ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆಯನ್ನು ಕಳವು ಮಾಡಿದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಘಂಟೆಯನ್ನು ಯಾರೋ ಕಳ್ಳರು ಕಳವು ಮಾಡಲು ಬಂದಾಗ ಆ ದೇವಸ್ಥಾನ ಸಮೀಪದ ಮನೆಯ ನಿವಾಸಿ ಗಣೇಶ್ ಅವರು ತಮ್ಮ ಶ್ರೇಯಸ್ ಹಾಗೂ ಧೀರಜ್ ಅವರೊಂದಿಗೆ ತೆರಳಿ ನೋಡಿದ್ದಾರೆ. ಆಗ ಒಬ್ಬ ವ್ಯಕ್ತಿ ಘಂಟೆಯನ್ನು ಹಿಡಿದುಕೊಂಡು ಓಡಿ ಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ನಿಂತಿದ್ದ ಕಾರಿನ ಬಳಿ ಇವರೆಲ್ಲ ತೆರಳಿದಾಗ ಆ ಕಾರಿನಲ್ಲಿ ಕುಳಿತ ವ್ಯಕ್ತಿ ಕಾರನ್ನು ಇವರ ಮೇಲೆ ಹತ್ತಿಸಲು ಪ್ರಯತ್ನಿಸಿದ್ದ ಎನ್ನಲಾಗಿದೆ. ಅನಂತರ ಊರವರೆಲ್ಲ ಮಾಹಿತಿ ತಿಳಿದು, ಕಾರಿನ್ನ ಗುರುತು ಪತ್ತೆ ಹಚ್ಚಿದ್ದು, ಈ ವೇಳೆ ಕಾರಿನಲ್ಲಿದ್ದವ ಮುಜಾಹಿದ್ ಹಾಗೂ ಘಂಟೆ ಕದ್ದು ಓಡಿದವ ಸಫಾದ್ ಎಂದು ತಿಳಿದು ಬಂದಿದೆ. ಈ ಆರೋಪಿಗಳು ಘಂಟೆಯನ್ನು ಕಳ್ಳತನ ಮಾಡಿದ್ದಲ್ಲದೆ, ಹಿಡಿಯಲು ಬಂದವರ ಮೇಲೆ ಕಾರನ್ನು ಹಾಯಿಸಿ, ಸಾಯಿಸಲು ಪ್ರಯತ್ನಿಸಿದ್ದಾರೆ ಎಂದು ಗಣೇಶ್ ಬೀಜಾಡಿ ಅವರು ನೀಡಿದ ದೂರಿನಂತೆ ಕುಂದಾಪುರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ಆಶ್ರಯದಲ್ಲಿ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರಿನಲ್ಲಿ 80ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಶಾಲಾ ಮಕ್ಕಳ ಜೊತೆಗೆ ಆಚರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯೋಧರಿಗೊಂದು ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲ್ಯಾನ್ಸ್ ನಾಯಕ್ ಉಮೇಶ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಘಟಕದ ಅಧ್ಯಕ್ಷರಾದ ಶರತ್ ಸೌಡ, ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಶಂಕರನಾರಾಯಣ, ಕಾರ್ಯದರ್ಶಿ ರಂಜಿತ್ ಬೈಲೂರು, ಸತೀಶ್ ನ್ಯಾಕ್ ಕೋಟೇಶ್ವರ, ಶಾಲಾ ಮುಖ್ಯೋಪಾಧ್ಯಾಯರಾದ ರವೀಂದ್ರ ದೇವಾಡಿಗ , ರಂಜಿತ್ ಸೌಡ, ನರಸಿಂಹ ಕೊಂಡಳ್ಳಿ, ಗಣೇಶ್ ನೆಲ್ಲಿಕಟ್ಟೆ, ಸಂದೀಪ ಮರ್ಜಿ, ಸುರೇಶ್ ಮೂಡುಬಗೆ, ವನಜ ಮೊಗವೀರ ಅಂಪಾರು, ನಂದಿನಿ ಅಂಪಾರು, ನೇತ್ರಾವತಿ ಮತ್ತು ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾಡಳಿತ ವತಿಯಿಂದ 30ಕ್ಕೂ ಮಿಕ್ಕಿ ವಿವಿಧ ಇಲಾಖೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಸರಕಾರಿ ನೌಕರರನ್ನು ಗುರುತಿಸಿ ನೀಡುವ ಸರ್ವೋತ್ತಮ ಪ್ರಶಸ್ತಿಗೆ ಕೋಡಿ ಹಾಗೂ ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ಉಡುಪಿ ಜಿಲ್ಲಾ ಆಡಳಿತದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿವಿಧ ಜನಪ್ರತಿನಿಧಿಗಳು ಸಭೆಯ ಉಪಸ್ಥಿತಿಯಲ್ಲಿ ಗೌರವ ಸನ್ಮಾನ ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಹರ್ತಟ್ಟು ನವೋದಯ ಫ್ರೆಂಡ್ಸ್ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ಸುಮಾರು ರೂ.50 ಸಾವಿರ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಲೋರ್ಕಾಣೆಗೊಳಿಸಲಾಯಿತು. ತಂಗುದಾಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಮಾತನಾಡಿ, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಅಭಿನಂದನೀಯ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಪರಸ್ಪರ ಸಹಕಾರ ಹಾಗೂ ಜವಾಬ್ದಾರಿಯ ಮನೋಭಾವವನ್ನು ಬೆಳೆಸುತ್ತವೆ ಎಂದರು. ಇದೇ ಸಂದರ್ಭದಲ್ಲಿ ಹರ್ತಟ್ಟು ಗ್ರಾಮವನ್ನು ಹಸಿರು ಗ್ರಾಮವನ್ನಾಗಿಸುವ ಉದ್ದೇಶದಿಂದ ಹಸಿರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಮಹಿಳಾ ಸದಸ್ಯರಿಗೆ ೧೫೦ ಸಸಿಗಳನ್ನು ವಿತರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸುವಂತೆ ಕರೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಅಧ್ಯಯನ ಭೇಟಿಯ ಭಾಗವಾಗಿ ವಿದ್ಯಾರ್ಥಿಗಳು ಸ್ವರಾಜ್ಯ – 75 ತಂಡ ಮೂಡು ಗಿಳಿಯಾರಿನ ಜನ ಸೇವಾ ಟ್ರಸ್ಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕ, ಕೋಟದ ಹಸ್ತ ಚಿತ್ತ ಫೌಂಡೇಶನ್, ಉಸಿರು ಕೋಟ, ಜೈ ಕುಂದಾಪುರ ಸೇವಾ ಟ್ರಸ್ಟ್ ಹಾಗೂ ಅದಿಮ ಕಲಾ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಆಯೋಜಿಸಿದ ಕೋಟೇಶ್ವರದ ಸರ್ಜನ್ ಆಸ್ಪತ್ರೆಯ ಆವರಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಹುಲಿಕಲ್ಲು ನಾಗಭೂಷಣ್ ರಾವ್ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆ ಸಲ್ಲಿಸಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಭೂಸೇನಾ ಯೋಧ ಕರುಣಾಕರ ಗಾಣಿಗ ನಾಮಫಲಕ ಅನಾವರಣ ಮಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಕದ್ರಿಕಟ್ಟು ಅಮೃತ್ ಯುವಕ ಸಂಘದ ವತಿಯಿಂದ ಕದ್ರಿಕಟ್ಟು ಪರಿಸರದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನೂತನ ಬಸ್ ತಂಗುದಾಣವನ್ನು ನಿರ್ಮಿಸಿದ್ದು ಇದನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಅಮೃತ್ ಯುವಕ ಸಂಘದ ಅಧ್ಯಕ್ಷ ಜಗನಾಥ ಕಾಂಚನ್, ಪದಾಧಿಕಾರಿಗಳು, ಗಣ್ಯರಾದ ಕವಿತಾ ಸದಾನಂದ ಪೂಜಾರಿ, ಚಂದ್ರ ಆಚಾರ್, ಜಿ.