Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾರ್ಕಳ ಸಾಣೂರಿನ ರಾಜೇಶ್ವರಿ ನ್ಯಾಶನಲ್ ಸ್ಕೂಲ್‌ನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ 04 ಜನ ಬಾಲಕಿಯರು ಹಾಗೂ 08 ಜನ ಬಾಲಕರು ಒಟ್ಟು 12 ಕ್ರೀಡಾಪಟುಗಳು ಪ್ರಥಮ ಸ್ಥಾನ ಪಡೆದುಕೊಂದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಶಾಲೆಯಿಂದ 12 ಜನ ಕ್ರೀಡಾಪಟುಗಳು ಆಯ್ಕೆಯಾಗಿರುವುದು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹೆಮ್ಮೆಯ ವಿಚಾರವಾಗಿರುತ್ತದೆ. 14 ವರ್ಷ ವಯೋಮಿತಿ ವಿಭಾಗ:ಅರ್ಟಿಸ್ಟಿಕ್ ಯೋಗ ಪೇರ್: ಶ್ಯಾಮ್ ಹಾಗೂ ಶಶಿಕುಮಾರ್ – ಪ್ರಥಮರಿದಮಿಕ್ ಯೋಗ ಪೇರ್: ಆದರ್ಶ್ ಹಾಗೂ ಶಶಾಂಕ್ – ಪ್ರಥಮಅರ್ಟಿಸ್ಟಿಕ್ ಸಿಂಗಲ್ : ಆದರ್ಶ್ ಕೆ.ಎಸ್. – ಪ್ರಥಮಟ್ರೆಡಿಶನಲ್ ಸಿಂಗಲ್ – ಶಶಿಕುಮಾರ್ ವಿ.ಜಿ – ಪ್ರಥಮ 17 ವರ್ಷ ವಯೋಮಿತಿಯ ಬಾಲಕರ ವಿಭಾಗ:ಅರ್ಟಿಸ್ಟಿಕ್ ಯೋಗ ಪೇರ್: ಕಾರ್ತಿಕ್ ಹಾಗೂ ಪ್ರಜ್ವಲ್ – ಪ್ರಥಮರಿದಮಿಕ್ ಯೋಗ ಪೇರ್: ಶ್ರೀವತ್ಸರಾಜ್ ಹಾಗೂ ಶ್ರೇಯಸ್ –…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತಕ್ಕೀಡಾಗಿ ಬಿದ್ದಿದ್ದ ಯುವಕನ ಮೇಲೆ ಕ್ರೇನ್ ಹರಿದು ಮೃತಪಟ್ಟ ದಾರುಣ ಘಟನೆ ನಡೆದಿದೆ. ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಮೃತ ದುರ್ದೈವಿ. ತೆಕ್ಕಟ್ಟೆಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ನಿಂತಿದ್ದ ಖಾಸಗಿ ಬಸ್‌ ನಿಲ್ಲಿಸಲಾಗಿತ್ತು. ಅದರ ಪಕ್ಕದಲ್ಲೇ ಬೈಕ್ ಸವಾರ ಯುಟರ್ನ್ ತೆಗೆದುಕೊಳ್ಳಲು ಮುಂದಾಗಿದ್ದ. ಆದರೆ ಏಕಾಏಕಿ ಬಸ್‌ ಚಲಿಸಿದ ಪರಿಣಾಮ ಬೈಕ್‌ ಸವಾರ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದಿದ್ದಾನೆ. ಸವಾರ ಬೀಳುತ್ತಿದ್ದಂತೆ ಅದೇ ಮಾರ್ಗವಾಗಿ ಬಂದ ಕ್ರೇನ್ ಆತನ ಮೇಲೆ ಹರಿದಿದೆ. ಗಾಯಾಳು ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅ.17ರಂದು ಬೆಳಿಗ್ಗೆ 09.30 ರಿಂದ ಸಂಜೆ 05.30 ಗಂಟೆಯವರೆಗೆ  ಕುಂದಾಪುರ/ಹಾಲಾಡಿ/ಬೆಳ್ವೆ/ಹೈಕಾಡಿ/ಬಿದ್ಕಲ್ ಕಟ್ಟೆ/ಆವರ್ಸೆ ವ್ಯಾಪ್ತಿಯಲ್ಲಿ 110/11ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳ್ವೆ, ಹೈಕಾಡಿ,ಬಿದ್ಕಲ್‌ಕಟ್ಟೆ ಮತ್ತು ಆವರ್ಸೆ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ,ಗೋಳಿಯಂಗಡಿ, ರಟ್ಟಾಡಿ, ಮಾವಿನಕೊಡ್ಲು, ಹೆಮ್ಮಣ್ಣು, ಅಮಾಸೆಬೈಲು, ಜಡ್ಡಿನಗದ್ದೆ, ತೊಂಬಟ್ಟು, ಬಳ್ಮನೆ, ಬಿದ್ಕಲ್‌ಕಟ್ಟೆ, ಮೊಳಹಳ್ಳಿ,ಹಾರ್ದಳ್ಳಿ-ಮಂಡಳ್ಳಿ, ಯಡಾಡಿ-ಮತ್ಯಾಡಿ ಮತ್ತು ಹಾಲಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅ.18ರಂದು  ಬೆಳಿಗ್ಗೆ 10.00 ರಿಂದ ಸಂಜೆ 05.00  ಗಂಟೆಯವರೆಗೆ ಉಡುಪಿ/ಹಿರಿಯಡ್ಕ/ಬಜೆ/ಪೆರ್ಡೂರು ವ್ಯಾಪ್ತಿಯಲ್ಲಿ 001/33/11 