Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕಿನಾದ್ಯಂತ ವಿವಿಧ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗೆ ಸೂಕ್ತ ಪರಿಹಾಕರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಾರದ ಗುರುರಾಜ್ ಗಂಟಿಹೊಳೆ ಅವರು ಶುಕ್ರವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಖಾಸಗಿ ಬಸ್ ಮಾಲೀಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಆರ್‌ಟಿಓ ಅಧಿಕಾರಿಗಳ ಸಭೆ ನಡೆಸಿದರು. ಖಾಸಗಿ ಬಸ್ ಇಲ್ಲದ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಕ್ಷಣದಿಂದಲೇ ಓಡಿಬೇಕು. ಹಾಗೆಯೇ ಖಾಸಗಿ ಬಸ್ ಮಾಲೀಕರು ಯಾವ ರೂಟ್‌ಗೆ ಪರ್ಮಿಟ್ ಪಡೆದಿದ್ದಾರೋ ಅದೇ ರೂಟ್‌ನಲ್ಲಿ ಬಸ್ ಓಡಿಸಬೇಕು. ಒಂದೊಮ್ಮೆ ಆ ರೂಟ್‌ನಲ್ಲಿ ಬಸ್ ಓಡಿಸದೇ ಇದ್ದರೆ ಅಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್ ಓಡಿಸಲಾಗುವುದು ಎಂದು ಶಾಸಕರು ತಿಳಿಸಿದರು. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಓಡಾಟದ ಸಮಯವು ಒಂದೇ ಆದಲ್ಲಿ ಘರ್ಷಣೆಯ ಜತೆಗೆ ಪ್ರಯಾಣಿಕರಿಗೂ ಅನಾನುಕೂಲವಾಗುತ್ತದೆ. ಹೀಗಾಗಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಇಬ್ಬರಿಗೂ ಸಮಸ್ಯೆ ಆಗದ ರೀತಿಯಲ್ಲಿ ಪ್ರತಿ ನಿಲ್ದಾಣವಾರು ಸಮಯ ನಿಗದಿ ಮಾಡಲು ಆರ್‌ಟಿಓ ಹಾಗೂ ಕೆಎಸ್‌ಆರ್‌ಟಿಸಿಯವರಿಗೆ ನಿರ್ದೇಶನ ನೀಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಮಕ್ಕಳು ಮೊಬೈಲ್ ಬಳಕೆ ಮತ್ತು ಟಿವಿಯಿಂದ ದೂರವಿರಬೇಕು. ಶಾಲೆ ಹಾಗೂ ಇನ್ನಿತರ ಸ್ಥಳಗಳಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವುದು ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಂತೆ ಕ್ರಮ ಜರುಗಿಸಲಾಗುವುದು ಎಂದು ಬೈಂದೂರು ಪಿಎಸ್‌ಐ (ಸಹಾಯಕ ತನಿಖೆ) ಮಹೇಶ ಕಂಬಿ ಹೇಳಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಗುರುವಾರ ನಡೆದ ತೆರೆದಮನೆ ಕಾರ್ಯಕ್ರಮದಲ್ಲಿ ಅಲ್ಲಿನ ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ತಮ್ಮ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಜಾಗೃತರಾದರೆ ಶಾಂತಿ ಸುವ್ಯವಸ್ಥೆ ನೆಲೆಸಲು ಸಾಧ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಗೂ ಸುತ್ತಮುತ್ತಲಿನ ಪ್ರದೇಶದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಜಿಲ್ಲೆ 317ಸಿ, ಪ್ರಾಂತ್ಯ V ರ ಪ್ರಾಂತೀಯ ಅಧ್ಯಕ್ಷರಾಗಿ, ಕುಂದಾಪುರ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್ ನಿಯುಕ್ತಿಗೊಳಿಸಿದ್ದಾರೆ. ಪ್ರಾಂತೀಯ ಕಾರ್ಯದರ್ಶಿಯಾಗಿ ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿಯ ನಿವೃತ್ತ ಮ್ಯಾನೇಜರ್ ಹಾಗೂ ಬ್ರಹ್ಮಾವರ ಲಯನ್ಸ್ ಕ್ಲಬ್‍ನ ಆನಂದ ಶೆಟ್ಟಿ ಕಬ್ಬೈಲ್ ಇವರನ್ನು ನೇಮಿಸಲಾಗಿದೆ.ಪ್ರಾಂತ್ಯ V, ವಲಯ I ರ ವಲಯಾಧ್ಯಕ್ಷರನ್ನಾಗಿ ತೆಕ್ಕಟ್ಟೆ ಲಯನ್ಸ್ ಕ್ಲಬ್‍ನ ಧರ್ಮರಾಜ್ ಮುದಲಿಯಾರ್ ಮತ್ತು ವಲಯ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಶೆಟ್ಟಿ, ವಲಯ II ರ ವಲಯಾಧ್ಯಕ್ಷರನ್ನಾಗಿ ಹಂಗಳೂರು ಲಯನ್ಸ್ ಕ್ಲಬ್‍ನ ಬಾಲಕೃಷ್ಣ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ವಿಲ್‍ಫ್ರೆಡ್ ಮೆನೆಜಸ್ ಹಾಗೂ ವಲಯ III ರ ವಲಯಾಧ್ಯಕ್ಷರನ್ನಾಗಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್‍ನ ಬೆಳ್ವೆ ವಂಸತ್ ಶೆಟ್ಟಿ ಮತ್ತು ವಲಯ ಕಾರ್ಯದರ್ಶಿಯಾಗಿ ಪಟ್ಟಾಭಿರಾಮ್ ಭಟ್ ಇವರನ್ನು ನೇಮಿಸಲಾಗಿದೆ.