ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾಟ ಆಯೋಜಿಸುವುದು ಶ್ಲಾಘನೀಯ. ನಮ್ಮ ಸಮಾಜದ ಯುವಕರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಗೈಯಲು ಅಗತ್ಯವಿರುವ ತರಬೇತಿ ಕೇಂದ್ರ ಸ್ಥಾಪಿಸಲು ಶ್ರಮಿಸುವುದಾಗಿ ಜಿಎಸ್ಬಿ ಸಮಾಜದ ಯುವ ನಾಯಕ ನಂದನ್ ಮಲ್ಯ ಹೇಳಿದರು. ಅವರು ಕೋಟೇಶ್ವರದಲ್ಲಿ ಇಲ್ಲಿನ ಕೊಂಕಣಿ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಜಿಎಸ್ಬಿ ಸಮಾಜ ಬಾಂಧವರಿಗೆ 40 ಗಜಗಳ ಕ್ರಿಕೆಟ್ ಪಂದ್ಯಾಟ ರೋಯ್ಸ್ ಯುಪಿವಿಸಿ ಡೋರ್ಸ್ & ವಿಂಡೋಸ್ ಕೊಂಕಣಿ ಎಕ್ಸ್ಪ್ರೆಸ್ ಪ್ರೀಮಿಯರ್ ಲೀಗ್ 2024 ಉದ್ದೇಶಿಸಿ ಮಾತನಾಡಿದರು. ಉದ್ಯಮಿ ಆಟಕೆರೆ ವಿಶ್ವನಾಥ ಪೈ ಮಾತನಾಡುತ್ತಾ ಕ್ರಿಕೆಟ್ ಆಟದ ತಮ್ಮ ಅನುಭವವನ್ನು ಮೆಲುಕು ಹಾಕುತ್ತಾ ಮುಂದಿನ ದಿನಗಳಲ್ಲಿ ಕ್ರೀಡೆ ಹಾಗೂ ಕಲೆಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಶ್ರೀ ರಾಮ ಸೇವಾ ಸಂಘದ ಅಧ್ಯಕ್ಷ ಶಂಕರ್ ಕಾಮತ್ ಇಂತಹ ಹಲವಾರು ಪಂದ್ಯಕೂಟ ಸಮಾಜದ ಪ್ರತಿ ಊರಿನಲ್ಲಿ ನಡೆಯಬೇಕು. ಜಿಎಸ್ಬಿ ಸಮಾಜದವರು ಪ್ರತಿಯೊಂದು ಕ್ಷೇತ್ರದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಧಿಕಾರಿಗಲ ಕಛೇರಿಯ ಐಟಿ ನಿರ್ದೇಶಕ ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮಂಜುನಾಥ ಆನಂದ ( 53 ವಷ೯) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಕೋಟದವರಾದ ಮಂಜುನಾಥ್ ಅವರು ಕುತ್ಪಾಡಿಯಲ್ಲಿ ನೆಲೆಸಿದ್ದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇ ತಂತ್ರಾಂಶ ನಿವ೯ಹಣೆ, ಚುನಾವಣಾ ಸಮಯ ಐ.ಟಿ. ಎಪ್ಲಿಕೇಶನ್ ನಿವ೯ಹಣೆ ಮಾಡಿರುವುದು, 2007ರಲ್ಲಿ ಉಡುಪಿ ಜಿಲ್ಲೆಯ ಡಿಸಿ ಕಚೇರಿಯಲ್ಲಿ ಪ್ರಥಮವಾಗಿ PLO ( ಪೇಪರ್ ಲೆಸ್ ಆಫೀಸ್) ನ್ನು ಆರಂಭಿಸಿದ ಸಮಯ ಎನ್ಐಸಿ. ಮುಖ್ಯಸ್ಥರಾಗಿ ಕೆಲಸ ನಿವ೯ಹಣೆ, ಜಿಲ್ಲಾ ವೆಬ್ಸೈಟ್ ನಿವ೯ಹಣೆಯ ಜವಾಬ್ದಾರಿ ಹೊತ್ತಿದ್ದರು. ಮೃತರು ಪತ್ನಿ ಗೀತಾ, ಮಕ್ಕಳಾದ ಗ್ರೀಷ್ಮಾ, ರೋಷ್ನಿ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕೋಟದಲ್ಲಿ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಕರ ದಿನದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ತೋಟಗಾರಿಕ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಜಯಶೀಲ ಶೆಟ್ಟಿ ನೆರವೆರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ನಾರಾಯಣ ನಾಯಕ್, ಜ್ಞಾನಸುಧಾ ಸಂಸ್ಥೆಯ ಸಂಸ್ಥಾಪಕರಾದ ಸುಧಾಕರ್ ಶೆಟ್ಟಿ, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನೂತನ ಪ್ರಯೋಗಾಲಯವು ಹೊಸ ತಂತ್ರಜ್ಷಾನವನ್ನು ಒಳಗೊಂಡ 66 ಗಣಕ ಯಂತ್ರಗಳನ್ನು ಒಳಗೊಂಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ,ಮೇ.15: 