Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8.30ಕ್ಕೆ ಆರಂಭವಾಗಲಿದ್ದು, 8.30 ರಿಂದ 8.50 ರ ವರೆಗೆ ದೇಶ ಭಕ್ತಿಗೀತೆ ಕಾರ್ಯಕ್ರಮ, ನಂತರ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. ಬೆ. 9 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ – ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕರಾವಳಿಯ ಜನರ ಜೀವನಾಡಿಯಾದ ತೆಂಗು ಬೆಳೆಯು ಬೇರಿನಿಂದ ಹಿಡಿದು ನಾರಿನವರೆಗೆ ಸರ್ವ ರೀತಿಯಲ್ಲೂ ಉಪಯೋಗಿಯಾಗಿ ಕಲಿಯುಗದ ಕಲ್ಪವೃಕ್ಷವೆನಿಸಿಕೊಂಡಿದೆ. ತೆಂಗು ಬೆಳೆಗಾರರ ಸರ್ವತೋಮುಖ ಏಳಿಗೆಗಾಗಿ ಹಮ್ಮಿಕೊಂಡ ವಿಶಿಷ್ಟ ಮಾಹಿತಿ ಕಾರ್ಯಕ್ರಮದಿಂದಾಗಿ ಕಲ್ಪವೃಕ್ಷವಾದ ತೆಂಗು ಬೆಳೆಗೆ ಹೊಸ ಕಾಯಕಲ್ಪ ದೊರೆತ ಉಡುಪಿ ಜಿಲ್ಲೆಯು ತಮಿಳುನಾಡು ಮತ್ತು ಕೇರಳವನ್ನು ಹಿಂದಿಕ್ಕಿ ದೇಶಕ್ಕೇ ಮಾದರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ತೆಂಗು ಅಭಿವೃದ್ದಿ ಮಂಡಳಿ ಕೊಚ್ಚಿ, ತೋಟಗಾರಿಕೆ ಇಲಾಖೆ ಉಡುಪಿ, ಕೃಷಿ ಇಲಾಖೆ, ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ರಿ. ಉಡುಪಿ ಜಿಲ್ಲೆ, ಉಡುಪಿ ಕಲ್ಪರಸ ಕೊಕೊನಟ್ & ಆಲ್ ಸ್ಪೈಸಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತೆಂಗು ಅಭಿವೃದ್ದಿ ಮಂಡಳಿಯ ಸ್ಥಾಪನಾ ದಿನಾಚರಣೆ ಹಾಗೂ ತೆಂಗು ಬೆಳೆ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಛತ್ತೀಸ್‌ಗಢದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ವಿಶೇಷ ಮುತುವರ್ಜಿ ವಹಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿದ್ದ ಸಾಯಿರಾಜ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ನೀಡಿದ್ದಾರೆ. ‘ರೋಲ್ ಆಫ್ ಕಮ್ಯುನಿಕೇಷನ್ ಇನ್ ಎನ್ಹ್ಯಾನ್ಸಿಂಗ್ ಎನ್ವಿರಾನ್ಮೆಂಟಲ್ ಲಿಟರೆಸಿ: ಎನ್ ಎಸ್ಪ್ಲೋರಟೋರಿ ಸ್ಟಡಿ ಇನ್ ಕರ್ನಾಟಕ’ ಎಂಬ ವಿಷಯದಲ್ಲಿ ಮಂಡಿಸಿದ ಪ್ರಭಂದಕ್ಕೆ ಈ ಪದವಿ ಲಭಿಸಿದೆ. ಅವರು ಉ.ಜಿ.ಸಿ.ಜೆ ಆರ್ ಎಫ್ ಸ್ಕಾಲರ್ಷಿಪ್‌ಗೆ ಭಾಜನರಾಗಿದ್ದರು. ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದ ಪ್ರಾಧ್ಯಾಪಕರಾದ ವಾಹಿನಿ ಅರವಿಂದ್ ಅವರು ಮಾರ್ಗದರ್ಶನ ಮಾಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕು ನೇತೃತ್ವದಲ್ಲಿ ಇದೇ ಜ.25ರಂದು ಸಾಸ್ತಾನದಲ್ಲಿ ಬೃಹತ್ ಹಿಂದೂ ಸಂಗಮ ಏರ್ಪಡಿದ್ದು ಈ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಹಾಗೂ ಪೋಸ್ಟರ್ ಅನಾವರಣ ಕಾರ್ಯಕ್ರಮವು ಭಾನುವಾರ ಪಾಂಡೇಶ್ವರ ನಂದಿಕೇಶ್ವರ ದೇಗುಲದಲ್ಲಿ ಜರಗಿತು. ಈ ಕುರಿತು ಮಾತನಾಡಿದ ಸಮಿತಿಯ ಪ್ರಮುಖರಾದ ಸುರೇಂದ್ರ ಕೋಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹಿಂದೂ ಸಮುದಾಯದಲ್ಲಿ ಸಾಮರಸ್ಯದ ಜೀವನ ಒಂದೇ ಐಕ್ಯ ಮಂತ್ರ ಉದ್ದೇಶದಿಂದ ಹಿಂದೂ ಜಾಗೃತಿ ಸಂಗಮವನ್ನು ಪಕ್ಷಭೇದ ಮರೆತು ಎಲ್ಲೆಡೆ ಆಯೋಜಿಸಲಾಗುತ್ತಿದೆ. ಈ ಹಿನ್ನಲ್ಲೆಯಲ್ಲಿ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಿಂದ ಬೃಹತ್ ಶೋಭಯಾತ್ರೆ ಕೈಗೊಂಡು ಸಾಸ್ತಾನದ ಕಾರ್ತಿಕೇಯ ಎಸ್ಟೇಟ್‌ನಲ್ಲಿ ಹಿಂದೂ ಸಂಗಮ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನೊರ್ವ ಪ್ರಮುಖರಾದ ಪಂಜು ಪೂಜಾರಿ ಯಡಬೆಟ್ಟು ಮಾತನಾಡಿ, ರಾಜಕೀಯ ಹಿತಾಸಕ್ತಿ ಬದಿಗಿರಿಸಿ ಹಿಂದೂ ಸಮುದಾಯಯವನ್ನು ಒಗ್ಗೂಡಿಸುವ ಜತೆಗೆ ಜಾಗೃತ ಸಮಾಜಕ್ಕೆ ಮುನ್ನುಡಿ ಇಡಲಿದೆ ಎಂದು ಎಲ್ಲರೂ ಏಕ ಮನಸ್ಸಿನಿಂದ ಭಾಗಿಯಾಗಲು ಕರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ–ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Merger and Acquisition of Commercial Banks: A Study with Special Reference to the Merger of SBI and its Associates” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್‌ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಲಕ/ಪೋಷಕ-ಶಿಕ್ಷಕರ ಸಮಾಲೋಚನಾ ಸಭೆಯನ್ನು ನಡೆಸಲಾಗಿತ್ತು. ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಪಾಲಕ/ಪೋಷಕರಿಗೆ ಮಾಹಿತಿ ನೀಡಲು ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಚರ್ಚಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಆರಂಭಿಸಲಾಗಿರುವ ದೈಹಿಕ ಮತ್ತು ಮಾನಸಿಕ ದೃಡತೆಯನ್ನು ಹೆಚ್ಚಿಸುವ ಚಟುವಟಿಕೆಗಳ ಕುರಿತು ಪಾಲಕ-ಪೋಷಕರಿಗೆ ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಲಾಗಿತ್ತು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಾದ ಗಣೇಶ್ ನಾಯಕ್ ಅವರು ದೈಹಿಕ ಕ್ಷಮತೆಯನ್ನು ಶಾಲೆಯಲ್ಲಿ ಪರೀಕ್ಷಿಸುವ ಕ್ರಮವನ್ನು ಆರಂಭಿಸಿದ ಕುರಿತು ತಿಳಿಸಿದರು. ನಂತರ ಎಸ್.