ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಬಿಎಂಆರ್ ಬಿಲ್ಡರ್ಸ್ ಸಂ ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಚತುರ್ಥ ಸ್ಥಾನ ಪಡೆದಿರುತ್ತಾರೆ. ವಿವಿಧ ಕಾಲೇಜುಗಳಿಂದ 110 ಸ್ಪರ್ಧಿಗಳು ಭಾಗವಹಿಸಿದ ಸ್ಪರ್ಧೆ ಇದಾಗಿತ್ತು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.10: ಕರ್ನಾಟಕದ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಛೇರಿ ಮಲ್ಪೆಯಲ್ಲಿ, ಅಬ್ದುಲ್ ಅಹದ್, ಐಪಿಎಸ್ರವರ ಉಪಸ್ಥಿತಿಯಲ್ಲಿ ಮರ್ಚೆಂಟ್ ನೇವಿಯ ನಿವೃತ್ತ ಅಧಿಕಾರಿಗಳು ಮತ್ತು ಭಾರತೀಯ ನೌಕಾಸೇನೆ, ಭಾರತೀಯ ತಟರಕ್ಷಣ ಪಡೆಯಲ್ಲಿ ಪ್ರಸ್ತುತ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು. ಡಾಲ್ಸಿ ಪಿಂಟೋ ಉಪಪ್ರಾಂಶುಪಾಲರು, ಮಂಗಳೂರು ಮರೈನ್ ಕಾಲೇಜು ಹಾಗೂ ಇತರೇ ನಿವೃತ್ತ ಹಾಗೂ ಪ್ರಸ್ತುತ ಸೇವೆಯಲ್ಲಿರುವ ನೌಕಾಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಅವರ ಬೇರೆ ಬೇರೆ ದೇಶಗಳ ಪ್ರಯಾಣದ ವೇಳೆ ಆದ ಅವರ ಅನುಭವಗಳನ್ನು ಹಾಗೂ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನಿಸಿಕೆಯನ್ನು ಹಂಚಿಕೊAಡರು. ಸಭೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ 9 ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕವಿ, ಲೇಖಕ ಕಾವ್ಯ ಬೈರಾಗಿ (ಶ್ರೀರಾಜ್ ವಕ್ವಾಡಿ) ಅವರ ಐದನೇ ಕೃತಿ ‘ಅತ್ತ ನಕ್ಷತ್ರ’ ನೀಳ್ಗತೆ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 20ರ ಆದಿತ್ಯವಾರ ಮಧ್ಯಾಹ್ನ 2:30ಕ್ಕೆ ಪುಸ್ತಕ ಪ್ರಕಾಶಿಸಿದ ಕುಂದಾಪುರದ ಜನಪ್ರತಿನಿಧಿ ಕಛೇರಿಯಲ್ಲಿ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆ ಮಾಡಲಿದ್ದಾರೆ. ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ, ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಮೈಸೂರು ವಿದ್ಯಾವರ್ಧಕ ಕಾನೂನು ಕಾಲೇಜಿನ ಉಪನ್ಯಾಸಕಿ ಕೀರ್ತಿ ಭಟ್ ಕೃತಿ ಪರಿಚಯಿಸಲಿದ್ದಾರೆ. ಕೃತಿ ಬಿಡುಗಡೆ ಕಾರ್ಯಕ್ರಮದ ಬಳಿಕ ಕೃತಿಯ ಲೇಖಕರೊಂದಿಗೆ “ಅತ್ತ ನಕ್ಷತ್ರ : ಮಾತು ಕಥೆ” ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಲೇಖಕಿ ಪೂರ್ಣಿಮಾ ಕಮಲಶಿಲೆ, ಪತ್ರಕರ್ತ ನಿಝಾಮ್ ಅನ್ಸಾರಿ, ಉಪನ್ಯಾಸಕಿಯರಾದ ಅಮೃತಾ ಕುಂದಾಪುರ, ವಿನಯಾ ಶೆಟ್ಟಿ ಕೌಂಜೂರು ಭಾಗವಹಿಸಲಿದ್ದಾರೆ. ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ 2023-24ನೇ ಇಂಟರ್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ನಡೆಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು ಪದಪ್ರದಾನವನ್ನು ನೆರವೇರಿಸಿದರು. ನೂತನ ಇಂಟರ್ಯಾಕ್ಟ್ ಅಧ್ಯಕ್ಷೆ ರಕ್ಷಿತಾ ತಮ್ಮ ತಂಡವನ್ನು ಪರಿಚಯಿಸಿದರು. ಕಾರ್ಯದರ್ಶಿ ಅಮೃತಾ ವರ್ಷದ ಯೋಜನೆಗಳನ್ನು ಸಭೆಯ ಮುಂದಿಟ್ಟರು. ಪೂರ್ವ ಸಹಾಯಕ ಗವರ್ನರ್ ರೊ. ಸೋಮನಾಥನ್ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಇನ್ನರ್ವ್ಹೀಲ್ ಅಧ್ಯಕ್ಷೆ ಚಂದ್ರಿಕಾ ರಾಮು,ರೋಟರಿ ಬೈಂದೂರಿನ ಪೂರ್ವಾಧ್ಯಕ್ಷರಾದ ಸುಧಾಕರ ಪಿ, ಐ ನಾರಾಯಣ, ಮಂಜುನಾಥ ಮಹಾಲೆ, ಡಾ. ಪ್ರವೀಣ ಶೆಟ್ಟಿ, ಶಾಲೆಯ ಶಿಕ್ಷಕ ವ್ರಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ರೊ.