ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಸಂಘಟನೆಗಳ ಮೂಲ ಉದ್ದೇಶವೇ ಸಮುದಾಯದ ಅಭಿವೃದ್ಧಿಯಾಗಿದ್ದು, ಉಳ್ಳುವರು ಇಲ್ಲದವರಿಗೆ ನೀಡುವ ದಾನಕ್ಕೆ ಸೇತುವೆಯಾಗಿ ಕೆಲಸ ಮಾಡಬೇಕು. ಅಂತಹ ಶ್ರೇಷ್ಠ ಕಾರ್ಯವನ್ನು ಕಳೆದ ಹನ್ನೆರಡು ವರ್ಷಗಳಿಂದ ಟ್ರಸ್ಟ್ ಮಾಡುತ್ತಾ ಬರುತ್ತಿದೆ ಎಂದು ವಿಶ್ವ ರಾಮಕ್ಷತ್ರಿಯ ಮಹಾಸಂಘ ಅಧ್ಯಕ್ಷ ಎಚ್. ಶಶಿಧರ್ ನಾಯ್ಕ್ ಹೇಳಿದರು. ಅವರು ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಬೈಂದೂರು ಇದರ 12ನೇ ವರ್ಷದ ಟ್ರಸ್ಟ್ ದಿನಾಚರಣೆ ಹಾಗೂ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ ರಾಮಕ್ಷತ್ರಿಯ ಸಮುದಾಯದಲ್ಲಿ ಹಲವು ಪ್ರತಿಭಾನ್ವಿತರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ದೊರೆತಾದ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು. ಟ್ರಸ್ಟ್ನಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಮನೆ ಹಸ್ತಾಂತರ, ವಿದ್ಯಾರ್ಥಿ ದತ್ತು ಸ್ವೀಕಾರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಹಸ್ತಾಂತರ ನಡೆಯಿತು. ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಜಿ. ಕೆ. ಸುರೇಶ್ ಮಾತನಾಡಿ, ಅರ್ಹರಿಗೆ ನೆರವು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪಾಲ್ ಮಚಾಡೊ, ಇವರು ನಿಜವಾದ ಸಂಸತ್ತಿನ ಕಾರ್ಯ ವೈಖರಿ ಬಗ್ಗೆ ತಿಳಿಸಿದರು. ಶಿಕ್ಷಣವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ನೀವು ಪಡೆದ ಶಿಕ್ಷಣ ಅರ್ಥಪೂರ್ಣವಾಗಬೇಕಾದರೆ ಮೊದಲು ನೀವು ನಿಮ್ಮ ಶಿಕ್ಷಕರನ್ನು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕೌಶಲಭರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿಪರ ಮತ್ತು ವೈಯಕ್ತಿಕ ಜೀವನಕ್ಕೆ ಸಹಕಾರಿ, ಪ್ರತಿಯೊಬ್ಬ ವಿಧ್ಯಾರ್ಥಿಯು ತನ್ನಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು, ನಾಯಕತ್ವ ಗುಣ ಹುಟ್ಟಿನಿಂದ ಬರುವುದಿಲ್ಲ, ಅದನ್ನು ತಾವಾಗೇ ಬೆಳೆಸಿಕೊಳ್ಳಬೇಕು, ಆ ಗುಣವೂ ಉತ್ತಮ ಮಾತುಗಾರಿಕೆ ಮತ್ತು ನಡವಳಿಕೆಯಿಂದ ಮಾತ್ರ ಬೆಳೆಸಿಕೊಳ್ಳಲು ಸಾಧ್ಯ, ಜೊತೆಗೆ ಸಂಸ್ಥೆಯ ನೀತಿನಿಯಮಗಳನ್ನು ಪಾಲಿಸುತ್ತಾ ಸಂಸ್ಥೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನೀಲ್ ಪ್ಯಾಟ್ರಿಕ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್, ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸರ್ಕಾರಿ ವ್ಯವಸ್ಥೆಯ ಮೂಲಕ ಕಾಲು ಸಂಕ ನಿರ್ಮಿಸಲು ಅಸಾಧ್ಯ ಎನ್ನುವುದು ನಮ್ಮ ಗಮನದಲ್ಲಿತ್ತು. ಆದರೆ ಹಾಗೆಯೇ ಬಿಟ್ಟರೆ ನಮ್ಮ ಜನರ ಸಮಸ್ಯೆಯೂ ಬಗೆಹರಿಯುವುದಿಲ್ಲ ಎನ್ನುವುದೂ ಕೂಡಾ ಅರಿವಿತ್ತು. ಇದಕ್ಕಾಗಿ ನಾನು ಮತ್ತು ಅನುದೀಪ್ ಹೆಗ್ಡೆ ಅವರು ಸೇತುವೆಯ ರೀತಿಯಲ್ಲಿ ದಾನಿಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ ಅಷ್ಟೇ, ಉಳಿದೆಲ್ಲವೂ ಕೂಡಾ ದೇವರು ದಾನಿಗಳ ಮೂಲಕ ಮಾಡಿಸಿದ್ದಾರೆ. ದೂರದ ಬೆಂಗಳೂರಿನಲ್ಲಿ ಕುಳಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು, ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಉಡುಪಿ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜುಲೈ 18ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸರಾಸರಿ 92.7ಮಿ.