Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ದಿನಗಳಲ್ಲಿ ಭಾವನಾತ್ಮಕ ಸಂಬಂಧಗಳು ದೂರ ಹೋಗುತ್ತಿವೆ. ಕೂಡು ಕುಟುಂಬಗಳು ನಾಶವಾಗುತ್ತಿದ್ದು, ಇದರಿಂದ ನಮ್ಮ ಸಂಸ್ಕೃತಿ, ಗುರುಕುಲ ಶಿಕ್ಷಣ ನಾಶವಾಗುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದೆ. ಹೀಗಾಗಿ ನಮ್ಮಲ್ಲಿ ಧನಾತ್ಮಕ ಚಿಂತನೆಗಳು ಬೆಳೆಯಬೇಕಿದೆ. ಪ್ರಕೃತಿ, ಸಂಸ್ಕೃತಿ ಉಳಿಸುವ ಕಾರ್ಯ ನಡೆಯಬೇಕು. ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸಂದರ್ಭ ಋಷಿ ಪರಂಪರೆಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಶ್ರೀ ಶಾರದಾ ಮಂಟಪದಲ್ಲಿ ನೂತನವಾಗಿ ನಿರ್ಮಿಸಲಾದ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ಗಂಗೊಳ್ಳಿಯಲ್ಲಿ ಕಳೆದ 49 ವರ್ಷಗಳಿಂದ ಶ್ರೀ ಶಾರದಾ ಮಹೋತ್ಸವವನ್ನು ನಡೆಸಿ ಸಮಾಜದಲ್ಲಿ ಒಗ್ಗಟ್ಟು ಮೂಡಿಸಿ, ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಹಿರಿಯರ ಮಾರ್ಗದರ್ಶನದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 30 ರಂದು  ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ ಪ್ರಸಾದ, ಸಮೀಕ್ಷಾ, ಅದಿತಿ ಮತ್ತು ಅಂಶು  ರಾಜ್ಯ ಮಟ್ಟದಲ್ಲಿ ನಡೆಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುಣಮಟ್ಟದ ಸರ್ಜಿಕಲ್ಸ್ ಪರಿಕರಗಳಿಗೆ ಹೆಸರಾದ ‘ಗಿರಿಜಾ ಸರ್ಜಿಕಲ್ಸ್’ ಇದರ ನೂತನ ಮಳಿಗೆಯ ಉದ್ಘಾಟನಾ ಸಮಾರಂಭವು ಅ.6ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಸಾನು ಪ್ಯಾಲೇಸ್ ನೆಲಮಹಡಿಯಲ್ಲಿ ನಡೆಯಲಿದೆ. ಕಡಿಮೆ ದರ, ಗುಣಮಟ್ಟದ ಪರಿಕರ, ಆಯ್ಕೆಗೆ ಅವಕಾಶ, ಮೊದಲಾದ ಗ್ರಾಹಕಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವುದರಿಂದ ಭಟ್ಕಳದಿಂದ ಮಂಗಳೂರು ತನಕದ ಗ್ರಾಹಕರನ್ನು ಹೊಂದಿರುವ ಗಿರಿಜಾ ಸರ್ಜಿಕಲ್ಸ್ ಮಂಗಳೂರು, ಉಡುಪಿ ಹಾಗೂ ಕುಂದಾಪುರದಲ್ಲಿ ಈಗಾಗಲೇ ಮಳಿಗೆಗಳನ್ನು ಹೊಂದಿದ್ದು, ಇದೀಗ ಮಂಗಳೂರಿನಲ್ಲಿ ಎರಡನೇ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.‌ ರಾಜು ಪೂಜಾರಿ ಅವರು ಮಂಗಳೂರು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆನಾಮಪತ್ರ ಸಲ್ಲಿಸಿದರು. ಪ್ರತ್ಯೇಕ ಎರಡು ನಾಮಪತ್ರ ಸಲ್ಲಿಸುವ ವೇಳೆ ರಾಜ್ಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮುಖಂಡರುಗಳಾದ ರಮಾನಾಥ ರೈ, ಜಯಪ್ರಕಾಶ್‌ ಹೆಗ್ಡೆ, ಐವನ್‌ ಡಿಸೋಜಾ, ಉಡುಪಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಉದಯಕುಮಾರ್‌ ಶೆಟ್ಟಿ, ಪ್ರಸಾದ್‌ ಕಾಂಚನ್‌ ಉಪಸ್ಥಿತರಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಗ್ರಾಪಂ, ತಾಪಂ ಸದಸ್ಯನಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಅನುಭವ ಹೊಂದಿದ್ದೇನೆ. ಸ್ಥಳೀಯ ಸಂಸ್ಥೆಗಳ ಎಲ್ಲಾ ಸಮಸ್ಯೆಗಳ ಅರಿವು ನನಗಿದೆ. ಆದ ಕಾರಣ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು,ಅ.3: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಕುಂದಾಪುರ ಸಹಾಯಕ ಕಮೀಷನರ್‌ ಮಹೇಶ್ಚಂದ್ರ , ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್‌ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ಬಾಬು ಶೆಟ್ಟಿ ಹಾಗೂ ಭಕ್ತ ರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ ಮತ್ತು ಎಸ್ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದರು. ಮಂಗಳವಾರ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಇಂದು ಮೂರು ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಂಗಳೂರು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಮುನ್ನ ಮಾತನಾಡಿದ ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ದೊಡ್ಡ ಜವಾಬ್ದಾರಿ ಸಿಕ್ಕಿದೆ. ಜವಾಬ್ದಾರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ , ಗುರುವಾರ ಧಾರ್ಮಿಕ ಕಾರ್ಯಕ್ರಮಳಿಗೆ ಚಾಲನೆ ನೀಡಲಾಯಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನಾಗರಾಜ ಶೆಟ್ಟಿ , ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕರಾದ ಕೃಷ್ಣ ಮೂರ್ತಿ ನಾವಡ , ಸದಸ್ಯರುಗಳಾದ ನಾಗರಾಜ ಗಾಣಿಗ, ಪ್ರಸನ್ನ, ಎಸ್. ಮಣಿಕಂಠ ಬೈಂದೂರು, ಶಂಕರ, ಅಣ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ದೇವಸ್ಥಾನದಲ್ಲಿ ನವೆಂಬರ್ 3 ರಿಂದ ನವೆಂಬರ್ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ  ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್  ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ . ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ವತಿಯಿಂದ “ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ, ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲೆ ವಿಭಾಗ, ಬಜಗೋಳಿಯಲ್ಲಿ ಅಕ್ಟೋಬರ್ 2ರಿಂದ 8 ರವರೆಗೆ ನಡೆಯುವ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವು ಜ್ಯೋತಿ ಪ್ರಜ್ವಲನದ ಮೂಲಕ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಉದ್ಯಮಿಯಾದ ಡಾ. ರವೀಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನವನ್ನು ಮೀಸಲಿಡಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ ಎಂದು ನುಡಿದರು. ದಿಕ್ಸೂಚಿ ಭಾಷಣಗೈದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಮಹಾತ್ಮಗಾಂಧೀಜಿ ಅವರ 155ನೇ ಮತ್ತು ಲಾಲ್ ಬಹದ್ದೂರ್  ಶಾಸ್ತ್ರಿ ಅವರ 120ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಶಾಲಾ ಆವರಣ ಸ್ವಚ್ಛತೆಯೊಂದಿಗೆ ಆರಂಭಗೊಂಡಿತು ಮಹಾನ್ ಚೇತನರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಲಾಯಿತು. ಎಲ್ಲರೂ ಸಾಮೂಹಿಕವಾಗಿ ಸರ್ವಧರ್ಮ ಪ್ರಾರ್ಥನೆ ಮತ್ತು ಭಜನೆಯಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಆಡಳಿತ ಮಂಡಳಿ ಅಧಿಕಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Read More