ಆನಂದ ಮದ್ದೋಡಿ ಸ್ವಾಗತಿಸಿದರು. ಇಂಟರ್ಯಾಕ್ಟ್ ಸಂಯೋಜಕ ಪ್ರಕಾಶ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ಯಡ್ತರೆ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿಕರಾಗಿ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ನೀಡಿರುವ ವಂಡ್ಸೆ ಪಟೇಲರ ಮನೆ ಹರ್ಕೂರು ಚಂದ್ರಶೇಖರ ಶೆಟ್ಟಿ [78] ಅವರು ಸ್ವಗ್ರಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಶ್ರೀ ಆನೆಗುಡ್ಡೆ ವಿನಾಯಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. 7ನೇ ತರಗತಿಯ ಬ್ರಾಹ್ಮಿ ಬಾಲಕಿಯರ ವಿಭಾಗದ ಅಥ್ಲೆಟಿಕ್ ಯೋಗದಲ್ಲಿ ಪ್ರಥಮ, 7ನೇ ತರಗತಿಯ ಸುಜನ್ ಬಾಲಕರ ವಿಭಾಗದಲ್ಲಿ ದ್ವಿತೀಯ, 6ನೇ ತರಗತಿಯ ಸುಚೇಂದ್ರ ಚತುರ್ಥ ಸ್ಥಾನ, ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಮಾನ್ಯ ತೃತೀಯ, ಹಂಸಿ ಚತುರ್ಥ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಗವಹಿಸಿದ ಹಾಗೂ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ, ಹಾಗೂ ವಿದ್ಯಾರ್ಥಿಗಳ ವತಿಯಿಂದ ಅಭಿನಂದಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉದ್ಯಮಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಅವರಿಗೆ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ಶ್ರೀನಿಧಿ ಫೌಂಡೇಶನ್ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ ಕರ್ನಾಟಕ ಸಹಯೋಗದೊಂದಿಗೆ ಗೋವಾದ ರವೀಂದ್ರ ಕಲಾ ಭವನದಲ್ಲಿ ಅ.13ರಂದು ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ನೇತ್ರತ್ವದಲ್ಲಿ. ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಸಹಬಾಗಿತ್ವದಲ್ಲಿ ಹಾಗೂ ಮೊಗವೀರ ಮಹಜನ ಸೇವಾ ಸಂಘ.ರಿ.ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇವರ ಸಹಕಾರದೊಂದಿಗೆ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ವನ ಮಹೋತ್ಸವ ಆಯೋಜಿಸಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್., ಕುಂದರ್ ಇವರು ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಜಿಲ್ಲಾ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಇವರು ಸಾಂಕೇತಿಕವಾಗಿ ಗಿಡ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಮ್.ಎಮ್ ಸುವರ್ಣ, ಮಹಾಜನ ಸೇವಾ ಸಂಘದ ಶಾಖಾ ಕಾರ್ಯದರ್ಶಿ ಪ್ರಭಾಕರ್ ಎನ್ ಸೇನಾಪುರ, ಘಟಕದ ಗೌರವ ಅಧ್ಯಕ್ಷ ಉಮೇಶ್ ಬಡಾಕೆರೆ, ಮೊಗವೀರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ (CA) ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ ಅನಿರುದ್ಧ್ ರಮೇಶ್, ಅಭಿಷೇಕ್ ಪಿ ಎಸ್, ವಿಂದ್ಯಾ ವಿನಯ್ ಹೆಗಡೆ, ಎಸ್ ಅನುರಾಜ್ ಇವರು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿಎ ಇಂಟರ್ ಮೀಡಿಯೆಟ್ ಗೆ ಅರ್ಹತೆ ಗಳಿಸಿದ್ದಾರೆ. ಸುದೀಪ್ ಕೆ 261 ಅಂಕ, ಸುಮಾ 250 ಅಂಕ, ಸುಚಿತಾ ಬಿ ಸಿ 223 ಅಂಕ, ಅನಘಾ 219 ಅಂಕ, ಬಿ ಸಿದ್ದಾರ್ಥ್ ಪೈ 214 ಅಂಕ, ಹೆಗ್ಡೆ ಅನಿರುದ್ಧ್ ರಮೇಶ್ 210 ಅಂಕ, ಅಭಿಷೇಕ್ ಪಿ ಎಸ್ 209 ಅಂಕ, ವಿಂದ್ಯಾ ವಿನಯ್ ಹೆಗಡೆ 203 ಅಂಕ, , ಎಸ್ ಅನುರಾಜ್ 200 ಅಂಕವನ್ನು ಗಳಿಸುವ ಮೂಲಕ ಅಮೋಘ ಸಾಧನೆಗೈದಿದ್ದಾರೆ.…
