Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14  ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಮದರ್ ತೆರೇಸಾ ವಿದ್ಯಾ ಸಂಸ್ಥೆಯ 7ನೇ ತರಗತಿಯ ಕ್ರೀಡಾಪಟು ಸೃಜನ್‌ಗೆ ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಡೆದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ ಪಡೆದು, ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಹೆಸರು ತಂದಿರುವ ಈ ಅತ್ಯುತ್ತಮ ಆಟಗಾರನಿಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭಕೋರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್ ಅವರಿಗೆ ಪ್ಲಸ್ ನೈನ್ ಒನ್ ಮೀಡಿಯಾ ಬೆಂಗಳೂರು ಅವರು ಆಯೋಜಿಸಿದ್ದ ಒಂಬತ್ತನೇ ಉನ್ನತ ಶಿಕ್ಷಣ ನಾವೀನ್ಯತೆ ಮತ್ತು ತಂತ್ರಜ್ಞಾನ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಂಸ್ಥಿಕ ಶ್ರೇಷ್ಠತೆಗಾಗಿ ವರ್ಷದ ಪ್ರಾಂಶುಪಾಲರು ಎಂದು ಗುರುತಿಸಲ್ಪಟ್ಟು ಗೌರವಿಸಲ್ಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ ಗ್ರಾಮದ ರಾ.ಹೆ. 766Cರ ಗೋಳಿಮರ ಕ್ರಾಸ್ ಬಳಿ ಕಿಯಾ ಸಲೂನ್‌ ಕಾರಿಗೆ, ಸುಜುಕಿ ಸ್ಕೂಟರ್‌ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿದ್ದರೇ, ಸಹಸವಾರೆ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಬ್ರಹ್ಮಾವರದಿಂದ ಕೊಲ್ಲೂರು ಮಾರ್ಗವಾಗಿ ಗೋಳಿಹೊಳೆಯಲ್ಲಿರುವ ಅವರ ಸಂಭಂದಿಕರ ಮನೆಗೆ ಕುಟುಂಬಿಕರು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಕೊಲ್ಲೂರು ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಸುಜುಕಿ ಸ್ಕೂಟರ್‌ ಸವಾರ ಸುಭಾನ್‌ ಗೋಳಿಮರ ಕ್ರಾಸ್ ಬಳಿ ತನ್ನ ಸ್ಕೂಟರನ್ನು ತೀರ ಬಲ ಬದಿಗೆ ಚಲಾಯಿಸಿ ಫಿರ್ಯಾಧಿದಾರರ ಕಾರಿಗೆ ಎದುರಿನಿಂದ ಗುದ್ದಿದ್ದ ಪರಿಣಾಮ ಸ್ಕೂಟರ್‌ ಸವಾರ ಮತ್ತು ಸಹಸವಾರ ಇಬ್ಬರು ರಸ್ತೆಗೆ ಬಿದ್ದಿದ್ದರು. ಸವಾರ ಹೆಲ್‌ ಮೇಟ್‌ ಧರಿಸಿದ್ದು ಆತನ ಕಾಲು ಮತ್ತು ಭುಜಕ್ಕೆ ಪೆಟ್ಟಾಗಿದ್ದು ಹಾಗೂ ಸಹ ಸವಾರಳಿಗೆ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿರುತ್ತದೆ. ಇಬ್ಬರನ್ನೂ ಸ್ಥಳೀಯರು ಉಪಚರಿಸಿ 108 ಅಂಬುಲೆನ್ಸ್ ಮೂಲಕ ಕುಂದಾಪುರ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಅಧ್ಯಕ್ಷರಾಗಿ ಕೇಶವ ದೇವಾಡಿಗ ಬಾಕಿಮನೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಚ್ಛತಾ ಅಭಿಯಾನ ಸಂಘ ಸಂಸ್ಥೆಗಳಿಗೆ ಸೀಮಿತಗೊಳ್ಳದೆ ಪ್ರತಿ ಮನೆಯಲ್ಲೂ ಇದರ ಬಗ್ಗೆ ಜಾಗೃತಿ ಮೊಳಗಬೇಕು. ಆ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ನಿರ್ದೇಶಕ ಜಿ. ತಿಮ್ಮ ಪೂಜಾರಿ ಕರೆ ನೀಡಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ,ಗೀತಾನಂದ ಟ್ರಸ್ಟ್ ಪಡುಕರೆ, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಸಿನಿಯರ್ ಕೋಟ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಸಂಯೋಜನೆಯೊಂದಿಗೆ 278ನೇ ಭಾನುವಾರದ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರು ಅರಿತು ಅದರ ಬಗ್ಗೆ ಜಾಗೃತರಾಗುವುದು ಒಳಿತು ಎಂದು ಪಂಚವರ್ಣ ನಿರಂತರ ಸಾಮಾಜಿಕ ಹಾಗೂ ಸ್ವಚ್ಛತಾ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕೋಟದ ಮೂಡುಗಿಳಿಯಾರು ರಸ್ತೆ, ಗಿಳಿಯಾರು ಶಾಲಾ ವಠಾರ ಭಾಗದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು. ಕಾಲೇಜಿನ ಐಕ್ಯೂಎಸಿ ಸಂಯೋಜಕಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಅತಿಥಿಗಳನ್ನು ಪರಿಯಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಸ್ವಾಗತಿಸಿ, ನಿರೂಪಿಸಿದರು. ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಕಟ್ಟಿಗೆ ತರಲೆಂದು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ನರಸಿಂಹ ಯಾನೆ ಸುರೇಶ್ (45) ಮೃತಪಟ್ಟವರು. ನ.1ರಂದು ಸಂಜೆ ಕಟ್ಟಿಗೆ ತರಲೆಂದು ಹೊರ ಹೋಗಿದ್ದು ಕತ್ತಲಾದರೂ ಮನೆಗೆ ವಾಪಸಾಗಿರಲಿಲ್ಲ. ಹುಡುಕಾಡುವಾಗ ಯಡ್ತರೆ ಗ್ರಾಮದ ಕಲ್ಲು ಹೊಳೆಯಲ್ಲಿ ತೇಲುತ್ತಿರುವ ರೀತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು. ಕೂಡಲೆ ಅವರನ್ನು ಹೊಳೆಯಿಂದ ಮೇಲಕ್ಕೆತ್ತಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರು ನಡೆಸಿದ ಕಲಾ ಪ್ರತಿಭೋತ್ಸವ 2025-26ರ ಜಿಲ್ಲಾ ಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನವು ಮನಸಿನ ಏಕಾಗ್ರತೆಗೆ ಅದ್ಭುತ ಔಷಧಿ ಎಂದು ಸೌಕೂರು ದೇವಸ್ಥಾನದ ಮೊಕ್ತೇಸರರು ಕಿಶನ್ ಹೆಗ್ಡೆ ಪಳ್ಳಿ ಹೇಳಿದರು ಅವರು ಭಾನುವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 50ನೇ ವರ್ಷದ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಪ್ರಯುಕ್ತ ನಡೆದ ‘ಬಂಗಾರದ ಹೆಜ್ಜೆ’ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಯ ಕಳೆಯಲು ಯಕ್ಷಗಾನ ಕಲಿಯಬೇಡಿ. ಎಲ್ಲಾ ಯೋಗಾಸನಗಳ ಪರಿಚಯ ಯಕ್ಷಗಾನದಿಂದ ಸಿಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯ ಮತ್ತು ವ್ಯಾಯಾಮವನ್ನು ಕೊಡುತ್ತದೆ. ಅಂತೆಯೇ ಮಾನಸಿಕವಾಗಿ ಆತ್ಮ ವಿಶ್ವಾಸ ನೀಡುವುದಲ್ಲದೆ ದೃಢರಾಗಲೂ ಸಹಕಾರಿ. ಹಾಗಾಗಿ ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ ಮಾತನಾಡಿ, ರಾಮಾಯಣ ಮತ್ತು ಮಹಾಭಾರತದ ಕಥೆಗಳನ್ನು ಆಡುಭಾಷೆಯ ರೂಪದಲ್ಲಿ ಜನರಿಗೆ ಅರ್ಥವಾಗುವಂತೆ ಸರಳವಾಗಿ ಉತ್ತಮ ಸಂದೇಶ ನೀಡುವ ಕಲೆ ಯಕ್ಷಗಾನ. ಅದನ್ನು ಉಳಿಸಿ ಬೆಳೆಸುವ ಈ ಪ್ರಯತ್ನ ನಿಜಕ್ಕೂ ಶ್ಲಾಘನೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ  ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ. ಅವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More