Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಭವಿಷ್ಯವನ್ನು ಕಟ್ಟುವವರು ಇಂದಿನ ಯುವ ವಿದ್ಯಾರ್ಥಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು.  ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ “ಕೌಶಲ್ಯ ತರಬೇತಿಯ ಅವಕಾಶ ಮತ್ತು ಸೌಲಭ್ಯಗಳು” ಕುರಿತ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಯುವಶಕ್ತಿ ಬೆಳಗುತ್ತಾ ಇದೆ. ಆದರೆ ಅದಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇರುತ್ತದೆ. ಜೊತೆಯಲ್ಲಿ ಯುವಶಕ್ತಿ ತಮ್ಮ ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಾದರೆ ಅದಕ್ಕೆ ಪೂರಕ ಅವಕಾಶಗಳು ಮತ್ತು ಸೌಲಭ್ಯಗಳು ಬಗ್ಗೆ ಮಾಹಿತಿಯನ್ನು ಚೆನ್ನಾಗಿ ತಿಳಿದಿರಬೇಕು . ತಿಳಿದುಕೊಂಡು ಒಳ್ಳೆಯ ರೀತಿಯಲ್ಲಿ ಮುಂದುವರಿದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಬಹುದು. ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು. ನಿಮ್ಮ ಸಾಧನೆಯನ್ನು ಜಗತ್ತು ಮೆಚ್ಚುವಂತಿರಲಿ ಎಂದು ಆಶಿಸಿದರು. ಮಹಿಳಾ ವೇದಿಕೆಯ ಕುರಿತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಮೀನಾಕ್ಷಿ ಎನ್. ಎಸ್. ಮಾತನಾಡಿದರು. ಡಿಜಿಟಲೈಜೇಶನ್ ಮತ್ತು ಐಟಿಸಿ ಕುರಿತು ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಮಾತನಾಡಿದರು. ವಿವಿಧ ಸರ್ಟಿಫಿಕೇಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832, 8050770004, 8050770005 ಮತ್ತು 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.. ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಉಡುಪಿಯ ಮಿಷನ್ ಕಂಪೌಂಡಿನ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮವು ನಡೆಯಲಿದೆ. ಡಿ. ದೇವರಾಜ ಅರಸು ಅವರ ದೂರದೃಷ್ಠಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಅವರಿಗಿದ್ದ ಬದ್ಧತೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೆಶ್ವರ ಇವರ ಸಂಯುಕ್ತಾಶ್ರಯದಲ್ಲಿ  ನಡೆದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಬಾಲಕ – ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಾದ ಅಥರ್ವ, ಬಿ. ತೇಜಸ್ ಶೆಣೈ , ಪ್ರಮೋದ್ ಭಟ್ , ಸೌಲತ್ ಕುಮಾರ್ ಶೆಟ್ಟಿ, ಪ್ರಣವ್ ಕೆ. ಶೇರೆಗಾರ್, ಸನ್ಮಯ್ ಎಸ್., ಅಕ್ಷತಾ ಶೆಟ್ಟಿ, ಸಾಕ್ಷಿ ಶೆಟ್ಟಿ, ಹರ್ಷಿಣಿ, ಶ್ರೇಯಾ ಎ. ಪೂಜಾರಿ, ಸೋನಿಕಾ ಆರ್., ಮಾನ್ಯ, ಮಾನ್ವಿತಾ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ – ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ́ಕುಂದಾಪ್ರ ಕನ್ನಡ ಹಬ್ಬʼವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಹೇಳಿದರು. ಅವರು ಬೆಂಗಳೂರಿನ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡದರು. ಆ.17ರ ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ. ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರ, ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರೆವೇರಿತು. . ಸಂಸ್ಥೆಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟ ನಂತರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು . ಪ್ರಕಾಶ್‌ಚಂದ್ರ ಶೆಟ್ಟಿ ಚಿತ್ತೂರು, ಮಾಜಿ ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರೋಟರಿ ಕ್ಲಬ್‌ ಬೆಳೆದು ಬಂದ ಹಾದಿ ಹಾಗೂ ಅದರ ಧ್ಯೇಯೋದ್ದೇಶಗಳನ್ನು ತಿಳಿಯಪಡಿಸಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಲಿಯಾಕತ್ ಅಲಿ, ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ’ ನಶಾಮುಕ್ತ ಭಾರತ ಅಭಿಯಾನ ’ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು. ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ವಿನಾಯಕ ಜೋಗ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ. ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 04 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ  ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸಾಲ – ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಬೈಂದೂರು ಆಡಳಿತ ಸೌಧದ ಎದುರು ಸೋಮವಾರ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದಾರೆ. ಈ ವೇಳೆ ಅವರು ಮಾತನಾಡಿ, ಜನರು ಕರೆದಲ್ಲಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಅವರ ಅನುಕೂಲಕ್ಕಾಗಿಯೇ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಛೇರಿ ತೆರೆದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಅಧಿಕಾರಿಗಳಿಗೂ ಕೂಡ ಜನರ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿ ಇದ್ದು, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಾನು ಕರೆದಲ್ಲಿಗೆ ಬರುವುದು ಅವರ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಧಿಕಾರದಲ್ಲಿ ಇರುವುದನ್ನು ಬಳಸಿಕೊಂಡು ಸ್ಥಳೀಯ ಕಾಂಗ್ರೆಸ್ ನಾಯಕರು ಅಧಿಕಾರಿಗಳ ದಾರಿ ತಪ್ಪಿಸುತ್ತಿದ್ದು, ಶಾಸಕರು ಆಯೋಜಿಸುವ ಸಭೆಗಳಿಗೆ ತೆರಳದಂತೆ ಪರೋಕ್ಷವಾಗಿ ಒತ್ತಡ ಹಾಕುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಬೈಂದೂರು ಕ್ಷೇತ್ರಕ್ಕೆ ರೂ. 3 ಸಾವಿರ ಕೋಟಿ ಅನುದಾನ ಬಂದಿದ್ದು, ಈ…

Read More