ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಸಾಧಕರನ್ನು ಅಭಿನಂದಿಸುವ ಮೂಲಕ ಸಮಾಜದಲ್ಲಿ ಸ್ಫೂರ್ತಿ ಮತ್ತು ಪ್ರೇರಪಣೆ ನೀಡಿದಂತಾಗುತ್ತದೆ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುಗಳನ್ನು ಗೌರವಿಸುವುದು ಅತ್ಯಂತ ಯೋಗ್ಯವಾದುದು. ಧಾರ್ಮಿಕ ವೇದಿಕೆಯಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಿಗೂ ಅವಕಾಶ ದೊರೆತಾಗ ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು. ಈ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಶೈಲಜಾ ಶೆಟ್ಟಿ ವಂಡ್ರೆ, ಹಾಗೂ ಆದರ್ಶ ಆಸ್ಪತ್ರೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುಪ್ಪಯ್ಯ ಮರಾಠಿ ವಂಡ್ಡೆ ಹಾಗೂ ವಂತ್ಸೆ ಅಂಗನವಾಡಿಯಲ್ಲಿ ಸುದೀರ್ಘ 42 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮೂಕಾಂಬು ಅವರನ್ನು ಸನ್ಮಾನಿಸಲಾಯಿತು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮೊಗವೀರ ಯುವ ಸಂಘಟನೆ ರಿ. ಹಾಲಾಡಿ – ಶಂಕರನಾರಾಯಣ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ, ರಕ್ತನಿಧಿ ವಿಭಾಗ ಕೆ.ಎಮ್.ಸಿ. ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಹಾಲಾಡಿ – ಬಿದ್ಕಲ್ಕಟ್ಟೆ, ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ –ಹುಣ್ಸೆಮಕ್ಕಿ, ನಾಗಲಕ್ಷ್ಮೀ ಭಜನಾ ಮಂಡಳಿ ಬಿದ್ಕಲ್ಕಟ್ಟೆ, ಹಳೆ ವಿದ್ಯಾರ್ಥಿಗಳ ಸಂಘ KPS ಬಿದ್ಕಲ್ಕಟ್ಟೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೊಳಹಳ್ಳಿ ಮತ್ತು ಬಿದ್ಕಲ್ಕಟ್ಟೆ, ರಿಕ್ಷಾ ಮತ್ತು ಟ್ಯಾಕ್ಸಿ ಮಾಲಕರು ಹಾಗೂ ಚಾಲಕರು ಬಿದ್ಕಲ್ಕಟ್ಟೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆದಿತ್ಯವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ಕಟ್ಟೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷರು ಶರತ್ ಸೌಡ, ಜಿಲ್ಲಾ ಸಂಘಟನೆಯ ಉಪಾಧ್ಯಕ್ಷರಾದ ಅಶೋಕ್ ತೆಕ್ಕಟ್ಟೆ, ಲಯನ್ಸ್ ಕ್ಲಬ್ ಹಾಲಾಡಿ-ಬಿದ್ಕಲ್ಕಟ್ಟೆ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ -ಹುಣ್ಸೆಮಕ್ಕಿ ಅಧ್ಯಕ್ಷರಾದ ಕರುಣಾಕರ ಶೆಟ್ಟಿ, …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಮುಂದುವರಿದಿದ್ದಾರೆ. ಮಕ್ಕಳ ಈ ಬುದ್ಧಿಮತ್ತೆಗೆ ತಕ್ಕ ಹಾಗೆ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ನಿರಂತರವಾಗಿ ಪರಿಷ್ಕರಿಸಿಕೊಳ್ಳಬೇಕು” ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ವಿದ್ಯಾರಣ್ಯ ಶಾಲೆಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಲಯನ್ಸ್ ಕ್ಲಬ್ ತಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಲಯನ್ಸ್ ಕ್ವೆಸ್ಟ್ ಟೀಚರ್ ಟ್ರೈನಿಂಗ್ ಕಾರ್ಯಾಗಾರ’ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಲಯನ್ಸ್ ಸಂಸ್ಥೆಯು ಹಮ್ಮಿಕೊಳ್ಳುವ ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಸಹಾಯಕವಾಗಿವೆ. ಇಂದಿನ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ಮುಂದುವರಿದಿದ್ದಾರೆ ಹಾಗಾಗಿ ಮಕ್ಕಳಿಗೆ ತಕ್ಕ ಹಾಗೇ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ಅಪ್ಡೇಟ್ ಮಾಡಿಕೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಮನಸ್ಸನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ: 307, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸ್ಶೆಟಿಯ 106ನೇ ವಾರ್ಷಿಕ ಸಾಮಾನ್ಯ ಸಭೆಯು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಭಾನುವಾರ ಜರುಗಿತು. ಸಹಕಾರಿಯ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯ ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2025-26ನೇ ಸಾಲಿನಲ್ಲಿ 1.42 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.17 ಡಿವಿಡೆಂಡ್ ಘೋಷಿಸಿದರು. ವರದಿ ಸಾಲಿನ ಅಂತ್ಯದಲ್ಲಿ ಸಂಘವು 4,114 ಸದಸ್ಯರು, 104.30 ಕೋಟಿ ಠೇವಣಿ, 89.44 ಕೋಟಿ ರೂ. ಸದಸ್ಯರ ಸಾಲ, 30.92 ಕೋಟಿ ಹೂಡಿಕೆ, 6.55 ಕೋಟಿ ವಿವಿಧ ನಿಧಿಗಳನ್ನು ಹೊಂದಿದ್ದು, ಸೌಹಾರ್ದ ಕಾಯಿದೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಸೌಹಾರ್ದ ಸಹಕಾರಿ ಸಂಘಗಳಲ್ಲಿ ಮಂಚೂಣಿಯಲ್ಲಿದೆ. ಕಳೆದ ನವಂಬರ್ನಲ್ಲಿ ಮಂಗಳೂರಿನಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯೂ ಲಭಿಸಿದೆ ಎಂದು ಹೇಳಿದರು. ಉಡುಪಿ ಜಿಲ್ಲೆಯ ಮರವಂತೆ, ಸಿದ್ದಾಪುರ ಹಾಗೂ ಸಾಸ್ತಾನದಲ್ಲಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಯುವ ಜನೋತ್ಸವ-2026’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಜಿತಾ ನಿಧಿ ಮತ್ತು ಪ್ರತೀಕ್ ಜಿ.ಎಂ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದಲ್ಲಿ ವಿವಿಧ ಸಂಸ್ಥೆಗಳು ಸುಮಾರು 45 ಸಾವಿರ ಕೋಟಿ ರೂ. ಗಳನ್ನು ಸಿಎಸ್ಆರ್ ನಿಧಿಗಾಗಿ ಮೀಸಲಿರಿಸಿವೆ. ಕಳೆದ ಮೂರು ವರ್ಷಗಳಲ್ಲಿ ಸರಕಾರಿ ಶಾಲೆಗಳನ್ನು ಉಳಿಸಲು 300 ಟ್ರೇಸ್ ಯೋಜನೆ ರೂಪಿಸಲಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳ ಸಿಎಸ್ಆರ್ ನಿಧಿಯಿಂದ 30 ಕೋಟಿ ರೂ. ಅನುದಾನ ವಿವಿಧ ಉದ್ದೇಶಗಳಿಗೆ ವಿನಿಯೋಗಿಸಿ ಕೊಳ್ಳಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ ಅವರು ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಮರವಂತೆಯ ನೇತಾಜಿ ಸುಭಾಷ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕೆನರಾ ರೋಬೆಕೊ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ನೀಡಲಾದ ಸೈಕಲ್ಗಳನ್ನು ಶನಿವಾರ ವಿತರಿಸಿ ಮಾತನಾಡಿದರು. ಕಳೆದ ವರ್ಷ ಇದೇ ಸಂಸ್ಥೆಯಿಂದ ನಮ್ಮ ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆಯಾಗಿದೆ. ಜೀವನದಲ್ಲಿ ಅವರ ನಗುವಿಗೆ ಮತ್ತು ಅವರ ಭವಿಷ್ಯಕ್ಕೆ ಈ ಸೈಕಲ್ ಕಾರಣವಾಗಬೇಕು. ವಿದ್ಯಾರ್ಥಿಗಳು ಸುರಕ್ಷತೆ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸುಳ್ಯದ ಎನ್ಎಂಸಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ-ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡಗಳು ಎರಡೂ ವಿಭಾಗಗಳಲ್ಲಿ ಸತತ 23ನೇ ಬಾರಿಗೆ ಸಮಗ್ರ ಚಾಂಪಿಯನ್ಶಿಪ್ ಪಡೆದುಕೊಂಡರು. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ, ಒಟ್ಟು 10 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ಶಿಪ್ನ್ನು ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ಟ್ರೋಪಿಯೊಂದಿಗೆ ತನ್ನದಾಗಿಸಿಕೊಂಡರು. ಪುರುಷರ ವಿಭಾಗದಲ್ಲಿ ಶೈಲೇಶ್ ಪ್ರಥಮ, ಸುನಿಲ್ ದ್ವಿತೀಯ ಹಾಗೂ ರೋಹಿತ್ ತೃತೀಯ ಸ್ಥಾನ ಪಡೆದರೆ, ಜುಗುನ್ನು ಕುಮಾರ್ ನಾಲ್ಕನೇ, ರೋಹನ್ ಕುಮಾರ್ ಐದನೇ ಹಾಗೂ ಅಜಯ್ ಕುಮಾರ್ ಪಾಟೀಲ್ ಆರನೇ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿಯೂ ಆಳ್ವಾಸ್ ತಂಡ 10 ಅಂಕಗಳೊAದಿಗೆ ಸಮಗ್ರ ಚಾಂಪಿಯನ್ಶಿಪ್ ಪಡೆದು ಕೈಕುರೆ ಶ್ರೀ ರಾಮಣ್ಣ ಗೌಡ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಭಾಗೀರಥಿ ಪ್ರಥಮ, ಯಾಶಿ ದ್ವಿತೀಯ ಹಾಗೂ ಆರತಿ ತೃತೀಯ ಸ್ಥಾನ ಪಡೆದರು. ಆರಾಧನಾ ನಾಲ್ಕನೇ, ಆರತಿ ಅರ್ಜುನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಬೇಟೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. *17ರ ವಯೋಮಾನದ ಬಾಲಕರ ವಿಭಾಗದಲ್ಲಿ ಅನ್ವೇಷಣ್, ಪ್ರದ್ವಿನ್, ನಿಹಾನ್ ಮತ್ತು ಡೆಲ್ವಿನ್ ಹಾಗೂ ಬಾಲಕಿಯರ ವಿಭಾಗದಲ್ಲಿ ಶರಣ್ಯ, ಕೀರ್ತನಾ, ಚಾರ್ವಿ, ಆಯುಷಿ, ಅನಿಷ್ಕಾ ಮತ್ತು ಸಾನಿಧ್ಯಾ ಪ್ರಥಮ ಸ್ಥಾನ ಗಳಿಸಿದರು. *14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಚಿದ್, ರಿತ್ವಿಕ್, ಪ್ರತಿಕ್, ಆಯುಷ್, ಯಶ್ವಿನ್ ಮತ್ತು ಸಾತ್ವಿಕ್ ಪ್ರಥಮ ಸ್ಥಾನ ಸಹಿತ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಗೆ ಆಯ್ಕೆಗೊಂಡರು. ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಉತ್ತೇಜನ, ಪ್ರತಿನಿತ್ಯದ ಕಟ್ಟುನಿಟ್ಟಿನ ತರಬೇತಿ ತರಗತಿಗಳು, ವಿದ್ಯಾರ್ಥಿಗಳು ಮತ್ತು ತರಬೇತುದಾರರ ನಿರಂತರ ಪರಿಶ್ರಮದಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈಗಾಗಲೇ ಭರ್ಜರಿ ಜಯಭೇರಿ ಬಾರಿಸುತ್ತ ಹೊಸ ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಂಜಿನಿಯರ್ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಭಾರತೀಯ ವೈಮಾನಿಕ ಕ್ಷೇತ್ರದ ಖ್ಯಾತ ವಿಜ್ಞಾನಿ ಹಾಗೂ ನಿವೃತ್ತ ಎಲೆಕ್ಟ್ರಾನಿಕ್ಸ್ ಇಂಜಿನಿಯರ್, ಕುಂದಾಪುರದ ಡಾ. ಕೆ. ಕರುಣಾಕರ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕರುಣಾಕರ ಅವರು, ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ (NAL) ಹಾಗೂ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ADA)ನಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ‘ತೇಜಸ್ʼ ಲಘು ಯುದ್ಧ ವಿಮಾನ ಹಾಗೂ ‘ಅಗ್ನಿʼ ಕ್ಷಿಪಣಿಯ ಅಭಿವೃದ್ಧಿ, ವಿನ್ಯಾಸ ಮತ್ತು ತಯಾರಿಕೆಯಲ್ಲಿ ತಾವು ಪಡೆದ ಅನುಭವಗಳನ್ನು ಹಂಚಿಕೊಂಡರು. ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿದರೆ ಅವಕಾಶಗಳು ತಾನಾಗಿಯೇ ಅರಸಿಕೊಂಡು ಬರುತ್ತವೆ ಎಂದು ಯುವ ಇಂಜಿನಿಯರ್ಗಳಿಗೆ ಕಿವಿಮಾತು ಹೇಳಿದರು. ಎಚ್. ಜಗದೀಶ್ ಪರಿಚಯಿಸಿ ಅಭಿನಂದಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ ಶೆಟ್ಟಿ ವಂದಿಸಿದರು. ಹೆರಿಯ ಮಾಸ್ಟರ್ ಪ್ರಾರ್ಥನೆ ನೆರವೇರಿಸಿ ಕಾರ್ಯಕ್ರಮ ನಿರೂಪಿಸಿದರು.
