ಬೈಂದೂರು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ – ನೇರಪ್ರಸಾರ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಮೇ 13ರಂದು ಉಡುಪಿ ಬ್ರಹ್ಮಗಿರಿ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಮೇ 13ರ ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 144 (1) ರನ್ವಯ ಜಿಲ್ಲೆಯಾದ್ಯಂತ ಮೇ 13 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗುತ್ತದೆ. ಷರತ್ತುಗಳು: ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಪೂರ್ಣಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ ಇಲ್ಲವೇ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆಯಾ ಅಥವಾ ಅತಂತ್ರ ಸ್ಥಿತಿಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆಯಾ ಎಂಬ ಕುತೂಹಲವನ್ನು ಚುನಾವಣೋತ್ತರ ಸಮೀಕ್ಷೆಗಳು ಹುಟ್ಟುಹಾಕಿವೆ. ಸಿಜಿಎಸ್, ಜನ್ ಕೀ ಬಾತ್, ಸುವರ್ಣ ನ್ಯೂಸ್, ಸಮೀಕ್ಷೆಗಳ ಪ್ರಕಾರ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಟೈಮ್ಸ್ ನೌ, ಎಬಿಪಿ ಹಾಗೂ ಝೀ ನ್ಯೂಸ್ ನಡೆಸಿರುವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದಿದೆ. ಆದರೆ ಸಿ-ವೋಟರ್, ಟಿವಿ 9, ಹಿಂದೂಸ್ಥಾನ್ ಟೈಮ್ಸ್ ರಿಪಬ್ಲಿಕ್ ಟಿವಿ ನಡೆಸಿರುವ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದಿದೆ. ಯಾವ ಸಮೀಕ್ಷೆ ನಿಜವಾಗಲಿದೆ ಎಂಬುದನ್ನು ಮೇ.13ರ ತನಕ ಕಾದು ನೋಡಬೇಕಿದೆ. ಜನ್ ಕೀ ಬಾತ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆಯಿದೆ. ಬಿಜೆಪಿ 94- 117 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಇನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸಾರ್ವತ್ರಿಕ ಚುನಾವಣೆ ಭಾಗವಾಗಿ ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಯಿತು. ವಯಸ್ಕರ ಆಸಕ್ತಿ, ಯುವ ಜನಾಂಗದ ಉತ್ಸಾಹದ ನಡುವೆ ಜಿಲ್ಲೆಯಲ್ಲಿ ಶೇ.78.39 ಮತದಾನ ನಡೆದಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಹಾಗೂ ಬೈಂದೂರು ವಿಧಾನಸಬಾ ಕ್ಷೇತ್ರದಲ್ಲಿ ಒಂದೆರಡು ಕಡೆಗಳಲ್ಲಿ ಮತಯಂತ್ರದ ಸಮಸ್ಯೆಯಿಂದ ಮತದಾನ ಪ್ರಕ್ರಿಯೆ ಕೊಂಚ ವಿಳಂಬವಾಗಿರುವುದು ಹೊರತುಪಡಿಸಿ ಎಲ್ಲೆಡೆಯೂ ಸಾಂಗವಾಗಿ ಮತದಾನ ನಡೆಯಿತು. ಸಖಿ ಮತಗಟ್ಟೆ, ಯಕ್ಷಗಾನ ಮತಗಟ್ಟೆ, ಚಿನ್ನರ ಅಂಗಣ ಸೇರಿದಂತೆ ಚುನಾವಣೆ ಹಾಗೂ ಚುನಾವಣಾ ಪೂರ್ವದಲ್ಲಿ ಮತದಾನ ಕೇಂದ್ರದಲ್ಲಿ ಮಾಡಲಾದ ವಿವಿಧ ಪ್ರಯೋಗ ಮತದಾರರನ್ನು ಆಕರ್ಪಿಸಿದವು. ಪೋಲಿಂಗ್ ಬೂತಿಗೆ ತೆರಳು ವಿವಿಧ ರಾಜಕೀಯ ಪಕ್ಷಗಳು ವಯಸ್ಕರಿಗೆ ಹಿರಿಯರಿಗೆ, ದೂರದಿಂದ ಬರುವವರಿಗೆ ವಾಹನ ವ್ಯವಸ್ಥೆ ಮಾಡಿದ್ದವು. 108 ವರ್ಷದ ವೃದ್ಧೆ ಸೇರಿದಂತೆ ಹಲವು ಹಿರಿಯರು ಮನೆಯಲ್ಲಿಯೇ ಮತದಾನದ ಅವಕಾಶವನ್ನು ನಿರಾಕರಿಸಿ ಮತಗಟ್ಟೆಗೆ ತೆರಳಿ ಮತದಾನ ಮಾಡಿರುವುದು ವಿಶೇಷವಾಗಿತ್ತು. ಕುಂದಾಪುರದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಲಾಡಿಯಲ್ಲಿ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು ಶೇ. 