ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತದಲ್ಲಿಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಈ ಇಲಾಖೆಗಳಲ್ಲಿ ಅನ್ಯ ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಇರುವ ಕಡತಗಳ ವಿಲೇವಾರಿ ಕುರಿತಾದ ಜಂಟಿ ಇಲಾಖಾ ಸಭೆ ನಡೆಸಿ ಈ ಸೂಚನೆ ನೀಡಿದರು. ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದು, ಆಸ್ಪತ್ರೆಗೆ ಅಗತ್ಯ ಕಟ್ಟಡ ವ್ಯವಸ್ಥೆ ಮಾಡಿಸುವುದು, ಕಟ್ಟಡಕ್ಕೆ ಬೇಕಾದ ಜಾಗ ಗುರುತಿಸುವುದು ಇತ್ಯಾದಿಗಳನ್ನು ತ್ವರಿತವಾಗಿ ಮಾಡಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಆರೋಗ್ಯ ಇಲಾಖೆಯ ಎಲ್ಲಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರದಿಂದಾಗಿ ಈ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 720 ಅಂಕಕ್ಕೆ 720 ಅಂಕವನ್ನು 67 ವಿದ್ಯಾರ್ಥಿಗಳು ಪಡೆದಿರುವುದು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಸ್ಪಷ್ಟ. ಉತ್ತರಭಾರತದವರೇ ಅವಕಾಶ ಪಡೆದಿದ್ದು ಇದರಿಂದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡಿದಂತಾಗಿದೆ. ಇಂಥಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಹೇಳಿದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್, ಎನ್.ಎಸ್.ಯು.ಐ ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ಖಂಡಿಸಿ ಕುಂದಾಪುರ ಶಾಸ್ತ್ರೀವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಎಲ್ಲರಿಗೂ ಸ್ಷಷ್ಟವಾಗಿದ್ದರೂ ಕೂಡಾ ಈ ಭಾಗದ ಯಾವುದೇ ಬಿಜೆಪಿ ಸಂಸದರಾಗಲಿ, ಶಾಸಕರಾಗಲಿ ಮಾತನಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ಬಗ್ಗೆ ಧ್ವನಿಯೆತ್ತುತ್ತಿಲ್ಲ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಈ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಸಾಹಿತಿಕ ಕಥನದ ನಿರೂಪಣೆ ಮತ್ತು ಸಿನಿಮಾದ ನಿರೂಪಣೆಯು ವಿಭಿನ್ನ’ಎಂದು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ಸಹಪ್ರಾಧ್ಯಾಪಕ ಸಾತ್ವಿಕ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಳ್ವಾಸ್ ಸಿನಿಮಾ ಸಮಾಜದ ಆಶ್ರಯದಲ್ಲಿ ನಡೆದ ‘ನಿರೂಪಣಾ ತಲ್ಲೀನತೆ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಿನಿಮಾಕ್ಕೆ ನಿರ್ದಿಷ್ಟ ಕತೆ ಮುಖ್ಯವಾಗುವುದಿಲ್ಲ. ಸಿನಿಮಾ ನಿರೂಪಣೆಯ ಕಥನ ಶೈಲಿಯೇ ಪ್ರಮುಖವಾಗುತ್ತದೆ. ಸಾಹಿತ್ಯಿಕ ಭಾಷೆ ಹಾಗೂ ಸಿನಿಮಾ ಭಾಷೆಗಳೆರಡೂ ವಿಭಿನ್ನ ಎಂದು ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು. ಪ್ರತಿ ಸಿನಿಮಾವೂ ನೋಡುಗನ ದೃಷ್ಟಿಕೋನದಲ್ಲಿ ಬೇರೆ ಬೇರೆ ಅರ್ಥ ಕಲ್ಪಿಸಬಹುದು. ಆದರೆ, ಯಶಸ್ವಿ ನಿರ್ದೇಶಕನೊಬ್ಬ ತನ್ನ ಕಥಾ ಹಂದರವನ್ನು ಪರಿಣಾಮಕಾರಿಯಾಗಿ ನೋಡುಗರಿಗೆ ತಲುಪಿಸಿದಾಗ ಯಶಸ್ವಿ ಎನಿಸಿಕೊಳ್ಳುತ್ತಾನೆ ಎಂದರು. ಸಾಮಾನ್ಯ ವೀಕ್ಷಣೆಯಿಂದ ಸಿನಿಮಾ ಸೂಕ್ಷ್ಮತೆಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಸಿನಿಮಾವನ್ನು ಇತರ ಮಾಧ್ಯಮಕ್ಕೆ ಬದಲಾಯಿಸಿದರೆ ಸ್ವಾರಸ್ಯ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಿನಿಮಾಗಳು ವಿಭಿನ್ನ ವಿಚಾರಗಳ ಸಮೀಕರಣ ಎಂದರು. ಸಿನಿಮಾ ಎಂದರೇನು? ಸಿನಿಮಾವನ್ನು ನೋಡುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಾಹಿತ್ಯ ಸ್ಪಂದನ ಎಂಬ ಹೆಸರಿನಲ್ಲಿ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯದ ಪ್ರಮುಖ ವ್ಯಕ್ತಿತ್ವಗಳಲ್ಲಿ ಒಬ್ಬರಾದ ಕಾದಂಬರಿಕಾರ, ಕವಿ, ಪತ್ರಕರ್ತ ಹಾಗೂ ಚಲನಚಿತ್ರ ಬರಹಗಾರರಾದ ಜೋಗಿ ನಾಮಾಂಕಿತ ಗಿರೀಶ್ ರಾವ್ ಹತ್ವಾರ್, ಖ್ಯಾತ ಬರಹಗಾರರಾದ ಗೋಪಾಲಕೃಷ್ಣ ಕುಂಟಿನಿ, ಖ್ಯಾತ ಲೇಖಕರಾದ ರಾಜಶೇಖರ ಹಳೆಮನೆ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್., ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರು, ಪ್ರಖ್ಯಾತ ಲೇಖಕರೂ ಆಗಿರುವ ಅನುಬೆಳ್ಳೆ ನಾಮಾಂಕಿತ ರಾಘವೇಂದ್ರ ಬಿ. ರಾವ್, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್. ಕೆ. ಎಸ್. ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಪ್ರಮುಖ ಬರಹಗಾರರೂ ಆಗಿರುವ ಮಹೇಶ್ ಕೆ. ಎನ್. ಪುತ್ತೂರು ಇನ್ನಿತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ನಿರ್ಮಿಸಲ್ಪಟ್ಟ ಪ್ರಮೋಶನಲ್ ವಿಡಿಯೋವನ್ನು ಪ್ರಸ್ತುತ ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ವೃಂದದವರೂ ಪಾಲ್ಗೊಂಡಿದ್ದರು. ಕನ್ನಡ ಉಪನ್ಯಾಸಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574892, ಅಥವಾ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/298134 ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ದೂರದಿಂದ ಆಗಮಿಸುವ 150 ವಿದ್ಯಾರ್ಥಿಗಳ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಹಳೇ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ನಕ್ಕತ್ತಾಯ, ನಾರಾಯಣ, ಯು. ಎಸ್. ಶೆಣೈ ವಿದ್ಯಾರ್ಥಿಗಳಿಗೆ ಊಟ ಬಡಿಸುವುದರೊಂದಿಗೆ ಚಾಲನೆ ನೀಡಿದರು. ಕೆಲ ವರ್ಷಗಳಿಂದ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ, ಊಟದ ಉಸ್ತುವಾರಿ ಉಪನ್ಯಾಸಕರಾದ ಉದಯ್ ಕುಮಾರ್ ಶೆಟ್ಟಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ರೋಟರಿ ಕ್ಲಬ್‌ನ 2024-25ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಟಿ. ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಾಲಾಶ್ರೀ ಖಾರ್ವಿ, ಉಪಾಧ್ಯಕ್ಷರಾಗಿ ಉದಯಶಂಕರ ರಾವ್, ಜೊತೆ ಕಾರ್ಯದರ್ಶಿಯಾಗಿ ಫಿಲೋಮಿನಾ ಫೆರ್ನಾಂಡಿಸ್, ನಿಕಟಪೂರ್ವ ಅಧ್ಯಕ್ಷರಾಗಿ ಜನಾರ್ದನ ಪೂಜಾರಿ, ಪ್ರದೀಪ ಡಿ. ಕೆ, ಎಂ. ನಾಗೇಂದ್ರ ಪೈ, ನಿರ್ದೇಶಕರಾಗಿ ಎಚ್. ಗಣೇಶ ಕಾಮತ್, ಬಿ. ಲಕ್ಷ್ಮೀಕಾಂತ ಮಡಿವಾಳ, ಕೃಷ್ಣ ಪೂಜಾರಿ, ಗಿರೀಶ್ ಖಾರ್ವಿ, ಕೆ. ರಾಮನಾಥ ನಾಯಕ್, ಗೋಪಾಲ ಬಿಲ್ಲವ, ಸುಗುಣಾ ಆರ್. ಕೆ ಹಾಗೂ ಚೇರ್‌ಮೆನ್‌ಗಳಾಗಿ ಉಮೇಶ್ ಎಲ್. ಮೇಸ್ತ, ರಾಜೇಶ ಎಂ. ಜಿ., ದಿನಕರ ಶೆಣೈ ಟಿ., ಶಿವಾನಂದ ಪೂಜಾರಿ, ದಯಾನಂದ ಗಾಣಿಗ, ವಾಸುದೇವ ಶೇರುಗಾರ್, ನಾರಾಯಣ ಇ. ನಾಯ್ಕ್ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನಸಾಮಾನ್ಯರ ಪ್ರತಿ ವಿಚಾರ ಹಾಗೂ ವಿಶೇಷ ಸಂದರ್ಭಗಳಿಗೆ ಧ್ವನಿ ಕೊಡುವ, ಉತ್ತಮವಾದ ಕಲೆಗಳಿಗೆ ಬೆಳಕನ್ನು ನೀಡುವ ಮೂಲಕ ಉದ್ಯಮದಲ್ಲಿ ಕೇವಲ ವೃತ್ತಿಪರರಾಗದೆ ಧ್ವನಿ ಬೆಳಕಿನ ಕಲಾವಿದರಾಗಿದ್ದೀರಿ. ನಿಮ್ಮಲ್ಲಿನ ವಿಶಿಷ್ಟ ಕಲೆಯ ಮೂಲಕ ಬೇರೆಯವರ ಮನಮುಟ್ಟುವಂತೆ, ಕಣ್ಮನ ತಣಿಸುವಂತೆ ಮಾಡುವ ನಿಮ್ಮ ಕಾಯಕ ಅಭಿನಂದನಾರ್ಹವಾದದ್ದು ಎಂದು ಕಿರಿಮಂಜೇಶ್ವರ ಅಗಸ್ಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ವಿ. ಪ್ರಕಾಶ್ ಐತಾಳ್ ಹೇಳಿದರು. ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 13ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಬೈಂದೂರು ವಲಯದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು, ಬೈಂದೂರು ಆರಕ್ಷಕ ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್. ಕಾನೂನು ಮಾಹಿತಿ ನೀಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ನಯನಾ ಇವರನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಅಲ್ಲಿ ಗರಿಷ್ಠ ಅಂಕಗಳಿಸಿದ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕತಾರ್‌ನ ಪ್ರತಿಷ್ಠಿತ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್‌ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷರಾಗಿ ಮೊಹಮ್ಮದ್ ಸಮದ್ ಇಮ್ರಾನ್ ಎಂ, ಜಾನ್ ಹೆನ್ರಿ, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಫೈ ಸುದ್ದೀನ್ ಕಣ್ಣೋತ್, ಕಾರ್ಯದರ್ಶಿಯಾಗಿ ಹನಸ್ ಅಜೀಜ್, ಖಂಜಾಜಿಯಾಗಿ ರಿಜ್ವಾನ್ ಹಸೀಬ್ , ಸಾರ್ಜೆಂಟ್ ಆಗಿ ಮಜರ್ ಹುಸೇನ್ ಖಾನ್ ಆಯ್ಕೆಯಾಗಿದ್ದಾರೆ ಎಂದು ಪ್ರಕರಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಅರ್ಬನ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಮಣಿಕಂಠ ಎಸ್ ದೇವಾಡಿಗ ಅಧ್ಯಕ್ಷತೆಯಲ್ಲಿ ನಡೆಯಿತು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರ ತೇಜ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘವು 3ನೇ ಆರ್ಥಿಕ ವರ್ಷದಲ್ಲಿ ಲಾಭದೊಂದಿಗೆ ಉತ್ತಮ ಪ್ರಗತಿ ಸಾಧಿಸಿದ್ದು ಸಂಘದ ಅಧ್ಯಕ್ಷರು ಮಾನ್ಯ ಸದಸ್ಯರಿಗೆ 8% ಡಿವಿಡೆಂಟ್ ನೀಡುವುದಾಗಿ ಘೋಷಣೆ ಮಾಡಿದರು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸರ್ಕಾರಿ ನಿವೃತ್ತ ಸದಸ್ಯರಿಗೆ ಸನ್ಮಾನ, ಸ.ಪ.ಪೂ.ಕಾಲೇಜು ಬೈಂದೂರು ಇವರಿಗೆ ಶೈಕ್ಷಣಿಕ ಸಹಾಯಧನ ವಿತರಣೆ, ಸ್ವ ಸಹಾಯ ಗುಂಪಿನ ಸದಸ್ಯರಿಗೆ ವಿಶೇಷ ಪ್ರಶಸ್ತಿ ಮತ್ತು ಸಂಘದ ಸದಸ್ಯರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕರು ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವರದಿ ವಾಚಿಸಿದರು.
