ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ಮಹೋತ್ಸವ’ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ಮಂಗಳವಾರ ಬೆಳಿಗ್ಗೆ ಕನ್ಯಾ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಪ್ರಾರಂಭವಾಯಿತು. ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಮತ್ತು ಆಡಳಿತ ಮಂಡಳಿ ಸದಸ್ಯ ಜಿ. ವೆಂಕಟೇಶ ನಾಯಕ್ ಜಂಟಿಯಾಗಿ ದೀಪ ಪ್ರಜ್ವಲನೆ ಮಾಡಿದರು. ಸಮಾಜದ ಹಿರಿಯರಾದ ಎಂ. ವಿನೋದ ಪೈ, ಜಿ. ನಿತ್ಯಾನಂದ ಶೆಣೈ, ಯು.ನಾರಾಯಣ ಪೈ, ಡಾ. ಕಾಶೀನಾಥ ಪಿ.ಪೈ, ಬಿ. ಕೃಷ್ಟ್ರಾಯ ಪೈ, ಎಂ.ಜಿ. ಮಾಧವ ಪೈ, ಎನ್. ಸುಭಾಶ್ ನಾಯಕ್, ಎಚ್. ಪಾಂಡುರಂಗ ನಾಯಕ್, ಎಂ.ಜಿ. ವಿಶ್ವನಾಥ ಭಂಡಾರ್‌ಕಾರ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಗೊಂಬೆ ನಡಿಗೆ ವಿದ್ಯಾರ್ಥಿಯ ಕಡೆಗೆ ಸೂತ್ರ ಸಂಕಲ್ಪ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ ಅವರು ಅಧ್ಯಕ್ಷತೆ ವಹಿಸಿದ್ದರು. ಭಾಗವತ ಹಾಗೂ ಉಡುಪಿ ಯಕ್ಷಗಾನ ಕೇಂದ್ರದ ಗುರುಗಳಾದ ಉಮೇಶ್ ಸುವರ್ಣ ಅವರು ಸೂತ್ರ ಸಂಕಲ್ಪ ಉದ್ಘಾಟಿಸಿದರು. ವೇದಿಕೆಯಲ್ಲಿ ಸುರೇಶ್ ಮರಕಾಲ, ರಮೇಶ್ ಭಟ್ ಕೋಟೇಶ್ವರ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಮೇಶ್ ಸುವರ್ಣ ಅವರನ್ನು ಗುರುವಂದನಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ನಂತರ ಸೂತ್ರ ಸಂಕಲ್ಪದಡಿ ವಿದ್ಯಾರ್ಥಿಗಳಿಗೆ ಗುರುದೀಕ್ಷೆ ಹಾಗೂ ಗೊಂಬೆಯಾಟದ ತರಬೇತಿ ನೀಡಲಾಯಿತು. ಅಧ್ಯಾಪಕರು, ಹಿರಿಯರು ಕಿರಿಯರೆಂಬ ಬೇಧವಿಲ್ಲದೆ ಎಲ್ಲರೂ ಸೇರಿ ಸೂತ್ರ ಸಂಕಲ್ಪಕ್ಕೆ ಚಾಲನೆ ನೀಡಿದರು. ಎಲ್ಲರೂ ಗೊಂಬೆಯೊಟ್ಟಿಗೆ ಸೇರಿ ಕುಣಿದು ಖುಷಿ ಪಟ್ಟರು. ನಿವೃತ್ತ ಮುಖ್ಯೋಪಾಧ್ಯಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚಲಿಸುತ್ತಿದ್ದ ಟ್ಯಾಂಕರ್‌ನ ಚಕ್ರ ಕಳಚಿ ರಸ್ತೆ ಬದಿಯ ಕಟ್ಟೆಯಲ್ಲಿ ಕುಳಿತ್ತಿದ್ದ ವ್ಯಕ್ತಿಗೆ ಬಡಿದ ಪರಿಣಾಮ ಅವರು ಗಾಯಗೊಂಡಿರುವ ಘಟನೆ ಕಿರಿಮಂಜೇಶ್ವರ ರಾ.ಹೆ 66ರಲ್ಲಿ ಸಂಭವಿಸಿದೆ. ಕಿರಿಮಂಜೇಶ್ವರ ಗ್ರಾಮದ ರಾಘವೇಂದ್ರ ಅವರು ಗಾಯಗೊಂಡವರು. ಅವರು ಕಿರಿಮಂಜೇಶ್ವರ ಗ್ರಾಮದ ರಾ. ಹೆದ್ದಾರಿ 66ರ ಶಾಲೆ ಬಾಗಿಲು ಬೀಚ್ ತಿರುವು ರಸ್ತೆಯ ಬಳಿಯಲ್ಲಿರುವ ಕಟ್ಟೆಯ ಮೇಲೆ ಕುಳಿತುಕೊಂಡಿದ್ದ ಸಮಯದಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಟ್ಯಾಂಕರ್‌ನ ಹಿಂಬದಿಯ ಒಂದು ಚಕ್ರ ಕಳಚಿ ಟ್ಯಾಂಕರ್‌ನಿಂದ ಬೇರ್ಪಟ್ಟು