78.57ಮತದಾನವಾಗಿದೆ. ಜಿಲ್ಲೆಯ ಬೈಂದೂರು ವಿಧಾನಸಭಾ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.77.86, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.94 ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 75.85%, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 79.44%, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇ.81.30% ಮತದಾನವಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆ 9 ಗಂಟೆಯ ತನಕ ಒಟ್ಟು ಶೇ.13.28 ಮತದಾನವಾಗಿದ್ದು, ಬೆಳಿಗ್ಗೆ 11 ಗಂಟೆಯ ತನಕ ಶೇ.30.26 ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆಯ ತನಕ ಶೇ.47.8 ಮತದಾನವಾಗಿದ್ದು, 3 ಗಂಟೆಯ ತನಕ ಶೇ.60.3 ಮತದಾನವಾಗಿದೆ.ಸಂಜೆ 5 ಗಂಟೆಯ ತನಕ ಒಟ್ಟು ಶೇ.73.75 ಮತದಾನವಾಗಿದ್ದರೆ, ಮತದಾನ ಮುಕ್ತಾಯದ ವೇಳೆಗೆ ಒಟ್ಟು ಶೇ.78.57 ಮತದಾನವಾಗಿದೆ. ಇದನ್ನೂ ಓದಿ: ► ಜಿಲ್ಲೆಯಲ್ಲಿ ಶಾಂತಿಯುತ ಮತದಾನ. ಮತಯಂತ್ರದೊಂದಿಗೆ ಮಸ್ಟರಿಂಗ್ ಕೇಂದ್ರಕ್ಕೆ ಮರಳಿದ ಸಿಬ್ಬಂದಿಗಳು – https://kundapraa.com/?p=66687 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿರುವ ಹೊತ್ತಿನಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಗಳಲ್ಲಿಯೇ ಮತದಾನ ಮಾಡಲು ಅವಕಾಶ ನೀಡಿದ್ದರೂ 108 ವರ್ಷದ ವೃದ್ಧೆಯೂರ್ವರು ಸ್ವತಃ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ತಗ್ಗರ್ಸೆಯ ನಿವಾಸಿ ಚಂದು ದೇವಾಡಿಗ ಅವರು ಸ್ವತಃ ತಗ್ಗರ್ಸೆ ಸ.ಹಿ.ಪ್ರಾ ಶಾಲೆಯ ಮತಗಟ್ಟೆಯೊಳಕ್ಕೆ ನಡೆದು ಬಂದು ಅತ್ಯುತ್ಸಾಹದಿಂದಲೇ ಮತ ಚಲಾಯಿಸಿ ಯುವಸಮೂಹಕ್ಕೆ ಮಾದರಿಯಾಗಿದ್ದಾರೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಿದ್ದರೂ, ಮತಗಟ್ಟೆಗೆ ತೆರಳಿ ಮತದಾನ ಮಾಡುವುದಾಗಿ ಚಂದು ದೇವಾಡಿಗ ಅವರು ಮೊದಲೇ ತಿಳಿಸಿದ್ದರಿಂದ ಮತಗಟ್ಟೆಗೆ ಬರಲು ಅವಕಾಶ ಮಾಡಿಕೊಡಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಬೆಳಿಗ್ಗೆ ಮತದಾನ ಮಾಡಿದರು. ಅವರು ಮೊಳಹಳ್ಳಿಯ ನಾಲ್ಕನೇ ವಾರ್ಡಿನ ಮತಗಟ್ಟೆ ಕೈಲ್ಕೇರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಬೆಳಿಗ್ಗೆ ಮತದಾನ ಮಾಡಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಅಮಾಸೆಬೈಲು ಮಚ್ಚಟ್ಟು ಶಾಲೆಯಲ್ಲಿ ತಮ್ಮ ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಮತದಾನ ಮಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ 1ನೇ ಬೂತ್ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕುಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ನಲ್ಲಿ ಮತ ಚಲಾಯಿಸಿದ ಅವರು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ಕರೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಂಚಿಕಾನ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕಂಚಿಕಾನ್ ಮತಗಟ್ಟೆಗೆ ತೆರಳಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
