Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಹೊಸೂರಿನ ನಿವಾಸಿಯಾಗಿದ್ದು, ಜಯರಾಮ ಶೆಟ್ಟಿ ಮತ್ತು ಕಸ್ತೂರಿ ದಂಪತಿಗಳ ಪುತ್ರ ̤ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ತೇರ್ಗಡೆ ಹೊಂದಿದ ರಕ್ಷಿತ್ ಕುಮಾರ್‌ಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಕೋರಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಸಹೋದರಿ ನಿವೇದಿತಾ ಪ್ರತಿಷ್ಠಾನ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟು ‘ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ, ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕೆಂಬ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು. ಕಾರ್ಯಕ್ರಮದಲ್ಲಿ ರೋಟರಿ ರಿವರ್ ಸೈಡ್ ಕುಂದಾಪುರದ ಅಧ್ಯಕ್ಷರಾದ ಡಾ| ವಿಶ್ರಾಂತ್ ಎನ್. ಶೆಟ್ಟಿ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿ ಮೆಲ್ಲೊ, ನಿಕಟಪೂರ್ವ ಅಧ್ಯಕ್ಷರಾದ ಕೌಶಿಕ್ ಯಡಿಯಾಳ, ಸಹೋದರಿ ನಿವೇದಿತಾ ಪ್ರತಿಷ್ಠಾನದ ಬಳಗದವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚೈತ್ರಾ ಪ್ರಭು ತೇರ್ಗಡೆ ಹೊಂದಿದ್ದಾರೆ. ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್‌ಶಿಫ್‌ ಪೂರೈಸಿದ್ದರು. ಅವರು ಭಟ್ಕಳ ಬೆಂಗ್ರೆಯ ಶಿರಾಲಿ ಮಾವಿನಕಟ್ಟೆ ನಿವಾಸಿಯಾಗಿದ್ದು, ದಿನಕರ ಪ್ರಭು ಮತ್ತು ದೀಪಾ ಡಿ. ಪ್ರಭು ಅವರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ, ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು “ವಿದ್ಯಾ ದಾನವೆಂಬುದು ಶ್ರೇಷ್ಠದಾನ. ಪ್ರತಿ ಮಗುವಿನಲ್ಲಿ ಬೌದ್ಧಿಕ ಹಸಿವನ್ನು ಗುರುತಿಸಿ ಸಮರ್ಥ ಪರಿಹಾರ ಒದಗಿಸಿಕೊಡುವುದು ವೃತ್ತಿ ಧರ್ಮವಾಗಬೇಕು” ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಥಾಪಕರಲ್ಲಿ ಒಬ್ಬರಾದ ಗಣಪತಿ ಭಟ್ ಕೆ. ಎಸ್., ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ್, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿಗಳಾದ ಸುಧೀರ್ ಪ್ರಭು, ಪೆರ್ಡೂರು ಸರಕಾರಿ ಪದವಿ ಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮರವಂತೆಯ ಪ್ರದೀಪ್ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್‌, ಬೆಂಗಳೂರಿನ ಎಮ್‌ಎಸ್‌ ಶ್ರೀನಾಥ್‌ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್‌ಶಿಫ್‌ ಪೂರೈಸಿದ್ದರು. ಅವರು ಮರವಂತೆಯ ಕೃಷ್ಣ ಪೂಜಾರಿ ಹಾಗೂ ಗಿರಿಜಾ ದಂಪತಿಯ ಅವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2024-25ನೇಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು. ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು. ನೂತನ ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-1ರ ಸಹಾಯಕ ಗವರ್ನರ್ ಡಾ. ರಾಜೇಂದ್ರ ಶೆಟ್ಟಿ, ಕ್ಲಬ್‌ನ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯಿತಿಗೆ ಉಡುಪಿ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬುಧವಾರ ಭೇಟಿ ನೀಡಿದರು. ಕುಡಿಯುವ ನೀರಿನ ತಪಾಸಣೆ ಮಾಡಿದ ಅವರು ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿಯ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನಚಂದ್ರ ಮತ್ತು ಸದಸ್ಯರಲ್ಲಿ ಚರ್ಚಿಸಿದರು ಹಾಗೂ ಗ್ರಾಮ ಪಂಚಾಯತ್ ಬಳಿ ಇರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕುಡಿಯುವ ನೀರು ಮತ್ತು ಪೌಷ್ಟಿಕ ಆಹಾರದ ಬಗ್ಗೆ ವಿಚಾರಿಸಿದರು. ವಿಶೇಷವಾಗಿ ಪರಿಶಿಷ್ಟ ಪಂಗಡದ ಮಂಜಮ್ಮ ಅವರ ಮನೆಗೆ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ಶಿಕ್ಷಣ ಇಲಾಖೆ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಎಲ್ಲರನ್ನು ಒಳಗೊಂಡ ಸಮಿತಿ ರಚನೆ ಮಾಡಿ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳ ವೀಕ್ಷಣೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಎನ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್‌ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸ್ಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ ಎಂದು ಡಾ. ರೂಪಶ್ರೀ ಮರವಂತೆ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್‌ವೀಲ್ ಕ್ಲಬ್‌ನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ರಕ್ಷಣೆ ಹಾಗೂ ಆರೋಗ್ಯದ ಬಗ್ಗೆ ಅಲ್ಲಲ್ಲಿ ಜಾಗೃತಿ ಸಮಾವೇಶ, ಕಷ್ಟದಲ್ಲಿರುವವರಿಗೆ, ನೊಂದವರಿಗೆ ತಕ್ಷಣ ಸ್ಪಂದಿಸುವ ಹಾಗೂ ಮಕ್ಕಳಿಗೆ ಪ್ರಕೃತಿ ರಕ್ಷಣೆ, ನೀರಿನ ಮಿತ ಬಳಕೆ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುವ ಶೈಕ್ಷಣಿಕ ಕಾರ್ಯಕ್ರಮ ನಡೆಸುವ ಮೂಲಕ ಮಾನವೀಯತೆಯ ಸೇವೆ ನಿಮ್ಮಿಂದಾಗಲಿ ಎಂದು ಶುಭಹಾರೈಸಿದರು. ಈ ಸಾಲಿನ ನೂತನ ಅಧ್ಯಕ್ಷೆ ಗುಲಾಬಿ ಮರವಂತೆ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಹೋಬಳಿದಾರ್ ಮತ್ತು ಆಯುಕ್ತಾ ಯಡ್ತರೆ ನೂತನ ಸದಸ್ಯರಾಗಿ ಕ್ಲಬ್ಬಿಗೆ ಸೇರ್ಪಡೆಗೊಂಡರು. ಅರ್ಹರಿಗೆ ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಆರ್ಥಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ.ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎನ್‌ಡಿಎ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿದ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೈಂದೂರು ಕ್ಷೇತ್ರ ಸಮಿತಿ ವತಿಯಿಂದ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಸ್‌ಡಿಪಿಐ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ತೌಫೀಕ್ ಬ್ಯಾರಿ ಅವರು ಮಾತನಾಡಿ, ಬಿಜೆಪಿ ಸರಕಾರ ಬಂದ ನಂತರ  ಗುಂಪು ಹತ್ಯೆಯಂತಹ ಘೋರವಾದ ಕೃತ್ಯಕ್ಕೆ ಚಾಲನೆ ನೀಡಿದಂತಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಇಂತಹ ಕೃತ್ಯ ಮರುಕಳಿಸಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಗಂಗೊಳ್ಳಿ, ಜೊತೆ ಕಾರ್ಯದರ್ಶಿ ಸಮೀರ್ ಗಂಗೊಳ್ಳಿ, ಗಂಗೊಳ್ಳಿ ಗ್ರಾಮ ಸಮಿತಿ ಅಧ್ಯಕ್ಷರಾದ ರಜಬ್ ಗಂಗೊಳ್ಳಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Read More