ಎಸ್. ಆನಂದ್ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರ ಪೂಜಾರಿ ಕದ್ರಿಕಟ್ಟು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸದ್ದಿ.ಕುಂದಾಪುರ: ಸುಜ್ಷಾನ ಎಜುಕೇಷನಲ್ ಟ್ರಸ್ಟ್ ಕುಂದಾಪುರ ಹಾಗೂ ಇವರ ಅಂಗಸಂಸ್ಥೆಗಳ ಸಹಭಾಗಿತ್ವದಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು. ಧ್ವಜಾರೋಹಣ ಪೂರ್ಣಗೊಳಿಸಿದ ಮಾನ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಾದ ಕೆ. ದಿವಾಕರ್ ಮಾತನಾಡಿ ”ನಮ್ಮ ದೇಶದ ಇತಿಹಾಸವು ನೂರಾರು ವರ್ಷಗಳು ಊಟಿ, ಸಾಮೂಹಿಕ ಹತ್ಯೆ, ದಾಳಿ, ಹೊರಟಾಗಳೆಂದಲೇ ಕೂಡಿದರೂ ಕೂಡ ನಾವು ಇಂದು ಅಭಿವೃದ್ಧಿ ಪದದಲ್ಲಿ ಅತ್ಯಂತ ವೇಗವಾಗಿ ಸಾಗುತ್ತಿದ್ದೇವೆ. ಇಂದು ಇಲ್ಲಿನ ವಿದ್ಯಾರ್ಥಿಗಳ ಕಣ್ಣುಗಳಲ್ಲಿ ನಮ್ಮ ದೇಶದ ಉಜ್ವಲ ಭವಿಷ್ಯದ ಹೊಳವು ಎದ್ದು ಕಾಣುತ್ತಿದೆ ಎಂದು ಯುವ ಪೀಳೆಗೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದರು. ವಿಜೃಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಸರಿ ಬಿಳಿ ಹಸಿರು ಬಣ್ಣದ ಉಡುವು ತೊಟ್ಟು ರಾಷ್ಟ್ರಧ್ವಜ ರೂಪಿಸಿರುವುದು ಎಲ್ಲ ಗಮನ ಸಳೆಯಿತು. ವಿದ್ಯಾರ್ಥಿಗಳ ಶಿಸ್ತಿನ ಸ್ವಾಗತದ ಜೊತೆಗೆ ನೆರೆದ ಎಲ್ಲರ ಕೈಯಲ್ಲಿ ರಾಷ್ಟ್ರಧ್ವಜ ಗೋಚರಿಸಿದವು. ಕಾರ್ಯಕ್ರಮದ ವಿಶೇಷ ಅಂಗವಾಗಿ ಖ್ಯಾತ ಗಾಯಕರಾಗಿರುವ ಜಗದೀಶ್ ಪುತ್ತೂರು ಇವರ ಸಾರಥ್ಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪಡಿಯಾರ್ ನರ್ಸಿಂಗ್ ಹೋಮ್ ಸ್ಥಾಪಕ, ಆರ್.ಎಸ್.ಎಸ್ ಪ್ರಮುಖರಾಗಿದ್ದ ಡಾ ಎಸ್. ಎನ್. ಪಡಿಯಾರ್ (84) ಅವರು ನಿಧನರಾಗಿದ್ದಾರೆ. ಕುಂದಾಪುರದಲ್ಲಿ ಪಡಿಯಾರ ನರ್ಸಿಂಗ್ ಹೋಮ್ ಹಾಗೂ ಆ್ಯಂಬುಲೆನ್ಸ್ ಸೇವೆ ಆರಂಭಿಸಿದ್ದರು. ಡಾ. ಪಡಿಯಾರ್ ಅವರು ವೈದ್ಯಕೀಯ ವೃತ್ತಿಯ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಲವು ಜವಾಬ್ದಾರಿ ನಿಭಾಯಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೇವಾ ಸಂಗಮ ಶಿಶುಮಂದಿರಗಳ ಸ್ಥಾಪನೆ, ವಿಷ್ಣು ಸಹಸ್ರನಾಮದ ವಿಶೇಷತೆಯನ್ನು ಸಾರುತ್ತಾ ಜನಸಾಮಾನ್ಯರತ್ತಾ ಕೊಂಡೊಯ್ದ ಹೆಗ್ಗಳಿಕೆ ಇವರದ್ದು. ಮೂಲತಃ ಉಪ್ಪುಂದದವರಾದ ಪಡಿಯಾರ್ ಅವರು ಕುಂದಾಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದರು. ಅವರು