ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕನ್ನು ರೂಪಿಸಿಕೊಳ್ಳಲು ಪುಸ್ತಕಗಳು ಮಾರ್ಗದರ್ಶಕ, ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ರೂಪಿಸಿಕೊಳ್ಳಬೇಕು. ಎಲ್ಲ ವಿಚಾರಗಳ ಕುರಿತು ಜ್ಞಾನ ಹೊಂದಿರುವುದು ಅತೀ ಅವಶ್ಯಕ. ಕಾರಂತರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೇ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ, ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವುದರೊಂದಿಗೆ ಬದುಕಿನ ಮೌಲ್ಯಗಳನ್ನು ತಿಳಿಸಿ ಸಾರ್ಥಕವಾದ ಬದುಕನ್ನು ನಡೆಸಿದವರು ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಮಕ್ಕಳಿಗಾಗಿ ಕಾರಂತರು-೫ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ ಚಿತ್ರಕಲೆಯ ಮೂಲಕ ಕಾರಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಉಪಪ್ರಾಂಶುಪಾಲೆ ಶುಭ ಕೆ.ಎನ್., ಕಾರಂತರು ಕನ್ನಡ ಸಾಹಿತ್ಯ ಕಲೆ ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕಿ ಮಾಲಾಶ್ರೀ ಖಾರ್ವಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಖಾರ್ವಿ, ಸಾರ್ಜೆಂಟ್ ಅಟ್ ಆರ್ಮ್ಸ್ ಬಿ. ಲಕ್ಷ್ಮೀಕಾಂತ ಮಡಿವಾಳ, ಚುನಾಯಿತ ಅಧ್ಯಕ್ಷ ರಾಮನಾಥ ಚಿತ್ತಾಲ್, ಉಪಾಧ್ಯಕ್ಷ ಉದಯಶಂಕರ ರಾವ್, ತರಬೇತುದಾರ ಎಚ್.ಗಣೇಶ ಕಾಮತ್, ಜೊತೆ ಕಾರ್ಯದರ್ಶಿ ಗೋಪಾಲ ಬಿಲ್ಲವ, ಖಜಾಂಚಿ ಜನಾರ್ದನ ಪೂಜಾರಿ ಪೆರಾಜೆ, ನಿರ್ದೇಶಕರಾಗಿ ರಾಮನಾಥ ಚಿತ್ತಾಲ್, ರಾಘವೇಂದ್ರ ಕುಲಾಲ್, ಕೆ.ರಾಮನಾಥ ನಾಯಕ್, ರಾಘವೇಂದ್ರ ವಿ.ಮೇಸ್ತ, ಸುಗುಣ ಆರ್.ಕೆ., ಚೇರ್‌ಮೆನ್‌ಗಳು ನಾರಾಯಣ ಈ.ನಾಯ್ಕ್, ಉಮೇಶ ಎಲ್.ಮೇಸ್ತ, ವಾಸುದೇವ ಶೇರುಗಾರ್, ಪ್ರದೀಪ್ ಡಿ.ಕೆ., ಟಿ.ದಿನಕರ ಶೆಣೈ, ಎಂ.ನಾಗೇಂದ್ರ ಪೈ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ ಸೇರಿದಂತೆ ಹಲವಾರು ಶರಣರು ರಚಿಸಿದ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅವುಗಳನ್ನು ಮುದ್ರಿಸುವ ಮೂಲಕ ವಚನ ಸಾಹಿತ್ಯವೂ ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ ಫ.ಗು ಹಳಕಟ್ಟಿ ಅವರ ಶ್ರಮ ಅವಿರತವಾದುದು ಎಂದು ಕರಾವಳಿ ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಫ.ಗು ಹಳಕಟ್ಟಿಯವರ ಜನ್ಮದಿನ – ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ, ಡಾ. ಫ.ಗು ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನ ಸಾಹಿತ್ಯ ಉಳಿದಾಗ ಸಮಾಜ ಉಳಿಯಲು ಸಾಧ್ಯ. ಶರಣರು ರಚಿಸಿದ ವಚನಗಳು ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ಬೇರೂರಿದ್ದ ಸತಿಸಹಗಮನ ಪದ್ಧತಿ, ಅಸ್ಪೃಶ್ಯತೆ, ಜಾತಿ ಪದ್ಧತಿ ಸೇರಿದಂತೆ ಹಲವು ಮೌಢ್ಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸಿಲೋನ್ ಮಾಸ್ಟರ್ಸ್ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ 2026ರಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿದ ಉಡುಪಿ ಜಿಲ್ಲೆಯ ಕೋಡಿ ಕನ್ಯಾಣದ ನಿವಾಸಿ, ನಂಜುಂಡ ಎಫ್.