ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವವನ್ನು ಈ ಭಾರಿಯೂ ಅದ್ದೂರಿಯಾಗಿ ನಡೆಸಲಾಗುತ್ತಿದ್ದು, ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದೆ ಎಂದು ಕುಂದಾಪ್ರ ಕನ್ನಡ ಬಳಗದ ಮುಂದಾಳು ಎನ್.ರಘುರಾಮ ದೇವಾಡಿಗ ರಘುರಾಮ ದೇವಾಡಿಗ ಹೇಳಿದರು. ಅಕ್ಟೋಬರ್ 29ರಂದು ಯುಎಇ ಅಜ್ಮನ್ ನಗರದಲ್ಲಿ ಬೆಳಿಗ್ಗೆ 11ರಿಂದ ಸಂಜೆ 6 ಗಂಟೆಯ ತನಕ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಗಲ್ಫ್ ದೇಶದಲ್ಲಿ ಮಂದರ್ತಿ ಮೇಳದಿಂದ ಮೊದಲ ಭಾರಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಮೇಳದ ಕಲಾವಿದರು ಹಾಗೂ ಅನಿವಾಸಿ ಭಾರತೀಯ ಕಲಾವಿದರಿಂದ ‘ಪಾಪಣ್ಣ ವಿಜಯ – ಗುಣಸುಂದರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಂದು ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ಕುಂದಗನ್ನಡ ಉತ್ಸವದಲ್ಲಿ ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪಡುಕೋಣೆಯ ಖ್ಯಾತ ನಾಟಿ ವೈದ್ಯ ಮ್ಯಾಕ್ಸಿಮ್ ಒಲಿವೆರಾ, ಗೋಪ್ರೇಮಿ ಸಮಾಜ ಸೇವಕ ಸಂಜೀವ ದೇವಾಡಿಗ ಹಾಗೂ ಜೀವರಕ್ಷಕ ಮುಳುಗುತಜ್ಞ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಜೆ ಸಿ ಐ ಉಪ್ಪುಂದ, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಜೇಸಿಐ ಬೈಂದೂರು ಸಿಟಿ, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ ಸಂಘ (ರಿ), ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ , ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ಟ್ರಸ್ಟ್ ರಿ ಉಪ್ಪುಂದ, ಆನೆ ಗಣಪತಿ ಆಟೋ ರಿಕ್ಷಾ ಮಾಲಕ ಚಾಲಕರ ಸಂಘ ಅಂಬಾಗಿಲು , ಆಸರೆ ಬಳಗ ಫಿಶರೀಸ್ ಕಾಲೋನಿ ಉಪ್ಪುಂದ, ಲಯನ್ಸ್ ಕ್ಲಬ್ ಉಪ್ಪುಂದ- ಬೈಂದೂರು, ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರುಗಳ ಸಹಯೋಗದಲ್ಲಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇವರ ಸಹಕಾರದೊಂದಿಗೆ ಕೆಎಂಸಿ ಮಣಿಪಾಲ ಆಸ್ಪತ್ರೆಯ ವೈದ್ಯರುಗಳಿಂದ ಉಪ್ಪುಂದದ ರೈತ ಸಿರಿ ಸಭಾಭವನದಲ್ಲಿ ಬೃಹತ್ ಉಚಿತ ಹೃದಯ ತಪಾಸಣೆ, ಬಾಯಿ ಸ್ತನ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರ ಬಿಪಿ ಶುಗರ್, ಜನರಲ್ ಮೆಡಿಸನ್ ತಪಾಸಣಾ ಸೌಲಭ್ಯದೊಂದಿಗೆ ನಡೆಯಿತು. ಕಂಬದಕೋಣೆ ರೈತರ ಸೇವಾ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೂರು ಬೈಕ್ಗಳು ಮುಖಮುಖಿಯಾಗಿ ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಕೋಡಿ ಕನ್ಯಾಣ ಅಂಗನವಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಪಾರಂಪಳ್ಳಿಯ ರವೀಂದ್ರ ಪೂಜಾರಿ (30) ಮೃತಪಟ್ಟಿದ್ದಾರೆ. ಕೋಡಿ ಕನ್ಯಾಣದಿಂದ ಪಾರಂಪಳ್ಳಿಗೆ ಹೋಗುತ್ತಿದ್ದ ಎರಡು ಬೈಕ್ಗಳು ಪಾರಂಪಳ್ಳಿಯಿಂದ ಬರುತ್ತಿದ್ದ ಬೈಕ್ಗೆ ಮುಖಮುಖಿ ಡಿಕ್ಕಿ ಸಂಭವವಿಸಿದ ಹಿನ್ನಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದ ವಿರುದ್ದ ದಿಕ್ಕಿನಲ್ಲಿ ಯಾವುದೇ ಪಾರ್ಕಿಂಗ್ ಸಿಗ್ನಲ್ ಇಲ್ಲದೆ ರಸ್ತೆ ಬದಿಯಲ್ಲಿ ಕಾರೊಂದು ಪಾರ್ಕಿಂಗ್ ಮಾಡಿದ್ದು ಬೈಕ್ ಸವಾರರಿಗೆ ಮುಂದೆ ಬರುತ್ತಿದ್ದ ಬೈಕ್ ಕಾಣಿಸದೆ ಇರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದ ತೀವ್ರತೆಯು ಬೈಕ್ ಮುಖಮುಖಿ ಡಿಕ್ಕಿಯಾಗಿ ನಿಂತ ಕಾರಿಗೆ ಅಪ್ಪಳಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡರು. ಮೃತ ಯುವಕ ಕೋಟ ಮೂರಕೈ ಸಮೀಪ ಟೂ-ವೀಲರ್ ಗ್ಯಾರೇಜ್ ಹೊಂದಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಸ್ಥಳೀಯ ಚರಣ್ ಹಾಗೂ ಪ್ರಶಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಎಂಟು ವರ್ಷಗಳಿಂದ ವಿಭಿನ್ನವಾಗಿ ಯಕ್ಷಗಾನ ಸಂಘಟನೆ ಮಾಡುತ್ತಿರುವ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಿಗೆ ಮಾದರಿಯಾದ ಯಕ್ಷರಾತ್ರಿ, ಈ ಬಾರಿ ಡಿಸೆಂಬರ್ 2ರ ಶನಿವಾರ ಕುಂದಾಪುರದ ನೆಹರೂ ಮೈದಾನದಲ್ಲಿ ನಡೆಯಲಿದ್ದು ಈ ವೇಳೆ ಸಾಧಕರಿಗೆ ಗೌರವ ಪುರಸ್ಕಾರ, ಕಲಾ ಪುರಸ್ಕಾರ ನೀಡಲಾಗುತಿದೆ. ಯಕ್ಷಕಾಶಿಯ ಮೊದಲ ಆಟ ‘ಯಕ್ಷರಾತ್ರಿ’ಯಲ್ಲಿ ಗೌರವ ಪುರಸ್ಕಾರವನ್ನು ಮುಳುಗು ತಜ್ಞ ಸಮಾಜಸೇವಕ ಈಶ್ವರ ಮಲ್ಪೆ ಹಾಗೂ ಸ್ವಾವಲಂಬಿ ಬದುಕು ನಡೆಸುವ ರಾಜ್ಯದ ಪ್ರಥಮ ಮಂಗಳಮುಖಿ ರಿಕ್ಷಾ ಚಾಲಕಿ ಕಾವೇರಿ ಮೇರಿ ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ. ಯಕ್ಷರಾತ್ರಿ ಕಲಾ ಪುರಸ್ಕಾರವಾಗಿ ಬಡಗಿನ ಪ್ರಸಿದ್ದ ಸ್ತ್ರೀ ವೇಷಧಾರಿ ಸುಧೀರ್ ಉಪ್ಪೂರು ಅವರನ್ನು ಆಯ್ಕೆಮಾಡಲಾಗಿದೆ. ಶ್ರೀ ಪೆರ್ಡೂರು ಮೇಳದವರಿಂದ ಪ್ರೊ. ಪವನ್ ಕಿರಣಕೆರೆ ವಿರಚಿತ ಗಂಗೆ- ತುಂಗೆ-ಕಾವೇರಿ ಎನ್ನುವ ನೂತನ ಸಾಮಾಜಿಕ ಪ್ರಸಂಗವನ್ನು ಕುಂದಾಪುರದಲ್ಲಿ ಮೊಟ್ಟಮೊದಲ ಭಾರಿಗೆ ಆಯೋಜಿಸಲಾಗಿದೆ ಎಂದು ಸಂಘಟಕ ಗಜೇಂದ್ರ ಆಚಾರ್ ಕೋಣಿ ತಿಳಿಸಿದ್ದಾರೆ ಯಕ್ಷರಾತ್ರಿ ಜೊತೆಗೆ ಸಾಧಕರಿಗೆ ಪುರಸ್ಕಾರ, ವಿದ್ಯಾರ್ಥಿ ವೇತನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ನೂತನ ಶಿಲಾಮಯ ಮಹಾಪ್ರವೇಶದ್ವಾರ ಗೋಪುರ ನಿರ್ಮಾಣ ಯೋಜನೆ ಮನವಿಪತ್ರವನ್ನು ದೇವಳದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ದೇವಳದ ಸೇವಾಸಮಿತಿ ಗೌರವಾಧ್ಯಕ್ಷರಾದ ಎಸ್. ರಾಜು ಪೂಜಾರಿ ಮನವಿಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ ದೇವಸ್ಥಾನದಲ್ಲಿ ಬೈಂದೂರು ಭಾಗದ ಪ್ರಮುಖ ಶ್ರದ್ಧಾಕೇಂದ್ರವಾಗಿ ಮಾರ್ಪಾಡಾಗಿದ್ದು, ನಿತ್ಯ ಸೇವೆ ವಾರ್ಷಿಕ ಜಾತ್ರೆಯ ಜೊತೆಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯುತ್ತಿದೆ. ಮುಂದುವರಿದ ಭಾಗವಾಗಿ ಮಹಾಪ್ರವೇಶದ್ವಾರ ಗೋಪುರ ನಿರ್ಮಾಣವಾಗುತ್ತಿದ್ದು, ರೂ. 60 ಲಕ್ಷ ವೆಚ್ಚವಾಗುವ ಅಂದಾಜಿದೆ. ದೇವಳದ ಎಲ್ಲಾ ಅಭಿವೃದ್ಧಿ ಕಾರ್ಯದಲ್ಲಿ ಕೈಜೊಡಿಸಿರುವ ಭಕ್ತರು ಪ್ರವೇಶದ್ವಾರ ನಿರ್ಮಾಣದಲ್ಲಿಯೂ ಭಾಗಿಯಾಗುವಂತೆ ಕೋರಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರು ಮಾತನಾಡಿ ಶಕ್ತಿದೇವತೆ ಮಹಾಸತಿ ಅಮ್ಮನವರ ದೇವಸ್ಥಾನದ ಶಿಲಾಮಯ ಗರ್ಭಗುಡಿಯನ್ನು 2010ರಲ್ಲಿ ನಿರ್ಮಾಣ ಮಾಡಲಾಗಿತ್ತು. ಪ್ರವೇಶದ್ವಾರವನ್ನ ಮಾತ್ರವೇ ಅಂದು ನಿರ್ಮಿಸಿದ್ದರಿಂದ ನೂತನ ಶಿಲಾಮಯ ಮಹಾಪ್ರವೇಶದ್ವಾರ ಗೋಪುರವನ್ನು ನಿರ್ಮಿಸಲು ಸಮಿತಿ ನಿರ್ಧರಿಸಿದ್ದು, ಭಕ್ತರ ಸಹಕಾರ ಅಗತ್ಯವಾಗಿ ಬೇಕಿದೆ ಎಂದರು. ಇದನ್ನೂ ಓದಿ: ►…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಚ್ಡಿಎಫ್ಸಿ ಬ್ಯಾಂಕ್ ಕುಂದಾಪುರ ಶಾಖೆಯ ಉದ್ಯೋಗಿ ನಾಗೇಂದ್ರ ಹೆಚ್ ಅವರು 2022-23 ಸಾಲಿನ ಆರ್ಥಿಕ ವರ್ಷದಲ್ಲಿ ವೃತ್ತಿಯಲ್ಲಿ ತೋರಿದ ಸಾಧನೆಗಾಗಿ ಸೌತ್ ಕೊರಿಯಾದಲ್ಲಿ ನಡೆದ ಎಂಡಿಆರ್ಟಿ ಸಭೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಫೆಬ್ರವರಿಯಲ್ಲಿ ದುಬೈನಲ್ಲಿ ನಡೆದ ಸಭೆಯಲ್ಲಿ “ಬೆಸ್ಟ್ ಬ್ಯಾಂಕರ್” ಮತ್ತು ಮಲೇಷಿಯಾದಲ್ಲಿ ನೆಡೆದ ಸಭೆಯಲ್ಲಿ “ಪರ್ಪಾರ್ಮರ್ ಆಫ್ ದಿ ಇಯರ್” ಪ್ರಶಸ್ತಿಯನ್ನು ಪಡೆದಿದ್ದರು. ನಾಗೇಂದ್ರ ಅವರು ಮಯ್ಯಾಡಿ ಹೆಬ್ಬಾಗಿಲು ಮನೆ ಪ್ರೇಮ ಮತ್ತು ಅಶ್ವಥನಾರಾಯಣ ಅವರ ಪುತ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಕಾಲೇಜುಗಳಲ್ಲಿ ಕಲಿಯುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಿದ್ದ ಬಹುದೊಡ್ಡ ಕೊರತೆಯನ್ನು ನೀಗಿಸುವಲ್ಲಿ ಸಮೃದ್ಧ ಬೈಂದೂರು ತಂಡ ಪ್ರಥಮ ಹೆಜ್ಜೆ ಇರಿಸಿದ್ದು, ಉಚಿತ ಕೆಸಿಇಟಿ ಹಾಗೂ ನೀಟ್ ತರಬೇತಿ ನೀಡಲು ಯೋಜಿಸಿದೆ. ಗುಣಮಟ್ಟದ ತರಬೇತಿ ನೀಡುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಡುವ ಜವಾಬ್ದಾರಿ ನಮ್ಮದಾಗಿದ್ದು, ಆಸಕ್ತಿಯ ಕಲಿಕೆ ಹಾಗೂ ಫಲಿತಾಂಶವನ್ನು ತೋರಿಸುವ ಹೊಣೆ ವಿದ್ಯಾರ್ಥಿಗಳದ್ದಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಬೈಂದೂರು ಹಾಗೂ ಉಪ್ಪುಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ, ಜ್ಞಾನದೀಪ ಟುಟೋರಿಯಲ್ ಕಾಲೇಜಿನ ಸಹಯೋಗದೊಂದಿಗೆ ಹಮ್ಮಿಕೊಂಡ ಉಚಿತ ಕೆಸಿಇಟಿ ಹಾಗೂ ನೀಟ್ ತರಬೇತಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ ಬಡತನವೆಂಬುದು ಕೊರತೆಯಾಗಬಾರದು. ಅದನ್ನೇ ಸವಾಲಾಗಿ ಸ್ವೀಕರಿಸಿದ ಅದೇಷ್ಟೋ ಮಂದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆದ್ದ ನೂರಾರು ಉದಾಹರಣೆಗಳು ನಮ್ಮ ಮುಂದಿದೆ. ಅಂತಹದ್ದೊಂದು ಇಚ್ಚಾಶಕ್ತಿಯನ್ನು ಬೆಳಿಸಿಕೊಳ್ಳಿ ಎಂದರು. ತರಗತಿಗಳಲ್ಲಿ ಕಲಿಕೆಯಲ್ಲಿ ಉತ್ತಮ ಹಾಗೂ ಸಾಧಾರಣವಿರುವ ವಿದ್ಯಾರ್ಥಿಗಳಿಗೂ ಪಾಠ ಮಾಡಬೇಕಾಗುತ್ತದೆ. ಬಾಹ್ಯ ತರಬೇತಿಗಳಲ್ಲಿ ಕಲಿಕೆಯಲ್ಲಿ ಉತ್ತಮವಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ನಟನೆಯ 40ನೇ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ. ಹಬ್ಬದ ಸಂಭ್ರಮದಲ್ಲಿ ಪೋಸ್ಟರ್ ಜೊತೆಗೆ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಅವರ ಈ ಹೊಸ ಸಿನಿಮಾಗೆ ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಪೋಸ್ಟರ್ ಭರ್ಜರಿಯಾಗಿದ್ದು ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಪ್ರಜ್ವಲ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರುದತ್ ನಿರ್ದೇಶನದ ಮೊದಲ ಸಿನಿಮಾ ‘ಅಂಬಿ ನಿಂಗೆ ವಯಸಾಯ್ತೋ’ 2018 ರಲ್ಲಿ ಬಿಡುಗಡೆಯಾಗಿತ್ತು. ಮೊದಲ ಸಿನಿಮಾದಲ್ಲೇ ರೆಬಲ್ ಸ್ಟಾರ್ ಅಂಬರೀಶ್, ಕಿಚ್ಚ ಸುದೀಪ್, ಸುಹಾಸಿನಿ ಅಂತಹ ದೊಡ್ಡ ದೊಡ್ಡ ಸ್ಟಾರ್ ಕಲಾವಿದರಿಗೆ ನಿರ್ದೇಶನ ಮಾಡಿದ್ದ ಗುರು ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಆ ಎಲ್ಲಾ ಕುತೂಹಲ ಮತ್ತು ಪ್ರಶ್ನೆಗಳಿಗೆ ತೆರೆಬಿದ್ದಿದೆ. ಸಿನಿಮಾದ ಪೋಸ್ಟರ್ ನೋಡಿದ್ದರೆ ಇದು ಕಂಬಳದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಶಾರದೋತ್ಸವ ಸುವರ್ಣ ಮಹೋತ್ಸವದ ಅಂಗವಾಗಿ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಭಾನುವಾರ ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಮನುಷ್ಯರಲ್ಲಿ ಏಕಾಗ್ರತೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ. ಸೋಲೇ ಗೆಲುವಿನ ಸೋಪಾನ ಎಂದು ಕ್ರೀಡಾಸ್ಪೂರ್ತಿಯಿಂದ ಸ್ವರ್ಧೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು. ಬೈಂದೂರು ದಸರಾ ಸಮಿತಿ ಅಧ್ಯಕ್ಷ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಗಿರೀಶ್ ಬೈಂದೂರು, ಬಿ.ಎಮ್. ನಾಗರಾಜ್ ಗಾಣಿಗ, ಶಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ ಬೈಂದೂರು, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.15: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾತನಾಡಿ 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ ವಿಶೇಷ ಸೌಕರ್ಯ ಒದಗಿಸಲಾಗಿದೆ. ಚಂಡಿಕಾ ಯಾಗ, ರಥೋತ್ಸವ, ವಿದ್ಯಾರಂಭ, ನವಾನ್ನಪ್ರಾಶನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನವರಾತ್ರಿ ಸಂದರ್ಭ ನಡೆಯುತ್ತವೆ. ಪ್ರತಿದಿನ ನಡೆಯುವ ಸಾಂಸ್ಕೃತಿಕ ಉತ್ಸವವೂ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಡಾ ಕೆ. ರಾಮಚಂದ್ರ ಅಡಿಗ, ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್ ಶೆಟ್ಟಿ,…
