದಲು ಬೆಳವಣಿಗೆಯ ಮೇಲೆಯೂ ಅದರ ಪ್ರಭಾವ ಉಂಟುಮಾಡಬಹುದು ಎಂಬುದು ನಿಮಗೆ ತಿಳಿದಿದ್ಯಾ? ಹೌದು ಯೋಗದಿಂದಾಗಿ ತಲೆಕೂದಲು ಉದುರುವುದು ಹಾಗೂ ಕೂದಲು ಬೆಳವಣಿಗೆಗೆ ಪೂರಕವಾಗಿದೆ ಎಂಬುದು ದೃಢವಾಗಿದೆ. ಹಾಗಾದ್ರೆ ಕೂದಲಿನ ಆರೋಗ್ಯಕ್ಕೆ ಯಾವ ಯೋಗದ ಭಂಗಿಕ ಸಹಕಾರಿಯಾಗಲಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ. ಉಷ್ಟ್ರಾಸನ:ಉಷ್ಟ್ರಾಸನವು ನೆತ್ತಿಯ ಕಡೆಗೆ ರಕ್ತದ ಹರಿವನ್ನು ಪ್ರೇರೇಪಿಸುತ್ತದೆ. ಇದರಿಂದಾಗಿ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದಲ್ಲದೆ ಇದು ಥೈರಾಯ್ಡ್ ಗ್ರಂಥಿಯ ಅಸಹಜತೆಗಳನ್ನು ಸಮತೋಲನಗೊಳಿಸುತ್ತದೆ. ಈ ಥೈರಾಯ್ಸ್ ಗ್ರಂಥಿಯ ಅಸಹಜ ಪ್ರಭಾವವು ಕೂದಲು ಉದುರುವಿಕೆಗೆ ಕಾರಣವಾಗಬಹುದು. ನೆತ್ತಿಯ ಮೇಲೆ ರಕ್ತ ಪರಿಚಲನೆ ಹೆಚ್ಚಾಗುವುದರಿಂದ, ಉಷ್ಟ್ರಾಸನವು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ಸಹ ತಡೆಯುತ್ತದೆ ಎಂದು ತಿಳಿದುಬಂದಿದೆ. ಪಾದಹಸ್ತಾಸನ:ಈ ಆಸನದಲ್ಲಿ ನಿಮ್ಮ ತಲೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆರೋಗ್ಯ, ಮನುಷ್ಯ ಆರೋಗ್ಯವಂತನಾಗಿದ್ದಾನೆ ಎಂದರೆ ಅವನಷ್ಟು ಶ್ರೀಮಂತ ಯಾರೂ ಇಲ್ಲ. ದೈಹಿಕವಾಗಿ, ಮಾನಸಿಕವಾಗಿ ಆಧ್ಯಾತ್ಮಿಕವಾಗಿ ಸದೃಢರಾಗಿರಲು ಯೋಗ ಸಹಕಾರಿಯಾಗುತ್ತದೆ. ನಮ್ಮ ದೈನಂದಿನ ಜೀವನದಲ್ಲಿ ದಿನಚರಿಯ ಅಂಗವಾಗಿ ಯೋಗಾಭ್ಯಾಸವನ್ನು ಮಾಡಬೇಕು. ದೇಹ ಮತ್ತು ಮನಸ್ಸನ್ನು ಆರೋಗ್ಯದಿಂದಿಡಲು ಯೋಗ ಉಪಯುಕ್ತವಾಗಿದ್ದು, ಆತ್ಮವನ್ನು ಪರಮಾತ್ಮನೊಂದಿಗೆ ಲೀನ ಮಾಡುವಲ್ಲಿ ಯೋಗ ಉತ್ತಮ ಔಷಧ ಎಂದು ಯೋಗ ತರಬೇತುದಾರರಾದ ಆಟಕೆರೆ ಬಾಬು ಪೈ ಕೋಟೇಶ್ವರ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಆಶ್ರಯದಲ್ಲಿ ಶ್ರೀ ಶಾರದೋತ್ಸವದ ಸುವರ್ಣ ಸಂಭ್ರಮ-2024ರ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿರುವ ಹತ್ತು ದಿನಗಳ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿಯ ವೈದ್ಯ ಡಾ. ಮಹೇಶ ಜಿ. ಮಾತನಾಡಿ, ಯೋಗಾಭ್ಯಾಸ ಮಾಡುವುದರಿಂದ ದೇಹದಲ್ಲಿ ಚೈತನ್ಯ ವೃದ್ಧಿಯಾಗಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ದಿನದಲ್ಲಿ ಒಂದು ಗಂಟೆ ಯೋಗಾಭ್ಯಾಸ ಮಾಡಿದರೆ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ. ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.   “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್‌ಗಳು ಜೋಡಣೆಯಾಗದಿದ್ದಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು…

Read More