Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ದುರ್ಗಾಂಬಾ ಬಸ್ ಡಿಪೋ ಎದುರು ಬಸ್ ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಪುರಸಭೆಯ ಪೌರ ಕಾರ್ಮಿಕ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಾರ್ಕೂರಿನ ಬಂಡಿಮಠ ನಿವಾಸಿ ಶಂಕರ ಹಾಗೂ ಬೀಚು ಎಂಬುವರ ಪುತ್ರ ಸುಂದರ್ (39) ಮೃತ ದುರ್ದೈವಿ. ಕಳೆದ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸುಂದ‌ರ್, ಮೂರು ತಿಂಗಳ ಹಿಂದಷ್ಟೇ ಖಾಯಂ ಪೌರಕಾರ್ಮಿಕರಾಗಿ ನೇಮಕಗೊಂಡಿದ್ದರು. ಗುರುವಾರ ಸಂಜೆ ತನ್ನ ಮನೆಯಾದ ಬಂಡಿಮಠದಿಂದ ಬೈಕಿನಲ್ಲಿ ಕುಂದಾಪುರಕ್ಕೆ ವಾಪಸ್‌ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರಿನ ದುರ್ಗಾಂಬ ಬಸ್ ಡಿಪೋ ಎದುರುಗಡೆ ಹೆದ್ದಾರಿಯಿಂದ ಸರ್ವಿಸ್ ರಸ್ತೆ ಕಡೆಗೆ ಬೈಕನ್ನು ತಿರುಗಿಸುತ್ತಿದ್ದ ವೇಳೆ ಕುಂದಾಪುರದಿಂದ ಡಿಪೋಗೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹೆದ್ದಾರಿಯಿಂದ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸುಂದರ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಕುಂದಾಪುರ ಸಂಚಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಾರಿಜಾತ ಸರ್ಕಲ್ ಬಳಿ ಸ್ಥಳೀಯ ನಿವಾಸಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರದ ಸುಬ್ರಹ್ಮಣ್ಯ (47) ಮೃತ ವ್ಯಕ್ತಿ. ಕುಸಿದುಬಿದ್ದ ಅವರನ್ನು ಕೂಡಲೇ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಜು. 9ರಂದು ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುದಾಗಿ ತಿಳಿಸಿದ್ದಾರೆ. ಮೃತರ ಪತ್ನಿ ದೀಪಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನ ಸಾಮಾನ್ಯರು ತಮ್ಮ ಸಮಸೈಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಅಂದು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನ ನಾಮಾನ್ಯರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಲವು ವರ್ಷಗಳಿಂದ ಕಚೇರಿ ಅಲೆದಾಡಿದರು ಬಗೆಹರಿದಿಲ್ಲ, ಇಂತಹ ಸಮಸ್ಯೆಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಪರಿಹರಿಸಿಕೊಳ್ಳಲು ಉತ್ತಮ ಅವಕಾಶವಿದೆ, ಕಾರಣ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ವಿವಿಧ ಇಲಾಖೆಯ ಸಮನ್ವಯದೊಂದಿಗೆ ಬಗೆಹರಿಸುವಂತಹ ಸಮಸ್ಯೆಗಳನ್ನು ಪರಿಹಾರ ಪಡೆದುಕೊಳ್ಳಲು ಒಂದು ಅವಕಾಶವಾಗಿದೆ. ಕಳೆದ ಬೈಂದೂರು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 160 ಕ್ಕೂ ಹೆಚ್ಚು ಅಹವಾಲುಗಳು ಜನರು ಸಲ್ಲಿಸಿದ್ದರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ, ಇ.ಎನ್‌.ಟಿ ತಜ್ಞ ಡಾ. ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಎಂಬಿಬಿಎಸ್‌, ಡಿಎಲ್‌ಓ ಪದವೀಧರರಾದ ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಡಾ ಸತೀಶ್ ಅತ್ಯುತ್ತಮ ಗಾಯಕರಾಗಿದ್ದು, ಅನೇಕ ಸಂಗೀತ ವೀಡಿಯೊಗಳನ್ನು ಹೊರತಂದಿದ್ದರು. ಡಾ. ಎಸ್.‌ ಜಾನಕಿ ಅವರ ಅಭಿಮಾನಿಯಾಗಿದ್ದ ಅವರು ಡಾ. ಎಸ್.‌ ಜಾನಕಿ ಜಾನಕಿ ರಾಷ್ಟ್ರೀಯ ಪುರಸ್ಕಾರವನ್ನು ಪ್ರತಿವರ್ಷ ನಾಡಿನ ಖ್ಯಾತ ಗಾಯಕರು, ಸಂಗೀತಗಾರರಿಗೆ ನೀಡುತ್ತಿದ್ದರು. ಕೋಟ ಮನಸ್ಮಿತ ಫೌಂಡೇಶನ್‌ ಪಾಲುದಾರರಾಗಿದ್ದ ಇವರು ಯಶಸ್ವಿ ಸಂಘಟಕರಾಗಿದ್ದರು. ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಸಿನಿಮಾಗಳಿಂದ ಪ್ರಭಾವಿತರಾಗಿದ್ದ ಡಾ. ಸತೀಶ್‌ ಅವರು, ವೈದ್ಯ ವೃತ್ತಿಯನ್ನೇ ಆಯ್ದುಕೊಂಡು ಸರ್ಜನ್‌ ಆಗುವ ಕನಸು ಕಂಡಿದ್ದರು. ಅದರೊಂತೆಯೇ ಎಂಬಿಬಿಎಸ್‌, ಡಿಎಲ್‌ಓ ಪದವಿ ಪಡೆದು ಸ್ವಂತ ಆಸ್ಪತ್ರೆ ಆರಂಭಿಸಿದ್ದರು. ಫಿಟ್ನೆಸ್‌ ಬಗ್ಗೆ ಅತೀವ ಕಾಳಜಿ ಹೊಂದಿದ್ದು ಸ್ವತಃ ವೈದ್ಯರಾಗಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕೊಡಮಾಡಿದ ಗಿಡಗಳ ವಿತರಣಾ ಕಾರ್ಯಕ್ರಮ ಇಂದು ಕೋಟೇಶ್ಚರ ಶ್ರೀ‌ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. 2025-26 ಜಿ.ಎಸ್.ಬಿ ಸಮಾಜದ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ವರ್ಷವಾಗಿದ್ದು ಇದಕ್ಕೆ ಪೂರ್ವಭಾವಿಯಾಗಿ ಸುಮಾರು 1 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ಹಣ್ಣುಗಳ ಸಸಿಯನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಸಮಾಜ ಬಾಂಧವರಿಗೆ‌ ಸಸಿಗಳನ್ನು ದೇವಳದ ಆಡಳಿತ ಮೊಕ್ತೇಸರ ದಿನೇಶ ಕಾಮತ್ ನೀಡುವುದರ ಮೂಲಕ ಚಾಲನೆ ನೀಡಿದರು. ಸುಮಾರು 300 ಗಿಡಗಳನ್ನು ನೀಡಲಾಯಿತು. ದೇವಳದ ಮೊಕ್ತೇಸರರು ಹಾಗೂ ಶ್ರೀ ರಾಮ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಶಾಂತಿ ಲಯನ್ಸ್ ಕ್ಲಬ್ ಹುಣಸೆಮಕ್ಕಿ – ಮೊಳಹಳ್ಳಿ ಇದರ ಪದಗ್ರಹಣ ಸಮಾರಂಭವು ಹೊಂಬಾಡಿಯ ಕುಲಾಲ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ಉಪ ಗವರ್ನರ್ ಸಪ್ನಾ ಸುರೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪದಗ್ರಹಣ ಸಮಾರಂಭವನ್ನು ನೆರವೇರಿಸಿ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಅಂಬಾಸಡರ್ ಅರುಣ್ ಹೆಗ್ಡೆ ಯವರ ಉಪಸ್ಥಿತಿಯಲ್ಲಿ, ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಜಿಲ್ಲೆ 317C ಇದರ ಪ್ರಾಂತ್ಯ ಅಧ್ಯಕ್ಷರಾದ ಸೋಮನಾಥ ಹೆಗ್ಡೆ ಹಾಗೂ ವಲಯ ಅಧ್ಯಕ್ಷರಾದ ವಸಂತ್ ಕುಮಾರ್ ಶೆಟ್ಟಿ, ಪ್ರಾಂತ್ಯ ಕಾರ್ಯದರ್ಶಿ ಆನಂದ ಶೆಟ್ಟಿ, ವಲಯ ಕಾರ್ಯದರ್ಶಿ ಪಟ್ಟಾಭಿರಾಮ ಭಟ್ ಮೊದಲಾದವರು ಭಾಗವಹಿಸಿದ್ದರು. ಪ್ರಸ್ತುತ ಸಾಲಿನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ನಿಡ್ಲಾಡಿ, ಕಾರ್ಯದರ್ಶಿಯಾಗಿ ಉದಯಕುಮಾರ್ ಶೆಟ್ಟಿ ಹಾಗೂ ಖಜಾಂಜಿಯಾಗಿ ದಯಾನಂದ್ ಪದಗ್ರಹಿತರಾದರು. ಕ್ಲಬ್ ನ ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಶಂಕರ್ ಹೆಗ್ಡೆಯವರು ಅಧಿಕಾರ ಸ್ವೀಕರಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಓಗಳೊಂದಿಗೆ ಹಾಗೂ ಕಂದಾಯ, ಸರ್ವೇ, ಅರಣ್ಯ, ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದರು. ಸಭೆಯಲ್ಲಿ ಗೋಳಿಹೊಳೆ, ಹೇರೂರು, ಕೊಲ್ಲೂರಿನಲ್ಲಿ ಗೋಮಾಳದ ಜಾಗ ಗುರುತಾಗಿದ್ದು, ಆದಷ್ಟು ಬೇಗ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ಆರಂಭಿಸುವಂತೆ ಹಾಗೂ ಉಳಿದಿರುವ ಗೋಮಾಳಗಳ ಸರ್ವೆ ಕಾರ್ಯವನ್ನು ಆದಷ್ಟು ಬೇಗ ಮುಗಿಸಿ, ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು. ಯಾವೆಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಮಶಾನ ಇಲ್ಲ ಮತ್ತು ಸ್ಮಶಾನ ಜಾಗ ಗ್ರಾಮ ಪಂಚಾಯತ್ ಹೆಸರಲ್ಲಿ ಇಲ್ಲ ಎಂಬುದರ ಮಾಹಿತಿ ಪಡೆದುಕೊಂಡು, ಸ್ಮಶಾನ ಭೂಮಿಗಳನ್ನು ಇದುವರೆಗೂ ಗ್ರಾಮ ಪಂಚಾಯತ್ ಹೆಸರಿಗೆ ಪಹಣಿ ಮಾಡಿಸದೇ ಇದ್ದಲ್ಲಿ ಅಂತಹ ಗ್ರಾಮ ಪಂಚಾಯತ್ ಮಾಹಿತಿಯನ್ನು ಪಡೆದು ತಹಶೀಲ್ದಾರ್ ಅವರ ಗಮನಕ್ಕೆ ತಂದು ಪಹಣಿ ಮಾಡಿಸಬೇಕು ಮತ್ತು ಈ ಎಲ್ಲಾ…

Read More

‌ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್  ಆಪ್ಟಿಟ್ಯೂಡ್ ಟೆಸ್ಟ್  ಇನ್ ಆರ್ಕಿಟೆಕ್ಚರ್  ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಆಧ್ಯಾ. ಎಸ್ ರಾಜ್ಯಕ್ಕೆ 195ನೇ ರ್ಯಾಂಕ್‌ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More