ಸಿ.ಎ. ಅವರು 60+ ವಯೋಮಿತಿ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲಿ ಚಾಂಪಿಯನ್ ಆಗಿ ಚಿನ್ನದ ಪದಕವನ್ನು ಪಡೆದು ಮತ್ತು ಮಿಕ್ಸೆಡ್ ಡಬಲ್ಸ್‌ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ಬೆಂಗಳೂರಿನಲ್ಲಿ ನಂಜುಂಡ ಅಂಡ್ ಕಂಪನಿಯನ್ನು ಹುಟ್ಟು ಹಾಕಿ ಇದರ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇವೆ ನಿರ್ವಹಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ರಾಜ್ಯದ ಸಾಕಷ್ಟು ಸಿಎ ಇಂಟರ್ಮೀಡಿಯಟ್, ಸಿಎ ಫೈನಲ್ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರಿಗೆ ಉದ್ಯೋಗ ಕಲ್ಪಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಮಣಿಪಾಲ ಇದರ ತಂತ್ರಜ್ಞಾನ ಹಾಗೂ ವಿಜ್ಞಾನ ವಿಭಾಗದ ಸಹ ಉಪ ಕುಲಪತಿಯಾಗಿ (Pro Vice Chancellor – Technology & Science) ಡಾ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯ ಜೈಪುರದ ಪ್ರೋ-ಪ್ರೆಸಿಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು, 2026ರ ಜುಲೈ 01ರಿಂದ ಸಹ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ ಮಣಿಪಾಲ್ ಸಮೂಹ ಸಂಸ್ಥೆಗಳ ಸಲಹಾ ಮಂಡಳಿಯಲ್ಲಿ ಸ್ಥಾನಪಡೆಯಲಿದ್ದಾರೆ. ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಉಪ ಕುಲಪತಿಯಾಗಿ ನೇಮಕಗೊಂಡಿರುವ ಡಾ. ಕೋಟೆಗಾರ್ ಅವರು ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತದಲ್ಲಿ 29ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಮಾರ್ಚ್ 1998 ರಿಂದ ಅವರು ಮಣಿಪಾಲ್ ಸಮೂಹ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಎಂಐಟಿ ಮಣಿಪಾಲದ (MIT Manipal) ‘ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್’ ವಿಭಾಗದಲ್ಲಿ ಪ್ರೊಫೆಸರ್ ಆಗಿ ಹಾಗೂ ಮಾಹೆಯ (MAHE) ‘ಅಂತರರಾಷ್ಟ್ರೀಯ ಸಹಯೋಗ’ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಹಾಗೂ ಕಾರ್ಯದರ್ಶಿಯಾಗಿ ಮಣಿಕಂಠ ದೇವಾಡಿಗ ಆಯ್ಕೆಯಾಗಿದ್ದಾರೆ. 2026-27ನೇ ಸಾಲಿನ ನೂತನ ಅಧ್ಯಕ್ಷರ ಪದಪ್ರದಾನ ಸಮಾರಂಭವು ಜುಲೈ 08ರ ಬುಧವಾರ ಬೈಂದೂರಿನ ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶೈಕ್ಷಣಿಕ ಸಂಸ್ಥೆಗಳ ಅದರಲ್ಲೂ ಸರಕಾರಿ ಶಾಲೆಗಳ ಉನ್ನತಿಗೆ ದಾನಿಗಳ ಸಹಕಾರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಗುರುವಾರ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ದಾನಿಗಳ ನೆರವಿನಿಂದ ನೀಡಲಾದ ಅಕ್ಷರ ರಥ ವಾಹನವನ್ನು ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿ, ತಾವು