ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬದುಕು ನಿಂತ ನೀರಾಗಿರದೇ ಸಾಧಿಸುವ ಛಲವಿರಬೇಕು ಜೊತೆಗೆ ಪ್ರಯತ್ನದಿಂದ ಸಾಧನೆಯ ಮೆಟ್ಟಿಲುಗಳು ಹತ್ತಲು ಸುಲಭವಾಗುತ್ತದೆ. ಯುವಕರು ಸಮಾಜಕ್ಕೆ ಸಹಾಯವಾಗುವಂತಹ ಕಾರ್ಯ ಚಟುವಟಿಕೆಗಳಿಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗಬೇಕು ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಉಡುಪಿ ಡಾ. ಶಿವರಾಮ ಕಾರಂತ ಟ್ರಸ್ಟ್ ರಿ., ಕೋಟತಟ್ಟು ಗ್ರಾಮ ಪಂಚಾಯತ್ ಕೊಡ ಮಾಡುವ ಚಿತ್ರನಟ ಡಾ. ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರವನ್ನು ಪ್ರಥ್ವೀಶ್ ಭಟ್ ಹಾಗೂ ರವೀಂದ್ರ ಶೆಟ್ಟಿ ತಂತ್ರಾಡಿ ಅವರಿಗೆ ಪ್ರದಾನ ಮಾಡಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ್ ಬೇಳೂರು, ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬ್ರಹ್ಮ ನಾರಾಯಣಗುರು ಸೇವಾ ಸಂಘ ರಿ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ಲಯನ್ಸ್ ಕ್ಲಬ್ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಗಾಯತ್ರಿ ಸಭಾಭವನ ಕುಂಭಾಶಿಯಲ್ಲಿ ಜರುಗಿತು. ಪ್ರತಿಜ್ಞಾವಿಧಿ ಬೋಧಿಸಿ ಪದಪ್ರಧಾನ ನಡೆಸಿಕೊಟ್ಟ ಮಾಜಿ ಜಿಲ್ಲಾ ಗವರ್ನರ್ ನೀಲಕಂಠ ಎಮ್. ಹೆಗ್ಡೆ ಮಾತನಾಡಿ, ತೆಕ್ಕಟ್ಟೆ ಲಯನ್ಸ್ ಕ್ಲಬ್ ದಶಮಾನೋತ್ಸವವನ್ನು ಪೂರೈಸಿಕೊಂಡು ಲಯನ್ಸ್ ತತ್ವ ಆದರ್ಶಗಳ ಪ್ರಕಾರ ಸಮಾಜಕ್ಕೆ ಬಡವರಿಗೆ ಸೇವೆ ಸಹಾಯ ನೀಡುತ್ತಾ ಬಂದು ಉತ್ತಮ ಕ್ಲಬ್ ಆಗಿ ನಡೆದು ಬಂದುದನ್ನು ಪ್ರಶಂಸಿದರು. ಕ್ಲಬ್ನ ನೂತನ ಅಧ್ಯಕ್ಷ ಹರ್ಷವರ್ಧನ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ, ಖಜಾಂಚಿ ರಮೇಶ್ ಕೆ. ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ 2023-24ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಧನಸಹಾಯ ಮಾಡಲಾಯಿತು. ತೆಕ್ಕಟ್ಟೆ ಲಯನ್ಸ್ ಕ್ಲಬ್ 2022-23ರಲ್ಲಿ ದತ್ತು ಪಡೆದ 4 ವಿಧ್ಯಾರ್ಥಿಗಳಿಗೆ ಧನಸಹಾಯ ನೀಡಲಾಯಿತು. ಕೃಷಿಯಲ್ಲಿ ಸಾಧನೆ ಮಾಡಿ ಕೇಂದ್ರ ಸರ್ಕಾರದ ಬಿಲೇನಿಯರ್ ಫಾರ್ಮರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯ ಲೋಕಸಭಾ ಸಚೇತಕರಾಗಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕಗೊಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮಿಳುನಾಡಿನ ಸ್ಟಾರ್ ಇಂಟರ್ನ್ಯಾಷನಲ್ ಫೌಂಡೇಶನ್ ಫಾರ್ ರಿಸರ್ಚ್ ಆಂಡ್ ಎಜುಕೇಶನ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಸೇವೆಗಾಗಿ ಕೊಡಮಾಡುವ ಎಸ್.