Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು.6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಉಡುಪಿ (ಅನುಷ್ಠಾನ-ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ) ಹಾಗೂ ಕೃತಕ ಅಂಗಾಂಗ ತಯಾರಿಕ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಇವರ ಸಹಯೋಗದೊಂದಿಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ. ಡಿ. ಐ. ಪಿ ಮತ್ತು ಆರ್. ವಿ. ವೈ ಯೋಜನೆಯಡಿಯಲ್ಲಿ ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ತಪಾಸಣಾ ಶಿಬಿರ ಜರುಗಲಿದೆ. ತಪಾಸಣಾ ಶಿಬಿರವು ಜುಲೈ 10 ರಂದು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜು.11 ರಂದು ಬೈಂದೂರಿನ ಅಂಬೇಡ್ಕರ್ ಭವನ, ಜು. 12 ರಂದು ಕಾಪುವಿನ ಜೆ.ಸಿ ಭವನ, ಜು. 14 ರಂದು ಬ್ರಹ್ಮಾವರ ಪೊಲೀಸ್ ಠಾಣೆ ಬಳಿಯ ಸರ್ಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಪ್ರತೀ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನವಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದ್ದು, ಅಂದು ಉಡುಪಿ ತಾಲೂಕಿನ ಕೊಡಂಕೂರು ವಾರ್ಡಿನ ಪ್ರಮೋದ್ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಡೆಂಗ್ಯೂ ಜಾಗೃತಿ ಕರಪತ್ರ ವಿತರಿಸುವ ಹಾಗೂ ಸಾರ್ವಜನಿಕರನ್ನು ಸಂದರ್ಶಿಸುವ ಮೂಲಕ ಡೆಂಗ್ಯೂ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯ ಜನರು ಡೆಂಗ್ಯೂ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇದರ ನಿಯಂತ್ರಣದ ಬಗ್ಗೆ ತಿಳುವಳಿಕೆ ಹೊಂದುವುದರೊಂದಿಗೆ ಹೆಚ್ಚು ಪರಿಣಾಮಕಾರಿಯಾಗಿ ಡೆಂಗ್ಯೂ ಅನ್ನು ನಿಯಂತ್ರಿಸಿ, ನಿರ್ಮೂಲನೆ ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 10ರ ಸಂಜೆ 5 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಲಹೆಗಾರರಾದ ಮಂಜುಳಾ ಶೆಟ್ಟಿ ಮಾತನಾಡಿ ಮಾದಕ ವಸ್ತುಗಳ ಮತ್ತು ತಂಬಾಕಿನ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ. ಗೊಂಡ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡೋ. ಸರೋಜ ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.5: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಮೊದಲು ಕುಂದಾಪುರ ಎಸಿ ಅವರು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಿದ್ದರು. ಅಧಿಕ ಮಳೆಯಾಗುತ್ತಿರುವುದರಿಂದ ಅಂತಿಮವಾಗಿ ಜಿಲ್ಲೆಯ ಪಿಯು ತನಕದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್‌ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್‌, ಜೆಇಇ, ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೀಟ್‌, ಜೆಇಇ, ಸಿಇಟಿ ಕೋರ್ಸ್‍ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಅವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಈ ಒಂದು ಸುಂದರ ಕಾರ್ಯಕ್ರಮದಲ್ಲಿ ಅವರೊಂದಿಗೆ ಎಂ. ಎಂ. ಹೆಗ್ಡೆ ಎಜುಕೇಶನಲ್‌ & ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್‌ ಹೆಗ್ಡೆ ಮಾತನಾಡಿ ಡಿಪಿಪಿ ತರಗತಿಯ ಮೌಲ್ಯಗಳನ್ನು ಅರಿತು ಅದನ್ನು ಹೇಗೆ ಸದುಪಯೋಗಪಡಿಸಿಕೋಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಿಕೊಟ್ಟರು. ಈ ಕುರಿತು ಮಾತನಾಡಿದ ಮಿ. ಬಾಲಾಜಿ ಗುಪ್ತ ಅವರು ವಿದ್ಯಾರ್ಥಿಗಳ ಭವಿಷ್ಯತ್ತಿನ ಬೆಳಕಿಗೆ ಡಿಪಿಪಿ ತರಗತಿಯ ಅಗತ್ಯತೆಯನ್ನು ಹಾಗೂ ನೀಟ್‌, ಜೆಇಇ, ಸಿಇಟಿ ಪರೀಕ್ಷೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು.05: ಚಾಲಕನ ನಿಯಂತ್ರಣ ತಪ್ಪಿ ಮಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿಕೆ ಅವರು ವಹಿಸಿದ್ದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಿಂದಿನ ವಿದ್ಯಾರ್ಥಿ ಸಿ.ಎ ಸುದೀಪ್ ಶೆಟ್ಟಿ ಅವರು ಕೊಡಮಾಡಿದ ಬೆಳ್ಳಿಯ ಕ್ವಾಯಿನನ್ನು ಉಡುಗೊರೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ, ಮೂಕಾಂಬಿಕ ಪದವಿ ಪೂರ್ವ ಕಾಲೇಜು ಈ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು ಎಂದು ಹೇಳಲು ನಾನು ಅತ್ಯಂತ ಹೆಮ್ಮೆ ಪಡುತ್ತೇನೆ. ಈ ಕಾಲೇಜಿನಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.05: ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿ ಸಂಪರ್ಕಿಸುವ ಕಿರು ಸೇತುವೆ ನೀರಿನ ರಭಸಕ್ಕೆ ಕುಸಿಯುವ ಭೀತಿ ಉಂಟಾಗಿದೆ. ಬೆಳ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಾಕಿಕೊಂಡಿರುವ ಈ ಕಿರುಸೇತುವೆಯ ಅಡಿಪಾಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿದೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಅಪಾಯದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಈ ಹೊಳೆಗೆ ಹೊಂದಿಕೊಂಡಿರುವ ಶಾಲೆಗೂ ಕೂಡ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಸುತ್ತ-ಮುತ್ತಲಿನ ಪ್ರದೇಶಗಳಿಂದ ಬೆಳ್ಕಲ್ ಶಾಲೆ, ಅಂಗನವಾಡಿಗೆ ಹೋಗುವ ಮಕ್ಕಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗಾಗಿ ತಿರುಗಾಡುವ ಸ್ಥಳೀಯರಿಗೆ ಇದೇ ಪ್ರಮುಖ ಸಂಪರ್ಕ ಸೇತುವೆಯಾಗಿದ್ದು, ಸೇತುವೆ ಮಳೆಯ ರಭಸಕ್ಕೆ ಕುಸಿದುಬಿದ್ದಲ್ಲಿ ಈ ಭಾಗದ ಜನಸಂಪರ್ಕಕ್ಕೆ ತೊಡಕಾಗುವ ಸಾಧ್ಯತೆಗಳಿದೆ. ಜಡ್ಕಲ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸತೀಶ್ ತೋಳಾರ್, ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್‌ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು…

Read More