ಕಲಿತ ಸರಕಾರಿ ಶಾಲೆಗಳ ಬಗ್ಗೆ ಶಾಲಾ ಹಳೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ವಹಿಸಿ ಅದರ ಉಳಿವಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ವಾಹನಕ್ಕೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ನೆರವೆರಿಸಲಾಯಿತು. ಶಾಲಾ ವಾಹನದ ಕೀ ಅನ್ನು ಶಾಲಾ ಆಡಳಿತ ಮಂಡಳಿಗೆ ದಾನಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಸಭೆಯಲ್ಲಿ ದಾನಿಗಳಾದ ಮೇಬಿಲ್ ಥಾಮಸ್ ಡಿಸಿಲ್ವ,ಐರಿನ್ ಲೂಹಿಸ್, ಬಾಬು ಕುಂದರ್,ರಾಮದೇವ್ ಹಂದೆ,ಸವಿತಾ ಸೂಡಾ,ಅನ್ಯೋನ್ಯತಾ ವಾಹನ ಸಂಘ ಸಾಸ್ತಾನ ಇದರ ಉಪಾಧ್ಯಕ್ಷ ಉದಯ್ ಬಿ,ಪವಿತ್ರಾ ಇವರುಗಳ ಸಹಕಾರವನ್ನು ಸ್ಮರಿಸಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ಸಮವಸ್ತ್ರ ಕೊಡುಗೆಯಾಗಿ ನೀಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಕೋಣಿಯ ಮಾನಸ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭ ಶಾಲೆಯ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು, ಆಟೋಟಗಳನ್ನು ವಿದ್ಯಾರ್ಥಿಗಳು ನಡೆಸಿದರು. ವಿಶೇಷ ಚೇತನ ವಿದ್ಯಾರ್ಥಿಗಳು ತಮ್ಮ ವಿವಿಧ ಪ್ರತಿಭೆಯನ್ನು ತೋರ್ಪಡಿಸಿದರು. ಈ ಸಂದರ್ಭ ಕೋಣಿಯ ಮಾನಸ ಜ್ಯೋತಿ ಟ್ರಸ್ಟ್ ಕೃಷ್ಣ ಶೋಭಾ ಮಧ್ಯಸ್ಥ, ಚೇತನ ಹಾಗೂ ಸಂಸ್ಥೆಯ ಮತ್ತಿತರ ಸಿಬ್ಬಂದಿಗಳು, ಕಾಲೇಜಿನ ಡೀನ್ ಅಕಾಡೆಮಿಕ್ ಗಿರಿರಾಜ್ ಭಟ್ ನೆಂಪು, ಸಹಾಯಕ ಪ್ರಾಧ್ಯಾಪಕ ಮಹೇಶ್ ಪೂಜಾರಿ, ಕಂಪ್ಯೂಟರ್ ಪ್ರೋಗ್ರಾಮರ್ ಆಕಾಶ್ ಭಂಡಾರಿ, ಮಂಜುನಾಥ್ ಕುಲಾಲ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಲಯದ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ, ವಿದ್ಯಾರ್ಥಿ ಸಂಸತ್ ಉದ್ಘಾಟನೆ, ಎಸ್.ಡಿ.ಎಂ.ಸಿ ಖಾಲಿಯಾದ ಸ್ಥಾನಗಳಿಗೆ ಆಯ್ಕೆ ಕಾರ್ಯಕ್ರಮ ಬುಧವಾರ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಪ್ರೇಮ ಎಸ್. ನಾಯ್ಕ್ ವಹಿಸಿದ್ದರು. ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಮೊಬೈಲ್ ಬಿಡಿ ಪುಸ್ತಕ ಹಿಡಿ” ಕಾರ್ಯಕ್ರಮದ ಅಂಗವಾಗಿ ಕನ್ನಡ, ಇಂಗ್ಲಿಷ್ ಸ್ಪಷ್ಟವಾದ ಓದುವಿಕೆ, ಗಣಿತದ ಲೆಕ್ಕಾಚಾರವನ್ನು ಪೋಷಕರ ಎದುರು ಮಾಡಿ ತೋರಿಸಲಾಯಿತು. ವಿದ್ಯಾರ್ಥಿ ಸಂಸತ್ ಉದ್ಘಾಟನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಪ್ರಮಾಣವಚನವನ್ನು ಸಹ ಶಿಕ್ಷರಾದ ಉದಯ್ ಬೋಧಿಸಿದರು. ಪೋಷಕರ ಸಭೆಯಲ್ಲಿ ಖಾಲಿ ಆಗಿರುವ ಎಸ್.ಡಿ.ಎಂ.ಸಿ ಸದಸ್ಯರ ನೇಮಕ ಮಾಡಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸುಬ್ಬಯ್ಯ ನಾಯ್ಕ್, ಉಪಾಧ್ಯಕ್ಷರನ್ನಾಗಿ ನಾಗರತ್ನ ಶೆಟ್ಟಿ ಆಯ್ಕೆಯಾದರು. ಈ ಹಿಂದಿನ ಎಸ್.ಡಿ.ಎಂ.ಸಿ ಅಧ್ಯಕ್ಷರು ಪುಷ್ಪ ನೀಡಿ ಸ್ವಾಗತಿಸಿದರು. ಪೋಷಕರಿಗೆ 2026-27ನೇ ಸಾಲಿನ ಮಕ್ಕಳಿಗೆ ಕಲಿಕೆ ಬಗ್ಗೆ ಹಾಗೂ ವಾಹನ ಸುರಕ್ಷತೆ ಬಗ್ಗೆ ಮಾಹಿತಿ…