ಜಿ.ಎಫ್.ಐ (ಭಾರತದ ಶಾಲಾ ಕ್ರೀಡಾ ಫೆಡರೇಶನ್)ಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳನ್ನು ವಿವರಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಹಲವು ಪಾಲಕರು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಮುಕ್ತವಾಗಿ ತಮ್ಮ ಅನಿಸಿಕೆ ಹಾಗೂ ಸಲಹೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಸುಜಾತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಗ್ರಾಮೋತ್ಸವಗಳನ್ನು ಆಯೋಜಿಸಬೇಕೆಂಬ ಕಲ್ಪನೆ ಸಾಕಾರಗೊಂಡಿದ್ದು, ಪ್ರತೀ ಗ್ರಾಮಗಳಲ್ಲಿಯೂ ಇದು ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲಾ ಇಲಾಖೆಗಳು ಗ್ರಾಮಮಟ್ಟಕ್ಕೆ ಬಂದು ಜನರನ್ನು ಸ್ಪಂದಿಸುತ್ತಿದ್ದು, ಗ್ರಾಮದ ಜನರು ಎಲ್ಲವನ್ನೂ ಒಂದೇ ಸೂರಿನಡಿ ನೋಡುವಂತಹ ಸಾರ್ಥಕತೆ ಕಾಣುತ್ತಿದ್ದಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಕೊಲ್ಲೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಬುಧವಾರ ಇಲ್ಲಿನ ಸ.ಹಿ.ಪ್ರಾ ಶಾಲಾ ಆವರಣದಲ್ಲಿ ನಡೆದ ಕೊಲ್ಲೂರು ಗ್ರಾಮೋತ್ಸವದಲ್ಲಿ ಮಾತನಾಡಿದರು. ಸಂಜೀವಿನಿ ಸಂಘ ಎನ್ನುವುದು ಮುಂದಿನ ದಿನಗಳಲ್ಲಿ ಒಂದು ಹೊಸ ಕ್ರಾಂತಿಯನ್ನು ಸೃಷ್ಠಿಸಲಿದೆ. ರಾಮ್‌ಜೀ ಯೋಜನೆಯಲ್ಲಿ ಬರುವ ಅತೀ ಹೆಚ್ಚು ವ್ಯವಸ್ಥೆಗಳನ್ನು ಸಂಜೀವಿನಿ ಹೆಸರಿನಲ್ಲಿ ನೀಡಲಾಗುತ್ತಿದೆ. ಸಂಜೀವಿನಿ ಕೇವಲ ಹಣಕಾಸಿನ ವ್ಯವಹಾರ ಎಂದು ಕೆಲವರು ತಿಳಿದುಕೊಂಡಿರಬಹುದು ಆದರೆ ಇದೊಂದು ಇತರೇ ಆದಾಯದ ಸ್ವರೂಪವಾಗಿದ್ದು, ಗ್ರಾಮೀಣ ಜೀವನೋಪಾಯ ಇಲಾಖೆಯಾಗಿದೆ. ಮುಂದಿನ ದಿನಗಳಲ್ಲಿ ಸಂಜೀವಿನಿ ಸಂಘದವರೇ ಗ್ರಾಮೋತ್ಸವವನ್ನು ಆಯೋಜಿಸಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಪ್ರಸನ್ನಾ ಶರ್ಮಾ ಉದ್ಘಾಟಿಸಿದರು. ಇಬ್ಬರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಜನ ಸ್ಥಿತಪ್ರಜ್ಞರು, ಕಲಾಪ್ರಿಯರು ಎಂಬುದಕ್ಕೆ ಇಂದಿನ ಇನಿದನಿ ಸಂಗೀತ ಸಂಜೆ ಸಾಕ್ಷಿಯಾಗಿದೆ. ವರ್ಷದಿಂದ ವರ್ಷಕ್ಕೆ ಸಂಗೀತ ಪ್ರೇಮಿಗಳನ್ನು