Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಬೈಂದೂರು ವತ್ತಿನಕಟ್ಟೆಯ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಪರಮೇಶ್ವರ ಗಾಣಿಗ ಉದ್ಘಾಟಿಸಿ, ಗಾಣಿಗ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಗಾಣಿಗ ಪ್ರತಿಷ್ಠಾನದ ಮೂಲಕ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಕೊಲ್ಲೂರು ರಮೇಶ ಗಾಣಿಗರ ನೇತೃತ್ವದಲ್ಲಿ ಸಮಾಜಕ್ಕೆ ಸ್ಪಂದಿಸುತ್ತಾ ಗಾಣಿಗ ಪ್ರತಿಷ್ಠಾನ ಮುನ್ನೆಡೆಯುತ್ತಿರುವುದು ಸಂತಷದ ವಿಚಾರ ಎಂದರು. ಗಾಣಿಗ ಪ್ರತಿಷ್ಠಾನ ಬೈಂದೂರು ಅಧ್ಯಕ್ಷರಾದ ರಮೇಶ ಗಾಣಿಗ ಕೊಲ್ಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಏಳ್ಗೆಯಲ್ಲಿ ಶಿಕ್ಷಣ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ಅವರ ಪ್ರತಿಭಾ ಪುರಸ್ಕಾರ ಮಾಡಿದಾಗ ಅವರು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಬೈಂದೂರು ಗಾಣಿಗ ಪ್ರತಿಷ್ಠಾನದ ಮೂಲಕ ವಿದ್ಯಾರ್ಥಿ ಸಾಧಕರಿಗೆ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿ ವಿತರಣೆ, ಹೊಲಿಗೆ ತರಬೇತಿ ಇತ್ಯಾದಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಹಾಗೆಯೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಡುವ ಕಾರಣೀಕ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದರ್ಜೆಯ ದೇವಾಲಯಗಳಲ್ಲಿ ಒಂದಾಗಿದ್ದು, ಹಲವು ವರ್ಷಗಳ ಬಳಿಕ ಇದೀಗ, ನೂತನ ವ್ಯಪಸ್ಥಾಪನಾ ಸಮಿತಿ ರಚನೆಗೊಂಡಿದೆ. ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ  ಎಸ್. ಸತೀಶ ಶೆಟ್ಟಿ ಚಮಟೆಹರ್ಲು ಸೋಮವಾರ ಅಧಿಕಾರ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಾಗಿ  ದೇಗುಲದ ಪ್ರಧಾನ ಅರ್ಚಕ ಪ್ರಕಾಶ ಉಡುಪ, ರಾಮ ಎಸ್. ಉಪ್ಪುಂದ, ಲಲಿತಾ ಶೆಟ್ಟಿ, ಅಂಬಿಕಾ, ನಾರಾಯಣ ಖಾರ್ವಿ, ರಾಜೇಶ್ ದೇವಾಡಿಗ, ರವೀಂದ್ರ ಪ್ರಭು, ಜನಾರ್ಧನ ಮಾಚ ಪೂಜಾರಿ ನೇಮಕಗೊಂಡಿದ್ದಾರೆ. ದೇವಳದ ಆಡಳಿತಾಕಾರಿ ಹಾಗೂ ತಹಶೀಲ್ದಾರ್ ಪ್ರದೀಪ ಕುಮಾರ ಅಧಿಕಾರಿ ಹಸ್ತಾಂತರಿಸಿದರು. ದೇವಾಲಯದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಸ್ಥಾಪನೆಯಾಗಿ ನೂರು ವರ್ಷಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಶತಮಾನೋತ್ಸವಕ್ಕೆ ಪೂರ್ವಭಾವಿಯಾಗಿ ಶತಮಾನೋತ್ಸವ ಭವನ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಶಾಲೆಯ ಅತ್ಯಂತ ಹಿರಿಯ ವಿದ್ಯಾರ್ಥಿ ಬಗ್ವಾಡಿ ಮೆತ್ತಿನಮನೆ ಪಾರ್ವತಿ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಬಿ. ರಾಜೀವ ಶೆಟ್ಟಿ, ಸಿಂಗಾರಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ, ಬಗ್ವಾಡಿ ಮೆತ್ತಿನಮನೆ ಕುಟುಂಬಸ್ಥರು, ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಷ್‌ಚಂದ್ರ ಶೆಟ್ಟಿ, ಸದಸ್ಯರಾದ ಅಶೋಕ್ ಪೂಜಾರಿ, ಶಿಕ್ಷಣ ಸಂಯೋಜಕ ಯೋಗೀಶ್, ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ್ ನಾಯ್ಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಆಚಾರ್ಯ,  ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ್ ಪುತ್ರನ್, ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ  ಶ್ರೀ ಶಾರಾದೋತ್ಸವ ಸಮಿತಿ ಮಕ್ಕಿಗದ್ದೆ 2024- 2026 ನೇ ಸಾಲಿನ ರಿಜಿಸ್ಟರ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚೆಗೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಠೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ರೆ. ಫಾ. ಪಾವ್ಲ್ ರೇಗೊ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿ ಅವರು ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಬಗೆ, ಉದ್ದೇಶ ಹಾಗೂ ಅದರ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿ ತಾರತಮ್ಯವಿಲ್ಲದೆ ಒಗ್ಗಟ್ಟು, ಮಾನವೀಯ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ರೆಡ್ ಕ್ರಾಸ್ ಸಂಸ್ಥೆ ಎಂದು ಹೇಳಿದರು. ಕುಂದಾಪುರದ ವೈದ್ಯರು ಡಾ. ಸೋನಿ ಡಿಕೋಸ್ತಾ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ರೆಡ್ ಕ್ರಾಸ್‌ನ ಖಜಾಂಚಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2024 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಹೆಚ್. ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ. ಶೆಟ್ಟಿ, ಹೇಮಂತ್ ಕುಮಾರ್ ಡಿ. ಕೆ., ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ – ಒಟ್ಟು 25 ವಿದ್ಯಾರ್ಥಿಗಳು, ಹಾಗೂ ಜನವರಿ 2024ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಲಾರ‍್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ. ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ. ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಸಂಪನ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಉಡುಪಿಯ ಲೆಕ್ಕಪರಿಶೋಧಕರಾದ ಸಿ.ಎ. ಸುರೇಂದ್ರ ನಾಯಕರವರಲ್ಲಿ ಸಿ.ಎ. ಆರ್ಟಿಕಲ್ ಶಿಪ್ ಪೂರೈಸಿರುತ್ತಾರೆ. ಅವರು ಕುಂದಾಪುರ ತಾಲೂಕಿನ ಆಲೂರು ಗೋಳಿಕಟ್ಟೆ‌ಯ ನಿವಾಸಿ‌ಯಾಗಿರುವ ಶೇಖರ ಶೆಟ್ಟಿ ಮತ್ತು ಸುಜಾತ ಶೆಟ್ಟಿಯವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಸಂಘಟನೆಗಳ ಮೂಲ ಉದ್ದೇಶವೇ ಸಮುದಾಯದ ಅಭಿವೃದ್ಧಿಯಾಗಿದ್ದು, ಉಳ್ಳುವರು ಇಲ್ಲದವರಿಗೆ ನೀಡುವ ದಾನಕ್ಕೆ ಸೇತುವೆಯಾಗಿ ಕೆಲಸ ಮಾಡಬೇಕು. ಅಂತಹ ಶ್ರೇಷ್ಠ ಕಾರ್ಯವನ್ನು ಕಳೆದ ಹನ್ನೆರಡು ವರ್ಷಗಳಿಂದ ಟ್ರಸ್ಟ್‌ ಮಾಡುತ್ತಾ ಬರುತ್ತಿದೆ ಎಂದು ವಿಶ್ವ ರಾಮಕ್ಷತ್ರಿಯ ಮಹಾಸಂಘ ಅಧ್ಯಕ್ಷ ಎಚ್.