ಐ.ಎಫ್.ಆರ್.ಐ ಇಂಟರ್ನ್ಯಾಷನಲ್ ಬೆಸ್ಟ್ ಟೀಚರ್ ಅವಾರ್ಡ್- 2024ಕ್ಕೆ ಕೃಷ್ಣಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜ ಶಾಸ್ತ್ರ ಉಪನ್ಯಾಸಕ ರವಿಚಂದ್ರ ಅವರು ಭಾಜನರಾಗಿದ್ದಾರೆ. ಜುಲೈ 28 ರಂದು ಈರೋಡ್ ಕೊಹಿನೂರ್ ಹೊಟೇಲ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರವಿಚಂದ್ರ ಅವರು ರೋವರ್ಸ್ ಘಟಕ ಹಾಗೂ ರೆಡ್ ಕ್ರಾಸ್ ಘಟಕದ ನೋಡೆಲ್ ಅಧಿಕಾರಿಯಾಗಿದ್ದು, ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಗೆ ಸಂಬಂಧಿಸಿದಂತೆ ಅತ್ಯುತ್ತಮ ಹಂತವಾದ ಹಿಮಾಲಯನ್ ವುಡ್ ಬ್ಯಾಡ್ಜ್ ಪದವಿ ಹೊಂದಿದವರು. ಕೋಟೇಶ್ವರ ಸಮೀಪದ ಮೂಡುಗೋಪಾಡಿಯವರಾದ ರವಿಚಂದ್ರ ಅವರು ಬಾಬು ಭಂಡಾರಿ ಮತ್ತು ಶಾರದಾ ಭಂಡಾರಿ ಅವರ ಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಪಂಜಿನ ಮೆರವಣಿಗೆ ಹಾಗೂ ವೀರ ಯೋಧ ನಮನ ಕಾರ್ಯಕ್ರಮ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ದೇಶದ ಪ್ರತಿ ಪ್ರಜೆಯು ದೇಶಾಭಿಮಾನ ಬೆಳೆಸಿಕೊಳ್ಳಬೇಕು ಅದರಲ್ಲೂ ಯುವಕರು ದೇಶಕ್ಕೆ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು.ಇಂದಿನ ಯುವಕರು ದೇಶಕ್ಕೆ ಸಲ್ಲಿಸುವ ಸೇವೆ ಅಮೂಲ್ಯವಾಗಿರುತ್ತದೆ ಎಂದರು. ವಾಗ್ಮಿ ಆದರ್ಶ್ ಗೋಖಲೆ ಅವರು ದಿಕ್ಸೂಚಿಭಾಷಣ ಮಾಡಿ, ಕಾರ್ಗಿಲ್ ಸಮಯದಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಲು ಶ್ರಮಿಸಿದ ನಮ್ಮ ಯೋಧರ ಪರಾಕ್ರಮ ಮೆಚ್ಚುವಂತಹದ್ದು ಜೊತೆಗೆ ಆ ಸಮಯದಲ್ಲಿ ಮರಣವನ್ನಪ್ಪಿದ ವೀರ ಯೋಧರಿಗೆ ನಮನ ಸಲ್ಲಿಸುವುದು ನಮ್ಮೆಲ್ಲ ಆದ್ಯ ಕರ್ತವ್ಯ. ಜೊತೆಗೆ ಈ ಬಾರಿಯ ದೀಪಾವಳಿಯನ್ನು ಯೋಧರ ನೆನಪಿನಲ್ಲಿ ಆಚರಿಸೋಣ ಎಂದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪ್ರಸ್ತಾವಿಕ ಮಾತುಗಳಾಡಿದರು, ಕುಂದಾಪುರ ಮಂಡಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಬ್ಯಾಂಕಿಂಗ್, ಅಗ್ನಿವೀರ್, ಬಾಲ ನ್ಯಾಯ ಕಾಯ್ದೆಗಳು ಹಾಗೂ ನಾಟಾ ವಿಷಯದ ಕುರಿತಾಗಿ ಮಾಹಿತಿ ಕಾರ್ಯಾಗಾರ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ಶಿರೂರಿನ ವ್ಯವಸ್ಥಾಪಕರಾದ ರಾಧೇಶ್ ಕಾಮತ್ ಅವರು ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಮಾಹಿತಿ ಕಾರ್ಯಾಗಾರಗಳು ಉಪಯುಕ್ತವಾಗಿವೆ, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಹೆಜ್ಜೆ ಹಾಕಿ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ಪದವಿಪೂರ್ವ ಶಿಕ್ಷಣ ಪರಿಪೂರ್ಣವಾಗಬೇಕಾದರೆ ಜ್ಞಾನಾತ್ಮಕವಾದ ಎಲ್ಲಾ ವಿಚಾರಗಳನ್ನು ಸ್ವೀಕರಿಸಿ ಅದರಂತೆ ಕಾಲೇಜಿನಲ್ಲಿ ವಿನೂತನ ಯೋಜನೆಗಳನ್ನು ಆಯೋಜಿಸಿದ್ದೇವೆ ಅವುಗಳ ಬಳಕೆ ನಿಮ್ಮದಾಗಲಿ ಎಂದರು. ಬ್ಯಾಂಕಿಂಗ್ ಕುರಿತು ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ಅಧಿಕಾರಿ ಉದಯ ಹೆಗ್ಡೆ ಅವರು ಮಾಹಿತಿಯ ನೀಡಿ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಬ್ಯಾಂಕಿಂಗ್ ಉದ್ಯೋಗಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನುನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೃತ್ತಿ, ಮನೆ, ಮನಸ್ಸು ಹಲವು ವ್ಯತ್ಯಾಸಗಳ ಕಾರಣಗಳಿಂದ ಸಮಾಜದಲ್ಲಿ ನಮ್ಮೊಳಗೆ ಪರಸ್ಪರ ಯುದ್ಧಗಳು ನಡೆಯುತ್ತಿರುತ್ತವೆ. ಆದರೆ ದೇಶ ಕಾಯುವ ಸೈನಿಕರದ್ದು ಮಾತ್ರ ನೈಜವಾದ ಯುದ್ಧವಾಗಿದ್ದು, ಅವರು ತಮ್ಮ ಕುಟುಂಬವನ್ನು ತೊರೆದು ದೇಶ ರಕ್ಷಣೆಗೆ ಸಾಹಸ ಹಾಗೂ ಧೈರ್ಯದಿಂದ ಮಾಡಿದ ಹೋರಾಟದ ಫಲದಿಂದ ನಾವುಗಳು ನೆಮ್ಮದಿಯಿಂದ ಬದುಕಲು ಸಹಕಾರಿಯಾಗಿದೆ. ಸೈನಿಕರ ರಕ್ತಕ್ಕೆ ಬೆಲೆ ಕಟ್ಟಲಾಗದು ಎನ್ನುವುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ. ನಾಯ್ಕ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಾಗೂ ಬೈಂದೂರು ತಾಲೂಕು ಘಟಕದ ವತಿಯಿಂದ ನಡೆದ ಕಾರ್ಗಿಲ್ ಯುದ್ಧ ವಿಜಯೋತ್ಸವದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾರತವು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿದ ದೇಶವಾಗಿದ್ದು, ಇತರೇ ಯಾವ ದೇಶಗಳಿಗೂ ಹೆದರುವ ಅವಶ್ಯಕತೆಯಿಲ್ಲ. ಇದಕ್ಕೆ ಪೂರಕ ಎಂಬಂತೆ ಪ್ರಸ್ತುತ ಸನ್ನಿವೇಶದಲ್ಲಿ ವಿರೋಧಿ ಶತ್ರುಗಳನ್ನು ಸದೆಬಡಿದು, ಭಾರತಾಂಬೆಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸುವ ನಮ್ಮ ಸೈನಿಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೈಂದೂರು ತಾಲೂಕು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ತಾಲೂಕಿನ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಮತ್ತು ಗೋಳಿಹೊಳೆ ವಲಯದ ಭಜನೋತ್ಸವ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮೈಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ ಅವರು ನೆರವೇರಿಸಿ, ಪ್ರತಿಫಲ ಅಪೇಕ್ಷೆ ಇಲ್ಲದೆ ನಡೆಸುವ ಎಲ್ಲಾ ಸೇವೆಯಿಂದ ಭಗವಂತನ ಅನುಗ್ರಹಕ್ಕೆ ಪ್ರಾಪ್ತರಾಗುತ್ತೇವೆ. ಕಲಿಯುಗದಲ್ಲಿ ಭಜನೆಯಿಂದ ಮಾತ್ರ ದೇವರ ಒಲಿಸಿಕೊಳ್ಳಬಹುದು ಮತ್ತು ಹಿರಿಯ ಭಜನ ಕಲಾವಿದರು ಭಜನೆಯನ್ನು ಶ್ರೇಷ್ಠತೆಯ ಕಡೆಗೆಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇನ್ನು ಮುಂದಕ್ಕೆ ಇಂದಿನ ಯುವ ಪೀಳಿಗೆ ಭಜನೆಯನ್ನು ಉಳಿಸಿ ಬೆಳೆಸಿ ಕೊಂಡು ಹೋಗುವ ಕಡೆಗೆ ಹಿರಿಯ ಭಜನಾ ಕಲಾವಿದರು ತಮ್ಮ ಸೇವೆಯನ್ನು ಮಡಿಪಾಗಿಡಬೇಕು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಿರಿಯರ ಜನಜಾಗೃತಿ ವೇದಿಕೆ ಇದರ ಸ್ಥಾಪಕಾಧ್ಯಕ್ಷರು ಬಿ. ಅಪ್ಪಣ್ಣ ಹೆಗ್ಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಹವ್ಯಾಸಿ ಚಿತ್ರ ಕಲಾವಿದೆ ಸುಪ್ರಸನ್ನ ನಕ್ಕತ್ತಾಯರವರ ಸಂಚಯ – ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಇತ್ತೀಚಿಗೆ ಉದ್ಘಾಟನೆಗೊಂಡಿತ್ತು. ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಜರುಗಿದ ಚಿತ್ರಕಲಾ ಪ್ರದರ್ಶನವನ್ನು ಮಂಗಳೂರಿನ ಚಿತ್ರ ಕಲಾವಿದ ಮತ್ತು ಪರಿಸರ ತಜ್ಞ ದಿನೇಶ್ ಹೊಳ್ಳ ಉದ್ಘಾಟಿಸಿದ್ದರು. ಈ ವೇಳೆ ಅತಿಥಿಗಳಾಗಿ ಕುಂದಪ್ರಭ ಪತ್ರಿಕೆಯ ಸಂಪಾದಕ ಯು. ಎಸ್. ಶೆಣೈ , ಕುಂದಾಪುರದ ಶಿಕ್ಷಣ ತಜ್ಞೆ ಚಿತ್ರಾ ಕಾರಂತ್, ಕಲಾವಿದ ಮತ್ತು ತ್ರಿವರ್ಣ ಕಲಾ ಕ್ಲಾಸಸ್ನ ಮಾರ್ಗದರ್ಶಕ ಹರೀಶ್ ಸಾಗಾ ಉಪಸ್ಥಿತರಿದ್ದರು. ಅಕ್ರಾಲಿಕ್ ವರ್ಣದಲ್ಲಿ ಕ್ಯಾನ್ವಾಸ್ ಮೇಲೆ ಪರಿಸರದ ಪ್ರಾಣಿ ಪಕ್ಷಿಗಳ ಬೆಸುಗೆಯ ರೇಖೆ, ನೈಜ್ಯ ಚಿತ್ರಣ, ಮಧುಬನಿ ಮತ್ತು ಗೋಂಡ್ ಶೈಲಿಯಲ್ಲಿ ರೂಪುಗೊಂಡ 100ಕ್ಕೂ ಅಧಿಕ ಕಲಾಕೃತಿಗಳಲ್ಲಿ ಮೂಡಿ ಬಂದಿದೆ. ಎರಡು ದಿನಗಳ ಕಾಲ ನಡೆದ ಚಿತ್ರ ಕಲಾ ಪ್ರದರ್ಶನದಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, 25 ಕಲಾಕೃತಿಗಳು ಮಾರಾಟಗೊಂಡವು.