ಲಯನ್ಸ್ ಕ್ಲಬ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಬನ್ನಾಡಿ- ವಡ್ಡರ್ಸೆ, ಲಯನ್ಸ್ ಕ್ಲಬ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಹೊಸೂರಿನ ನಿವಾಸಿಯಾಗಿದ್ದು, ಜಯರಾಮ ಶೆಟ್ಟಿ ಮತ್ತು ಕಸ್ತೂರಿ ದಂಪತಿಗಳ ಪುತ್ರ ̤ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ತೇರ್ಗಡೆ ಹೊಂದಿದ ರಕ್ಷಿತ್ ಕುಮಾರ್‌ಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆ ಕೋರಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಸಹೋದರಿ ನಿವೇದಿತಾ ಪ್ರತಿಷ್ಠಾನ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟು ‘ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ, ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕೆಂಬ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು. ಕಾರ್ಯಕ್ರಮದಲ್ಲಿ ರೋಟರಿ ರಿವರ್ ಸೈಡ್ ಕುಂದಾಪುರದ ಅಧ್ಯಕ್ಷರಾದ ಡಾ| ವಿಶ್ರಾಂತ್ ಎನ್. ಶೆಟ್ಟಿ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿ ಮೆಲ್ಲೊ, ನಿಕಟಪೂರ್ವ ಅಧ್ಯಕ್ಷರಾದ ಕೌಶಿಕ್ ಯಡಿಯಾಳ, ಸಹೋದರಿ ನಿವೇದಿತಾ ಪ್ರತಿಷ್ಠಾನದ ಬಳಗದವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚೈತ್ರಾ ಪ್ರಭು ತೇರ್ಗಡೆ ಹೊಂದಿದ್ದಾರೆ. ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್‌ಶಿಫ್‌ ಪೂರೈಸಿದ್ದರು. ಅವರು ಭಟ್ಕಳ ಬೆಂಗ್ರೆಯ ಶಿರಾಲಿ ಮಾವಿನಕಟ್ಟೆ ನಿವಾಸಿಯಾಗಿದ್ದು, ದಿನಕರ ಪ್ರಭು ಮತ್ತು ದೀಪಾ ಡಿ. ಪ್ರಭು ಅವರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು, ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆ, ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ಗಣಿತಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು “ವಿದ್ಯಾ ದಾನವೆಂಬುದು ಶ್ರೇಷ್ಠದಾನ. ಪ್ರತಿ ಮಗುವಿನಲ್ಲಿ ಬೌದ್ಧಿಕ ಹಸಿವನ್ನು ಗುರುತಿಸಿ ಸಮರ್ಥ ಪರಿಹಾರ ಒದಗಿಸಿಕೊಡುವುದು ವೃತ್ತಿ ಧರ್ಮವಾಗಬೇಕು” ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ಥಾಪಕರಲ್ಲಿ ಒಬ್ಬರಾದ ಗಣಪತಿ ಭಟ್ ಕೆ. ಎಸ್., ಉಡುಪಿಯ ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ್, ಉಡುಪಿ ಜಿಲ್ಲಾ ಗಣಿತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿಗಳಾದ ಸುಧೀರ್ ಪ್ರಭು, ಪೆರ್ಡೂರು ಸರಕಾರಿ ಪದವಿ ಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮರವಂತೆಯ ಪ್ರದೀಪ್ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್‌, ಬೆಂಗಳೂರಿನ ಎಮ್‌ಎಸ್‌ ಶ್ರೀನಾಥ್‌ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಸಿಎ ಆರ್ಟಿಕಲ್‌ಶಿಫ್‌ ಪೂರೈಸಿದ್ದರು. ಅವರು ಮರವಂತೆಯ ಕೃಷ್ಣ ಪೂಜಾರಿ ಹಾಗೂ ಗಿರಿಜಾ ದಂಪತಿಯ ಅವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ 2024-25ನೇಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು. ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು. ನೂತನ ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-1ರ ಸಹಾಯಕ ಗವರ್ನರ್ ಡಾ. ರಾಜೇಂದ್ರ ಶೆಟ್ಟಿ, ಕ್ಲಬ್‌ನ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯಿತಿಗೆ ಉಡುಪಿ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬುಧವಾರ ಭೇಟಿ ನೀಡಿದರು. ಕುಡಿಯುವ ನೀರಿನ ತಪಾಸಣೆ ಮಾಡಿದ ಅವರು ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿಯ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನಚಂದ್ರ ಮತ್ತು ಸದಸ್ಯರಲ್ಲಿ ಚರ್ಚಿಸಿದರು ಹಾಗೂ ಗ್ರಾಮ ಪಂಚಾಯತ್ ಬಳಿ ಇರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕುಡಿಯುವ ನೀರು ಮತ್ತು ಪೌಷ್ಟಿಕ ಆಹಾರದ ಬಗ್ಗೆ ವಿಚಾರಿಸಿದರು. ವಿಶೇಷವಾಗಿ ಪರಿಶಿಷ್ಟ ಪಂಗಡದ ಮಂಜಮ್ಮ ಅವರ ಮನೆಗೆ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ಶಿಕ್ಷಣ ಇಲಾಖೆ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಎಲ್ಲರನ್ನು ಒಳಗೊಂಡ ಸಮಿತಿ ರಚನೆ ಮಾಡಿ ರಸ್ತೆ ನಿರ್ಮಾಣ ಮಾಡುವುದರ ಬಗ್ಗೆ ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳ ವೀಕ್ಷಣೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಎನ್.…

Read More