ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ 01 ರಂತೆ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್ಗಳು: ಉಡುಪಿ ತಾಲೂಕಿನ ಕಡೆಕಾರು, ಕೆಮ್ಮಣ್ಣು ಹಾಗೂ ಪೆರ್ಡೂರು. ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಚಾಂತಾರು. ಹೆಬ್ರಿ ತಾಲೂಕಿನ ಶಿವಪುರ ಹಾಗೂ ಬೆಳ್ವೆ. ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ. ಕುಂದಾಪುರ ತಾಲೂಕಿನ ಹೆಂಗವಳ್ಳಿ ಮತ್ತು ಗುಜ್ಜಾಡಿ. ಬೈಂದೂರು ತಾಲೂಕಿನ ಹಳ್ಳಿಹೊಳೆ ಹಾಗೂ ಕಾರ್ಕಳ ತಾಲೂಕಿನ ಮಾಳ ಮತ್ತು ನಿಟ್ಟೆ. ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ನಲ್ಲಿ ಖಾಲಿ ಇರುವ ಯು.ಆರ್.ಡಬ್ಲ್ಯೂ ಹುದ್ದೆಗಳ ನೇಮಕಾತಿಗಾಗಿ, ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆಯುತ್ತಿರುವ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಎರಡನೇ ದಿನವೂ ಉತ್ತಮ ಜನಸ್ಪಂದನೆ ದೊರೆಯಿತು. ಮೂರು ದಿನಗಳ ಮೇಳದಲ್ಲಿ ಒಟ್ಟು 287 ಸ್ಟಾಲ್ಗಳನ್ನು ಪಾಲ್ಗೊಂಡಿದ್ದು, ಮೊದಲ ದಿನ 15,000ದಷ್ಟು ಜನರು ಪಾಲ್ಗೊಂಡರೆ, ಎರಡನೇ ದಿನ ಶನಿವಾರ 20,000ಕ್ಕೂ ಅಧಿಕ ಜನ ಆಗಮಿಸಿದರು. ಕೇರಳದ ಪಾಲಕ್ಕಾಡ್ನಿಂದ ಆಗಮಿಸಿದ್ದ, ಜಯಚಂದ್ರ ವಿವಿಧ ಬಗೆಯ ತರಕಾರಿ ಬೀಜಗಳ ಸ್ಟಾಲ್ ತೆರೆದಿದ್ದು, ತರಹೇವಾರಿ ಬೀಜಗಳ ಸಂಗ್ರಹ ಅವರ ಬಳಿಯಲ್ಲಿತ್ತು. 6 ತರಹದ ಅಲಸಂಡೆಯ ಬೀಜ, 3 ತರಹದ ಬೆಂಡೆಯ ಬೀಜ, 6 ತರಹದ ಬದನೆಯ ಬೀಜಗಳು ಲಭ್ಯವಿರುವುದಲ್ಲದೇ, ಒಟ್ಟು 60 ಬಗೆಯ ತರಕಾರಿ, ಹೂವು ಹಣ್ಣುಗಳ ಬೀಜಗಳು ವ್ಯಾಪಾರಕ್ಕೆ ಲಭ್ಯವಿದ್ದವು. ಚಿಕ್ಕ ಪ್ಯಾಕೆಟ್ನಲ್ಲಿ ಲಭ್ಯವಿದ್ದ ಬೀಜಗಳಿಗೆ 20ರೂ ಮುಖಬೆಲೆಯಾದರೆ, 3 ಪೊಟ್ಟಣಗಳಿಗೆ 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಅರಿವು ಮೂಡಿಸುವ ಸಲುವಾಗಿ ಚುನಾವಣೆಯನ್ನು ಇ.ವಿ.ಎಮ್ ಆಪ್ ಮೂಲಕ ನಡೆಸಲಾಯಿತು. ಶಾಲಾ ನಾಯಕನಾಗಿ ವಿಘ್ನೇಶ್ ರಾಜೇಶ್ ಪ್ರಭು 267 ಮತಗಳಿಂದ ಮತ್ತು ಉಪನಾಯಕನಾಗಿ ಹರಿದಾಸ್ ಆರ್ ಮಲ್ಯ 311 ಮತಗಳಿಂದ ಆಯ್ಕೆಯಾಗಿದ್ದು, ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ – ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1. 2 (ಎ), 3 (ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2024ರ ಜುಲೈ 10 ಕ್ಕೆ ಅನ್ವಯವಾಗುವಂತೆ 2004 ರ ಜುಲೈ 10 ರಿಂದ 2007 ರ ಜುಲೈ 10 ರ ನಡುವಿನ ಅವಧಿಯಲ್ಲಿ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 805077000 ಹಾಗೂ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ,…
ಕುಂದಾಪುರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನ ದಾನ ಮಾಡುವುದರಿಂದ ವಿವಿಧ ಕಾರಣಕ್ಕಾಗಿ ರಕ್ತದ ಅಗತ್ಯ ಇರುವವರಿಗೆ ರಕ್ತನೀಡಿ ಜೀವದಾನ ಮಾಡಬಹುದು. ಅದೇ ವೇಳೆಗೆ ದಾನಿಗಳ ಆರೋಗ್ಯವರ್ಧನೆಯಾಗುತ್ತದೆ ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ. ಗಣೇಶ ಭಟ್ ಹೇಳಿದರು. ಮರವಂತೆಯ ರಕ್ತದಾನಿಗಳ ಬಳಗ, ಉಡುಪಿಯ ಅಭಯಹಸ್ತ ಚಾರಿಟಬಲ್ ಟ್ರಸ್ಟ್, ಕುಂದಾಪುರದ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಮರವಂತೆಯ ಎಲ್ಲ ಸಂಘಸಂಸ್ಥೆಗಳ ಆಶ್ರಯದಲ್ಲಿ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಕ್ತನಿಧಿಗಳಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಅದನ್ನು ನೀಗಲು ಯುವಜನರು ಮುಂದಾಗಬೇಕು. ನಿಯತಕಾಲಿಕವಾಗಿ ರಕ್ತದಾನ ಮಾಡುವುದರಿಂದ ದಾನಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುವುದಿಲ್ಲ. ಬದಲಾಗಿ ಅವರ ಆರೋಗ್ಯವರ್ಧಿಸುತ್ತದೆ. ಅವರಲ್ಲಿರಬಹುದಾದ ಅಧಿಕ ಕೊಲೆಸ್ಟರಾಲ್, ಬೊಜ್ಜು ನಿಯಂತ್ರಣಕ್ಕೆ ಬರುತ್ತದೆ ಎಂದು ಅವರು ಹೇಳಿದರು. ಅಭಯಹಸ್ತ ಚಾರಿಟಬಲ್ ಟ್ರಸ್ಟ್ನ ಸತೀಶ ಸಾಲಿಯಾನ್ ಉದ್ಘಾಟಿಸಿದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯು ರಕ್ತದಾನಿಗಳ ಜಿಲ್ಲೆಯಾಗಿದ್ದು, ರಕ್ತವನ್ನು ಭೇದ ಭಾವವಿಲ್ಲದೆ ಅಗತ್ಯವಿರುವವರಿಗೆ ನೀಡುವುದು ನಮ್ಮ ಉದ್ದೇಶವಾಗಿದೆ. ರಕ್ತದ ನಿರಂತರ ಸೇವೆಯು ಜನರಿಗೆ ಅವಶ್ಯವಿರುವುದರಿಂದ ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನದಲ್ಲಿ ಪಾಲ್ಗೊಂಡು ಜೀವ ಉಳಿಸುವ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್. ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ರೆಡ್ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್ನಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಆಸ್ಪತ್ರೆಗಳ ರೋಗಿಗಳಿಗೆ ರಕ್ತದ ಅವಶ್ಯಕತೆಯು ಇರುವುದರಿಂದ ರಕ್ತದಾನ ಮಾಡುವ ಮೂಲಕ ಅಥವಾ ರಕ್ತದಾನಿಗಳ ಮೂಲಕ ರಕ್ತವನ್ನು ಪಡೆದು ಅವರಿಗೆ ನೀಡಿ ಜೀವ ಉಳಿಸಬಹುದು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ಕೃತಕ ಅವಯವ ಜೋಡಣಾ ಘಟಕದ ಜೊತೆಗೆ ಮಾಡುತ್ತಿರುವ, ಮಾನವೀಯ ಕಾರ್ಯ, ಸಾಮಾಜಿಕ ಸೇವೆಯ ಬಗ್ಗೆ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಆದರ್ಶ್ ಆಸ್ಪತ್ರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು,ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಮಾತನಾಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಸಂಪನ್ಮೂಲ ವ್ಯಕ್ತಿಗಳಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇರಬೇಕು, ಜ್ಞಾನದ ಹಸಿವು ಇದ್ದಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ ಹಾಗೂ ಶಿಕ್ಷಣದ ಜೊತೆಗೆ ಆತ್ಮಗೌರವವನ್ನು ಬೆಳೆಸಿಕೊಳ್ಳವುದು ಮುಖ್ಯ ಎನ್ನುತ್ತಾ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಸಮಗ್ರವಾಗಿ ಮಾಹಿತಿ ನೀಡಿದರು. ಸಮಾರಂಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರುಉಪಸ್ಥಿತರಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ ಆಹಾರೋತ್ಸವ ಮಹಾಮೇಳ ಸಮಿತಿ, ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕೃಷಿ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಮೇಳ ಹಮ್ಮಿಕೊಳ್ಳಲಾಗಿದ್ದು, ಜೂನ್ 14ರಿಂದ 16ರ ವರೆಗೆ ನಡೆಯಿತು. ನಮ್ಮದು ಕೃಷಿ ಮತ್ತು ಋಷಿ ಸಂಸ್ಕೃತಿಯ ದೇಶ. ಇವೆರಡೂ ತ್ಯಾಗ ಮತ್ತು ಆರಾಧನಾ ಸಂಸ್ಕೃತಿ. ತುಳುನಾಡಿನ ಸಂಸ್ಕೃತಿ ಕೃಷಿ ಮೂಲದ್ದು. ಕೃಷಿಯಿಂದ ಇಲ್ಲದೇ ಸಂಸ್ಕೃತಿ ಇಲ್ಲ ಎಂದರು. ಮಿಜಾರುಗುತ್ತು ಆನಂದ ಆಳ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಐ ಟಿ ಐ ಬಿದ್ಕಲ್ಕಟ್ಟೆ ಇಲ್ಲಿಯ ಪ್ಲೇಸ್ಮೆಂಟ್ ವಿಭಾಗದ ವತಿಯಿಂದ ಉದ್ಯೋಗ ಮತ್ತು ಶಿಕ್ಷಣ ಮೇಳ ಕಾರ್ಯಕ್ರಮ ಜರುಗಿತು. ಎಲೆಕ್ರ್ಟೋನಿಕ್, ಈಎಮ್, ಎಮ್ಆರ್ಎಸಿ, ಎಮ್ಎಮ್ವಿ, ಫೈಟರ್ ವೃತ್ತಿಯ ಹಿರಿಯ ತರಬೇತಿದಾರರು ಹಾಗೂ ಪೂರ್ವ ತರಬೇತಿದಾರರು ಭಾಗವಹಿದ್ದರು. ಪ್ರಾಚಾರ್ಯ ಗಂಗಾಧರಪ್ಪ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಅಧಿಕಾರಿ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಿರಿಯ ತರಬೇತಿ ಅಧಿಕಾರಿ ಮನೋಹರ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು . ಅಜಿತ್ ಆಚಾರ್ ನಿರೂಪಿಸಿದರು. ಸಿಬ್ಬಂದಿ ನೇತೃತ್ವದಲ್ಲಿ ಸಂದರ್ಶನ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ- ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು ವತಿಯಿಂದ ಇತ್ತಿಚಿಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿ ಉದ್ಯೋಗ ಪಡೆಯುವಂತೆ ಮಾಡಿದಾಗ ವಿದ್ಯಾವಂತ ಯುವಕರಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನಿತಾ ವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಆಕಾಂಕ್ಷಿಗಳಿಗೆ ಈ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಕರೆ ನೀಡಿದರು. ಜ್ಞಾನಭಾರತಿ ಅಕಾಡೆಮಿ ಕುಂದಾಪುರ ಇದರ ನಿರ್ದೇಶಕ ಸತ್ಯನಾರಾಯಣ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಬೈಂದೂರು ತರಬೇತಿ ಕೇಂದ್ರದ ಸಂಚಾಲಕರಾದ ಸಿ.ಭಾಸ್ಕರ್ ಬಿಲ್ಲವ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶಂಕರ್ ನಾಯಕ್.ಬಿ ಮತ್ತು ಉದ್ಯೋಗ ಮಾಹಿತಿ ಕೋಶಾಧಿಕಾರಿ ಡಾ. ಸುಬ್ರಹ್ಮಣ್ಯ .ಎ ಉಪಸ್ಥಿತರಿದ್ದರು. ಈ ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು…
