Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಾದಗಿರಿ ಜಿಲ್ಲೆ ಶಹಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವರ್ಣಿತಾ ವಿ. ಕುಂದರ್ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟಗಳಿಸಿದರು. ವೇಟ್ ಲಿಫ್ಟಿಂಗ್ ವಿಭಾಗದಲ್ಲಿ  ಮದುಲಿಂಗ ಎಂ (60 ಕೆ.ಜಿ. ವಿಭಾಗ)- ಚಿನ್ನ,  ವಸಂತ್ ಕುಮಾರ್ ಸಿ.ಜಿ. (79 ಕೆ.ಜಿ. ವಿಭಾಗ)- ಚಿನ್ನ,  ಸಾಯಿ ಹಿತೇಶ್ (94 ಕೆ.ಜಿ. ವಿಭಾಗ)- ಚಿನ್ನ,  ಹರ್ಷ ಸಿ.ಆರ್. (110+ ಕೆ.ಜಿ. ವಿಭಾಗ)-ಚಿನ್ನ  ಹಾಗೂ ಹರ್ಷಿತಾ (69 ಕೆ.ಜಿ. ವಿಭಾಗ) ಕಂಚಿನ ಪದಕದೊಂದಿಗೆ ಒಟ್ಟು 4 ಚಿನ್ನ ಹಾಗೂ 1 ಕಂಚಿನ ಪದಕ ಗಳಿಸಿದರು.   ವಿಟಿಯು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್‌ನ ನೈದಿಲ್ ಪೂಜಾರಿ (70 ಕೆ.ಜಿ. ವಿಭಾಗ)– ಚಿನ್ನದ ಪದಕದೊಂದಿಗೆ ಮಿಸ್ಟರ್ ವಿಟಿಯು ‘ಮೋಸ್ಟ್ ಮಸ್ಕುಲರ್ ಮ್ಯಾನ್’ ಪಟ್ಟ ಪಡೆದರು. ಸೋಹಮ್ ಕುಡಚಿ (85 ಕೆ.ಜಿ. ವಿಭಾಗ) – ಚಿನ್ನದ ಪದಕ ಪಡೆದರೆ, ಜಗದೀಶ್ ಗೌಡ (85 ಕೆಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಮ್‌ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ಧೆ ನವೋನ್ಮೇಶ 2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.   ಉದ್ಘಾಟಕರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಆಗಮಿಸಿದ್ದರು. ಉದ್ಘಾಟನಾ ಭಾಷಣ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ ಎಮ್. ಜಯರಾಮ್ ಶೆಟ್ಟಿ ಹಾಗೂ  ಬೆಳವಣಿಗೆಗೆ ಕಾರಣೀಕರ್ತರಾದ ಸಿದ್ಧಾರ್ಥ್ ಜೆ. ಶೆಟ್ಟಿ ಅವರನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕರಾವಳಿಯ ಖ್ಯಾತ ನಟ ದೀಪಕ್ ರೈ ಪಾಣಾಜೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಅಕಾಡಮಿಕ್ ಡೈರೆಕ್ಟರ್ ಡಾ. ಎಸ್.ಎನ್. ಭಟ್ ಅಧ್ಯಕ್ಷೀಯ ಭಾಷಣದಲ್ಲಿ ನವೋನ್ಮೇಶ ಪದದ ಅರ್ಥವನ್ನು ವಿವರಿಸಿ ಪ್ರತೀಭಾನ್ವೇಶಣೆಗೆ ಪೂರಕವಾದದ್ದು ಎಂದು ಹೇಳಿ ಕಾರ್ಯಕ್ರಮ ಆಯೋಜಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಐಎಮ್‌ಜೆ ಐ ಎಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು ಮಾತನಾಡಿ “ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ ರಚನೆಗೂ ಮುಂದಾಗಬೇಕು ಎನ್ನುತ್ತಾ ಕನ್ನಡ ಸಾಹಿತ್ಯದ ಕಾಲಘಟ್ಟಗಳು, ನಿಘಂಟುಗಳು, ಗದ್ಯ – ಪದ್ಯ ಕವಿಗಳ ವಿವರ, ಕವಿರಾಜಮಾರ್ಗ, ತಾಳೆಗರಿಗಳ ಉಲ್ಲೇಖದೊಂದಿಗೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಕುರಿತು ವಿವರಿಸಿದರು. ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘದ ಮೂಲಕ ಇನ್ನಷ್ಟು ಸೃಜನಾತ್ಮಕ ಸಾಹಿತ್ಯ ಕೃತಿಗಳು ಮೂಡಿ ಬರಲಿ” ಎಂದು ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಉತ್ಸವ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಚದುರಂಗ 7 ಸ್ಪರ್ಧೆಗಳಲ್ಲಿ ತನ್ನ ಚತುರತೆಯಿಂದ ಗಮನ ಸೆಳೆದಿದ್ದಾನೆ. ಬೇಸಿಗೆ ರಜೆಯನ್ನು ಆಟ-ಮನರಂಜನೆಗೆ ವ್ಯಯಿಸದೇ, ಸದುಪಯೋಗಪಡಿಸಿಕೊಂಡ ಈ ಪ್ರತಿಭಾವಂತ ವಿದ್ಯಾರ್ಥಿ ಮೈಸೂರಿನ ಬಿ.ಎಸ್.ಎಸ್. ಸ್ಕೂಲ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಎಫ್‌ಐಡಿಇ ರೇಟೆಡ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಹಾಗೂ ನಗದು ಬಹುಮಾನ ಪಡೆದು ತನ್ನ ಪ್ರತಿಭೆ ಚಾತುರ್ಯವನ್ನು ಜಗತ್ತಿಗೆ ಪರಿಚಯಿಸಿದ್ದಾನೆ. ಅಷ್ಟೇ ಅಲ್ಲದೆ – ಮಂಗಳೂರು ಶಾರದಾ ವಿದ್ಯಾಲಯದಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ಉತ್ಸವ 7ನೇ ಸ್ಥಾನವನ್ನು ಪಡೆದು ನಗದು ಬಹುಮಾನವನ್ನು ಪಡೆದಿದ್ದಾನೆ. ಕೋಣನಕುಂಟೆ, ಬೆಂಗಳೂರು ಇಲ್ಲಿ ಆಯೋಜಿಸಲಾದ ಸ್ಟೇಟ್ ಅಮೇಚುರ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಆತ ಟ್ರೋಪಿ ಹಾಗೂ ನಗದು ಬಹುಮಾನವನ್ನು ಗೆದ್ದು ಮತ್ತೊಮ್ಮೆ ತನ್ನ ಸಾಮರ್ಥ್ಯ ತೋರಿಸಿದ್ದಾನೆ. ಇದೇ ರೀತಿಯಾಗಿ, ಮೈಸೂರಿನ ರೋಟರಿ ವೃಂದಾವನ್ ಸ್ಕೂಲ್‌ನಲ್ಲಿ ನಡೆದ ಎಫ್‌ಐಡಿಇ ರೇಟೆಡ್ ಕ್ಲಾಸಿಕಲ್ ಚಾಂಪಿಯನ್‌ಶಿಪ್‌ನಲ್ಲಿ ಸಹ ಟ್ರೋಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ, ಕಾನೂನು ಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೊರ ಜಿಲ್ಲೆ, ರಾಜ್ಯ, ದೇಶ-ವಿದೇಶಗಳಿಂದ ಹೆಚ್ಚಿನ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದರು. ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ತಂಡದ ನಾಯಕ ಗಣೇಶ್ ಆರ್., ಸದ್ಯಸರಾದ ನಿರೂಪ, ರೋಹಿತ್, ಯಶಸ್, ದಿಗಂತ, ಸುಬ್ರಮಣ್ಯ, ಸಚಿನ್, ಕಾರ್ತಿಕ  ಈ ವಿದ್ಯಾರ್ಥಿಗಳನ್ನು  ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ವಿಜೇತರನ್ನು ಅಭಿನಂದಿಸಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ನಲ್ಲಿ ಪಾಲ್ಗೊಂಡು ವಿಜಯ ಸಾಧಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಪಠ್ಯದ ಜೊತೆಗೆ ಕ್ರೀಡೆಯಲ್ಲೂ ಪ್ರಗತಿ ಸಾಧಿಸಿರುವುದು ನಿಜಕ್ಕೂ ಸಂತಸ ತಂದಿದೆ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢತೆಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು, ರೋಟರ್ಯಕ್ಟ್ ಕ್ಲಬ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಅರಿವು ಕಾರ್ಯಕ್ರಮವು ಗುರುವಾರ ನೆರವೇರಿಸಿಲಾಯಿತು.  ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಎಸ್. ರಾಜು ಪೂಜಾರಿ ಅವರು ನೆರವೇರಿಸಿ ಮಾತನಾಡಿ, ಮುಂದಿನ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಲ್ಲಿ ಭ್ರಷ್ಟಾಚಾರ ವಿರೋಧಿ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಬೇಕಾಗಿದೆ ಆ ನಿಟ್ಟಿನಲ್ಲಿ ಇಂಥಹ ಕಾರ್ಯಕ್ರಮ ಅರ್ಥಪೂರ್ಣ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಇನ್ಸ್ಪೆಕ್ಟರ್ ಲೋಕಾಯಕ್ತರಾದ ರಾಜೇಂದ್ರ ನಾಯಕ್ ಅವರು ಭ್ರಷ್ಟಾಚಾರ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮದ ಬಗ್ಗೆ ಸುದೀರ್ಘವಾದ ಮಾಹಿತಿ ನೀಡಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಸಭಾ ಅಧ್ಯಕ್ಷತೆಯನ್ನು ರೋಟರಿ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅವರು ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡುಹಗಲೇ ಲಪಟಾಯಿಸಿದ ಘಟನೆ ತಾಲೂಕಿನ ತಲ್ಲೂರು ಪೇಟೆಯಲ್ಲಿ ನಡೆದಿದೆ. ಕೆಂಚನೂರು ಗ್ರಾಮದ ಕೆ. ಗುಂಡು ಶೆಟ್ಟಿ ಎಂಬುವವರು ತಲ್ಲೂರಿನ  ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‌ಗೆ ತೆರಳಿ 2.5 ಲಕ್ಷ ರೂ. ನಗದನ್ನು ಡ್ರಾ ಮಾಡಿಕೊಂಡಿದ್ದರು. ಅದರಲ್ಲಿ 2 ಲಕ್ಷ ರೂ.ಗಳನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದರು. ಕಾರನ್ನು ತಲ್ಲೂರಿನ ಎಂಡಿ ಫ್ಲ್ಯಾಟಿನ ಎದುರು ಮುಖ್ಯರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಅದೇ ಫ್ಲಾಟ್‌ನಲ್ಲಿರುವ ಮನೆಗೆ ಹೋಗಿದ್ದರು. ಸಂಜೆ ಕಾರಿನ ಬಳಿ ಬಂದಾಗ ಎಡಬದಿಯ ಬಾಗಿಲ ಗಾಜು ಒಡೆದಿರುವುದು ಕಂಡುಬಂದಿದೆ. ಬಾಗಿಲು ತೆರೆದು ನೋಡಿದಾಗ ಡ್ಯಾಶ್‌ ಬೋರ್ಡ್‌ನಲ್ಲಿಟ್ಟಿದ್ದ ನಗದು ಕಳವಾಗಿತ್ತು. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ .ಪಿ. ಶೆಟ್ಟಿ  ರಾಜ್ಯಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯಾದಗಿರಿ ಜಿಲ್ಲೆ ಶಹಾಪುರದ ದಿಗ್ಗಿ ರೋಡ್ ಸರಕಾರಿ ಮಾದರಿ ಪದವಿ ಪೂರ್ವ ಕಾಲೇಜು ದಿಗ್ಗಿ ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ (ನ.4 ಮತ್ತು ನ.5) ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಸಂಗೀತಾ . ಪಿ. ಶೆಟ್ಟಿ ದಂಪತಿಯ ಪುತ್ರಿ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್…

Read More