Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ ಬೈಂದೂರು ತಾಲೂಕು ವ್ಯಾಪ್ತಿಯ ಅಕ್ರಮ ಸಕ್ರಮ ಕಡತಗಳ ಹಾಗೂ 94ಸಿ ಹಾಗೂ 94ಸಿಸಿ ಅರ್ಜಿಗಳ ವಿಲೇವಾರಿಯನ್ನು ಕಳೆದ ಮೂರು ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಆಧರಿಸಿ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಕ್ರಮ ಸಕ್ರಮ ಅರ್ಜಿಗಳನ್ನು ಅಧಿಕಾರಿಗಳು ರದ್ದು ಪಡಿಸಿರುವ ಬಗ್ಗೆ ಸಭೆಯಲ್ಲಿ ಕೆಂಡಾ ಮಂಡಲರಾದರು. ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರಕಾರ ತಂತ್ರಾಂಶಗಳನ್ನು ಅಳವಡಿಸಿದ್ದರೂ ಸದ್ರಿ ತಂತ್ರಾಂಶಗಳನ್ನು ಅರ್ಥೈಸಿಕೊಳ್ಳುವುದರಲ್ಲಿ ಅಧಿಕಾರಿಗಳ ಅಸಡ್ಡೆ ಹಾಗೂ ಗ್ರಾಮೀಣ ಭಾಗದ ಬಡ ರೈತರುಗಳ ಅಕ್ರಮ ಸಕ್ರಮ ಅರ್ಜಿಗಳು, ಆರ್ ಆರ್ ಟಿ ಅರ್ಜಿಗಳ ಬಗ್ಗೆ ಕಾಳಜಿ ತೋರಿಸದೇ ಕಳೆದ ಮೂರು ವರ್ಷಗಳಲ್ಲಿ ನೀಡಿದ ನಿರಂತರ ಸೂಚನೆಗಳ ಹೊರತಾಗಿಯೂ ಅರ್ಜಿ ವಿಲೇವಾರಿಗೆ ವಿಳಂಬ ತೋರಿಸುತ್ತಿರುವ ತಹಶೀಲ್ದಾರ್, ಸರ್ವೇ ಇಲಾಖೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ಜಿಲ್ಲೆ, ಇವರ  ಆಶ್ರಯದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರದ ರಾಪಿಡ್ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸಾಗರಿ ಆರ್ ಪೂಜಾರಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ತನ್ನ ಪ್ರಮುಖ ‘ಉದ್ಯಮಶೀಲತೆ ಮತ್ತು ನಾವೀನ್ಯತೆ ಘಟಕ’ವಾದ “ಉದ್ಯಮ್‌ಎಕ್ಸ್” (UdyamX) ಅನ್ನು ಇತ್ತೀಚೆಗೆ ಕಾಲೇಜಿನಲ್ಲಿ ಅಧಿಕೃತವಾಗಿ ಪ್ರಾರಂಭಿಸಿದರು. ನಾವೀನ್ಯತೆಯನ್ನು ಉತ್ತೇಜಿಸುವುದು, ಬಲವಾದ ಸ್ಟಾರ್ಟಪ್ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಸಮಗ್ರ ‘ಇನ್‌ಕ್ಯುಬೇಷನ್’ (ವ್ಯವಹಾರ ಅಭಿವೃದ್ಧಿ) ಬೆಂಬಲವನ್ನು ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ-ಕೇಂದ್ರಿತ ವೇದಿಕೆಯನ್ನು ಸೃಷ್ಟಿಸುವುದು ಉದ್ಯಮ್‌ಎಕ್ಸ್‌ನ ಮುಖ್ಯ ಉದ್ದೇಶವಾಗಿದೆ. ಸೃಜನಶೀಲ ಕಲ್ಪನೆಗಳನ್ನು ವ್ಯಾಪಾರ ಉದ್ಯಮಗಳಾಗಿ ಪರಿವರ್ತಿಸಲು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಮೂಲಕ ಶೈಕ್ಷಣಿಕ ಕಲಿಕೆ ಮತ್ತು ಕೈಗಾರಿಕೆಯ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಈ ಘಟಕ ಹೊಂದಿದೆ. ಮುಖ್ಯ ಅತಿಥಿಗಳಾದ ಮಾಹೆ ಮಣಿಪಾಲದ ಎಂಸಿಐಎಸ್ ಮಾಜಿ ನಿರ್ದೇಶಕ ಡಾ. ಹರೀಶ್ಚಂದ್ರ ಹೆಬ್ಬಾರ್ ಅವರು ಸ್ಫೂರ್ತಿದಾಯಕ ಭಾಷಣ ಮಾಡಿ, ವಿದ್ಯಾರ್ಥಿಗಳು ಆಲೋಚನೆಗಳು, ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ವಿಶಾಲ ದೃಷ್ಟಿಕೋನದಿಂದ ನೋಡುವಂತೆ ಕರೆ ನೀಡಿದರು. ನೈಜ ನಾವೀನ್ಯತೆಯು ಕೇವಲ ದಿನನಿತ್ಯದ ಸಮಸ್ಯೆಗಳನ್ನು