ಮೀ ಮಳೆಯಾಗಿದ್ದು, ಈ ಪೈಕಿ ಕುಂದಾಪುರ ತಾಲೂಕಿನಲ್ಲಿ 101.8ಮಿ.ಮೀ, ಬೈಂದೂರು ತಾಲೂಕಿನಲ್ಲಿ 98.5 ಮಿ.ಮೀ., ಬ್ರಹ್ಮಾವರ ತಾಲೂಕಿನಲ್ಲಿ 100.4ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 83.8 ಮಿ.ಮೀ. ಮಳೆಯಾಗಿದೆ. ಹವಾಮಾನ ಇಲಾಖೆ ವರದಿಯಂತೆ ಜುಲೈ 14ರ ತನಕ ಭಾರಿ ಮಳೆ, ಜುಲೈ 15 ಮತ್ತು 16ರಂದು ಅತ್ಯಂತ ಭಾರಿ ಮಳೆ, ಜುಲೈ 17 ಮತ್ತು 18ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಳೆದ 15 ದಿನಗಳಲ್ಲಿ ವರಣನ ಆರ್ಭಟಕ್ಕೆ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪ್ರವಾಹ, ಕಡಲಕೊರೆತ, ಸುಂಟರಗಾಳಿ ಮೊದಲಾದವುಗಳನ್ನು ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಕೃಷಿ, ತೋಟಗಾರಿಕಾ ಬೆಳೆ ಹಾನಿ, ವಿದ್ಯುತ್ ಕಂಬಗಳು, ಮನೆ, ಕೊಟ್ಟಿಗೆ ಹಾನಿ ಸೇರಿದಂತೆ ಜೀವಹಾನಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಡಾ. ಸೌಮ್ಯ ಮಣಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿ ನಡೆದ ಗಂಗೊಳ್ಳಿ ರೋಟರಿ ಕ್ಲಬ್ನ 2024-25ನೇ ಸಾಲಿನ ಪದ ಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದ ಪ್ರದಾನ ನೆರವೇರಿಸಿ ಅವರು ಮಾತನಾಡಿದರು. ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು. ಗಂಗೊಳ್ಳಿ ರೋಟರಿ ಕ್ಲಬ್ನ ನೂತನ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಟಾಚಾರದ ಜನಸ್ಪಂದನ ಜಿಲ್ಲೆಯಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿನ ಗೊಂದಲಗಳಿಗೆ ಅಧಿಕಾರಿಗಳ ಜನ ವಿರೋಧಿ ವರ್ತನೆಗಳೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವು ಉಡುಪಿ ಜಿಲ್ಲೆಯ ಹೆಚ್ಚಿನ ತಾಲ್ಲೂಕುಗಳಲ್ಲಿ ಗೊಂದಲಗಳು ಏರ್ಪಡಲು ಅಧಿಕಾರಿಗಳ ಜನವಿರೋಧಿ ವರ್ತನೆಗಳೇ ಕಾರಣ. ಜಿಲ್ಲೆಯಲ್ಲಿನ ಜನಸ್ಪಂದನ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕೆ ನಡೆಯುತ್ತಿದೆ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲಾ. ಇಲಾಖೆಯ ಮೆಟ್ಟಿಲುಗಳನ್ನು ವರ್ಷಗಳಿಂದ ಹತ್ತಿ ಇಳಿಯುವುದು ಬಿಟ್ಟರೆ ಜನರಿಗೆ ಸಮಸ್ಯೆಗಳ ಶಾಶ್ವತ ಪರಿಹಾರ ಮರೀಚಿಕೆಯಾಗಿದೆ. ಕುಂದಾಪುರ ತಾಲ್ಲೂಕಿನ ಜನಸ್ಪಂದನ ಕಾರ್ಯಕ್ರಮವಾಗಿ ತಿಂಗಳು ಕಳೆಯುತ್ತಾ ಬಂದರೂ ಸಮಸ್ಯೆಗಳ ಪರಿಹಾರ ಕೋರಿ ಅರ್ಜಿ ನೀಡಿದ ಹೆಚ್ಚಿನವರಿಗೆ ಸಂಬಂಧಿತ ಇಲಾಖೆಗಳಲ್ಲಿ ಅದೇ ಹಾರಿಕೆಯ ಉತ್ತರ ದೊರೆಯುತ್ತಿದೆ. ಮುಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಹಿಂದೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ಅರ್ಜಿ, ಅದರಲ್ಲಿ ವಿಲೇವಾರಿ ಆದ ಅರ್ಜಿ, ಬಾಕಿ ಇರುವ ಅರ್ಜಿ, ಅರ್ಜಿ ಬಾಕಿ ಇರಲು ಕಾರಣವೇನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಜೆಸಿಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆ ಅವರು ಅಗ್ನಿನಂದಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಫ್ಡಿ ಕಿರಣ್ ವಹಿಸಿದ್ದರು. ಕಾರ್ಯಕ್ರಮದ ವಿಶೇಷ ಆಹ್ವಾನಿತರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿಗಳಾಗಿರುವ ವಿ.