ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು. ಕುಂದಾಪುರ ತಾಲೂಕಿನ ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಕ್ರೋಢ ಶ್ರೀ ಶಂಕರನಾರಾಯಣ, ಸಿದ್ದಾಪುರ ಸಮೀಪದ ಹೊಳೆ ಶಂಕರನಾರಾಯ, ಅಮಾಸೆಬೈಲು ಸಮೀಪದ ಮಾಂಡವಿ ಶಂಕರನಾರಾಯಣ, ಬೆಳ್ವೆ ಗ್ರಾಮದ ಬೆಳ್ವೆ ಶಂಕರನಾರಾಯಣ, ಅವರ್ಸೆ ಗ್ರಾಮದ ಆವರ್ಸೆ ಶಂಕರನಾರಾಯಣ. ಕೋಟೇಶ್ವರ ಕೋಟಿಲಿಂಗೇಶ್ವರ ದೇಗುಲ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಕೆದೂರು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ದೇಲಟ್ಟು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ಮೈಲಾರೇಶ್ವರ ದೇವಸ್ಥಾನ, ಮರಾತೂರು ಮಹಾಲಿಂಗೇಶ್ವರ ದೇವಸ್ಥಾನ, ಯಡಾಡಿ ಮಹಾಲಿಂಗೇಶ್ವರ ದೇವಸ್ಥಾನ, ಶಾನಾಡಿ ಬೆಳಗೋಡು ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರುಮಹಾಲಿಂಗೇಶ್ವರ ದೇವಸ್ಥಾನ, ಕುಂಭಾಸಿ ಮಹಾಲಿಂಗೇಶ್ವರ ದೇಗುಲ, ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಮೂಡುಗಲ್ಲು ಶ್ರೀ ಕೇಶವನಾಥ ದೇವಾಲಯ, ಹಿಲ್ಕೋಡು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಫೆ.20ರ ಮಧ್ಯಾಹ್ನ 2:30ಕ್ಕೆ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ಜರುಗಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಬೈಂದೂರಿನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮಹತ್ವಪೂರ್ಣವಾಗಿದೆ. ಅವರು ಚುನಾವಣೆಗೆ ಮಾರ್ಗದರ್ಶನ ಹಾಗೂ ಹೊಸ ದಿಕ್ಸೂಚಿ ನೀಡಲಿದ್ದಾರೆ ಎಂದರು. ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರ ಸಮಾವೇಶಕ್ಕೆ ಇಪ್ಪತ್ತು ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ 200 ಬಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ತಯಾರಿ ಮಾಡಲಾಗುತ್ತಿದೆ. ರಾಷ್ಟ್ರೀಯ ಅಧ್ಯಕ್ಷರು ಉಡುಪಿಯಲ್ಲಿ ಬೆಳಿಗ್ಗೆ ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕೊಡಪಾಡಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಮುಳ್ಳಿಕಟ್ಟೆಗೆ ರಸ್ತೆ ಮಾರ್ಗದಲ್ಲಿ ಬರಲಿದ್ದಾರೆ. ಪೂರ್ವಭಾವಿಯಾಗಿ ವಿವಿಧ ಶಕ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ನಾಲ್ಕು ಕಡೆಗಳಲ್ಲಿ ಫೆ.19ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾವಹಿಸುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಫೆ.19ರ ಬೆಳಿಗ್ಗೆ 9:30ಕ್ಕೆ ಬೈಂದೂರು ಯಡ್ತರೆ ಬೈಪಾಸ್ ಬಳಿ, 11:30ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ, ಮಧ್ಯಾಹ್ನ 3ಕ್ಕೆ ವಂಡ್ಸೆಯಲ್ಲಿ ಹಾಗೂ ಸಂಜೆ 5 ಗಂಟೆಗೆ ಸಿದ್ಧಾಪುರ ಪೇಟೆಯಲ್ಲಿ ಪ್ರತ್ಯೇಕ ಕಾರ್ಯಕ್ರಮಕ್ಕೆ ತಯಾರಿ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಆರ್.ವಿ. ದೇಶಪಾಂಡೆ, ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಪಕ್ಷದ ವೀಕ್ಷಕರು, ಕೆಪಿಸಿಸಿ ಪ್ರಮುಖರು, ಪಕ್ಷಕದ ವಿವಿಧ ನಾಯಕರು ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದಾನಿಗಳಾದ ಉದ್ಯಮಿ ಸುನಿಲ್ ಆರ್. ಶೆಟ್ಟಿ ಬೆಂಗಳೂರು ಇವರು ಕೊಡುಗೆಯಾಗಿ ನೀಡಿರುವ ನೂತನ ಬ್ರಹ್ಮರಥವು ಬುಧವಾರ ರಾತ್ರಿ ಪುರಪ್ರವೇಶಗೊಂಡಿತು. ನಂತರ ದೇವಳದ ಹೊರಪ್ರಾಂಗಣದಲ್ಲಿ ತಂತ್ರಿ ಹಾಗೂ ಪ್ರಧಾನ ಅರ್ಚಕ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಾಸ್ತು ರಾಕ್ಷೋಘ್ನಹೋಮ ಹಾಗೂ ಸುದರ್ಶನ ಯಾಗ ನೆರವೇರಿಸಲಾಯಿತು. ಗುರುವಾರ ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಬಿಸಲಾದ ಧಾರ್ಮಿಕ ಕಾರ್ಯಗಳು ಕ್ರಮವಾಗಿ ರಜ್ಜು ಬಂಧನ, ಹಳೆ ರಥದ ಕಲೆಯನ್ನಿಳಿಸಿ ಹೊಸ ರಥಕ್ಕೆ ಕಲಾ ಸಂಕೋಚ ನೀಡಲಾಯಿತು. ಪಂಚಕಲಾಸಂಕೋಚ ಹೋಮ, ನಂತರ ಅಭಿಷೇಕ, ನೂತನ ರಥದ ಪೀಠಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 12-15ಕ್ಕೆ ದಾನಿಗಳು ನೂತನ ರಥವನ್ನು ದೇವಳಕ್ಕೆ ಹಸ್ತಾಂತರಿಸಿ ಲೋಕಾರ್ಪಣೆ ಮಾಡಿದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಹಾಗೂ ಕೊಲ್ಲೂರು ದೇವಳದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ವೀಣಾ ಬಿ. ಎಂ., ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೀರೆತ್ತುವಾಗ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಶುಕ್ರವಾರ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ. ಉಳ್ತೂರು ನಿವಾಸಿ ರತ್ನಾವತಿ ಶೆಟ್ಟಿ (52) ಎಂಬುವವರು ಬೆಳಿಗ್ಗೆ ಬಾವಿಯಿಂದ ನೀರೆತ್ತುವಾಗ ಆಕಸ್ಮಿಕ ಕಾಲು ಜಾರಿ 20 ಅಡಿ ಆಳದ ಬಾವಿಗೆ ಬಿದ್ದರು. ತಕ್ಷಣ ಮನೆಯವರು ಅಗ್ನಿ ಶಾಮಕ ದಳದವರಿಗೆ ತಿಳಿಸಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಬಾವಿಗೆ ಇಳಿದು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬಾವಿಯಲ್ಲಿ ಸಾಕಷ್ಟು ನೀರಿದ್ದುದರಿಂದ ಮಹಿಳೆಗೆ ಪೆಟ್ಟಾಗಿಲ್ಲ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಫೆ 17: 2023-24ನೇ ಸಾಲಿನ 3 ಲಕ್ಷ 7 ಸಾವಿರ ಕೋಟಿ ಗಾತ್ರದ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಂಡಿಸಲಾಗುತ್ತಿದೆ. ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ ವರ್ಷಗಳ ಅವಧಿಗೆ 2 ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು. ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ನೀಡುತ್ತಿರುವ ಡೀಸೆಲ್ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್ಗಳಿಂದ 2 ಲಕ್ಷ ಹೆಚ್ಚಿಸಲಾಗುವುದು. ಇದರಿಂದ ಕಿಲೋ ದರದಲ್ಲಿ ಲೀಟರ್ಗಳವರೆಗೆ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ. ಆಳ ಸಮುದ್ರ ಮೀನುಗಾರಿಕೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಡುವೆ ಕೆಲಸ ಮಾಡುವ ಲೈನ್ ಮ್ಯಾನ್ ಗಳು ದೇಶ ಕಾಯುವ ಯೋಧರಿಗೆ ಸಮಾನ. ಮಳೆ ಗಾಳಿ ಬಿಸಿಲು ಚಳಿ ಎನ್ನದೆ ತುರ್ತು ಪರಿಸ್ಥಿತಿಯಲ್ಲಿ ಜೀವದ ಹಂಗು ತೊರೆದು ಅಪಾಯಕಾರಿ ವಿದ್ಯುತ್ ಜೊತೆ ಕೆಲಸ ಮಾಡುವ ಇವರುಗಳು ನಮ್ಮ ಹೆಮ್ಮೆಯ ಸೈನಿಕರಿದ್ದಂತೆ ಎಂದು ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಜೆಸಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಯವರು ಹೇಳಿದರು. ಜೆ ಸಿ ಐ ಉಪ್ಪುಂದದ ವತಿಯಿಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಸಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದಲ್ಲಿ ಮೆಸ್ಕಾಂ ಬೈಂದೂರು ಉಪ ವಿಭಾಗದಲ್ಲಿ ಪವರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿರುವ ಜೆಸಿ ಅನುದೀಪ ಅವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೆಸಿ ನಾಗರಾಜ್ ಪೂಜಾರಿ, ಲೇಡಿ ಜೆಸಿ ಸಂಯೋಜಕರಾದ ಜೆಸಿ ರೇಖಾ, ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಜೆಸಿ ನಿಶಾ ಶೆಟ್ಟಿ, ಹಾಗೂ ಅನುದೀಪ ಅವರ ಪತ್ನಿ ಉಷಾ ಉಪಸ್ಥಿತರಿದ್ದರು. ಪೂರ್ವ ಅಧ್ಯಕ್ಷರಾದ ಜೆಸಿ ಸುಬ್ರಹ್ಮಣ್ಯ ಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಕೆಲವೇ ವರ್ಗದವರ ಪರವಾಗಿರದೇ ಸಮಾಜದ ಎಲ್ಲಾ ವರ್ಗದ ಜನರ ದನಿಯಾಗಿ, ನಿರಂತರ ಶ್ರಮವರಿಯದ ಸಮರೋಪಾದಿಯ ಹೋರಾಟ ಮಾಡಿದರು. ಅದರ ಫಲವೇ ನಮ್ಮ ಈ ಸಂವಿಧಾನ. ಅದನ್ನು ಜತನದಿಂದ ರಕ್ಷಿಸುವುದು ಇಂದಿನ ತುರ್ತು ಆಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಉಡುಪಿ ಜಿಲ್ಲೆಯ ಸಂಘಟನಾ ಸಂಚಾಲಕ ವಾಸುದೇವ ಮುದೂರು ಅಭಿಪ್ರಾಯಪಟ್ಟರು. ಅವರು ಈ ಶೈಕ್ಷಣಿಕ ವರ್ಷದುದ್ದಕ್ಕೂ ನಡೆದ ಜಿಲ್ಲಾ ಮಟ್ಟದ “ಅಂಬೇಡ್ಕರ್ ಓದು” ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಧೇಶಿಸಿ ಮಾತನಾಡಿದರು. ಕಳೆದ ವರ್ಷ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಭಾವಚಿತ್ರ ಹಸ್ತಾಂತರದೊಂದಿಗೆ ಆರಂಭವಾದ ಈ ಕಾರ್ಯಕ್ರಮ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನದ ಕುರಿತಾದ ಯಾವುದೇ ಒಂದು ಮಹತ್ವದ ಘಟನೆಯನ್ನು ಆಧರಿಸಿದ ವೀಡಿಯೋ ಭಾಷಣ, ಜೈ ಭೀಮ್ ಕ್ವಿಜ್, ಪೋಸ್ಟರ್ ರಚನೆ, ಸಂವಿಧಾನ ಪ್ರಸ್ತಾವನೆಯ ಸಮೂಹಗಾನ, ಅಂಬೇಡ್ಕರ್ ಹಾಗೂ ಅವರಿಗೆ ಸಂಬಂಧಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ (Dadasaheb Phalke Internatinal film Award) ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ ಎಂಡ್ ಹೋಟೆಲ್ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ (Kantara Film) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ. ಕಾಂತಾರ ಪ್ರಿಕ್ವೆಲ್ಗೆ ಸದ್ಯ ಸಿದ್ಧತೆ ನಡೆಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.14: ತಾಲೂಕಿನ ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್ ಮೇಲ್ಜಡ್ಡು ಸಮೀಪ ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಹಾರ್ಮಣ್ ನಿವಾಸಿ ಪ್ರಜ್ವಲ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಶೆಟ್ಟಿ ಬೇರೆಯವರ ತೋಟದ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ ಸಂಜೆ ಸುಮಾರು 5 ಗಂಟೆಗೆ ತೋಟದ ಕೆಲಸ ಮುಗಿಸಿ ತನ್ನ ಶೈನ್ ಬೈಕಿನಲ್ಲಿ ಹಾರ್ಮಣ್ ಕಡೆಗೆ ಪ್ರಯಾಣಿಸುತ್ತಿದ್ದ. ಇದೇ ಸಂದರ್ಭ ಯತೀಶ್ ಎಂಬಾತ ಪಿಕಪ್ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್ ಮೇಲ್ಜಡ್ಡು ಸಮೀಪ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಜ್ವಲ್ ಶೆಟ್ಟಿಯ ಹೆಲ್ಮೆಟ್ ಹಾರಿ ಹೋಗಿದ್ದು, ತಲೆ ರಸ್ತೆಗಪ್ಪಳಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೊಲ್ಲೂರು ಠಾಣೆಯಲ್ಲಿ ಪ್ರಕರಣ…
