Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುವುದು. ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯಿದೆ ಅಂಶಗಳು, ಸಹಕಾರ ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ ಹಾಗೂ ಕಂಪ್ಯೂಟರ್ ಅಪರೇಷನ್ ಬಗ್ಗೆ ಪಠ್ಯಕ್ರಮವಿದ್ದು, ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳು ಗ್ರಾಮ ಕೇಂದ್ರಿಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆ ದೃಷ್ಟಿಕೋನವನ್ನು ಅಳವಡಿಸಿಕೊಂಡಾಗ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದ ಡಾ. ಶಿವರಾಮ ಕಾರಂತ್ ಟ್ರಸ್ಟ್ ಅಧ್ಯಕ್ಷ ಡಾ. ಗಣಮಾಥ ಎಕ್ಕಾರ್ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ಗೋಳಿಹೊಳೆ ಶಾಖೆಯಲ್ಲಿ ಗುರುವಾರ ನಡೆದ ಸೌಹಾರ್ದ ಸಹಕಾರಿ ದಿನಾಚರಣೆ ಹಾಗೂ ಗ್ರಾಹಕರ ಸಭೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರಿ ರಂಗಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಹಕಾರಿ ಸಂಘಗಳಿಗೆ ಹೆಚ್ಚಿನ ಮಹತ್ವವಿದೆ. ಪ್ರಜಾಪ್ರಭುತ್ವದ ನಾಲ್ಕು ತತ್ವಗಳಾದ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ ಹಾಗೂ ಸಾಮಾಜಿಕ ನ್ಯಾಯ ಎನ್ನುವುದನ್ನು ಕೇವಲ ಸಹಕಾರಿ ರಂಗದಲ್ಲಿ ಮಾತ್ರ ಕಾಣಲು ಸಾಧ್ಯವಿದೆ ಎಂದರು. ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಸ್ಸಾಂನಲ್ಲಿ ನಡೆದ ನ್ಯಾಷನಲ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇಲ್ಲಿನ ಕಶ್ಚಿ ಚೆಸ್ ಸ್ಕೂಲ್‌ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಹೊಸ ದಾಖಲೆ ಬರೆದಿದ್ದಾರೆ. ಸತತ ಒಂಬತ್ತು ಸುತ್ತುಗಳಲ್ಲಿ ಸೋಲರಿಯದೆ ಹೊಸ ವರ್ಷಕ್ಕೆ ಹೊಸ ಮುನ್ನುಡಿ ಬರೆದಿದ್ದಾರೆ. ಬಿಹಾರ, ಅಸ್ಸಾಂ, ಕೇರಳ, ತೆಲಂಗಾಣ, ರಾಜಸ್ತಾನ ರಾಜ್ಯಗಳ ರೇಟಿಂಗ್ ಚೆಸ್ ಕ್ರೀಡಾಪಟುಗಳನ್ನು ಸೋಲಿಸುವುದರ ಮೂಲಕ ಬೆಳ್ಳಿ ಪದಕ ಗಳಿಸಿ ಕರ್ನಾಟಕ ರಾಜ್ಯದ ಚೆಸ್ ಕ್ರೀಡಾಪಟುಗಳಲ್ಲಿ ಭರವಸೆಯ ಧ್ರುವತಾರೆಯಾಗಿಯಾಗಿ ಮೂಡಿಬಂದಿದ್ದಾರೆ ಎಂದು ಚೆಸ್ ಸ್ಕೂಲ್‌ನ ಪ್ರಕಟಣೆ ತಿಳಿಸಿದೆ. ಈಕೆ ತಾಲೂಕಿನ ಸಲ್ವಾಡಿಯ ಗ್ರಾಮದ ಶ್ರೀಕಾಂತ್ ಶೆಟ್ಟಿ ಹಾಗೂ ಉಷಾಲತಾ ಶೆಟ್ಟಿ  ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ 50 ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅದರ ಸೂಕ್ಷ್ಮ ಅಧ್ಯಯನವನ್ನು ಮಾಡಲಾಯಿತು. ಮಣಿಪಾಲದ ಉದಯವಾಣಿ ಮುದ್ರಣಾಲಯ ಮುಖ್ಯಸ್ಥರು ವಿದ್ಯಾರ್ಥಿಗಳ ಈ ಭೇಟಿಯಿಂದ ನೈಜ ಅಧ್ಯಯನ ಹಾಗೂ ಸಮಾಜಮುಖಿಗಳಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಉದಯ ಅಲ್ಯುಮೀನಿಯಂ ಘಟಕ ಮಣಿಪಾಲದ ವ್ಯವಸ್ಥಾಪಕರಾದ ಹೇಮಂತ್ ಕುಮಾರ್ ಅವರು ಅಲ್ಯುಮೀನಿಯಂ ಹಾಗೂ ಸ್ಟೀಲ್‌ನ ವಿವಿಧ ಪರಿಕರಗಳ ಉತ್ಪಾದನಾ ಹಂತಗಳನ್ನು ಸ್ಥೂಲವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕದಲ್ಲಿ ಅಲ್ಲಿಯ ಸಿಬ್ಬಂದಿಯವರು ಹಾಲು ಹಾಗೂ ಅದರ ಸಹ – ಉತ್ಪನ್ನಗಳ ಸಂಸ್ಕರಣೆಯ ವಿವಿಧ ಮಜಲುಗಳನ್ನು ವಿವರವಾಗಿ ತಿಳಿಸಿದರು. ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ. ಹಾಗೂ ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್. ಅವರು ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಮೆಸ್ಕಾಂ ಇಲಾಖೆ ಹೊಸ ವರ್ಷದಲ್ಲಿ ವಿದ್ಯುತ್ ಶಾಕ್ ನೀಡಿದೆ ಎಂದು ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಈ ಹಿಂದೆ ಸಿಂಗಲ್ ಪೇಸ್ ಹಳೆಯ ಮೀಟರಿಗೆ 936 ರೂಪಾಯಿ ಇತ್ತು ಆದರೆ ಈಗ ಹೊಸ ಸ್ಮಾರ್ಟ್ ಮೀಟರ್ ನ್ನು ಖಾಸಗಿಯವರ ಮೂಲಕ ಖರೀದಿ ಮಾಡಿ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕಕ್ಕೆ ಬಳಸುವ ಸ್ಮಾರ್ಟ್ ಮೀಟರ್ ದರ 4,785 ರೂಪಾಯಿ. ಅದೇ ತ್ರೀ ಫೇಸ್ ವಿದ್ಯುತ್ ಸಂಪರ್ಕ ಪಡೆಯಲು ಹಿಂದೆ ಮೀಟರ್ ದರ 2300 ರೂಪಾಯಿ ಇತ್ತು ಅದೇ ಈಗ ಹೊಸ ಸ್ಮಾರ್ಟ್ ಮೀಟರ್ ದರ 8400 ರೂಪಾಯಿ. ಇದು ತಾತ್ಕಾಲಿಕ ಸಂಪರ್ಕ ಪಡೆಯುವ ಹಾಗೂ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ರೈತರು ಹಾಗೂ ಜನಸಾಮಾನ್ಯರಿಗೆ ಅನಗತ್ಯ ಹೊರೆಯಾಗಲಿದೆ. ಈ ಸ್ಮಾರ್ಟ್ ಮೀಟರ್ ನ ಮುಂದುವರಿದ ಭಾಗವಾಗಿ ಮುಂದೆ ಮೆಸ್ಕಾಂ ಇಲಾಖೆ ಪ್ರಿಪೆಯ್ಡ್ ವ್ಯವಸ್ಥೆ ವಿದ್ಯುತ್ ಬಿಲ್ ಜಾರಿಗೆ ತಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ ಗಳನ್ನು ಅಳವಡಿಸಿ ಮರು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಗೋಳಿಯಂಗಡಿ ವಿ ಲೈಕ್ ಬ್ಯೂಟಿ ಪಾರ್ಲರ್ ಮಾಲಕಿ ವನಿತಾ ಅವರು ಮಹಿಳೆಯರ ಬ್ಯೂಟಿ ಪಾರ್ಲರ್  ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸಲಕರಣೆಗಳನ್ನು ವಿತರಿಸಿ, ಮಾತನಾಡಿ, ತಾನು ಇದೇ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದು, ಅನುಭವವನ್ನು ಪಡೆದುಕೊಂಡು ಇದೀಗ 2 ಪಾರ್ಲರ್ ಗಳನ್ನು ಹೊಂದಿ ಯಶಸ್ವಿಯಾಗಿ ಮುಂದುವರಿಯುತ್ತಿದ್ದೇನೆ. ಅವರು ಪಟ್ಟ ಶ್ರಮ ಹಾಗೂ ಕೆಲಸದ ಮೇಲಿನ ಆಸಕ್ತಿಯನ್ನು ಬಹಳ ವಿವರವಾಗಿ ಶಿಬಿರಾರ್ಥಿಗಳಿಗೆ ತಿಳಿಸಿದರು.  ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಹೆಣ್ಣುಮಕ್ಕಳ ಆಸಕ್ತಿಯ ವಿಷಯವಾಗಿದೆ. ಈ ಉದ್ಯಮದಲ್ಲಿ ಬೇಡಿಕೆ ಎಂದಿಗೂ ಕಡಿಮೆಯಾಗುವುದಿಲ್ಲ. ಹಾಗಾಗಿ ಎಲ್ಲರಿಗೂ ಸೌಂದರ್ಯದ ಬಗ್ಗೆ ಕಾಳಜಿ ಇರುತ್ತದೆ. ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿ ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ 2025-2026ನೇ ಸಾಲಿನ ದೈಹಿಕವಾಗಿ ಅಶಕ್ತರಾಗಿರುವ 54 ಫಲಾನುಭವಿಗಳಿಗೆ ಸುಮಾರು ರೂ. ಐದೂವರೆ ಲಕ್ಷ ವೈದ್ಯಕೀಯ ನೆರವನ್ನು ಹಸ್ತಾಂತರಿಸಲಾಯಿತು. ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀರಮಣ ಉಪಾಧ್ಯಾಯರು ಮಾತನಾಡಿ, ಕಳೆದ ಮೂರು ದಶಕಗಳಿಂದಲೂ ಶ್ರೀದೇವಳವು ಸಮಾಜಮುಖಿಯಾಗಿ ತೆರೆದುಕೊಂಡಿದ್ದು, ಪ್ರತಿ ವರ್ಷವೂ ದೈಹಿಕ ಆಶಕ್ತರಿಗೆ, ದೇವಸ್ಥಾನದ ಜೀರ್ಣೋದ್ಧಾರ ಹಾಗೂ ವಿವಿಧ ಶಾಲೆಗಳು, ಸಂಘ ಸಂಸ್ಥೆಗಳಿಗೆ ಅನುದಾನವನ್ನು ಪ್ರಸಾದ ರೂಪವಾಗಿ ನೀಡುತ್ತಾ ಬಂದಿದೆ. ಪ್ರಸಾದ ರೂಪವಾಗಿ ವೈದ್ಯಕೀಯ ನೆರವನ್ನು ಪ್ರತಿ ವರ್ಷ ದೈಹಿಕ ಆಶಕ್ತರಿಗೆ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿವಿಧ ಶಾಲೆಗಳು, ಸಂಘ ಸಂಸ್ಥೆಗಳಿಗೆ ನೆರವು ಪಡೆದ ಅಶಕ್ತ ಫಲಾನುಭವಿಗಳು ಶ್ರೀ ವಿನಾಯಕನ ಅನುಗ್ರಹದಿಂದ ಶೀಘ್ರವಾಗಿ ಚೇತರಿಸಿಕೊಂಡು ಎಲ್ಲರಿಗೂ ಆಯುರಾರೋಗ್ಯ ಆನಂದ ಐಶ್ವರ್ಯವನ್ನು ಕೊಟ್ಟು ಇಷ್ಟಾರ್ಥವನ್ನು ಅನುಗ್ರಹಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ನಿವೃತ್ತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಹಾಗೂ ಸಹೋದರರು, ಕಚೇರಿಯ ಮ್ಯಾನೇಜರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸೃಷ್ಟಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದ್ದು, ಭಾರತ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿರುವುದು ಶಿಲ್ಪಕಲೆಗೆ ಅವರು ನೀಡಿರುವ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಹೊಯ್ಸಳ ಮತ್ತು ಕಲ್ಯಾಣಿ ಚಾಲುಕ್ಯ ಶೈಲಿಯ ಅದ್ಭುತ ದೇವಾಲಯಗಳನ್ನು ನಿರ್ಮಿಸಿದ ಪೌರಾಣಿಕ ಶಿಲ್ಪಿ. ಬೇಲೂರು ಮತ್ತು ಹಳೇಬೀಡಿನ ಕೆತ್ತನೆಗಳಿಗೆ ಹೆಸರುವಾಸಿಯಾದ ಇವರು, ಭಾರತೀಯ ಕಲೆಯ ಸುವರ್ಣಯುಗಕ್ಕೆ ಕೊಡುಗೆ ನೀಡಿದ್ದಾರೆ. ಇವರು ನಿರ್ಮಿಸಿದ ದೇವಾಲಯಗಳು ಅತ್ಯಂತ ಸೂಕ್ಷ್ಮ…

Read More