Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ ಮತ್ತು ಮಹಿಳೆಯರ ಹೀಗೆ ಒಟ್ಟು ಎಲ್ಲಾ 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಮಾನಸ, ಮಹಿಳಾ ವಿಭಾಗದಲ್ಲಿ ಆಳ್ವಾಸ್‌ನ ತನುಷ ಬೆಸ್ಟ್ ಲಿಪ್ಟ್‌ರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವೈದ್ಯಕೀಯ ಕ್ಷೇತ್ರದಲ್ಲಿ ಕೆ.ಪಿ ಶೆಟ್ಟಿ ಅವರ ಜೀವತ ಅವಧಿಯ ಸೇವೆ ಮಾಮವೀಯ ಮೌಲ್ಯಗಳಿಂದ ಕೂಡಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಅವರು ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ಇತ್ತೀಚಿಗೆ ಅಗಲಿದ ಸಾಸ್ತಾನ ಭಾಗದ ಪ್ರಸಿದ್ಧ ವೈದ್ಯರಾದ ಡಾ. ಕೆ.ಪಿ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಸಮಾಜದ ಜನರ ಬಗ್ಗೆ ಹಾಗೂ ಸಮಾಜಸೇವೆಯೇ ವೈದ್ಯಕೀಯ ಕ್ಷೇತ್ರದ ಮೂಲಕ ಜನರ ನಾಡಿಮಿಡಿತದಲ್ಲಿ ಕೆ.ಪಿ ಶೆಟ್ಟಿ ಅವರ ಅಚ್ಚಳಿಯದೆ ಉಳಿದು ಬಿಟ್ಟಿದ್ದಾರೆ. ಅವರ ವ್ಯಕ್ತಿತ್ವ ಬದುಕಿನ ಜೀವನದ ತಳಹದಿ ಎಲ್ಲರಿಗೂ ಮಾದರಿಯಾಗಿದೆ ಎಂದರು. ಸಭೆಯಲ್ಲಿ ಡಾ. ಕೆ.ಪಿ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಭ ನಮನ ಸಲ್ಲಿಸಿದ ಗಣ್ಯರು ಮೌನ ಪ್ರಾರ್ಥನೆ ಸಲ್ಲಿಸಿದರು. ಯೋಗ ಗುರುಕುಲ ಇದರ ಮುಖ್ಯಸ್ಥ ಯೋಗಗುರು ಡಾ. ವಿದ್ವಾನ್ ವಿಜಯ ಮಂಜರ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಊರಿನಹಿರಿಯ ಗಣ್ಯರಾದ ಹಂಗಾರಕಟ್ಟೆ ಇಬ್ರಾಹಿಂ ಸಾಹೇಬ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇ ನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಡಾ. ಮಮತಾ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ದೃಷ್ಠಿಯಿಂದ 2005 ರಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್.ಟಿ.ಐ) ಅನ್ನು ಜಾರಿಗೊಳಿಸಿದ್ದು, ಭಾರತೀಯ ಪ್ರತಿಯೊಬ್ಬ ನಾಗರಿಕನೂ ಸರ್ಕಾರಿ ಅಧಿಕಾರಿಗಳಿಂದ ಸರಕಾರದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಅವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಾಗ ನಿಗಧಿತ ಕಾಲಾವಧಿಯಲ್ಲಿ ಶುಲ್ಕವನ್ನು ಪಡೆದು ನಿಯಮಾನುಸಾರ ದಾಖಲಾತಿಗಳನ್ನು ನೀಡಬೇಕು ಎಂದರು. ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿಯ ಪಾಲಕರಾಗಿದ್ದು, ಮಾಹಿತಿ ಹಕ್ಕು ಅಡಿ ಅರ್ಜಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ ಪಿ. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಎರಡು ದಿನಗಳ ಕಾಲ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿನಿಯು ಪ್ರಕಾಶ್ ಮೊಗವೀರ ಮತ್ತು ನಾಗರತ್ನ ದಂಪತಿಯ ಪುತ್ರಿ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ  ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಕೈಂಡ್ ಹಾರ್ಟ್ಸ್ ಬಾಳ್ಕುದು, ಶ್ರೀ ವೇಣುಗೋಪಾಲಕೃಷ್ಣ  ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಉಸಿರು ಕೋಟ ಇವರ ಆಸರೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಇದೇ ನವೆಂಬರ್ ತಿಂಗಳ 23 ರಂದು ನಡೆಯುವ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಗುಂಡ್ಮಿ ಉಮೇಶ ಪೂಜಾರಿ ಹಾಗೂ ವಸಂತಿ ಪೂಜಾರಿ ಅವರ ಪುತ್ರಿ, ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೆಯ ತರಗತಿ ವಿದ್ಯಾರ್ಥಿನಿ ಬಹುಮುಖ ಪ್ರತಿಭೆಯ ಉನ್ನತಿ ಹಂದಟ್ಟು ಆಯ್ಕೆಯಾಗಿದ್ದಾರೆ. ಈಕೆ ಯಕ್ಷಗಾನ, ನಾಟಕ, ಹಾಡು ಮೊದಲಾದ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ, ಅಂದು ನಡೆಯುವ ಮಕ್ಕಳ ಕವಿಗೋಷ್ಠಿ ಮಕ್ಕಳ ಸಾಂಸ್ಕೃತಿಕ ಉತ್ಸವ ಮತ್ತು ಕಾರಂತ ಬಾಲಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ ಸಿ. ಕುಂದರ್, ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕೈಂಡ್ ಹಾರ್ಟ್ಸ್‌ನ ಸ್ಟೀಫನ್ ಲೂಯಿಸ್, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಉಡುಪಿ ಜಿಲ್ಲೆ, ಗ್ರಾಮ ಪಂಚಾಯತ್ ಗಂಗೊಳ್ಳಿ, ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಮತ್ತು ಬೈಂದೂರು ಬ್ಲಾಕ್ ಮಟ್ಟದ ಕ್ರೀಡಾಕೂಟ-2025 ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಕ್ರೀಡಾಪಟುಗಳು ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಉದ್ಯಮಿ ಸೀತಾರಾಮ ಗಾಣಿಗ ಕೊಡಪಾಡಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಅಕ್ಕಮ್ಮ, ಯುವತಿ ಮಂಡಲದ ಅಧ್ಯಕ್ಷೆ ಶಕುಂತಲಾ, ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು. ಯುವಕ ಮಂಡಲ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವತಿ ಮಂಡಲ ಕಾರ್ಯದರ್ಶಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕಗಳ (1 ಮತ್ತು 2) ಆಶ್ರಯದಲ್ಲಿ ‘ಒಂದು ದಿನದ ವಿಶೇಷ ಶಿಬಿರ’ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಶಿ ಅಲ್ಲಿ ನಡೆಯಿತು. ಶ್ರೀ ವಿನಾಯಕ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ರಮಣ ಉಪಾಧ್ಯಾಯ ಶಿಬಿರಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಪುರೋಹಿತ ವೃಂದದವರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್, ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ, ಪ್ರವೀಣ್ ಮೊಗವೀರ, ಹರೀಶ್ ಬಿ., ಸುಧೀರ್ ಕುಮಾರ್, ಬೋಧಕೇತರ ಸಿಬ್ಬಂದಿಗಳಾದ ರಕ್ಷಿತ್, ಶರತ್ ಕೊಠಾರಿ, ನಿತೇಶ್, ದೇವಸ್ಥಾನದ ಮ್ಯಾನೇಜರ್ ನಿತೇಶ್ ಕಾರಂತ್, ಗಣೇಶ್ ಅಂಪಾರು ಮತ್ತು ಪ್ರಮೋದ್ ಉಪಾಧ್ಯಾಯ ಆನೆಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು. ಆನೆಗುಡ್ಡೆ ದೇವಸ್ಥಾನ ಪರಿಸರವನ್ನು ಸ್ವಚ್ಛಗೊಳಿಸುವ ಈ ಶಿಬಿರದಲ್ಲಿ ಕಾಲೇಜಿನ 70 ಸ್ವಯಂಸೇವಕರು ಪಾಲ್ಗೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಎಚ್ಆರ್ ಅಡ್ಮಿನಿಸ್ಟ್ರೇಷನ್ ಲೀಡರ್ ಎಂ.ಜಿ.ಎಂ ಹೆಚ್ ಆರ್ ಬ್ರೈಟ್ ಪೇಕ್ಷಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ದೇವರಾಜು ರಾಮು ಅವರು ಆಗಮಿಸಿ ಮಾತನಾಡಿ, ಒಬ್ಬ ಉತ್ತಮ ಎಚ್.ಆರ್ ನಲ್ಲಿ ಇರಬೇಕಾದ ಗುಣಲಕ್ಷಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಸ್ವಾಗತಿಸಿದರು. ಎಂ.ಸಿ.ಎ ವಿಭಾಗದ ಮುಖ್ಯಸ್ಥೆ ಡಾಕ್ಟರ್ ನಂದಿನಿ ಪ್ರಸ್ತಾವಿದರು. ಸಿಂಚನ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರ ವತಿಯಿಂದ ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್‌ಮೆಟಿಕ್ 2025 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು. ವಿದ್ಯಾರ್ಥಿಗಳಾದ ಅಪ್ರಮೇಯ ಆರ್. ನಾವಡ  (3D) ಪ್ರಥಮ ಸ್ಥಾನ, ಕ್ಷಿತಿ (4D) ದ್ವಿತೀಯ ರನ್ನರ್ ಅಪ್, ಅತೀಶ್ ಎಸ್. ಪೂಜಾರಿ (4D) ದ್ವಿತೀಯ ಸ್ಥಾನ ಹಾಗೂ ಅವ್ಯನ್ ಎಸ್. (6B) 4ನೇ ಸ್ಥಾನ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಾದ್ಯಂತ ನೆಲೆಸಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಜನರು, ಸರಕಾರ ಹಾಗೂ ಉದ್ಯಮಿಗಳು ಬೈಂದೂರಿನತ್ತ ತಿರುಗಿ ನೋಡುವಂತೆ ಮಾಡುವುದು ಮತ್ತು ಆ ಮೂಲಕ ವಿವಿಧ ಆಯಾಮಗಳಲ್ಲಿ ಬೈಂದೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಬೈಂದೂರು ಉತ್ಸವದ ಮೂಲ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ ವರ್ಷ ಆಯೋಜಿಸಿದ ಬೈಂದೂರು ಉತ್ಸವ ಯಶಸ್ಸನ್ನು ಕಂಡಿದೆ. 2026ರಲ್ಲಿ ಉತ್ಸವವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಿದ್ಧತೆ ನಡೆಸಿದ್ದು ಜನವರಿ 24, 25 ಹಾಗೂ 26ರಂದು ಬೈಂದೂರು ಉತ್ಸವದ ಕಾರ್ಯಕ್ರಮಗಳು ಹಾಗೂ ಅದಕ್ಕೆ ಪೂರಕವಾಗಿ ಮೊದಲೇ ಗ್ರಾಮೋತ್ಸವ ಕಾರ್ಯಕ್ರಮಗಳು ಜರುಗಲಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ತ್ರಾಸಿಯ ಪ್ರೆಸ್ಟೀಜ್ ಸಭಾಭವನದಲ್ಲಿ ಜರುಗಿದ ಬೈಂದೂರು ಉತ್ಸವದ ದಿನಾಂಕ ಘೋಷಣೆ ಹಾಗೂ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮ ಮನೋರಂಜನಾ ಉದ್ದೇಶಕ್ಕೆ ಮಾತ್ರ ಸೀಮಿತವಾಗಿಸದೇ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಯ ಮುನ್ನೋಟ, ಜನರ ಆರೋಗ್ಯ ಹಾಗೂ ಜೀವನಮಟ್ಟ ಸುಧಾರಣೆಯ ದೂರದೃಷ್ಠಿತ್ವನ್ನು ಹೊಂದಿದೆ. ಈ ಭಾರಿ ಕ್ಷೇತ್ರದ ವ್ಯಾಪ್ತಿಯ…

Read More