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸತತ 11ನೇ ಬಾರಿ ಶೇ.100 ರಷ್ಟು ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 41 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳಾದ ಪ್ರಥಮ್ ಜಿ. ಕಾಂಚನ್ (476), ಅನ್ಸಿ ಸಿ. ಶೆಟ್ಟಿ (459), ನಿಶಾ ರಾಜೇಶ್ (453), ಇಶಾನ್ (450), ಟಿ. ಶ್ರೇಯಸ್ ನಾಯಕ್ (445), ವರ್ಷಿತ್ ಯು ಶೆಟ್ಟಿ (444), ನಿಶ್ಚಿತ್ ಎ.ಎಸ್ (440), ಕಲ್ಪಿತ ಡಿ ಮಣೂರು (436), ಟಿ ಶಾಶ್ವತ್ ನಾಯಕ್ (436), ಪ್ರಥಮ್ ಮಯ್ಯ (431), ಬ್ರಾಹ್ಮಿ ಶೆಟ್ಟಿ( 410), ಆರುಶ್ ಎಸ್ ಪೂಜಾರಿ (408), ಧನ್ಯಶ್ರೀ( 407), ರಚನ (405) ಅಂಕಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿಗನ್ನು ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ , ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.15: ಮೋಟರ್ ಸೈಕಲ್ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಬಳ್ಕೂರು ಬಸವ ಪೂಜಾರಿ (55) ಮೃತ ದುರ್ದೈವಿ. ಕಂಡ್ಲೂರು ಯಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಟಿವಿಎಸ್ ಮೋಟರ್ ಸೈಕಲ್ಗೆ ನೇರ ಡಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಮೇ.15: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಸತತ 14ನೇ ಬಾರಿ ಸಿ.ಬಿ.ಎಸ್.ಸಿ. 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಧವಲ್ ಎಸ್. ಶೆಟ್ಟಿ ಕೆ 95.00%, ಸುರ್ವಿ ಶೆಟ್ಟಿ 93.80%, ಅನ್ವಿತಾ ಕೆ 93.20%, ನೇಹಾಲಾ ಆರ್. ಹೆಗ್ಡೆ 93.00%, ಶಿರಿನ್ ಹೆಗ್ಡೆ 91%, ಎನುಗುಲಾ ಶ್ರೆಯಸ್ 90.40%, ಪ್ರಣವ 90.00%, ಪ್ರತೀಕ್ಷಾ ಎಚ್. ಶೆಟ್ಟಿ 89.60%, ಸಹನಾ ಎಸ್. ಶೆಟ್ಟಿ 88.80%, ಸಾನ್ವಿ ಎಸ್ ಬಿಲ್ಲವ 88.80%, ಪಾವನಿ ಎಸ್. ಕುಮಾರ್ 88.60%, ಹೇಮಂತ್ಗಣೇಶ್ ಸಿ.ವಿ 88.00%, ನೇಹಾ ಹೀರೆಕೊಡಿ 87.20%, ಸಾನ್ವಿ ಕೊಠಾರಿ 87.20%, ದ್ಯುತಿ ಶ್ರೀಕಾಂತ್ 87.00%, ಸುಕ್ಷಾನ್ಆರ್ ಶೆಟ್ಟಿ 86.40%, ಶ್ರೇಷ್ಟಾ ಆರ್. ನಾಯಕ್ 86.20%, ಆಝ್ಮಾ ಆಫಿಯಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನಾದ್ಯಂತ ಇಂದು ಸಂಜೆ ಕೆಲಕಾಲ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕುಂದಾಪುರ ತಾಲೂಕಿನ ಸಿದ್ಧಾಪುರ ಭಾಗದಲ್ಲಿ ಗಾಳಿ ಮಳೆಗೆ ಹಾ̧ನಿ ಸಿಡಿಲಿಗೆ ವ್ಯಕ್ತಿಯೋರ್ವ ಮೃತಪಟ್ಟಿರುವ ಹಾಗೂ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ತಾಲೂಕಿನ ಮಲೆನಾಡು ಪ್ರದೇಶದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಿಡಿಲು ಸಹಿತ ಗಾಳಿ ಮಳೆ ಸುರಿದಿದ್ದರೇ, ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತಪಟ್ಟ ಘಟನೆ ನಡೆದಿದೆ. ಸುರೇಶ್ ಶೆಟ್ಟಿ ಅವರು ತನ್ನ ಕಿರಿಯ ಮಗನೊಂದಿಗೆ ತನ್ನ ಮನೆಯ ಸಮೀಪವೇ ಇದ್ದ ಮಾವಿನ ಮರದಿಂದ ಮಾವಿನಹಣ್ಣು ತರಲು ತೆರಳಿದ್ದರು. ಈ ವೇಳೆ ಅವರ ಎದೆಯ ಭಾಗಕ್ಕೆ ಏಕಾಏಕಿ ಅವರಿಗೆ ಸಿಡಿಲು ಬಡಿದಿದೆ. ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ, ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಸಿಡಿಲಿನ ಕಾರಣಕ್ಕೆ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ…
ಕುಂದಾಪ್ರ ಡಾಟ್ ಕಾಂ ಮಾಹಿತಿ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನಂತೆ ಸಲಹೆ, ಸೂಚನೆಗಳನ್ನು ನೀಡಿದೆ. * ಸಾರ್ವಜನಿಕರು ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ (ಸಿ.ಎ.ಪಿ) ಮೂಲಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಿ, ನಂತರ ಹೊರಗಡೆ ತೆರಳಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು. * ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಾಗಿರುವುದಿಲ್ಲ. ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಛೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. * ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಅಂತಹ ಸ್ಥಳಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.14: ಮಳೆಯಿಂದ ಉಂಟಾಗುವ ನೆರೆ, ಸಿಡಿಲು-ಬಡಿತ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಲ್ಲಿ ಮಾನವಹಾನಿ ಹಾಗೂ ಹೆಚ್ಚಿನ ಆಸ್ತಿ-ಪಾಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜೊತೆಗೆ ನೆರೆ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು. ಪೂರ್ವ ಮುಂಗಾರು ಸಮಯದಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನ ಸಿದ್ಧಾಪುರದ ಗ್ರಾಮದಲ್ಲಿ ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತ ದುರ್ದೈವಿ. ಮಂಗಳವಾರ ಸಂಜೆ ಸಿದ್ಧಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್ ಶೆಟ್ಟಿ ಎಂಬವವರು ತನ್ನ ಕಿರಿಯ ಮಗನೊಂದಿಗೆ ತನ್ನ ಮನೆಯ ಸಮೀಪವೇ ಇದ್ದ ಮಾವಿನ ಮರದಿಂದ ಮಾವಿನಹಣ್ಣು ತರಲು ತೆರಳಿದ್ದರು. ಈ ವೇಳೆ ಅವರ ಎದೆಯ ಭಾಗಕ್ಕೆ ಏಕಾಏಕಿ ಅವರಿಗೆ ಸಿಡಿಲು ಬಡಿದಿದೆ. ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ, ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಸಿಡಿಲಿನ ಕಾರಣಕ್ಕೆ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಅದೃಷ್ಟವಶಾತ್ ಅವರೊಂದಿಗಿದ್ದ ಕಿರಿಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಹೆನ್ನಾಬೈಲುವಿನ ಬಸವ ಶೆಟ್ಟಿ ಎಂಬುವವರ ಪುತ್ರರಾದ ಸುರೇಶ್ ಶೆಟ್ಟಿ ಅವರು ಬೆಂಗಳೂರಿನಲ್ಲಿ…