ಸಾಗರೋಪಾದಿಯಲ್ಲಿ ಸೆಳೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಈ ವರ್ಷ ಮೈದಾನ ತುಂಬಿದೆ. ಇನಿದನಿ ಕುಂದಾಪುರದ ಹೆಮ್ಮೆ ಎಂದು ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ನುಡಿದರು. ಅವರು ಇಲ್ಲಿನ ಬೋರ್ಡ್ ಹೈಸ್ಕೂಲು ಮೈದಾನದಲ್ಲಿ ಕಲಾಕ್ಷೇತ್ರ ಟ್ರಸ್ಟ್ ಭಾನುವಾರ ಹಮ್ಮಿಕೊಂಡ 14ನೇ ವರ್ಷದ ಇನಿದನಿ ಸಂಗೀತ ರಸಮಂಜರಿ ಹಳೆಯ ಚಲನಚಿತ್ರಗಳ ಗೀತಗಾಯನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ಣಾಟಕ ಬ್ಯಾಂಕ್‌ನ ಎಜಿಎಂ ರಮೇಶ್ ವೈದ್ಯ ಮಾತನಾಡಿ, ಇಡೀ ಇನಿದನಿ ರಾಜ್ಯದಲ್ಲೇ ಅತ್ಯಂತ ಗುಣಮಟ್ಟದ ಕಾರ್ಯಕ್ರಮವಿದು. ಮನತುಂಬಿ ಬಂದಿದೆ. ಜೀವನದ ಎಲ್ಲಾ ನೋವು ಮರೆಸುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಅತೀವ ಸಂತಸ ನೀಡಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಕಲಾಕ್ಷೇತ್ರದ ಜತೆಗಿರುತ್ತದೆ ಎಂದರು. ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಶುಭಹಾರೈಸಿ, ಒಮ್ಮೆ ಇನಿದನಿಯಲ್ಲಿ ಭಾಗವಹಿಸಿದವರು ರಸ ಘಳಿಗೆಯನ್ನು ಜೀವನದಲ್ಲಿ ಎಂದಿಗೂ ಮರೆಯಲಾರರು ಎಂದರು. ಪುಣೆ ಉದ್ಯಮಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮಕ್ಕಳಿಲ್ಲದೆ ಅನೇಕ ಸರಕಾರಿ ಶಾಲೆಗಳನ್ನು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದೊದಗುತ್ತಿದೆ. ಸರಕಾರ ಇಂದು ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆದರೂ ಸಹ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು ಅವರು ಇಲ್ಲಿನ ಕರ್ಕುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ 2025-26 ಹೊಂಗಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ ಗ್ರಾಮಸ್ಥರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಇಂದು ಆಂಗ್ಲ ಮಾಧ್ಯಮ ಶಾಲೆಗಳಿಗೆ ನಾವೇ ಹಣವನ್ನು ಕೊಟ್ಟು, ಶಿಕ್ಷಕರಿಗೆ ಸಂಬಳವನ್ನು ಕೊಟ್ಟು ಶಾಲೆಗಳನ್ನು ನಡೆಸುವಂತೆ ಮಾಡಿ ನಮ್ಮ ಮಕ್ಕಳನ್ನು ಅವರ ಶಾಲೆಗೆ ಕಳುಸುತ್ತೇವೆ, ಆದರೆ ಇಂದು ಸರಕಾರಿ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ ಬಹಳಷ್ಟು ಮೆರಿಟ್‌ನ ಶಿಕ್ಷಕರು ಬರುತ್ತಿದ್ದಾರೆ. ಆದರೆ…

Read More