ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.27: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಅಥವಾ ಅಗತ್ಯವಿದ್ದಲ್ಲಿ ಈಗಾಗಲೇ ಸಂಬAಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆಯಬೇಕು. ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ: 1077 ಹಾಗೂ ದೂ.ಸಂ:0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. “ಡ್ರಗ್ಸ್ ಸೇವನೆಯಂಥ ದುಶ್ಚಟವು ವ್ಯಕ್ತಿಯ ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲೂ ಮಾರಕ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯ ವ್ಯಸನಿಗಳು ದುಶ್ಚಟಕ್ಕೊಳಗಾದ ಎಷ್ಟೋ ವರ್ಷಗಳ ನಂತರವೂ ಸುಭದ್ರ ಜೀವನವನ್ನು ಸಡೆಸುವುದು ಕಷ್ಟವಾಗುವುದರಿಂದ ಪ್ರಾರಂಭದಲ್ಲೇ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಎಚ್ಚರವಹಿಸಬೇಕು” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ವಿನಯ್ ಕೊರ್ಲಳ್ಳಿಯವರು ಹೇಳಿದರು.ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ- 2024, ಇದರ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ನಡೆದ ಮಾಹಿತಿ ಉಪನ್ಯಾಸದಲ್ಲಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿ ಅವರು ಇಂದಿನ ಯುವಪೀಳಿಗೆಯು ಎಲ್ಲೆಂದರಲ್ಲಿ ಲಭ್ಯವಿರುವ ವಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ತೀವ್ರ ವಿವಾದಕ್ಕೊಳಗಾದ ಕುಂದಾಪುರ ಪುರಸಭಾ ವ್ಯಾಪ್ತಿಯ ಹೋಟೆಲ್ ಪಾರಿಜಾತ ಸಮೀಪದ ಶಂಕರ ಶೇಟ್ ಟವರ್ಸ್ನ ಎದುರುಗಡೆಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಬ್ಬಿಣದ ಆವರಣ ಗೋಡೆಯನ್ನು ತೆರವುಗೊಳಿಸುವಂತೆ ಸೂಚಿಸಿ ಕುಂದಾಪುರ ಪುರಸಭಾ ಕಾರ್ಯಾಲಯವು ಕಟ್ಟಡದ ಮುಖ್ಯಸ್ಥರಿಗೆ ಜೂನ್ 14ರಂದು ನೋಟೀಸು ಜಾರಿಗೊಳಿಸಿರುವ ಕುರಿತು ತಿಳಿದು ಬಂದಿದೆ. ನೋಟೀಸ್ ನಲ್ಲಿ “ಪುರಸಭಾ ವ್ಯಾಪ್ತಿಯ ಶಂಕರ ಶೇಟ್ ಟವರ್ಸ್ನಲ್ಲಿ ಅನಧಿಕೃತ ಆವರಣ ಗೋಡೆ ರಚಿಸುತ್ತಿರುವ ಕುರಿತು ತಮ್ಮ ಕಚೇರಿಗೆ ದೂರು ಸಲ್ಲಿಕೆಯಾಗಿದ್ದು ಈ ಬಗ್ಗೆ ಪುರಸಭೆಯ ಕಿರಿಯ ಅಭಿಯಂತರರು ಪರಿಶೀಲಿಸಿ ವರದಿ ನೀಡಿದ್ದು ಆ ವರದಿಯ ಪ್ರಕಾರ ಸದ್ರಿ ಸ್ಥಳದಲ್ಲಿ ಅನಧಿಕೃತವಾಗಿ ಪರವಾನಿಗೆ ಪಡೆಯದೇ ಆವರಣಗೋಡೆ ನಿರ್ಮಿಸಿರುವುದು ಕಂಡು ಬಂದಿದ್ದು ಆ ಕಾರಣಕ್ಕಾಗಿ ಸದ್ರಿ ಆವರಣಗೋಡೆಯನ್ನು ಈ ನೋಟಿಸು ತಲುಪಿದ ಏಳು ದಿನಗಳೊಳಗೆ ತೆರವುಗೊಳಿಸಬೇಕು” ಎಂದು ಸೂಚಿಸಲಾಗಿದೆ. ಸದ್ರಿ ಶಂಕರ್ ಶೇಟ್ ಟವರ್ಸ್ನ ಓನರ್ಸ್ ಅಸೋಸಿಯೇಷನ್ ನಿರ್ಮಿಸಿತ್ತು ಎನ್ನಲಾದ ಈ ಅನಧಿಕೃತ ಆವರಣಗೋಡೆಯಿಂದ ನಮ್ಮ ಅಂಗಡಿಯ ವ್ಯವಹಾರಕ್ಕೆ ತೊಂದರೆಯಾಗುತ್ತಿದ್ದು, ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಕ್ಕೆಂದು ತೆರಳಿದ ಕೃಷಿಕ ನೋರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಹಾಲಾಡಿ ಗ್ರಾಮದ ಶೇಖರ ಶೆಟ್ಟಿ (74) ಮೃತ ವ್ಯಕ್ತಿಯಾಗಿದ್ದಾರೆ. ಅಡಿಕೆ ತೋಟಕ್ಕೆಂದು ತೆರಳಿದವರು ಮನೆಯ ಹಿಂಬದಿಯಲ್ಲಿದ್ದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಸುಡುಗಾಡು ತೋಡು ಅವ್ಯವಸ್ಥೆಯ ಆಗರಾವಾಗಿದ್ದು ಅದನ್ನು ಶೀಘ್ರ ಸರಿಪಡಿಸುವಂತೆ ಕುಂದಾಪುರ ಸಹಾಯಕ ಆಯುಕ್ತರ ಬಳಿ ಸಾರ್ವಜನಿಕರು ಮನವಿ ನೀಡಿದ್ದಾರೆ. ಈ ಹಿಂದೆ ಅನೇಕ ಬಾರಿ ಸಾರ್ವಜನಿಕರು ಪುರಸಭೆಯ ಗಮನಕ್ಕೆ ತಂದರೂ ಪ್ರಯೋಜನವಿಲ್ಲದ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ವಾಸಿಸುವ ಜನರ ಪರಿಸ್ಥಿತಿ ಕಷ್ಟಕರವಾಗಿದೆ̤ ತೋಡಿನಲ್ಲಿ ದುರ್ನಾಥ ಬೀರುವ ತ್ಯಾಜ್ಯಗಳೂ, ಸಾಂಕ್ರಮಿಕ ರೋಗಗಳು ಕೊಳೆತು ನಾರುವ ತ್ಯಾಜ್ಯದ ರಾಶಿಯಿಂದ ಈ ಪರಿಸರದಲ್ಲಿ ಚಿಕನ್ಗುನ್ಯ, ಮಲೇರಿಯಾ, ಡೆಂಗ್ಯೂ ತರಹದ ಸಾಂಕ್ರಮಿಕ ರೋಗಗಳು ಹರುಡುತ್ತದೆ ಎಂದು ಸಾರ್ವಜನಿಕರು ದೂರಿನಲ್ಲಿ ತಿಳಿಸಿದ್ದಾರೆ. ಈ ತೋಡಿನ ಅಸುಪಾಸಿನಲ್ಲಿ ಅಸಂಖ್ಯಾತ ಜನರು ವಾಸವಾಗಿದ್ದು ಅದರಲ್ಲಿ ಮಕ್ಕಳು , ವೃದ್ಧರು, ಅನಾರೋಗ್ಯ ಪೀಡಿತರ ಸಂಖ್ಯೆಯೇ ಅಧಿಕವಾಗಿದೆ ಹಾಗೂ ನೂರಕ್ಕೂ ಅಧಿಕ ಮನೆಗಳಿದ್ದು ನಡೆದಾಡಲು ಕೂಡ ಸರಿಯಾದ ದಾರಿಯ ವ್ಯವಸ್ಥೆಯೂ ಸಹಾ ಇಲ್ಲದೇ ಜನರು ಬಹಳ ಸಂಕಷ್ಠಕ್ಕೆ ತುತ್ತಾಗಿದ್ದಾರೆ. ಈ ಚರಂಡಿಯನ್ನು ಒಳಚರಂಡಿ ವ್ಯವಸ್ಥೆಯಾಗಿ ಮಾಡಿಕೊಡಬೇಕೆಂದು ಮನವಿ ಆಗ್ರಹಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು – 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ನಾಯ್ಕನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು. ಊರಿನ ಶಾಲೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೆ ಎಲ್ಲರೂ ಸೇರಿ ಪ್ರಯತ್ನ ಮಾಡೋಣ ಎಂದು ತಿಳಿಸುತ್ತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಸ್ವಯಂಸ್ಪೂರ್ತಿ ಫೌಂಡೇಶನ್ ಜಡ್ಕಲ್ ನಾಗರಾಜ ಶೆಟ್ಟಿ ಅವರು, ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ಯಾಂಕ್ಗಳ ಮ್ಯಾನೆಜರ್ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಜನಸಾಮಾನ್ಯರ ದೈನಂದಿನ ಬ್ಯಾಂಕಿಂಗ್ ವ್ಯವಹಾರದಲ್ಲಿ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬ್ಯಾಂಕಿನ ವ್ಯವಹಾರಗಳು ಸುಲಭವಾಗಿ ಸಾರ್ವಜನಿಕರಿಗೆ ಲಭ್ಯವಾಗಲು ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಮನ್ವಯವನ್ನು ಸುಲಭಗೊಳಿಸಲು ಬ್ಯಾಂಕ್ಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಇಲಾಖೆಗಳನ್ನೊಳಗೊಂಡಂತೆ ಸಮಿತಿಯ ಸಭೆಯನ್ನು ಕರೆಯಲಾಗುತ್ತದೆ. ಈ ಸಭೆಗೆ ಎಲ್ಲಾ ವಾಣಿಜ್ಯ ಬ್ಯಾಂಕ್ಗಳ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಬೇಕೆಂದು ಸೂಚನೆ ನೀಡಿದರು. ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು 595 ಫಲಾನುಭವಿಗಳಿಗೆ 39.98 ಕೋಟಿ ರೂ. ಸಾಲ ವಿತರಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನಸ್ಪಂದನ ಕಾರ್ಯಕ್ರಮ ಆಯೋಜಿಸುವ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡಲ್ಲಿ ಸಾರ್ವಜನಿಕರಿಗೆ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡದೆ ಆಗಿಂದಾಗ್ಗೆ ತಾಲೂಕು ಮಟ್ಟದಲ್ಲಿ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕುಂದಾಪುರ ಶಾಸ್ರೀ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನ (ಬಂಟರ ಯಾನೆ ನಾಡವರ ಸಂಕೀರ್ಣ) ದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಲಾಖೆಗಳಲ್ಲಿ ನಿತ್ಯ ಸಾರ್ವಜನಿಕರ ಕೆಲಸವನ್ನು ಸುಗಮವಾಗಿ ಆಗುವ ರೀತಿಯಲ್ಲಿ ಆಗಬೇಕು ಎಂದ ಅವರು, ಕೆಲವೊಮ್ಮೆ ಪಹಣಿ ಬದಲಾವಣೆಗೆ ವರ್ಷಗಟ್ಟಲೇ ಕಾಯುವಂತಹ ಪರಿಸ್ಥಿತಿ ಇದೆ. ಅವುಗಳು ಕಾಲಮಿತಿಯೊಳಗೆ ಆಗಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಇಲಾಖೆಯ ಅಧಿಕಾರಿಗಳು ನಿರ್ಲಕ್ಷಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮವನ್ನು ಕಳೆದ ವರ್ಷದಿಂದಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ ಇಂತಹ ಸಮಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳಲ್ಲಿನ ಕೌಶಲ್ಯವನ್ನು ಹೊರಹೊಮ್ಮಿಸುವಲ್ಲಿ ಗಮನಾರ್ಹ ಕಾರ್ಯವಾಗಿದೆ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 2023 – 24ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕ ಸಂಚಿಕೆ ದೃಷ್ಟಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಹಿರಿಯ ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಷ್ಟಿ ಸ್ವಾಗತಿಸಿದರು. ಭಾರತಿ ಪರಿಚಯಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಪ್ರತಿಕಿಯಿಸಿ, ಸಮಸ್ಯೆ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾ,ಪಂ ಕಾರ್ಯನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರೂರು ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ತಿಳಿಸಿದರು.