ಮಡದಿ ಹಾಗೂ ಇಬ್ಬರು ಪುತ್ರರು, ಬಂಧು ಬಳಗವನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕತಾರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಕಾರ್ಮಿಕ ಮತ್ತು ಸಮುದಾಯ ಕಲ್ಯಾಣ, ವೀಸಾ ಮತ್ತು ಒಸಿಐ) ಡಾ. ಈಶ್ ಸಿಂಘಾಲ್ ಅವರಿಗೆ ಗೌರವ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಲು ಇಂಡಿಯನ್ ಕಮ್ಯುನಿಟಿ ಬೆನೆವೊಲೆಂಟ್ ಫೋರಮ್ (ICBF) ಅದ್ಧೂರಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ಡಾ. ಈಶ್ ಸಿಂಘಾಲ್ ಅವರು ನೀಡಿದ ಸಮರ್ಪಿತ ಸಾರ್ವಜನಿಕ ಸೇವೆ, ಸುಲಭ ಲಭ್ಯತೆಯ ನಾಯಕತ್ವ ಹಾಗೂ ನಿರಂತರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಲು ಭಾರತೀಯ ರಾಯಭಾರ ಕಚೇರಿಯ ಪ್ರಮುಖ ರಾಜತಾಂತ್ರಿಕರು, ಭಾರತೀಯ ಉನ್ನತ ಶೃಂಗ ಸಂಸ್ಥೆಗಳ (Apex Bodies) ಮುಖಂಡರು ಮತ್ತು ವಿವಿಧ ಸಂಯೋಜಿತ ಸಮುದಾಯ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ (DCM) ಸಂದೀಪ್ ಕುಮಾರ್, ಪ್ರಥಮ ಕಾರ್ಯದರ್ಶಿ ಹರೀಶ್ ಪಾಂಡೆ ಹಾಗೂ ಪ್ರಮುಖ ಉನ್ನತ ಶೃಂಗ ಸಂಸ್ಥೆಗಳ ನಿರ್ವಹಣಾ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರಾವಣ ಮಾಸ ಎಂಬುವುದು ಶ್ರದ್ಧಾ ಭಕ್ತಿ ಸಂಸ್ಕೃತಿಯ ಪ್ರತೀಕವಾಗಿದೆ. ಇದು ಸಾಲಿಗ್ರಾಮ ದೇಗುಲ ಜಾತ್ರಾ ಸಡಗಡವಾಗಿ ರೂಪುಗೊಂಡಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ಹೇಳಿದರು. ಅವರು ಶನಿವಾರ ಒಂದು ತಿಂಗಳುಗಳ ಕಾಲ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಾನಿಧ್ಯದಲ್ಲಿ ಪ್ರತಿ ಶನಿವಾರ ಶ್ರಾವಣ ಮಾಸ ಸಾಂಸ್ಕೃತಿಕ ಸಡಗರಕ್ಕೆ ಚಾಲನೆ ನೀಡಿ ಪುಣ್ಯ ಕ್ಷೇತ್ರಗಳಲ್ಲಿ ಸಾಲಿಗ್ರಾಮ ದೇಗುಲ ತನ್ನದೆ ಆದ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ದೇಗುಲವನ್ನು ಸಂದರ್ಶಿಸುತ್ತಾರೆ ಇದಕ್ಕೆ ಶ್ರಾವಣ ಮಾಸ ತನ್ನದೆ ಆದ ವೈಶಿಷ್ಟತೆಯನ್ನು ಪಡೆದುಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ದೇಗುಲದ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕಾರ್ಯದರ್ಶಿ ಪರಶುರಾಮ ಭಟ್ ,ಸದಸ್ಯರಾದ ಚಂದ್ರಶೇಖರ ನಾವಡ, ತಾರನಾಥ ಹೊಳ್ಳ, ಮೆನೇಜರ್ ಗಣೇಶ ಭಟ್ಟ ಉಪಸ್ಥಿತರಿದ್ದರು.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಯಕ್ಷಗಾನ ತಾಳಮದ್ದಲೆ ಮೀನಾಕ್ಷಿ ಕಲ್ಯಾಣ ಜರಗಿತು.ದೇಗುಲದಲ್ಲಿ ಸಾವಿರಾರು ಭಕ್ತರು…