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಲ್ಲಿ 110/11ಕೆವಿ 10 ಎಂವಿಎ ಶಕ್ತಿ ಪರಿವರ್ತಕಕ್ಕೆ ಸಂಬಂಧಿಸಿದ 11ಕೆವಿ ಬ್ಯಾಂಕ್ ಸಿಟಿಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ 11ಕೆವಿ ಹಿರಿಯಡ್ಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಮಾರ್ಗದಲ್ಲಿ ಬಜೆ ವಾಟರ್ ಸಪ್ಲೈ, ಹಿರಿಯಡ್ಕ ಪೇಟೆ, ಪಾಪುಜೆ, ಬಜೆ, ಗುಡ್ಡೆಯಂಗಡಿ, ಕೊಂಡಾಡಿ,  ಕೋಡಿಬೆಟ್ಟು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಕಾಪು ತಾಲೂಕು ಪಂಚಾಯತ್ ವತಿಯಿಂದ 04 ಅಕ್ಕ ಸಂಜೀವಿನಿ ಅಂಗಡಿ ಮೂಲಕ ತಯಾರಿಸಿದ ದೀಪಾವಳಿ ಗಿಫ್ಟ್ ಬಾಕ್ಸ್ ಗಳನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸಹಾಯಕ ಆಯುಕ್ತೆ ರಶ್ಮಿ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಯೋಜನಾ ನಿರ್ದೇಶಕ ವಿಜಯ್ ಕುಮಾರ್, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವಾ, ಸಂಜೀವಿನಿ ಯೋಜನೆಯ ಜಿಲ್ಲಾ ಮತ್ತು ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಅವರು ಉಪಸ್ಥಿತರಿದ್ದರು. ಕಟಪಾಡಿ ಅಕ್ಕ ಸಂಜೀವಿನಿ ಅಂಗಡಿಯ ಡ್ರೈ ಫ್ರೂಟ್ಸ್ ಗಿಫ್ಟ್ ಬಾಕ್ಸ್, ಪಡುಬಿದ್ರೆ ಹಾಗೂ ಶಿರ್ವ ಅಕ್ಕ ಅಂಗಡಿಯ ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಲಡ್ಡು, ಸ್ವೀಟ್ಸ್, ಸಿಹಿ ತಿನಿಸುಗಳು ಹಾಗೂ ಬೆಳಪು ಅಕ್ಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2025-26ನೇ ಸಾಲಿಗೆ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ (ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಬೌದ್ದ ಮತ್ತು ಸಿಖ್) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅವಶ್ಯಕ ದಾಖಲೆಗಳೊಂದಿಗೆ ಅ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಕೆಲಸದ ಸಮಯದಲ್ಲಿ ಪಡೆದುಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ:0820-2574596 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಪಂಚಾಯತ್‌ನ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನೆಡೆಯಿತು. ಸಂಸದರು ಸಂಜೀವಿನಿ ಸ್ವ- ಸಹಾಯ ಗುಂಪು ಹಾಗೂ ಒಕ್ಕೂಟಗಳ ಬಲವರ್ಧನೆ, ಸಂಜೀವಿನಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ವಿವಿಧ ಸ್ವ ಉದ್ಯೋಗ ಹಾಗೂ ಪ್ರವಾಸೋದ್ಯಮ ಚಟುವಟಿಕೆ, ಹಣಕಾಸು ಸೇರ್ಪಡೆ ಹಾಗೂ ವಿವಿಧ ವಿಷಯಗಳ ಬಗ್ಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಯೋಜನಾ ನಿರ್ದೇಶಕರಾದ ವಿಜಯ್ ಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ವಿಷಯ ನಿರ್ವಹಕ ಅನಂತ ಕ್ರಷ್ಣ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಡಾ ಸೌಮ್ಯ ಕುಮಾರಿ, ಯತೀಶ್, ರವಿ, ಶಿವಾನಂದ್ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಸುಖ-ದುಃಖ, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಭರವಸೆಯಾದ ಯುವಶಕ್ತಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಆರೋಗ್ಯಯುತ ಜೀವನ ಶೈಲಿಯನ್ನು ಪಾಲಿಸಿ ಸ್ವಂತ ಪರಿಶ್ರಮದಿಂದ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಕೀಳರಿಮೆಯಿಂದ ಹೊರಬಂದು ತಮ್ಮ ಬದುಕಿನ ಶಿಲ್ಪಿಗಳಾಗಬೇಕೆಂದು ಉಡುಪಿ ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡನಗುಡ್ಡೆ, ಮನಶಾಸ್ತ್ರಜ್ಞರಾದ ಡಾ. ವಿರೂಪಾಕ್ಷ ದೇವರುಮನೆಯವರು ನುಡಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ 2025-26ನೇ ಸಾಲಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾಲೇಜಿನ ಅಭಿವೃದ್ಧಿಯಲ್ಲಿ ಸೇವಾ ಮನೋಭಾವದಿಂದ ತೊಡಗಿಸಿಕೊಂಡು ಕಾಲೇಜಿನ ಘನತೆ ಗೌರವವನ್ನು ಎತ್ತಿಹಿಡಿಯಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಿ ಕರೆ ನೀಡಿದರು. ಐಕ್ಯೂಎಸಿ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಸಂಘಟನೆಗೆ ಪರಿಸರ ಕಾಳಜಿಯ ಕಾರ್ಯಕ್ರಮವನ್ನು ಗುರುತಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದ.ಕ ಮತ್ತು ಉಡುಪಿ ಜಿಲ್ಲೆ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ ಸದಾ ಪರಿಸರಸ್ನೇಹಿ ಆಂದೋಲನ, ಜಾಗೃತಿ, ಕಾರ್ಯಕ್ರಮಗಳ ಮೂಲಕ ಮನೆಮಾತಾದ ಕೋಟದ ಪಂಚವರ್ಣ ಸಂಘಟನೆಯ ಕಾರ್ಯವೈಖರಿಯನ್ನು ಗುರುತಿಸಿ ಸೋಮವಾರ ರಾಜ್ಯ ಸರಕಾರದ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪಂಚವರ್ಣದ ಪರವಾಗಿ ಸಂಘದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರಕಾಲೇಜು ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ 19ನೇ ಬಾರಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಸೆಮಿಫೈನಲ್ ಹಂತದಲ್ಲಿ ಆಳ್ವಾಸ್ ಕಾಲೇಜು, ಉಜಿರೆಯ ಎಸ್‌ಡಿಎಮ್ ಕಾಲೇಜನ್ನು 3-0 ನೇರ ಸೆಟ್‌ಗಳಲ್ಲಿ ಸೋಲಿಸಿ ಫೈನಲ್‌ಗೆ ಅರ್ಹತೆ ಗಳಿಸಿತು. ಫೈನಲ್ ಪಂದ್ಯದಲ್ಲಿ ಆಳ್ವಾಸ್ ಕಾಲೇಜು, ಮಂಗಳೂರಿನ ಎಸ್‌ಡಿಎಂಬಿಬಿಎಂ ಕಾಲೇಜನ್ನು 3-0 ನೇರ ಸೆಟ್‌ಗಳಲ್ಲಿ ಸೋಲಿಸಿ,15ನೇ ಬಾರಿ, ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಸ್ಮಾರಕ ರೋಲಿಂಗ್ ಟ್ರೋಫಿಯನ್ನು ಪುರುಷರ ವಿಭಾಗದಲ್ಲಿ ಪಡೆದುಕೊಂಡಿತು. ಅಂತೆಯೇ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಮೂರನೇ ಸ್ಥಾನ ಪಡೆದುಕೊಂಡಿತು. ವಿಜೇತ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.…

Read More