ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಆರೋಗ್ಯಕರ ವಯೋವೃದ್ಧಿಗಾಗಿ ಯೋಗ’ ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಬೆಳಿಗ್ಗೆ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು. ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದತಿಯಿಂದ ಆಯೋಜಿಸಲಾದ ಕಾರ್ಯಕ್ರಮವನ್ನು ಆಳ್ವಾಸ್ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಉದ್ಘಾಟಿಸಿದರು. ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಆಳ್ವಾಸ್ ಶಾಲೆ, ನರ್ಸಿಂಗ್ ಕಾಲೇಜು, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಆಯುರ್ವೇದ ವೈದ್ಯಕೀಯ ಕಾಲೇಜು, ಹೋಮಿಯೋಪತಿ ವೈದ್ಯಕೀಯ ಕಾಲೇಜು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್ ಕೋಡಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಇವರ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಪೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಸಂಯೋಜನೆಯೊಂದಿಗೆ 3ನೇ ವರ್ಷದ ಪರಿಸರ ಸ್ನೇಹಿ ಹಸಿರುಹೆಜ್ಜೆ ಅಭಿಯಾನ ಕೋಡಿ ಕನ್ಯಾನ ಸತೀಶ್ ತಿಂಗಳಾಯ ಅವರ ಮನೆಯಿಂದ ಚಾಲನೆ ನೀಡಲಾಯಿತು. ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ ಮೆಂಡನ್ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ. ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕುಮಾರಿ ಸರಸ್ವತಿ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರಗಿತು. ಕೋಡಿ ವ್ಯಾಪ್ತಿಯ ವಿವಿಧ ಮನೆಗಳಿಗೆ ತೆರಳಿ ಗಿಡದ ಮಹತ್ವ ತಿಳಿಸಿ ನೆಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್., ಸಹಾಯಕಿ ಸಂಗೀತಾ, ಸಂಜೀವಿನಿ ಎಲ್.ಸಿ.ಆರ್.ಪಿ. ಸುಮಿತ್ರ, ಕೃಷಿಸಖಿ ತನುಜಾ, ಎಸ್.ಎಲ್.ಆರ್.ಎಂ. ಘಟಕದ ಸಿಬ್ಬಂದಿ ಕಿರಣ್ ಪುತ್ರನ್ ಹಾಗೂ ಸ್ಥಳೀಯರಾದ ಗೀತಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: * ನಾಗದೇವ್ ಎಂ.ಜಿ. – ಐ.ಐ.ಟಿ ಗುವಾಹಟಿ * ನಮಿತ್ ಕೆ. ಹೆಗಡೆ – ಐ.ಐ.ಟಿ ಹೈದರಾಬಾದ್ * ಪ್ರಥಮ್ ತಮ್ಮನಗೌಡರ್ – ಐ.ಐ.ಟಿ ಗಾಂಧಿನಗರ * ರಶ್ಮಿ ಆರ್.ಎಚ್. – ಐ.ಐ.ಟಿ ಭುವನೇಶ್ವರ್ ಎನ್.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: * ತೇಜಸ್ ಆರ್.ಬಿ. – ಎನ್.ಐ.ಟಿ.ಕೆ ಸುರತ್ಕಲ್ * ತೇಜಸ್ ಹೆಗಡೆ – ಎನ್.ಐ.ಟಿ.ಕೆ ಸುರತ್ಕಲ್ * ದಿಶಾಂತ್ ಎಂ. – ಎನ್.ಐ.ಟಿ.ಕೆ ಸುರತ್ಕಲ್ * ಮನೋಜ್ ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಉಡುಪಿಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಹಂಚಿಕೆಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ಜಿ.ಟಿ.ಟಿ.ಸಿ.ಯಲ್ಲಿ ವಿವಿದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ ಗಳಿಗೆ ಸೀಟು ಲಭ್ಯವಿದೆ. ಹೊರ ಜಿಲ್ಲೆ ಹಾಗೂ ಜಿಲ್ಲೆಯ ತೀರ ಗ್ರಾಮೀಣ ಭಾಗದ (ನಿತ್ಯ ಬಂದು ಹೋಗಲು ಸಾಧ್ಯವಾಗದವರಿಗೆ) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ವ್ಯವಸ್ಥೆಯೂ ಇದೆ. ಎಲ್ಲ ಆತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಕಂಪ್ಯೂಟರೈಸ್ಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಕರ್ನಾಟಕ ವಿದ್ಯುತ್ ಮಂಡಳಿಯ ನೌಕರರು ಮತ್ತು ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿ ರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಗೆ ಭೇಟಿ ನೀಡಿದ ನೌಕರರ ನಿಯೋಗವು ವಿದ್ಯುಚ್ಛಕ್ತಿ ಕಾಯ್ದೆ 108ನೇ ಪರಿಚ್ಛೇದದ ಪ್ರಾವಧಾನ ಬಳಸಿ ರಾಜ್ಯ ಸರಕಾರವು ಟಾಟಾ ಪವರ್ ಅರ್ಜಿಯನ್ನು ರದ್ದುಪಡಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದೆ. ರೈತರು, ಬಡವರು, ಮಧ್ಯಮ ವರ್ಗ, ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಗ್ರಾಮೀಣ ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮೆಸ್ಕಾಂ ನೌಕರರ ಪರವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಇದ್ದಕ್ಕೆ ಪೂರಕವಾಗಿ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆ / ಸಿ.ಬಿ.ಎಸ್.ಇ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಹರಿ ಎಮ್. ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಪ್ರೇಮಾ ಕ್ಲಿನಿಕ್ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ ಅವರು ವಿವಿಧ ಯೋಗಾಸನಗಳನ್ನು ಮಾಡಿ ಯೋಗ ಪ್ರಾತ್ಯಕ್ಷತೆಯನ್ನು ನೀಡಿದರು. ಆರೋಗ್ಯ ಪೂರ್ಣ ಜೀವನ ನಡೆಸಲು ಮನುಷ್ಯನ ಶರೀರಕ್ಕೆ ಯೋಗ ಬಹಳ ಮುಖ್ಯ ಎಂದು ತಿಳಿಸಿದರು. ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ವಿವಿಧ ಆಸನಗಳು ಹಾಗೂ ಅದರ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡಿ ಯೋ ದಿನದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ ಪುತ್ರನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ. ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ. ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ಅತ್ಯಮೂಲ್ಯ ರಕ್ತವನ್ನು ಸಂಗ್ರಹಿಸುವ ಮಹತ್ವದ ಕಾರ್ಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸೇವೆ ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆ – 2026ನ್ನು ಉದ್ಘಾಟಿಸಿ ಮಾತನಾಡಿದರು. ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ ಕಾರ್ಯವಾಗಿದೆ., ಯುದ್ಧ ಹಾಗೂ ಅವಘಡಗಳ ಸಂದರ್ಭದಲ್ಲಿ ಅಗತ್ಯ ರಕ್ತವನ್ನು ನೀಡುವುದು ಮತ್ತು ಆರೋಗ್ಯ ಸೇವೆಗಳ ಮೂಲಕ ರೆಡ್ ಕ್ರಾಸ್ ಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದೆ. ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ಪ್ರೀತಿ, ಮತ್ತು ಮಾನವೀಯತೆಯನ್ನು ಪಸರಿಸುವ ಕೆಲಸವನ್ನು ರೆಡ್ ಕ್ರಾಸ್ ಸಂಸ್ಥೆ ಮಾಡುತ್ತಿದೆ. ರಕ್ತದಾನದ ಬಗ್ಗೆ ಸಾಕಷ್ಟು ಜಾಗೃತಿ, ಮೂಡಿಸುವುದು ಮತ್ತು ರಕ್ತದಾನಿಗಳ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಉಪ್ಪೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ( ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ, ಇ&ಸಿ) ಎಂ.ಎಸ್ಸಿ (ಎಲೆಕ್ಟಾçನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 9880510585, 8618760169, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಜಿಲ್ಲೆಯ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃದ್ಧಾಶ್ರಮ ಪ್ರಾರಂಭಿಸುವ ಸ್ವಯಂ ಸೇವಾ ಸಂಸ್ಥೆಯು ಅಸ್ತಿತ್ವಕ್ಕೆ ಬಂದು ಕನಿಷ್ಠ 2 ವರ್ಷಗಳಾಗಿರಬೇಕು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು ಸೂಕ್ತ ಲಗತ್ತುಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಈ ಕಚೇರಿಗೆ ಜೂನ್.30 ರ ಒಳಗಾಗಿ ಸಲ್ಲಿಸಬಹುಧಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://dwdsc.karnataka.gov.in ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ…