ಈ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿಯ ಪ್ರಸಿದ್ಧ ಗುತ್ತಿಗೆದಾರ, ಧಾರ್ಮಿಕ ಮುಂದಾಳು ಶ್ರೀನಿವಾಸ ಎಂ. (62) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಕೊಡುಗೈ ದಾನಿಯಾಗಿ ಇವರು ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಅಧ್ಯಕ್ಷರಾಗಿ, ಶ್ರೀ ರಾಘವೇಂದ್ರ ಆರಾಧನಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ, ಗಂಗೊಳ್ಳಿಯ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿ, ತರುಣ ಕಲಾವೃಂದ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಸದಸ್ಯರಾಗಿ, ಬಿಜೆಪಿಯ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಪ್ರಸಿದ್ಧ ಕಟ್ಟಡ ಗುತ್ತಿಗೆದಾರರಾಗಿದ್ದ ಇವರು ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಬೇಕರಿ ಮತ್ತು ಆಹಾರ ಉದ್ಯಮ ಅಸೋಸಿಯೇಷನ್ ನಿರ್ದೇಶಕ ಹಾಗೂ ಕೋಟೇಶ್ವರ ಚಂದು ಮಸಾಲ ಮಾಲಕರಾದ ಮಂಜುನಾಥ್ ನಾಯಕ್ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ, ಉದ್ಯಮದಲ್ಲಿ ಯಶಸ್ಸು ಸಾಧಿಸಲು ಆಸಕ್ತಿ, ಗುಣಮಟ್ಟ ಹಾಗೂ ನಿರಂತರ ಪ್ರಯತ್ನ ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ತಮ್ಮ ಸ್ವಂತ ಉದ್ಯಮದ ಅನುಭವವನ್ನು ಹಂಚಿಕೊಂಡ ಅವರು, ಮಸಾಲಾ ಪೌಡರ್ ತಯಾರಿಕೆಯ ಕುರಿತು ಯಾವುದೇ ಪೂರ್ವಜ್ಞಾನವಿಲ್ಲದಿದ್ದರೂ, ಆಸಕ್ತಿ ಮತ್ತು ಪರಿಶ್ರಮದಿಂದ ಕಲಿತು ಇಂದು ತಮ್ಮದೇ ಆದ ಬ್ರಾಂಡ್ ಹೊಂದಿರುವುದಾಗಿ ತಿಳಿಸಿದರು. ಆಹಾರ ಉದ್ಯಮದಲ್ಲಿ ತ್ವರಿತ ಯಶಸ್ಸಿಗಾಗಿ ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬಾರದು. ಗ್ರಾಹಕರಿಗೆ ಸದಾ ಗುಣಮಟ್ಟದ ಆಹಾರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ, ದೋಹಾ ವತಿಯಿಂದ ಅಲ್ ಮಮೂರಾದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಆವರಣದಲ್ಲಿ ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ 500ಕ್ಕೂ ಅಧಿಕ ಭಾರತೀಯ ಸಮುದಾಯದ ಸದಸ್ಯರು ಹಾಗೂ ಭಾರತ ಸ್ನೇಹಿತರು ಭಾಗವಹಿಸಿದ್ದರು. ಕಾರ್ಯಕ್ರಮವು ವಂದೇ ಮಾತರಂ ಗಾಯನದೊಂದಿಗೆ ಆರಂಭಗೊಂಡಿತು. ಬಳಿಕ ಕತಾರ್‌ನಲ್ಲಿನ ಭಾರತದ ಚಾರ್ಜ್ ದ’ಅಫೇರ್ಸ್ ಸಂದೀಪ್ ಕುಮಾರ್ ಅವರು ಬೆಳಗ್ಗೆ 6:45ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಗಾಯನ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು. ತದನಂತರ ಮಾತನಾಡಿ, ಭಾರತ–ಕತಾರ್ ನಡುವಿನ ಬಲಿಷ್ಠ ಮತ್ತು ಸೌಹಾರ್ದಯುತ ಸಂಬಂಧ, ಇತ್ತೀಚಿನ ಉನ್ನತ ಮಟ್ಟದ ಭೇಟಿಗಳು ಹಾಗೂ ದ್ವಿಪಕ್ಷೀಯ ಸಹಕಾರದ ಕುರಿತು ವಿವರಿಸಿದರು. ಭಾರತವು ಸಂವಿಧಾನದ ಮೌಲ್ಯಗಳನ್ನು ಆಧಾರವಾಗಿಸಿಕೊಂಡು ಬಲಿಷ್ಠ ಹಾಗೂ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮುನ್ನಡೆಯುತ್ತಿರುವುದನ್ನು ಅವರು ಒತ್ತಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎ ಕೋರ್ಸ್ ಅತ್ಯಂತ ಕಷ್ಟಕರವಾದದ್ದೇನೂ ಅಲ್ಲ. ನಿರಂತರ ಅಧ್ಯಯನ ಹಾಗೂ ಬದ್ಧತೆ ಇದ್ದರೆ ಇದನ್ನು ಸುಲಭವಾಗಿ ಸಾಧಿಸಬಹುದು. ಅಲ್ಲದೆ, ಈ ವೃತ್ತಿಗೆ ಯಾವುದೇ ನಿವೃತ್ತಿ ಇಲ್ಲದಿರುವುದರಿಂದ ಜೀವನಪರ್ಯಂತ ದುಡಿಯಬಹುದು ಎಂದು ಕರ್ನಾಟಕ ಲೆಕ್ಕಪರಿಶೋಧಕರ ಸಂಘದ ಮಾಜಿ ಅಧ್ಯಕ್ಷ ಸಿಎ ರಾಘವೇಂದ್ರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಸಿಎ ಫೌಂಡೇಶನ್ ಹಾಗೂ ಸಿಎಸ್’ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಪೊರೇಟ್ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಸಿಎ ಮತ್ತು ಸಿಎಸ್ ಪದವೀಧರರಿಗೆ ಅಪಾರ ಅವಕಾಶಗಳಿವೆ. ವಿದ್ಯಾರ್ಥಿಗಳು ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಭವಿಷ್ಯ ರೂಪಿಸುವ ಕೋರ್ಸ್ ಆಗಿದ್ದು, ಮನಸ್ಸಿಟ್ಟು ಕಲಿಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಕೃತಿಯ ಆರಾಧನೆ ಹಾಗೂ ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ವೈಭವವನ್ನು ಸಾರುವ ‘ನಾಗರಪಂಚಮಿ’ ಹಬ್ಬವನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಕಾಲೇಜು ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಮತ್ತು ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನ ವಿದ್ಯಾರ್ಥಿಗಳು ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬ ಹರಿದಿನಗಳ ಹಿನ್ನೆಲೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಜೊತೆಗೆ, ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆ, ಸದಾಚಾರ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ಈ ಪವಿತ್ರ ಆಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮನೆಯಿಂದ ದೂರವಿದ್ದು ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಹಬ್ಬದ ಆಚರಣೆಯು ಕರಾವಳಿಯ ಕೌಟುಂಬಿಕ ಸೌಹಾರ್ದತೆ ಮತ್ತು ಹಬ್ಬದ ವಾತಾವರಣವನ್ನು ಸೃಷ್ಟಿಸಿಕೊಟ್ಟಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘ-ಸಂಸ್ಥೆಗಳು ಸಮಾಜ ಸೇವಕರು ಈ ಸಮಾಜದ ಆಸ್ತಿಯಾಗಿ ಸಮರ್ಪಣಾ ಮನೋಭಾವದಿಂದ ಮಾಡಿದ ಸೇವಾ ಕಾರ್ಯವನ್ನು ಪ್ರತಿಯೊಬ್ಬರು ಗುರುತಿಸುವಂತ್ತಾಗಬೇಕು ಎಂದು ಸಾಲಿಗ್ರಾಮ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ನುಡಿದರು. ಅವರು ಶನಿವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಘಸಂಸ್ಥೆಗಳಿಗೆ ಸಮಾಜಸೇವಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ಭಗವಂತನ ಮೆಚ್ಚುವ ಕಾರ್ಯವೆಂದರೆ ಅದು ನಿಸ್ವಾರ್ಥ ಸೇವೆ ಸದಾ ಸಮಾಜಮುಖಿ ಕಾರ್ಯದ ಮೂಲಕ ಪಂಚವರ್ಣದಂತಹ ಸಂಘಟನೆಗಳು ಸಮಾಜಕ್ಕೆಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಸಂಘಟನೆ ಪರಿಸರಸ್ನೇಹಿ ಸಾಮಾಜಿಕ ಕಾರ್ಯವನ್ನು ಗುರುತಿಸಿ ಗೌರವ ಸಂಮ್ಮಾನ ನೀಡಲಾಯಿತು. ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟೇಶ ಉಡುಪ, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ, ಸಾಲಿಗ್ರಾಮದ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಮದಾಸ್ ನಾಯಕ್ ಇವರುಗಳನ್ನು ಅಭಿನಂದಿಸಿ ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ದೇಗುಲದ ಆಡಳಿತ ಮಂಡಳಿಯ ಉಪಾಧ್ಯಕ್ಷ ಚಂದ್ರಶೇಖರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಯುಥ್ ರೆಡ್ ಕ್ರಾಸ್ ಘಟಕ ಮತ್ತು ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ‘ಜಿನೆವಾ ಒಪ್ಪಂದ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿಗಳಾದ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಹೆಗ್ಡೆ ಮಾತನಾಡಿ, ಜಿನೆವಾ ಎಂಬ ಸ್ಥಳವಿರುವುದು ಸ್ವಿಟ್ಜರ್ಲ್ಯಾಂಡ್ ನಲ್ಲಿ . ಈ ದೇಶದ ಜಗತ್ತಿನಲ್ಲಿಯೇ ಅತ್ಯಂತ ಶಾಂತಿಯುತ ರಾಷ್ಟ್ರ. ಅಂತರರಾಷ್ಟ್ರೀಯ ಮಟ್ಟದ ವ್ಯವಹಾರದಲ್ಲಿ ಈ ದೇಶ ತಟಸ್ಥ ಧೋರಣೆಯನ್ನು ಪಾಲಿಸುವುದು. ಕಾರಣ ಇದು ಶಾಂತಿ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಸ್ವಭಾವವನ್ನು ಹೊಂದಿದೆ. ಜಗತ್ತಿನಲ್ಲಿ ಯುದ್ಧಗಳಾದಾಗ ಶಾಂತಿಯ ಸಂದೇಶ ಮತ್ತು ಯುದ್ಧದ ಸಂದರ್ಭದಲ್ಲಿ ಗಾಯಗೊಂಡವರು ಸೈನಿಕರು ಮತ್ತು ನೊಂದವರ ಚಿಕಿತ್ಸೆ ಮತ್ತು ಸಂತೈಸುವ ಮೂಲ ಉದ್ದೇಶವನ್ನು ರೆಡ್ ಕ್ರಾಸ್ ಸಂಸ್ಥೆ ಹೊಂದಿದೆ ಎಂದು ಹೇಳಿದರು. ಭಾರತೀಯ ರೆಡ್ ಕ್ರಾಸ್…
