ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿಕೊಳ್ಳಲಾಯಿತು. ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಅರಿತರು. ಈ ಕೈಗಾರಿಕಾ ಭೇಟಿಯ ಉಸ್ತುವಾರಿಯನ್ನು ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರೆ ಉಪನ್ಯಾಸಕರು ವಹಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಜನರಿಗೆ ನೀಡುವ ಕೌಶಲ್ಯ ತರಬೇತಿಗಳಲ್ಲಿ ಗೊಂಬೆಗಳನ್ನು ತಯಾರಿಸುವ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಉದ್ಘಾಟಿಸಿ ಫಲಾನುಭವಿಗಳಿಗೆ ಅತ್ಯುತ್ತಮವಾದ ತರಬೇತಿ ನೀಡುವ ಜಿಲ್ಲಾ ಮಟ್ಟದ ತರಬೇತಿ ನೀಡುವವರು ನಮ್ಮೊಂದಿಗಿದ್ದು, ತರಬೇತಿ ಸಂಪೂರ್ಣ ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು. ಹಾಗೂ ರುಡ್ಸೆಟ್ ಸಂಸ್ಥೆಯಲ್ಲಿ ಕೃಷಿ, ಸೇವೆ, ಉತ್ಪನ್ನ ಹಾಗೂ ವಿದ್ಯಾಮಶೀಲತಾಭಿವೃದ್ಡಿ ತರಬೇತಿ ನೀಡುತ್ತಿದ್ದು ಗ್ರಾಮೀಣ ಪ್ರದೇಶದ ಜನರಿಗೆ ಸ್ವ ಉದ್ಯೋಗದಲ್ಲಿ ಆಸಕ್ತರಿರುವವರಿಗೆ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗ ನಡೆಸಲು ಅವಕಾಶವಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ವಿಶ್ವಕರ್ಮ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾರಾಣಿ ಯು ಕೇಂದ್ರ ಸರ್ಕಾರದ ಯೋಜನೆಯನ್ನ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮಾಹಿತಿ ನೀಡಿದರು. ಹಾಗೂ ಸರಕಾರದ ಯೋಜನೆಗಳು ಜನಸಾಮಾನ್ಯರಿಗಾಗಿ ರಚಿಸಲಾಗಿದೆ. ಫಲಾನುಭವಿಗಳು ತರಬೇತಿಯನ್ನು ಸದುಪಯೋಗ ಪಡೆದುಕೊಳ್ಳಬೇಕಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು ಹಾಗು ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫೇಸ್ ಬುಕ್ ಮೂಲಕ ಸಂದೇಶ ಕಳುಹಿಸಿ, ಮೊಬೈಲ್, ಬ್ಯಾಗ್ ಹಾಗೂ 50 ಸಾವಿರ ಡಾಲರ್ (56 ಲಕ್ಷ ರೂ.) ನೀಡುವುದಾಗಿ ಸಂದೇಶ ಹಾಕಿ, ತನ್ನಿಂದ ಹಂತ ಹಂತವಾಗಿ ಒಟ್ಟಾರೆ 11,92,500 ರೂ. ಪಡೆದು ಯಾರೋ ಸೈಬರ್ ವಂಚಕರು ವಂಚಿಸಿರುವುದಾಗಿ ಕೋಟೇಶ್ವರ ಗ್ರಾಮದ ಹೊಸ ಬಡಾಕೇರಿ ಹೂವಿನಕೆರೆ ನಿವಾಸಿ ರಮೇಶ ಅವರ ಪತ್ನಿ ಅಭಿನಯ (40) ದೂರು ನೀಡಿದ್ದಾರೆ. ನಾನು ಗೃಹಿಣಿಯಾಗಿದ್ದು, ಕಳೆದ ಮೇ ಮೊದಲ ವಾರದಲ್ಲಿ ನನಗೆ ಡೆನಿಯಲ್ ಮೈಕಲ್ ಎಂಬುವರಿಂದ ಫೇಸ್ ಬುಕ್ ಖಾತೆಗೆ ಗುಡ್ ಮಾರ್ನಿಂಗ್ ಅನ್ನುವ ಸಂದೇಶ ಬಂದಿದ್ದು, ಆ ಬಳಿಕ ಒಂದು ಮೊಬೈಲ್, ಬ್ಯಾಗ್, 50 ಸಾವಿರ ಡಾಲರ್ ಗಿಫ್ಟ್ ರೂಪದಲ್ಲಿ ಮನೆಗೆ ಕಳುಹಿಸುವುದಾಗಿ ಸಂದೇಶ ಬಂದಿದೆ. ಆ ಹಣ, ಗಿಫ್ಟ್ ಎಲ್ಲ ಮುಂಬಯಿಯಲ್ಲಿದ್ದು, ಅದು ನಿಮ್ಮ ಮನೆಗೆ ಬರಬೇಕಾದರೆ 50 ಸಾವಿರ ರೂ. ಕಳುಹಿಸಿ ಎಂದಿದ್ದಕ್ಕೆ ನಾನು ಮೇ 16ರಂದು 5 ಸಾವಿರ ರೂ., ಮತ್ತೆ 25 ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ 17 ದಿನಗಳಿಂದ ಇಲ್ಲಿನ ಆಡಳಿತಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನಿರತ ಸ್ಥಳಕ್ಕೆ ರಾಜ್ಯದ ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಮಂಕಾಳ ವೈದ್ಯ ಭೇಟಿ ಮಾಡಿ ಚರ್ಚಿಸಿದರು. ಅವರು ನಂತರ ಮಾತನಾಡಿ, ಈ ಭಾಗದ ರೈತರ ಹೋರಾಟ ನ್ಯಾಯ ಸಮ್ಮತವಾಗಿದೆ. ಜಿಲ್ಲಾಧಿಕಾರಿಗಳು ಕಳಿಸಿರುವ ವರದಿಯನ್ನು ಆಧರಿಸಿ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ರೈತರ ಪರ ಇರುವುದರಿಂದ ಖಂಡಿತ ನ್ಯಾಯ ದೊರಕುತ್ತದೆ ಎಂದರು. ಹೀಗಾಗಿ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಯಿಸಿದ ರೈತರು ನಮ್ಮ ಧರಣಿ ನ್ಯಾಯಪರ ಆಗ್ರಹ ಬಿಟ್ಟರೆ ಇತರ ಯಾವುದೇ ಉದ್ದೇಶಗಳಿಲ್ಲ.ಹೀಗಾಗಿ ಸಚಿವಾಲಯ, ಸರಕಾರ ಹಾಗೂ ಜಿಲ್ಲಾಡಳಿತದಿಂದ ಲಿಖಿತ ಉತ್ತರ ದೊರಕಿದರೆ ಧರಣಿ ಕೈಬಿಡಲು ಸಿದ್ದರಿದ್ದೇವೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ಅವರು ಶುಭ ಹಾರೈಸಿದರು. ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ‘ ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆʼ ಎಂದು ಹೇಳಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸ ಮೆಮೋರಿಯಲ್ ಸ್ಕೂಲ್ನ ಪ್ರಾಥಮಿಕ ವಿಭಾಗದ (3, 4 ಮತ್ತು 5ನೇ ತರಗತಿ) ವಿದ್ಯಾರ್ಥಿಗಳಿಗೆ ಅವರಲ್ಲಿ ಅಡಗಿರುವ ಸುಪ್ತ ಕಲಾ ಪ್ರತಿಭೆಯನ್ನು ಹೊರಹಾಕುವ ಉದ್ದೇಶದಿಂದ “Teresians Got Talent – Shine Beyond Limits” ಎಂಬ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಡಳಿತ ನಿರ್ದೇಶಕರು ಹಾಗೂ ತೀರ್ಪುಗಾರರು ನಡೆಸಿದರು. ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಯಕ್ಷ ಸಿರಿ ಶಂಕರನಾರಾಯಣದ ಕಿಶೋರ್ ಕುಮಾರ್ ಅರೂರ್, ಸಾಂಸ್ಕೃತಿಕ ಮತ್ತು ಭಾಷಾ ನಿರ್ದೇಶಕಿ ಅಲಿಟಾ ಡೇಸಾ ಹಾಗೂ ನತ್ಯ ಗುರುಗಳಾದ ಜಗದೀಶ್ ಬನ್ನಂಜೆ ಉಪಸ್ಥಿತರಿದ್ದರು. ತೀರ್ಪುಗಾರರಾದ ಕಿಶೋರ್ ಕುಮಾರ್ ಅವರು ಮಾತನಾಡಿ, “ಇಂತಹ ಅವಕಾಶಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುತ್ತವೆ ಮತ್ತು ಭವಿಷ್ಯದಲ್ಲಿ ದೊಡ್ಡ ಸಾಧನೆ ಮಾಡಲು ಪಥವನ್ನು ಸುಲಭಗೊಳಿಸುತ್ತವೆ. ಇಂತಹ ಸೃಜನಾತ್ಮಕ ವೇದಿಕೆಯನ್ನು ಸೃಷ್ಟಿಸಿರುವುದು ಸಂಸ್ಥೆಯ ಹೆಗ್ಗಳಿಕೆ” ಎಂದರು. ಮಕ್ಕಳು ತಮ್ಮ ಸೃಜನಶೀಲತೆಯೊಂದಿಗೆ ನೃತ್ಯ, ಸಂಗೀತ, ನಾಟಕ, ವಾದ್ಯಗಾನ ಇತ್ಯಾದಿ ವಿಭಿನ್ನ ಕಲಾರೂಪಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಪ್ರತಿಯೊಂದು ಪ್ರದರ್ಶನವೂ ಮಕ್ಕಳಲ್ಲಿರುವ ಅಸಾಧಾರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರರು ಮೀನುಗಾರಿಕಾ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ದವಾಗಿದೆ. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುದಾನವನ್ನು ಸರ್ಕಾರವು ಕಲ್ಪಿಸಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ ವೈದ್ಯ ತಿಳಿಸಿದರು. ಅವರು ಮಲ್ಪೆಯ ಮೀನುಗಾರಿಕಾ ಬಂದರು ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಮೀನುಗಾರಿಕೆ ಸೇರಿದಂತೆ ಅದಕ್ಕೆ ಪೂರಕವಾಗಿರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದ 20 ಸಾವಿರಕ್ಕೂ ಹೆಚ್ಚು ಜನ ಇಲ್ಲಿನ ಮೀನುಗಾರಿಕಾ ಚಟುವಟಿಕೆಗಳನ್ನು ಅವಲಂಬಿಸಿದ್ದಾರೆ. ಮಲ್ಪೆಯು ದೇಶದಲ್ಲಿಯೇ ಅತಿ ಹೆಚ್ಚು ಮೀನುಗಾರಿಕಾ ಉತ್ಪನ್ನಗಳನ್ನು ಮಾಡುವ ಬಂದರಾಗಿದ್ದು ಇಲ್ಲಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡುವುದರೊಂದಿಗೆ ಇಲ್ಲಿನ ಅಭಿವೃದ್ದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿರುತ್ತದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, ಕಾರ್ಕಳ-ಹೆಬ್ರಿ 08258-298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು. ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್ ಟಾಪ್ ನಲ್ಲಿ https://kscbcseldeclaration.karnataka.gov.in ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ಎನ್ಎಸ್ಎಸ್ ಸ್ವಯಂಸೇವಕರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ಉಪ-ಪ್ರಾಂಶುಪಾಲ ಹಾಗೂ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಪದವಿ ಶಿಕ್ಷಣ ಸಂದರ್ಭದಲ್ಲಿ ಅನುಭವದ ಮೂಲಕ ಬದುಕಿನ ಶಿಕ್ಷಣ ಪಡೆಯಲು ಇರುವ ಮಹತ್ವದ ವೇದಿಕೆ ರಾಷ್ಟ್ರೀಯ ಸೇವಾ ಯೋಜನೆ. ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ದೇಶಪ್ರೇಮದ ಭಾವನೆಗಳನ್ನು ಎನ್.ಎಸ್.ಎಸ್. ಸ್ವಯಂಸೇವಕರು ಯೋಜನೆಯ ಮೂಲಕ ತಿಳಿಯಬಹುದು ಎಂದರು. ಇದೇ ಸಂದರ್ಭ ರಾಷ್ಟ್ರೀಯ ಸೇವಾ ಯೋಜನೆಯ ಹುಟ್ಟು, ಬೆಳವಣಿಗೆ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಮೌಲ್ಯಗಳನ್ನು ಕಟ್ಟಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರ್ಮಿಟ್ ಹೊಂದಿದ್ದರೂ ಕೆಎಸ್ಆರ್ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆ ಇರುವ ಮಾರ್ಗದ ನಿಲ್ದಾಣವನ್ನು ಹೊರತುಪಡಿಸಿ ಬಾಕಿ ಮಾರ್ಗಗಳಿಗೆ ಬಸ್ ಓಡಿಸುವ ವ್ಯವಸ್ಥೆ ಮಾಡಿ. ತಡೆ ನೆಪವೊಡ್ಡಿ ಸಾರ್ವಜನಿಕ ಸೇವೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಸಭೆಯಲ್ಲಿಯೂ ಕೆ.ಎಸ್.ಆರ್.ಟಿ.ಸಿ ಸಮಸ್ಯೆ ಬಗ್ಗೆ ಚರ್ಚಿಸಲಾಗುತ್ತಿದ್ದು, ಕಾರಣಗಳನ್ನಷ್ಟೇ ನೀಡುತ್ತಾ ಬರಲಾಗುತ್ತಿದೆ. ಆದರೆ ಯಾವೊಂದು ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ವಿಳಂಬ ಧೋರಣೆ ಕೈಬಿಟ್ಟು ಬಸ್ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಿ ಎಂದವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿಗಳು…
