Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್‌ಗೆ ಉಡುಪಿ ಜಿಲ್ಲೆಯ ಐದು ತಾಲೂಕುಗಳಲ್ಲಿ 196 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 53 ವಿದ್ಯಾರ್ಥಿಗಳು ಕುಂದಾಪುರ ವಲಯದಿಂದ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್‌ಗೆ ಮದರ್ ತೆರೇಸಾ ಶಾಲೆಯ ಹೈಸ್ಕೂಲ್ ವಿಭಾಗದ 9ನೇ ತರಗತಿಯ ಮೋಕ್ಷಿತ್ ವಿ. ಶೆಟ್ಟಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ಕಿಶನ್ ಶೆಟ್ಟಿ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಮೆಲಿಶಾ ಹಾಗೂ ಗ್ರೇಸಿಯವರು ಮಾರ್ಗದರ್ಶನ ನೀಡಿರುತ್ತಾರೆ. ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಪ್ರಸ್ತುತ ರಾಜ್ಯದಲ್ಲಿ ಎಪಿಎಲ್ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿ ಅನುಮೋದನೆಗೆ ಬಾಕಿ ಇರುವ ಹಾಗೂ  ಪ್ರಸ್ತುತ ಪಡಿತರ ಚೀಟಿ ಅರ್ಜಿ ಹಾಕಿದ ನಂತರ ಸಕಾಲದಲ್ಲಿ ಪಡಿತರ ಚೀಟಿ ದೊರಕದೇ ಇರುವ ಕಾರಣ ಅರ್ಜಿದಾರರು ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್ ಮುನಿಯಪ್ಪ ರವರು ಉತ್ತರಿಸಿ ರಾಜ್ಯದಲ್ಲಿ ದಿನಾಂಕ :22-02-2026 ರ ಅಂತ್ಯಕ್ಕೆ ಎಪಿಎಲ್ ಪಡಿತರ ಚೀಟಿ ಕೋರಿ 1,38,778 ಅರ್ಜಿಗಳು ಬಾಕಿ ಇರುವುದಾಗಿದೆ. ಹಾಗೂ ಸರ್ಕಾರದ ಆದೇಶ ಸಂಖ್ಯೆ ಆನಾಸ 211 ಡಿಆರ್ ಎ 2021 ದಿನಾಂಕ : 29-09-2023 ರಲ್ಲಿ ಎಪಿಎಲ್ ಪಡಿತರ ಚೀಟಿಗಳನ್ನು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಅನುಮೋದನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಒಬ್ಬಂಟಿಯಾಗಿ ವಾಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಸಾಲಿಮಕ್ಕಿಯಲ್ಲಿ ಸಂಭವಿಸಿದೆ. ಉಪ್ಪುಂದ ನಿವಾಸಿ ಕೃಷ್ಣ ಗಾಣಿಗ (67) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸಂಶಯಿಸಲಾಗಿದೆ. ಅವರ ಪತ್ನಿ, ಮಕ್ಕಳು ಉಡುಪಿಯಲ್ಲಿ ನೆಲೆಸಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಹಳಿಗೆ ಬಿದ್ದ ಜಾರ್ಖಂಡ್ ಮೂಲದ ಹುಡುಗ ಸಾವನ್ನಪ್ಪಿದ ಘಟನೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ಇತ್ತೀಚಿಗೆ ಸಂಭವಿಸಿದೆ. ಜಾರ್ಖಂಡ್ ಮೂಲದ ರಂಗ ಬಾಜ್ ಅನ್ಸಾರಿ (16) ಸಾವನ್ನಪ್ಪಿರುವುದಾಗಿ ಆ ವ್ಯಕ್ತಿಯ ಕಿಸೆಯಲ್ಲಿದ್ದ ದಾಖಲೆಗಳಿಂದ ತಿಳಿದು ಬಂದಿದೆ. ಈತ ಜಾರ್ಖಂಡ್ ನಿಂದ ಮಂಗಳೂರಿಗೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಕುಂದಬಾರಂದಾಡಿ ಗ್ರಾಮದ ಚಕ್ರ ಸೇತುವೆಯ ಮೇಲೆ ಹಾದು ಹೋಗಿರುವ ತೊರೊಳ್ಳಿ ಎಂಬಲ್ಲಿರುವ ರೈಲು ಹಳಿಯಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ಮಧ್ಯದ ಅವಧಿಯಲ್ಲಿ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆAಟ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಹಾಗೂ ಇಂಟರ್‌ಮೀಡಿಯಟ್ ಗ್ರೂಪ್ I ರ ಜನವರಿ 2026ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಬಾಲಕೃಷ್ಣ ಭಟ್, ಇಂಚರ, ವಿಕಾಸ್, ಶಶಾಂಕ ಆರ್. ಭಟ್, ಸಂಜನಾ, ಬಿಂದುಶ್ರೀ, ಆಕಾಶ್ ಎಮ್.ಎಮ್., ಸಿ.ಎ. ಫೌಂಡೇಶನ್‌ನಲ್ಲಿ ಹಾಗೂ ಪ್ರಜ್ವಲ್ ಎಸ್. ನಾಯಕ್ ಸಿ.ಎ. ಇಂಟರ್‌ಮೀಡಿಯಟ್ ಗ್ರೂಪ್ I ರಲ್ಲಿ ಉತ್ತೀರ್ಣವಾಗುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌  ಕಾಂ ಸುದ್ದಿ.