Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಲಿದ್ದು, ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ಬಂದಿದೆ. ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ. ಎನ್. ಆರ್. ಅಡಿಟೋರಿಯಂನಲ್ಲಿ ನಡೆಯಲಿದೆ. ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್, ಮಲೇಷಿಯಾ, ಜರ್ಮನ್, ಕ್ರೋವೆಷಿಯಾ, ಗಲ್ಫ್‌ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು, ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ. ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಕೋರ್ಸ್, ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ| ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಹೆಗ್ಡೆ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಗ್ರಂಥಪಾಲಕ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ:  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ – 57 ಹಾಗೂ ಅಂಗನವಾಡಿ ಸಹಾಯಕಿಯರು – 136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ. ಅರ್ಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: Department of School Education & Literacy, ನವದೆಹಲಿ ಅವರ ಮಾರ್ಗಸೂಚಿಯಂತೆ ಎನ್. ಎಂ.ಎಂ. ಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ. ಎಸ್. ಕ್ಯು. ಎ. ಎ. ಸಿ ವತಿಯಿಂದ ನಡೆಸಲು ಅನ್‌ಲೈನ್ ಮೂಲಕ 2024ನೇ ಆಗಸ್ಟ್ 19 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎನ್. ಎಂ. ಎಂ. ಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂ¸ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ https://kseab.karnataka.gov.in/ ವೆಬ್‌ಸೈಟ್‌ನಲ್ಲಿ ಲಭ್ಯಮಾಡಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಎನ್. ಎಂ. ಎಂ. ಎಸ್ ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಕಬ್ಬಡಿ ಪಂದ್ಯಾಟ ಗಂಗೊಳ್ಳಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೌಲಾನಾ ಅಬ್ದುಲ್ ಹಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಹಕ್ಕುಗಳ ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶಾಬುದ್ದೀನ್ ಅವೂಫ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಹಮ್ಮದ್ ನೂರ್ ಫಾಜಿಲ್, ನಾಕುದಾ ಮೊಹಮ್ಮದ್ ಅಶ್ರಫ್, ಶಾಬುದ್ದೀನ್ ಮೊಹಮ್ಮದ್ ಮೀರಾನ್, ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್ ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾವತಿ ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಸಂಸ್ಥೆ ರಿ. ಹಾಗೂ ಮೈಸೂರು ಜಿಲ್ಲಾ ವೇಟ್‌ಲಿಫ್ಟಿಂಗ್ ಸಂಸ್ಥೆ ರಿ. ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ- ಯೂತ್, ಜೂನಿಯರ್, ಸೀನಿಯರ್ ಸೇರಿದಂತೆ ಇರುವ ಒಟ್ಟು ಆರು ವಿಭಾಗಳಲ್ಲೂ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ಒಟ್ಟು 9 ಚಿನ್ನ, 10 ಬೆಳ್ಳಿ, 6 ಕಂಚಿನೊAದಿಗೆ 25 ಪದಕ ಪಡೆದರೆ, ಮಹಿಳೆಯರ ವಿಭಾಗದಲ್ಲಿ 9 ಚಿನ್ನ 14 ಬೆಳ್ಳಿ ಹಾಗೂ 5 ಕಂಚು ಸೇರಿದಂತೆ ಒಟ್ಟು 28 ಪದಕ ಪಡೆದು, ಎರಡು ವಿಭಾಗದಲ್ಲಿ ಭರ್ಜರಿ 53 ಪದಕ ಪಡೆದು ಪಾರಮ್ಯ ಮೆರೆದರು. ಪುರುಷರ ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜು -2 ಚಿನ್ನ, 1 ಬೆಳ್ಳಿ, 3 ಕಂಚು, ಜೂನಿಯರ್ ವಿಭಾಗದಲ್ಲಿ- 3 ಚಿನ್ನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ರಕ್ಷಾಬಂಧನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ರಾಖೀ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ನಂತರ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವುದು, ಆರತಿ ಮಾಡಿ ತಿಲಕ ಇಟ್ಟು, ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿದರು. ಮುಖ್ಯೋಪಾಧ್ಯಾಯಿನಿ ಸರೋಜಾ ಮತ್ತು ಶಿಕ್ಷಕಿಯರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ರಕ್ಷಾ ಬಂಧನದ ಅರ್ಥ, ಇದಕ್ಕೆ ಪೂರಕವಾದ ಪುರಾಣ ಕಥೆ ಹೇಳುವ ಮೂಲಕ ಸಹೋದರ ಸಹೋದರಿಯರ ಮದ್ಯದ ಪವಿತ್ರ ಬಂಧನದ ಮಹತ್ವ ತಿಳಿಸಿದರು. ಆಡಳಿತ ಮಂಡಳಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿಯವರಾದ ಶಾನ್ಕಟ್ಟು ನವೀನ್ ಕುಮಾರ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರಾವಣ ಮಾಸದ ಹುಣ್ಣಿಮೆಯ ದಿನವಾದ ಸೋಮವಾರದಂದು ವಿಶ್ವ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನವನ್ನು ವಿಶಿಷ್ಟ ರೀತಿಯಲ್ಲಿ  ಆಚರಿಸಲಾಯಿತು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕ್ಯಾಂಪಸ್‌ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ  ನಾಗರಾಜ ಶೆಟ್ಟಿ ಅವರು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಸಂಸ್ಕೃತ ಉಪನ್ಯಾಸಕಿಯಾದ ಸುಧಾಕ್ಷಿಣಾ ಉಡುಪ, ಸಂಸ್ಕೃತ ದಿನ ಮತ್ತು ರಕ್ಷಾ ಬಂಧನದ ಆಚರಣೆಯ ಹಿನ್ನೆಲೆಯನ್ನು ವರ್ಣಿಸುತ್ತಾ, ವಿಶ್ವ ಸಂಸ್ಕೃತ ದಿನದ ಇತಿಹಾಸವು 1969ರ ಹಿಂದಿನದು. ಭಾರತ ಸರ್ಕಾರವು ಶ್ರಾವಣದ ಹುಣ್ಣಿಮೆಯ ದಿನವನ್ನು ಸಂಸ್ಕೃತ ದಿನವೆಂದು ಘೋಷಿಸಿತು. ಸಂಸ್ಕೃತ ವ್ಯಾಕರಣದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಸಂಸ್ಕೃತ ವಿದ್ವಾಂಸ ಹಾಗೂ ವ್ಯಾಕರಣಕಾರರಾದ ಪಾಣಿನಿಯು ಹುಟ್ಟಿದ ದಿನವನ್ನು ಅವರ ಸವಿನೆನಪಿಗಾಗಿ ಆಚರಣೆ ಮಾಡಲಾಗಿದೆ ಎಂದು ಅದರ ಮಹತ್ವದ ಬಗ್ಗೆ ತಿಳಿಸಿದರು. ರಕ್ಷಾ ಬಂಧನದ ಕಥೆಯು ಹಿಂದೂ ಪುರಾಣ ಮತ್ತು ಹಿಂದೂ ಮಹಾಕಾವ್ಯ ಮಹಾಭಾರತಕ್ಕೆ ಸಂಬಂಧಿಸಿದೆ. ಈ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮಹತ್ವವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್  https://karnemakaone.kar.nic.in/abcd/ ನಲ್ಲಿ   ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ (ಹೋಮ್ ನರ್ಸಿಂಗ್)  18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ,…

Read More