‌ ಶಶಿಧರ್‌ ನಾಯ್ಕ್‌ ಹೇಳಿದರು. ಅವರು ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಬೈಂದೂರು ಇದರ 12ನೇ ವರ್ಷದ ಟ್ರಸ್ಟ್ ದಿನಾಚರಣೆ ಹಾಗೂ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ ರಾಮಕ್ಷತ್ರಿಯ ಸಮುದಾಯದಲ್ಲಿ ಹಲವು ಪ್ರತಿಭಾನ್ವಿತರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ದೊರೆತಾದ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು. ಟ್ರಸ್ಟ್‌ನಿಂದ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಮನೆ ಹಸ್ತಾಂತರ, ವಿದ್ಯಾರ್ಥಿ ದತ್ತು ಸ್ವೀಕಾರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಹಸ್ತಾಂತರ ನಡೆಯಿತು. ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಜಿ. ಕೆ. ಸುರೇಶ್ ಮಾತನಾಡಿ, ಅರ್ಹರಿಗೆ ನೆರವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪಾಲ್ ಮಚಾಡೊ, ಇವರು ನಿಜವಾದ ಸಂಸತ್ತಿನ ಕಾರ್ಯ ವೈಖರಿ‌ ಬಗ್ಗೆ ತಿಳಿಸಿದರು. ಶಿಕ್ಷಣವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ನೀವು ಪಡೆದ ಶಿಕ್ಷಣ ಅರ್ಥಪೂರ್ಣವಾಗಬೇಕಾದರೆ ಮೊದಲು ನೀವು ನಿಮ್ಮ ಶಿಕ್ಷಕರನ್ನು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕೌಶಲಭರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿಪರ ಮತ್ತು ವೈಯಕ್ತಿಕ ಜೀವನಕ್ಕೆ ಸಹಕಾರಿ, ಪ್ರತಿಯೊಬ್ಬ ವಿಧ್ಯಾರ್ಥಿಯು ತನ್ನಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು, ನಾಯಕತ್ವ ಗುಣ ಹುಟ್ಟಿನಿಂದ ಬರುವುದಿಲ್ಲ, ಅದನ್ನು ತಾವಾಗೇ ಬೆಳೆಸಿಕೊಳ್ಳಬೇಕು, ಆ ಗುಣವೂ ಉತ್ತಮ ಮಾತುಗಾರಿಕೆ ಮತ್ತು ನಡವಳಿಕೆಯಿಂದ ಮಾತ್ರ ಬೆಳೆಸಿಕೊಳ್ಳಲು ಸಾಧ್ಯ, ಜೊತೆಗೆ ಸಂಸ್ಥೆಯ ನೀತಿನಿಯಮಗಳನ್ನು ಪಾಲಿಸುತ್ತಾ ಸಂಸ್ಥೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನೀಲ್ ಪ್ಯಾಟ್ರಿಕ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌, ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸರ್ಕಾರಿ ವ್ಯವಸ್ಥೆಯ ಮೂಲಕ ಕಾಲು ಸಂಕ ನಿರ್ಮಿಸಲು ಅಸಾಧ್ಯ ಎನ್ನುವುದು ನಮ್ಮ ಗಮನದಲ್ಲಿತ್ತು. ಆದರೆ ಹಾಗೆಯೇ ಬಿಟ್ಟರೆ ನಮ್ಮ ಜನರ ಸಮಸ್ಯೆಯೂ ಬಗೆಹರಿಯುವುದಿಲ್ಲ ಎನ್ನುವುದೂ ಕೂಡಾ ಅರಿವಿತ್ತು. ಇದಕ್ಕಾಗಿ ನಾನು ಮತ್ತು ಅನುದೀಪ್ ಹೆಗ್ಡೆ ಅವರು ಸೇತುವೆಯ ರೀತಿಯಲ್ಲಿ ದಾನಿಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ ಅಷ್ಟೇ, ಉಳಿದೆಲ್ಲವೂ ಕೂಡಾ ದೇವರು ದಾನಿಗಳ ಮೂಲಕ ಮಾಡಿಸಿದ್ದಾರೆ. ದೂರದ ಬೆಂಗಳೂರಿನಲ್ಲಿ ಕುಳಿತು…

Read More