ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್ (25), ಕೊಳ್ಳೆಬೈಲುವಿನ ಸೃಜನ್ ಶೆಟ್ಟಿ (28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ (38) ಬಂಧಿತ ಆರೋಪಿಗಳು. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬವರಿಗೆ ಸುಮಾರು ಒಂದು ವರ್ಷದ ಹಿಂದೆ ಆನ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಶಿರಿಯಾರ ನಿವಾಸಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಂದೇಶ್ ಕುಲಾಲ್, ಪ್ರದೀಪ್ ಸೂಚನೆಯಂತೆ ರೂಪೇಶ್, ಮನೋಜ್, ಧೀರಜ್, ಹರೀಶ, ವಿದೇಶ್ ಹಾಗೂ ಇತರೆ ವ್ಯಕ್ತಿಗಳ ಮೊಬೈಲ್ ನಂಬರ್ಗಳಿಗೆ ಆನ್ಲೈನ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಸಂದೇಶ್ ಕುಲಾಲ್ ಬೆಟ್ಟಿಂಗ್ನಲ್ಲಿ ಸುಮಾರು 15 ಲಕ್ಷ ರೂ. ಹಣವನ್ನು ಗೆದ್ದಿದ್ದು ಈ ಹಣವನ್ನು ಇವರು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಒಂದು ತಿಂಗಳ ಹಿಂದೆ ಶಿರಿಯಾರದಲ್ಲಿ ಪ್ರದೀಪ್ನನ್ನು ಭೇಟಿ ಮಾಡಿ ಗೆದ್ದ 15ಲಕ್ಷ ರೂ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತವು ಒಂದು ಪ್ರಜಾಪ್ರಭುತ್ವ ದೇಶವಾಗಿದ್ದು ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಅವರು ರವಿವಾರ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯ ದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಚುನಾವಣಾ ಆಯೋಗ ಸ್ಥಾಪನೆಯಾದ ಸಂಸ್ಕರಣಾರ್ಥವಾಗಿ 2011ರಿಂದ ಪ್ರತಿ ವರ್ಷ ಜನವರಿ 25ನ್ನು ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪಾರದರ್ಶಕ ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ನಾಗರಿಕ ಸ್ನೇಹಿ ತಂತ್ರಜ್ಞಾನಗಳನ್ನು ಪರಿಚಯಿಸಿದೆ. ಮತದಾನವು ಐಚ್ಛಿಕವಾಗಿದ್ದು, ಹೆಚ್ಚು ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಾಗರಿಕರು ತಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸುವ ಜನಪ್ರತಿನಿಧಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ ಇಂಡಿಯಾದ 2025-26 ರ ನೆಟ್ಬಾಲ್ ಚಾಂಪಿಯನಶಿಪ್ನಲ್ಲಿ ಬೆಳ್ಳಿಯ ಪದಕ ಪಡೆದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದೇವಸ್ಥಾನದ ವತಿಯಿಂದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ತಗ್ಗರ್ಸೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೂ 15,000 ರೂಪಾಯಿ ನಗದು ಬಹುಮಾನ ಕೊಟ್ಟು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಂದ್ರ ಶೆಟ್ಟಿ , ರಘುರಾಮ ದೇವಾಡಿಗ, ಮಹಾಲಿಂಗ ನಾಯ್ಕ, ಸುಧಾ ಕೆ. ಹಾಗೂ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ, ಬಿ. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜನಸಂಖ್ಯೆಗೆ ಸರಿಯಾದ ವೈದ್ಯರು ನಮ್ಮ ದೇಶದಲ್ಲಿ ಇಲ್ಲ ಎನ್ನುವುದು ವಾಸ್ತವಾಂಶ. ಜನರು ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕಿದೆ. ಅದೆರಡು ಒಂದೇ ಊರಿನಲ್ಲಿ ಸಿಕ್ಕಿದರೆ ಜನರು ಪಟ್ಟಣ ಪ್ರದೇಶಕ್ಕೆ ವಲಸೆ ಹೋಗುವ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಗಂಗೊಳ್ಳಿ ಮುಖ್ಯ ರಸ್ತೆಯಲ್ಲಿನ ದುರ್ಗಾ ಕಾಂಪ್ಲೆಕ್ಸ್ನಲ್ಲಿ ಶ್ರೀ ದುರ್ಗಾ ಮೆಡಿಕಲ್ಸ್ ಎಂಡ್ ಜನರಲ್ ಸ್ಟೋರ್ಸ್ ಮತ್ತು ಶ್ರೀ ದುರ್ಗಾ ಕ್ಲಿನಿಕ್ನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಸೌಲಭ್ಯ ಹೆಚ್ಚಾದರೆ ಜನರು ಪಟ್ಟಣ ಪ್ರದೇಶದಿಂದ ಪಟ್ಟಣ ಪ್ರದೇಶಕ್ಕೆ ವಲಸೆ ಹೋಗುವುದು ಕಡಿಮೆಯಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಹತ್ತಿರದಲ್ಲಿ ಸಿಗಬೇಕೆನ್ನುವುದು ಜನರ ಪ್ರಮುಖ ಬೇಡಿಕೆ. ಜನಸಂಖ್ಯೆ ಹೆಚ್ಚಾದಷ್ಟು ವೈದ್ಯರು ಲಭ್ಯತೆ ಕೂಡ ಹೆಚ್ಚಾಗಬೇಕು. ಪಟ್ಟಣ ಪ್ರದೇಶಕ್ಕೆ ಸರಿಸಮಾನವಾದ ವ್ಯವಸ್ಥೆಯನ್ನು ಗಂಗೊಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ಮಾಡಿರುವುದು ಶ್ಲಾಘನೀಯ ಎಂದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ 288ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕುಂಭಾಶಿ ಆನೆಗುಡ್ಡೆ ವಿನಾಯಕ ದೇಗುಲ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಭಾನುವಾರ ಜರಗಿತು. ದೇಗುಲದ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ದೇಗುಲದ ಪ್ರಭಂಧಕ ನಟೇಶ್ ಕಾರಂತ್ ಸ್ವಚ್ಛತಾ ಕಾರ್ಯ ಹಮ್ಮಿಕೊಂಡ ಪಂಚವರ್ಣ ಸಂಘಟನೆಯನ್ನು ಗುರುತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷ ಗಿರೀಶ್ ಆಚಾರ್, ಪಂಚವರ್ಣ ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ರಾಷ್ಟ್ರ ನಿರ್ಮಾಣಕ್ಕಾಗಿ ನಾಯಕತ್ವ ಶಿಬಿರವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಇಂದು ವಿಷಯಗಳನ್ನು ನೋಡುವ ದೃಷ್ಟಿಕೋನದಲ್ಲೇ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ಆ ಬದಲಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪಾತ್ರ ಅಪಾರವಾಗಿದೆ. ರಾಷ್ಟ್ರ ನಿರ್ಮಾಣದ ದೃಷ್ಟಿಯಿಂದ ಆಯೋಜಿಸಿರುವ ಈ ನಾಯಕತ್ವ ಶಿಬಿರ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು. ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಆಳ್ವಾಸ್ ಶಿಕ್ಷಣ ಸಂಸ್ಥೆ, ದೇಶದ ವಿವಿಧ ಭಾಷೆ, ಸಂಸ್ಕೃತಿ, ಆಚಾರ–ವಿಚಾರಗಳನ್ನು ಪ್ರತಿನಿಧಿಸುವ ಮಕ್ಕಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ರಾಷ್ಟ್ರೀಯತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪ್ರಶಂಸಿಸಿದರು. ಈ ನಿಟ್ಟಿನಲ್ಲಿ ಡಾ. ಮೋಹನ್ ಆಳ್ವ ಅವರ ಸೇವೆಗೆ ಅಭಿನಂದನೆ…
ಕುಂದಾಪ್ರ ಆಟ್ ಕಾಂ ಸುದ್ದಿ.ಕೋಟ: ಎಳೆ ವಯಸ್ಸಿನಲ್ಲೆ ಯಕ್ಷ ಅಭಿರುಚಿಯನ್ನು ಬೆಳೆಸಬೇಕು ಆಗ ಮಾತ್ರ ಕರಾವಳಿಯ ಗಂಡು ಕಲೆ ಉಳಿಸಿ ಬೆಳೆಸಲು ಸಾಧ್ಯ. ಈ ನಿಟ್ಟಿನಲ್ಲಿ ಯಕ್ಷಾಮೃತ ಸಹಕಾರಿಯಾಗಲಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟದ ಗಿಳಿಯಾರು ಅಲ್ಸೆಕೆರೆ ಮಹಾಲಿಂಗೇಶ್ವರ ದೇಗುಲದಲ್ಲಿ ಯಕ್ಷಾಮೃತ ಟ್ರಸ್ಟ್ ಗಿಳಿಯಾರು ಚಿಣ್ಣರ ಕಲಾವಿಹಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯಕ್ಷಗಾನವನ್ನು ಉಳಿಸಿ ಬೆಳೆಸುವಲ್ಲಿ ವಿಶ್ವವಿಖ್ಯಾತ ಮಕ್ಕಳ ಮೇಳ ಸಾಲಿಗ್ರಾಮ ಇವರ ಪಾತ್ರ ಮಹತ್ವವಾದದ್ದು. ಅದೇ ರೀತಿ ಯಕ್ಷಾಮೃತ ಟ್ರಸ್ಟ್ ಮಹತ್ತರ ಮೈಲಿಗಲ್ಲು ಸಾಧಿಸಲಿ ಒಂದಿಷ್ಟು ಆಸಕ್ತ ಮನಸ್ಸುಗಳಿಗೆ ವೇದಿಕೆ ಕಲ್ಪಿಸಲಿ ಎಂದು ಹಾರೈಸಿದರು. ಸಭೆಯಲ್ಲಿ ಯಕ್ಷಾಮೃತ ಲೋಗೊ ಅನ್ನು ಕಲಾ ಸಾಹಿತಿ ಜನಾರ್ದನ ಹಂದೆ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಾಮೃತ ಟ್ರಸ್ಟ್ ಅಧ್ಯಕ್ಷ ಹಂಡಿಕೆರೆ ರಾಘವೇಂದ್ರ ಶೆಟ್ಟಿ ವಹಿಸಿದ್ದರು. ಯಕ್ಷಗುರು ಪ್ರಸಾದ್ ಕುಮಾರ ಮೊಗೆಬೆಟ್ಟು ಶುಭಾಶಂಸನೆಗೈದರು. ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಜಿ. ತಿಮ್ಮ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು 475 ವರ್ಷಗಳ ಇತಿಹಾಸವಿರುವ ತಾಲೂಕಿನ ಬಸ್ರೂರಿನ ಮಂಡಿಕೇರಿ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ 17ನೇ ವರ್ಷದ ಬ್ರಹ್ಮರಥೋತ್ಸವವು ಶುಕ್ರವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಬ್ರಹ್ಮರಥೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ ಸೇವೆ, ಯಜ್ಞ ವಿಧಿಗಳು, ಮಹಾ ಪ್ರಾರ್ಥನೆ, ಮಹಾಪೂಜೆ, ಮಹಾ ಬಲಿ ಪ್ರದಾನ, ಸಾಯಂಕಾಲ ರಥಾರೋಹಣ, ಮಹಾಸಮಾರಾಧನೆ ನಡೆಯಿತು. ರಾತ್ರಿ ರಥೋತ್ಸವ, ಆಕರ್ಷಕ ಸುಡುಮದ್ದು ಪ್ರದರ್ಶನ, ಸಂಜೆ ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾ.ಆಯು ಭಟ್ ಅಂಬಲಪಾಡಿ ಮತ್ತು ವೃಂದದವರಿಂದ “ಭಜನ್ ಸಂಧ್ಯಾ” ಕಾರ್ಯಕ್ರಮ ನಡೆಯಿತು. ಶನಿವಾರ ಅವಭ್ರತ ಉತ್ಸವ ನಡೆಯಿತು. ದೇವಸ್ಥಾನದ ಧರ್ಮದರ್ಶಿ ಮಂಡಳಿ ಸದಸ್ಯರು, ದೇವಸ್ಥಾನದ ಪ್ರಧಾನ ಅರ್ಚಕರು, ಪುರೋಹಿತರು, ಕುಳಾವಿ ಭಜಕರು. ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉತ್ಸವಗಳು ಬದುಕಿನ ಬದಲಾವಣೆಗೆ ನಾಂದಿಯಾಗಲಿ. ಸನ್ಮಾರ್ಗದಲ್ಲಿ ಬದುಕುವ ಜತೆಗೆ ಧರ್ಮದ ಹಾದಿಯಲ್ಲಿ ಸಾಗುವುದನ್ನು ಮೈಗೂಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಶನಿವಾರ ಬೈಂದೂರು ಉತ್ಸವ ಸಮಿತಿ ನೇತೃತ್ವದಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಅವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಮೂರು ದಿನಗಳ ಕಾಲ ಬೈಂದೂರು ಉತ್ಸವ -2026 ಉದ್ಘಾಟಿಸಿ ಮಾತನಾಡಿ ಕಲೆಸಾಂಸ್ಕೃತಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಬೈಂದೂರು ಬಹಳ ಹಿಂದಿನಿಂದಲೂ ಪ್ರಸಿದ್ದಿ ಪಡೆದಿದೆ. ಹತ್ತಾರು ಪೌರಾಣಿಕ ಹಿನ್ನೆಲೆಯುಳ್ಳ ಧಾರ್ಮಿಕ ಸ್ಥಳಗಳು ಬೈಂದೂರಿನಲ್ಲಿದೆ ಶ್ರೀ ಕ್ಷೇತ್ರದ ವತಿಯಿಂದ ಇವುಗಳ ಅಭಿವೃದ್ಧಿಗೆ ನಿರಂತರ ಸಹಾಯ ನೀಡಲಾಗಿದೆ ಎಂದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕೊಲ್ಲೂರು ಉಪನಗರವಾಗಿ ಬೈಂದೂರು ಬೆಳೆಯಬೇಕಿದೆ. ಪ್ರತಿ ಗ್ರಾಮಗಳಲ್ಲಿ ಗ್ರಾಮೋತ್ಸವ ಪರಿಕಲ್ಪನೆಯ ಮೂಲಕ ಕಾರ್ಯಕ್ರಮ ಸಂಘಟಿಸಿ ಬೈಂದೂರು ಉತ್ಸವದಲ್ಲಿ ಸರಕಾರದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿದ ಕಲ್ಪನೆ ಅತ್ಯುತ್ತಮವಾಗಿದೆ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಾಸಗಿ ಬಸ್ಗಳನ್ನು ಓವರ್ಟೇಕ್ ಮಾಡುವ ವೇಳೆ ಬೈಕ್ ಸವಾರ ಯುವಕ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಗೆ ಮುಖಾಮುಖಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ನಡೆದಿದೆ. ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದ ವೇಳೆ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವೆ ಶೆಟ್ರಕಟ್ಟೆಯಲ್ಲಿ ನಡೆದ ಅಪಘಾತದ ಕರಾಳತೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…
