Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮಗಳ ಸವಾಂಗೀಣ ಅಭಿವೃದ್ಧಿ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಕಂಡ ಕನಸು. ಇದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯನ್ನು ಕಟ್ಟಿ ಇದರ ಮೂಲಕ ನನಸು ಮಾಡುವ ಮಹತ್ತರ ಕೆಲಸವನ್ನು ಕಳೆದ 42 ವರ್ಷಗಳಿಂದ ನಿರಂತರವಾಗಿ ಪೂಜ್ಯ ಹೆಗ್ಗಡೆ ಅವರು ಮಾಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಕಾರ್ಯಕ್ರಮ, ಘಟಕಗಳನ್ನು ಪ್ರಾರಂಭ ಮಾಡಿ ಇದರ ಮೂಲಕ ಸಮಾಜವನ್ನು ಸದೃಢಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಮರವಂತೆಯ ಸಾಧನಾ ಸಭಾ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸಭೆಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಅವರು ಜನಜಾಗೃತಿ ಕಾರ್ಯಕ್ರಮದ ಧ್ಯೇಯೋದ್ದೇಶಗಳ ಬಗ್ಗೆ, ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿಯ ಸಭೆಯನ್ನು ಪರಿಣಾಮಕಾರಿಯಾಗಿ ಮಾಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ್ ಸ್ವಾಮೀಜಿ ಅವರು ಬೆಂಗಳೂರಿನ ಬಸವನಗುಡಿಯ ಶ್ರೀ ದ್ವಾರಕಾನಾಥ ಭವನದಲ್ಲಿ ಕ್ರೋಧಿ ನಾಮ ಸಂವತ್ಸರದ ಚತುರ್ಮಾಸ ವೃತವನ್ನು ಶನಿವಾರ ಆರಂಭಿಸಿದರು. ಅಂದು ಬೆಳಿಗ್ಗೆ ಆರಂಭವಾದ ಚಾತುರ್ಮಾಸ ಸ್ವೀಕಾರದ ಧಾರ್ಮಿಕ ವಿಧಿ ವಿಧಾನಗಳು, ಗಣಪತಿ ಪೂಜಾ, ಮೃತ್ತಿಕಾ ಪೂಜಾ, ವ್ಯಾಸ ಪೂಜಾ, ಚಾತುರ್ಮಾಸ ವೃತ ಸ್ವೀಕಾರ ವಿಧಿ ವಿಧಾನನಗಳು ನಡೆಯಿತು. ಸಂಜೆ ದ್ವಾರಕಾನಾಥ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ್ ಸ್ವಾಮೀಜಿ ಅವರು, ಈ ಹಿಂದೆ 1979ರಲ್ಲಿ ಹಿರಿಯ ಸ್ವಾಮೀಜಿ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಅವರು ಬೆಂಗಳೂರಿನ ಶ್ರೀ ದ್ವಾರಕಾನಾಥ ಭವನದಲ್ಲಿ ಚಾತುರ್ಮಾಸ ಕಾರ್ಯಕ್ರಮವನ್ನು ಕೈಗೊಂಡಿದ್ದರು. ಇದೀಗ 45 ವರ್ಷಗಳ ಬಳಿಕ ಬೆಂಗಳೂರಿನ ಗೌಡ ಸಾರಸ್ವತ ಸಮಾಜ ಬಾಂಧವರಿಗೆ ಶ್ರೀ ರಾಮ್ ದೇವ್ ವೀರ ವಿಠಲ ದೇವರ ಹಾಗೂ ಸ್ವಾಮೀಜಿಗಳ ಸೇವಾ ಕೈಂಕರ್ಯವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ’ಸಪ್ತಸ್ವರ’ ವೇದಿಕೆಯಲ್ಲಿ ಎನ್. ಎಸ್. ಎಸ್. ಘಟಕದ 2024 – 25ನೇ ಶೈಕ್ಷಣಿಕ ವರ್ಷದ ತನ್ನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಜು.31ರಂದು ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಜಯಶಂಕರ್ ಕಂಗ್ಗಣ್ಣಾರ್ ಅವರು ಮಾತನಾಡಿ, ಎನ್‌. ಎಸ್‌. ಎಸ್. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಅರಳಿಸುವುದರ ಜೊತೆಗೆ ಚಾರಿತ್ರ್ಯ ಬೆಳೆಸುತ್ತದೆ. ಸದ್ಗುಣಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಎನ್‌. ಎಸ್‌. ಎಸ್. ಪಾತ್ರ ಅತಿಮುಖ್ಯ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಬಿ. ಅವರು ʼಪ್ರೀತಿ, ತ್ಯಾಗ, ಶಾಂತಿ, ಸಹಬಾಳ್ವೆ, ಬಂಧುತ್ವ ಮುಂತಾದ ಉದಾತ್ತ ಗುಣಗಳನ್ನು ಮನುಷ್ಯ ಹೊಂದಿರಬೇಕು. ಮಮತೆ ಮತ್ತು ಮಾನವತೆಯನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ, ನೈರ್ಮಲ್ಯ, ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಎನ್. ಎಸ್. ಎಸ್. ಘಟಕ ಪೂರಕವಾಗಿ ಕೆಲಸ ಮಾಡುತ್ತದೆ’ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಗೂರು ಗ್ರಾಮದ ಖಾಸಗಿ ತೋಟದ ಬಾವಿಯೊಂದಲ್ಲಿ ಕಾಣಿಸಿಕೊಂಡಿದ್ದ ಬೃಹತ್‌ ಗಾತ್ರದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಬುಧವಾರ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಾಗಿದೆ. ಮಂಗಳವಾರ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು. ಮೊಸಳೆಯನ್ನು ಸೆರೆ ಹಿಡಿಯಲು ಕೇಜ್‌ ಇರಿಸಿ ಅದರ ಚಲನವಲನಗಳ ಮೇಲೆ ನಿಗಾ ಇರಿಸಲು ಬಾವಿಯ ಎದುರು ಅಳವಡಿಸಲಾಗಿತ್ತು. ಆದರೆ ಮೊಸಳೆ ಕೇಜ್‌ ಪ್ರವೇಶಿಸದೇ ಬಾವಿಯಲ್ಲಿಯೇ ಉಳಿದಿತ್ತು. ಬುಧವಾರ ಮತ್ತೆ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆಯ ಸಿಬ್ಬಂದ್ದಿಗಳು, ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಬಲೆಯನ್ನು ಬಳಸಿ ಸುರಕ್ಷಿತವಾಗಿ ಮೊಸಳೆಯನ್ನು ಮೇಲಕ್ಕೆತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಸ್ಥಳೀಯರು ಸಾಥ್‌ ನೀಡಿದ್ದು, ಮೊಸಳೆ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಈ ವೇಳೆ ಬೈಂದೂರು ತಹಶಿಲ್ದಾರ್‌ ಪ್ರದೀಪ್‌ ಆರ್.‌, ವಲಯ ಅರಣ್ಯಾಧಿಕಾರಿ ಸಂದೇಶ್‌, ಬೈಂದೂರು ಪಶುಸಂಗೋಪನಾ ಇಲಾಖಾ ವೈದ್ಯ ಡಾ. ನಾಗರಾಜ ಮರವಂತೆ, ಪಿಎಸೈ ತಿಮ್ಮೇಶ್‌, ಅಗ್ನಿಶಾಮಕದಳದ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಇದನ್ನು ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು. ಮಾನವನ ಅಂಗಾಂಗಗಳಿಗೋಸ್ಕರ ಆಶ್ರಯ ಇಲ್ಲದವರಿಗೆ ಆಮಿಷ ತೋರಿಸಿ ಕಳ್ಳ ಸಾಗಾಣಿಕೆ ಮಾಡಲಾಗುತ್ತದೆ. ಹಣದ ಆಮೀಷದಿಂದ ಹಾಗೂ ಬಡತನದಲ್ಲಿರುವವರಿಗೆ ಹಣದ ಆಮಿಷವೊಡ್ಡಿ ಇಂತಹ ಕೃತ್ಯಗಳಿಗೆ ತೊಡಗಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಲಿದ್ದಾರೆ. ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್. ಸಿ. ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪಥ ಸಂಚಲನ ನಡೆಯಲಿದೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.31: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 01ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಜುಲೈ 31ರ ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 1ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು‌ ನೀಡಲು ಮುಂದಾಗಬೇಕು”  ಎಂದು ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿಯವರಾದ ಶಿವರಾಮ್ ಶೆಟ್ಟಿ ಅವರು ರೆಡ್‌ಕ್ರಾಸ್ ಸೇವಾತತ್ವಗಳ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್‌ ಕುಮಾರ ಶೆಟ್ಟಿ ಅವರು ಕುಂದಾಪುರದ ರೆಡ್ ಕ್ರಾಸ್ ಘಟಕದ ಉದಾರತೆ ಮತ್ತು ಸೇವಾಕಾರ್ಯಗಳನ್ನು ಸ್ಮರಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರು‌ ಮತ್ತು ಖಜಾಂಚಿಅವರು ಪ್ರಥಮ ಚಿಕಿತ್ಸಾ ಕಿಟ್‌ನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ 2023-24 ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿಯನ್ನು ಅಕಾಡೆಮಿಯ ಪೇಸ್ ಬುಕ್ (facebook.com/karnatakasangeeta1978) ಮೂಲಕ ಪಡೆದು ವೆಬ್‌ಸೈಟ್ Sangeetanrityaacademy.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More