ಸುಂದರ್ ಅವರು ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು. ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರಾಗಿರುವ ಜೆಎಫ್ಎಸ್ ರಾಜೇಶ್ ರಾಜನ್, ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್, ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಪದಗ್ರಹಣ ಸಮಾರಂಭವು ಅಕ್ಷತಾ ಹಾಲ್ ನಲ್ಲಿ ನಡೆಯಿತು. ವಲಯ ಒಂದರ ಸಹಾಯಕ ಗವರ್ನರ್ ಬಿ.ರಾಜೇಂದ್ರ ಶೆಟ್ಟಿ ಪದ ಪ್ರಧಾನ ನೆರವೇರಿಸಿ ರೋಟರಿಯ ಮೂಲಕ ಸಮಾಜ ಸೇವೆಗೆ ಉತ್ತಮ ಅವಕಾಶಗಳಿವೆ ಇದನ್ನು ಬಳಸಿಕೊಂಡು ಕೃತಾರ್ಥರಾಗೊಣ ಎಂದು ಕರೆ ನೀಡಿದರು. ಡಾ. ಸಂದೀಪ್ ಕುಮಾರ್ ಶೆಟ್ಟಿ, ಸದಾನಂದ ಉಡುಪ, ಗೌತಮ್ ಕಾಮತ್, ಸದಾನಂದ ಬಳ್ಕೂರು, ನರಸಿಂಹ ಹೊಳ್ಳ, ರಾಜು ಪೂಜಾರಿ, ರಾಮಕೃಷ್ಣ ಐತಾಳ್, ಭಾಸ್ಕರ್, ಮಂಜುನಾಥ ಕೆ.ಎಸ್,. ಕೌಶಿಕ್ ಯಡಿಯಾಳ, ಮಂಜುನಾಥ್ ಗಾಣಿಗ ಹಾಗೂ ನಟರಾಜ್ ಇವರುಗಳು ಅತಿಥಿಗಳನ್ನು ಪರಿಚಯಿಸಿದರು. ಕ್ಲಬ್ ಬುಲೆಟಿನ್ ರಿವರ್ ನ್ನು ವಲಯ ಸೇನಾನಿ ವೆಂಕಟೇಶ್ ನಾವುಂದ ಬಿಡುಗಡೆಗೊಳಿಸಿದರು. ಸ್ಥಳೀಯ ಚರ್ಚಿನ ಧರ್ಮಗುರುಗಳಾದ ಅತೀ ವಂದನೀಯ ಫಾ.ಪೌಲ್ ರೇಗೋ ಮುಖ್ಯ ಅತಿಥಿಗಳಾಗಿ ಆಗಮಿಸಿ ರೋಟರಿಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೂತನ ಅಧ್ಯಕ್ಷರಾದ ವಿಶ್ರಾಂತ್ ಎನ್. ಶೆಟ್ಟಿ ಇವರು ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಪ್ರತಿಭಾವಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು. ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು, ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಡಿದ್ದ ಮನವಿಗೆ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾಂತ್ರೀಕೃತ ಕೃಷಿಯೇ ಹೆಚ್ಚಾಗಿರುವುದರ ನಡುವೆಯೂ ಮಕ್ಕಳಿಗೆ ಸಾಂಪ್ರದಾಯಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ. ಭತ್ತದ ಕೃಷಿಯೊಂದಿಗೆ ಕೃಷಿ ಸಂಸ್ಕೃತಿಯನ್ನು ತಿಳಿಸಿಕೊಡುವ ಕಾರ್ಯ ಸ್ಕೌಟ್ -ಗೈಡ್ಸ್ ಹಾಗೂ ವಿವಿಧ ಸಂಘಟನೆಗಳಿಂದ ಆಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ಮಂಗಲಪಾಂಡೆ ರಸ್ತೆ ವಾರ್ಡ್ನ ಕೋಟ್ಯಾನ್ ಕುಟುಂಬಸ್ಥರ ಗದ್ದೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕುಂದಾಪುರ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ ‘ಕೃಷಿಯ ಕಡೆ ನಮ್ಮ ನಡೆʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಹಾಗೂ ಗೈಡ್ಸ್ ಕುಂದಾಪುರದ ಅಧ್ಯಕ್ಷೆ ಗುಣರತ್ನ ಅವರು, ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಕಳೆದ 10 ವರ್ಷಗಳಿಂದ ಕೃಷಿಯ ಕಡೆ ನಮ್ಮ ನಡೆ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಮಕ್ಕಳಿಗೆ ಕೃಷಿಯ ಪ್ರಾಯೋಗಿಕ…