ಪರಿಹರಿಸುವುದನ್ನು ಮೀರಿ, ಪ್ರಭಾವಶಾಲಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವದ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗಾಗಿ ಕಾರಂತರ ಬದುಕು-ಬರಹಗಳ ಕುರಿತಾದ ರಸಪ್ರಶ್ನೆ ಸ್ಪರ್ಧೆಯು ಅ. 09 ರಂದು ಬೆಳಿಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರತಿ ಕಾಲೇಜಿನಿಂದ ಎರಡು ವಿದ್ಯಾರ್ಥಿಗಳ ಒಂದು ತಂಡವು ಭಾಗವಹಿಸಬಹುದಾಗಿದೆ. ಪ್ರಶ್ನೆಗಳು ಕಾರಂತರ ಬದುಕು-ಬರಹದ ಕುರಿತಾಗಿರುತ್ತದೆ. ವಿಜೇತರಿಗೆ ನಗದು ರೂಪದ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಭಾಗವಹಿಸಲು ಆಸಕ್ತಿ ಹೊಂದಿರುವ ತಂಡಗಳು ಲಿಖಿತವಾಗಿ ಅಥವಾ ಮೊಬೈಲ್ ಸಂಖ್ಯೆ: 6362517472 ಅಥವಾ ಇ-ಮೈಲ್ dr.karanthatrustudupi@smail.qom ಇದಕ್ಕೆ ದಿನಾಂಕ ಅ.08ರ ಒಳಗೆ ಹೆಸರನ್ನು ನೋಂದಾಯಿಸುವಂತೆ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ ಜ್ಞಾನ ವಿಜ್ಞಾನ ಸಮಿತಿಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ ನಡೆಯಿತು. ಬೆಂಗಳೂರಿನಿಂದ ಆಗಮಿಸಿದ್ದ ವನ್ಯಜೀವಿ ತಜ್ಞರಾದ ಡಾ.ಅಶ್ವಥ್, ಲೇಖಕಿ ಹೂರ್ ಬಾನು, ಪರಿಸರಾಸಕ್ತ ಸಾಫ್ಟ್ ವೇರ್ ಇಂಜಿನಿಯರ್ ಆನಂದ್ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣೆಗೆ ಮಾರ್ಗದರ್ಶನ ಮಾಡಿದರು. ವಂಡ್ಸೆ ಸಮೀಪದ ಆತ್ರಾಡಿ ಭಾಗದ ನದಿ ತೀರ ಮತ್ತು ಕಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು 40ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳನ್ನು ಗುರುತಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಆ ಹಕ್ಕಿಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡರು. ಬಿಜಿವಿಎಸ್‌ನ ಬೈಂದೂರು ಘಟಕದ ಕಾರ್ಯದರ್ಶಿ ಡಾ. ಪೂರ್ಣಿಮಾ ಈ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಬಿಜಿವಿಎಸ್ ರಾಜ್ಯ ಘಟಕದ ಸದಸ್ಯರಾದ ಉದಯ ಗಾಂವ್ಕರ್, ಸಂಧ್ಯಾ, ವಂಡ್ಸೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಸತೀಶ್ ಮೊಗವೀರ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮತ್ತು ಶಾಲಾ ಶಿಕ್ಷಕರು ಈ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ನೇಹಿತನ ಮನೆಗೆ ತೆರಳಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿ, ಮೂರು ದಿನಗಳ ಬಳಿಕ ತೋಟವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಹೊಸಂಗಡಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸಂಗಡಿ ನಿವಾಸಿ ಕವೀನಾ ನಾಯ್ಕ (26) ಎಂದು ಗುರುತಿಸಲಾಗಿದೆ. ಹಾಲ್ಕಲ್‌ ಬಳಿ ಸ್ವಂತ ಟಿಪ್ಪರ್ ಹೊಂದಿದ್ದ ಅವರು ಕಳೆದ 3–4 ವರ್ಷಗಳಿಂದ ಟಿಪ್ಪರ್ ವ್ಯವಹಾರ ನಡೆಸಿಕೊಂಡು ಬರುತ್ತಿದ್ದರು. ಅ.2ರಂದು ‘ತಾರ್ಕಿಮಕ’ ಎಂಬಲ್ಲಿಗೆ ತೆರಳಿ ಬರುವುದಾಗಿ ಮನೆಯವರಿಗೆ ತಿಳಿಸಿ ಕವೀನಾ ನಾಯ್ಕ ಮನೆಯಿಂದ ಹೊರಟಿದ್ದರು. ಆದರೆ ಬಳಿಕ ಅವರು ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹಾಗೂ ಪರಿಚಿತರು ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಈ ನಡುವೆ, ಹೊಸಂಗಡಿಯ ಮಾತಿನಮಠದಲ್ಲಿ ಶೇಖರ ನಾಯ್ಕ ಎಂಬವರ ಮನೆಯ ತೋಟದ ಬಳಿ ಅ.5ರಂದು ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಅದು ಕವೀನಾ ನಾಯ್ಕ ಅವರದ್ದೆಂದು ಗುರುತಿಸಲಾಗಿದೆ. ಶವವು ಅಂಗಾತ ಸ್ಥಿತಿಯಲ್ಲಿ ಬಿದ್ದಿದ್ದು, ಕೊಳೆತ ಸ್ಥಿತಿಯಲ್ಲಿತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತ್ತೀಚಿಗಿನ ವರ್ಷಗಳಲ್ಲಿ ಯಕ್ಷಗಾನದ ಪರಂಪರೆಗೆ ಧಕ್ಕೆ ಆಗುವ ರೀತಿಯ ಕಾರ್ಯಗಳು ನಡೆಯುತ್ತಿವೆ ಈ ಬಗ್ಗೆ  ಜಾಗೃತರಾಗುವುದು ಒಳಿತು ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಸೋಮವಾರ ಕೋಟದ ಹಿರೇಮಹಾಲಿಂಗೇಶ್ವರ ದೇಗುಲದಲ್ಲಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರಕ್ಕೆ 54 ಸಂವತ್ಸರ ತುಂಬಿದ ಪ್ರಯುಕ್ತ ಹಮ್ಮಿಕೊಂಡ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಕ್ಷಗಾನದ ಭಾಗವತರು ಪದ್ಯಗಳು ಸಿನಿಮಾ ಶೈಲಿಗಳಾಗಿ ಪರಿವರ್ತಿಸಲಾಗುತ್ತಿದ್ದು ಕುಣಿತಗಳು ಚೌಕಟ್ಟು ಮೀರಿ ಕಲಾರಸಿಕ ನಿದ್ದೆಗೆಡಿಸಿದೆ ಹೀಗಾದರೆ ಯಕ್ಷಗಾನ ತೊಂದರೆ ಅನುಭವಿಸಲಿದ್ದು,ಈ ನಿಟ್ಟಿನಲ್ಲಿ ಕಳೆದ ಹಲವು ವರ್ಷಗಳಿಂದ ಕಲಾಕೇಂದ್ರ ತನ್ನದೆ ಆದ ಮೌಲ್ಯಯುತ ಯಕ್ಷಗಾನ ನೀಡಿ ದೊಡ್ಡ ಕಲಾವಿದರಿಗೆ ಜನ್ಮನೀಡಿ ಸ್ಪೂರ್ತಿಯ ಕೇಂದ್ರವಾಗಿ ಹೊರಹೊಮ್ಮಿದೆ. ಇದೀಗ ಕಲಾಕೇಂದ್ರ ಗಂಗೂಬಾಯಿ ಹಾನಗಲ್ ಯುನಿವರ್ಸಿಟಿಯ ಮೂಲಕ ಡಿಪ್ಲೊಮಾ ಕೊರ್ಸಗಳಿಗೆ ವೇದಿಕೆ ಕಲ್ಪಿಸಿದ್ದು ಯಕ್ಷಗಾನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊಸಮೈಲ್ಲು ಸ್ಥಾಪಿಸಿದೆ, ಯಕ್ಷಗಾನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಕ್ಷಗಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವೈದ್ಯಕೀಯ ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ತಮ್ಮನ್ನು ತಾವು ಉನ್ನತ ಮಟ್ಟಕ್ಕೆ ಬೆಳೆಸಿಕೊಳ್ಳುವ ಗುರಿ ಹೊಂದಬೇಕು. ಭವಿಷ್ಯದ ವೈದ್ಯರಾಗಿ ತಮ್ಮದೇ ಆದ ಉನ್ನತ ಮಾನದಂಡಗಳನ್ನು ರೂಪಿಸಿಕೊಂಡು ಶ್ರೇಷ್ಠತೆಯತ್ತ ಸಾಗಬೇಕು ಎಂದು ಮೂಡಿಗೆರೆ ಹೊಯ್ಸಳ ಹೆಲ್ತ್ ಕೇರ್‌ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಅರ್ಪಿತಾ ಪ್ರತಾಪ್ ಸಿಂಹ ಹೇಳಿದರು. ಅವರು ಮಿಜಾರು ಆವರಣದಲ್ಲಿರುವ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 24ನೇ ಪದವಿ ಹಾಗೂ 13ನೇ ಸ್ನಾತಕೋತ್ತರ ಪದವಿ ಬ್ಯಾಚ್‌ಗಳ ಶೈಕ್ಷಣಿಕ ಪಯಣಕ್ಕೆ ಸೋಮವಾರ ಚಾಲನೆ ನೀಡಿದ ‘ಆರಂಭಂ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಎಲ್ಲವೂ ನಮ್ಮ ನಿರೀಕ್ಷೆಯಂತೆ ನಡೆಯುತ್ತದೆ ಎಂಬುದಿಲ್ಲ. ಅನಿರೀಕ್ಷಿತ ಸವಾಲುಗಳು, ಸೋಲುಗಳು ಹಾಗೂ ಕಠಿಣ ಸಂದರ್ಭಗಳು ಎದುರಾಗಬಹುದು. ಅಂತಹ ಸಂದರ್ಭದಲ್ಲಿ ಎದೆಗುಂದದೆ, ಸೋಲಿನಿಂದ ಪಾಠ ಕಲಿತು ಮುನ್ನಡೆಯುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಯಶಸ್ಸಿನಷ್ಟೇ ವೈಫಲ್ಯವೂ ಬದುಕಿನಲ್ಲಿ ಮಹತ್ವದ ಪಾಠಗಳನ್ನು ಕಲಿಸುತ್ತದೆ. ವೈದ್ಯಕೀಯ ವೃತ್ತಿಯಲ್ಲಿ ಜ್ಞಾನ ಮತ್ತು ಕೌಶಲ್ಯದಷ್ಟೇ ರೋಗಿಗಳೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಚನ್ನಪಟ್ಟಣ ಇದರ ವತಿಯಿಂದ ಚನ್ನಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ತಂಡವು 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಹಾಗೂ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ ಗಂಗೂಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಆರ್ಯನ್ ವಿ.ಕೆ. ಮತ್ತು ಆರ್ಯನ್ ಎಸ್. ಅವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಹಿಂದೂ ಸುರಕ್ಷಾ ಸಮಿತಿ ಚಿತ್ತೂರು ನೇತೃತ್ವದಲ್ಲಿ ದೇವಸ್ಥಾನದ ಸುತ್ತಮುತ್ತ ವಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋ ಕಳ್ಳತನವನ್ನು ಖಂಡಿಸಿ ಹಾಗೂ ಗೋಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಮವಾರ ಭವ್ಯ ಪಾದಯಾತ್ರೆ ಮತ್ತು ಜನಾಗ್ರಹ ಸಭೆ ಯಶಸ್ವಿಯಾಗಿ ನಡೆಯಿತು.  ​”ಕಾಮಧೇನುವಿನ ರಕ್ಷಣೆ ನಮ್ಮೆಲ್ಲರ ಹೊಣೆ” ಮತ್ತು “ಭಕ್ತರ ನಡೆ ಬ್ರಹ್ಮಲಿಂಗನ ಕಡೆ” ಎಂಬ ಧ್ಯೇಯವಾಕ್ಯದೊಂದಿಗೆ ಚಿತ್ತೂರು ಸರ್ಕಲ್‌ನಿಂದ ಆರಂಭವಾದ ಬೃಹತ್ ಪಾದಯಾತ್ರೆಯು ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಸನ್ನಿಧಿಯವರೆಗೆ ಸಾಗಿಬಂತು. ದಾರಿಯುದ್ದಕ್ಕೂ ಗೋರಕ್ಷಣೆ ಪರವಾಗಿ ಘೋಷಣೆಗಳನ್ನು ಕೂಗಿ, ಗೋಕಳ್ಳರನ್ನು ಕಠಿಣವಾಗಿ ಶಿಕ್ಷಿಸುವಂತೆ ಆಗ್ರಹಿಸಲಾಯಿತು.  ​ಪಾದಯಾತ್ರೆಯ ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆದರ್ಶ್ ಕೇಲ, ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ಸಂಯೋಜಕ ಹರೀಶ್ ಸಲ್ಕೋಡ್ ಹಾಗೂ ಶ್ರೀನಿವಾಸ್ ಮಂಜರು ಉಪಸ್ಥಿತರಿದ್ದು ಗೋಹತ್ಯೆ ಮತ್ತು ಗೋಕಳ್ಳತನದ ವಿರುದ್ಧ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಸಾವಿರಾರು…

Read More