ಕುಂದಾಪುರ: ಕೇಂದ್ರ ಬಜೆಟ್ 2026-27ರ ರೈಲ್ವೆ ಅನುದಾನ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಹಾಗೂ ಮಲೆನಾಡು ಭಾಗದ ದಶಕಗಳ ರೈಲ್ವೆ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ‘ವಿಳಂಬ ಗತಿಯಿಂದ, ಅತಿ ವೇಗದ ವಿತರಣೆಯ’ ಯುಗಕ್ಕೆ ಕಾಲಿಟ್ಟಿದೆ ಎಂದು ಶ್ಲಾಘಿಸಿದ ಸಂಸದರು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ ದಾಖಲೆಯ 7,748 ಕೋಟಿ ರೂ. ಅನುದಾನ ನೀಡಿದ್ದಕ್ಕಾಗಿ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಕರ್ನಾಟಕಕ್ಕೆ ಸಿಗುತ್ತಿರುವ ರೈಲ್ವೆ ಅನುದಾನದಲ್ಲಿ ಒಂಬತ್ತು ಪಟ್ಟು ಹೆಚ್ಚಳವಾಗಿದೆ ಎಂದು ಅವರು ಅಂಕಿ-ಅಂಶಗಳ ಸಮೇತ ವಿವರಿಸಿದರು. ಪ್ರಮುಖವಾಗಿ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಮಾರ್ಗದ ಶೀಘ್ರ ಅನುಷ್ಠಾನ ಹಾಗೂ ಬೈಂದೂರಿಗೆ ಸಂಬಂಧಪಟ್ಟಂತೆ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಬದ್ಧತೆಯ ಭಾಗವಾಗಿ, ಸಂಸದರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವೀರೇಶ್ವರ ಸೇವಾ ಸಮಿತಿ, ಸಂಘಟನಾ ಸಮಿತಿ, ಸಮಾಜ ಸೇವಾ ಟ್ರಸ್ಟ್ ಆಶಯದಲ್ಲಿ ಮಾಗಣಿ ಗುರಿಕಾರರ ಸಮಾವೇಶವು ರವಿವಾರ ನಡೆಯಿತು. ದೇಗುಲದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ, ಉತ್ತಮ ನಿರ್ವಹಣೆ ಮತ್ತು ಭಕ್ತರಿಗೆ ಇನ್ನಷ್ಟು ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ, ಮುಂದಿನ ದಿನಗಳಲ್ಲಿ ಸಮಾಜದ ಹಿತಕ್ಕಾಗಿ ಇನ್ನಷ್ಟು ಬಲವಾದ ಸಂಘಟನಾ ಕಾರ್ಯಕ್ರಮ ಕೈಗೊಳ್ಳುವ ಸಂಕಲ್ಪ ಸಾಕಾರಗೊಳ್ಳಲು ಮಾಗಣಿ ಗುರಿಕಾರರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಿರಿಯ ಗುರಿಕಾರರಾದ ಬಸೂರು ರಾಜೇಂದ್ರ ಶೆಟ್ಟಿಗಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರಿಕಾರರಿಗೆ ಮಾಹಿತಿ ನೀಡುತ್ತಾ, ಸಮಾಜದ ಆಚಾರ- ವಿಚಾರ ಸಂಪ್ರದಾಯದಲ್ಲಿ ಬದಲಾವಣೆಯಾದರೂ ರಾಜಿ ಮಾಡಿಕೊಳ್ಳಬಹುದು. ಆದರೆ ಶಾಸ್ತ್ರದಲ್ಲಿ ಯಾವುದೇ ರೀತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಕೋಟ ಇವರ ಸಂಯೋಜನೆಯೊಂದಿಗೆ 294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು. ಅಭಿಯಾನಕ್ಕೆ ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆದ್ದಾರಿ ಒಂದುವರೆ ಕಿಲೋಮೀಟರ್ ಒಂದು ಭಾಗ ಬಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಇದೇ ವೇಳೆ ಮಾತನಾಡಿದ ವಿಷ್ಣುಮೂರ್ತಿ ಮಯ್ಯ ರಾಷ್ಟ್ರೀಯ ಹೆದ್ದಾರಿ ತ್ಯಾಜ್ಯ ಎಸೆಯುವವರಿಗೆ ಕಠಿಣ ಕ್ರಮವನ್ನು ಸ್ಥಳೀಯಾಡಳಿತಗಳು ಕೈಗೊಳ್ಳಬೇಕು,ಪ್ರ ತಿ ಬಾರಿ ಪಂಚವರ್ಣದಂತಹ ಸಂಘಟನೆಗಳು ಸ್ವಚ್ಛಗೊಳಿಸಿದರೂ ಪುನಃ ಮಲಿಗೊಳಿಸುವ ಕಾರ್ಯ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಲಹೆ ನೀಡಿ ಸಂಬಂಧಿಸಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ಚಿನ್ಮಯಿ ಪುತ್ರನ್ ಎಮ್.ಬಿ.ಬಿ.ಎಸ್ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ತಿಳಿ ಹೇಳಿದರು. ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ ಅವರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸ್ವಾಗತಿಸಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗ ವಂದನಾರ್ಪಣೆ ಗೈದರು.

Read More