Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಾಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅದ್ದೂರಿ ಆಗಿ ನಡೆಯಿತು. ಯೋಗ ಗುರುಗಳು ಆದ ರವಿ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಣ್ಣ ವಯಸ್ಸಿನಲ್ಲಿಯೇ ಯೋಗ ಕಲಿಕೆ ಮತ್ತು ಅಭ್ಯಾಸ ಅರೋಗ್ಯ ಮತ್ತು ಮನಸ್ಸಿಗೆ ತುಂಬಾ ಹಿತ ಎಂದು ಹೇಳಿದರು. ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದ ಅವರು ಅದರ ಉಪಯೋಗವನ್ನೂ ಹೇಳಿದರು. ಜೆಸಿಐ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಮುಖ್ಯ ಅಥಿತಿಗಳಾಗಿ ಜ್ಞಾನೇಶ್ ಶೆಟ್ಟಿ  ಮುಂತಾದವರು ಮಾತಾನಾಡಿದರು. ಜೆಸಿಐ ಸದಸ್ಯರು ಮತ್ತು ಮಕ್ಕಳು ಯೋಗವನ್ನು ಮಾಡಿದರು.    ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅಶೋಕ್ ಆಚಾರಿ, ಉಪಾಧ್ಯಕ್ಷರಾದ ಗುರು ಪ್ರಸಾದ್ ಶೆಟ್ಟಿ ಮತ್ತು ರಾಘವೇಂದ್ರ ಕುದ್ರುಬೆಟ್ಟು ಹಾಗೂ ಮಂಜುಳ ಶೆಟ್ಟಿ ಮತ್ತು ಆಶಾ ಕುಲಾಲ್ ಮತ್ತು ಜೆಸಿಐ ಸದಸ್ಯರು ಉಪಸ್ಥಿತಿ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ. 2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾಗಿದ್ದು, ಶ್ರಾವ್ಯ ಅವರ ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪರಿಶ್ರಮ, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಈ ಯಶಸ್ಸು ಸಾಕ್ಷಿಯಾಗಿದೆ. ಅವರ ಈ ಗಮನಾರ್ಹ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯ ಹಾಗೂ ಯಶಸ್ವಿ ವೃತ್ತಿಜೀವನಕ್ಕಾಗಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವ ಮೋರ್ಚಾದ ನೇತೃತ್ವದಲ್ಲಿ ವಿಶ್ವಯೋಗ ದಿನಾಚರಣೆಯನ್ನು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ಅನಿತಾ ಆರ್.ಕೆ, ಯುವಮೋರ್ಚಾ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳು,ಪದಾಧಿಕಾರಿಗಳು ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯಮಟ್ಟದ ಯೋಗ ಪಟು ಕಲಾಶ್ರಿ ತನ್ವಿ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಯುವ ಮೋರ್ಚಾದ ವತಿಯಿಂದ ಯೋಗ ತರಬೇತುದಾರರಿಗೆ ಸನ್ಮಾನಿಸಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಯೋಗವು ಮನುಷ್ಯರು ದೈಹಿಕ ಮತ್ತು ಮಾನಸಿಕ ಸ್ವಸ್ಥತೆಯನ್ನು ಕಾಯ್ದುಕೊಂಡು ಉತ್ತಮ ಆರೋಗ್ಯವನ್ನು ಹೊಂದಲು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಆಸನಗಳನ್ನು ಅಭ್ಯಸಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ “ಯೋಗವಿದ್ದಲ್ಲಿ ರೋಗವಿಲ್ಲ. ಆರೋಗ್ಯಪೂರ್ಣ ಬದುಕಿಗೆ ಯೋಗ ಅನಿವಾರ್ಯ ಎಂಬಂತಾಗಿದೆ” ಎಂದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಮಾತನಾಡಿ “ಇಂದು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವಲ್ಲಿ ಯೋಗದ ಪಾತ್ರ ಹೆಚ್ಚಿನದ್ದಾಗಿದೆ. ಪ್ರಪಂಚದಲ್ಲಿರುವ ಬಹುತೇಕ ಜನರು ಉತ್ತಮ ಆರೋಗ್ಯವನ್ನು ಹೊಂದಲು ಯೋಗಾಭ್ಯಾಸವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ. ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪ್ರೇರಣಾದಾಯಕ ಸಂದೇಶ ನೀಡಿದರು. “ಇಂದಿನ ಯೋಗಾಭ್ಯಾಸ, ನಾಳಿನ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಆರೋಗ್ಯ, ಸಾಮರಸ್ಯ ಮತ್ತು ಮನಃಶಾಂತಿಯ ಸಂದೇಶವನ್ನು ಸಾರುವ ಯೋಗಾಭ್ಯಾಸದಲ್ಲಿ ಅತ್ಯಂತ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಮುಖರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಶಿಸ್ತುಬದ್ಧವಾಗಿ ಪ್ರದರ್ಶಿಸುವ ಮೂಲಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತರೆಯಲ್ಲಿ ನಡೆದಿದೆ. ಮೃತರನ್ನು ಉಪ್ಪುಂದ ಗ್ರಾಮದ ನಾರಾಯಣ ಖಾರ್ವಿ (64) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಮಾಡಿಕೊಂಡಿದ್ದ ಅವರು ಯಡ್ತರೆ ಗ್ರಾಮದ ಅಂಕಣಹೊಳೆಯಲ್ಲಿ ಮೀನು ಹಿಡಿಯಲು ಹೋದವರು ಮನೆಗೆ ವಾಪಸ್‌ ಬಂದಿರಲಿಲ್ಲ. ಜೂನ್.20 ರಂದು ನಾರಾಯಣ ಖಾರ್ವಿ ಅವರ ಮೃತದೇಹವು ಅಂಕಣಹೊಳೆಯಲ್ಲಿ ನೀರಿನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ವೇಳೆ ಕೋಟ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ಯ(45) ಎಂದು ಗುರುತಿಸಲಾಗಿದೆ. ಅವರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತಿದ್ದರು. ಆಗ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಸತೀಶ್ ಆಚಾರ್ಯ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಬೆಂಗಳೂರಿನ ಪದ್ಮಶ್ರೀ ಆರ್‌ಎಂ‌ಬಿ ಆರಾಧ್ಯ ಟ್ರಸ್ಟ್ ಸೇವಾ ರೂಪದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿಗೆ ನೀಡಲಾದ ನೂತನ ಬೆಳ್ಳಿ ರಥ ಸಮರ್ಪಣೆ ಹಾಗೂ ರಥೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳಿಗ್ಗೆಯಿಂದಲೇ ದೇವಸ್ಥಾನದ ತಂತ್ರಿ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ರಥ ಶುದ್ದಿ, ಬಲಿ ಸೇರಿದಂತೆ ರಥೋತ್ಸವ ಹಾಗೂ ಸಮರ್ಪಣಾ ಕಾರ್ಯಕ್ರಮಕ್ಕೆ ಪೂರಕವಾಗಿ ಅನೇಕ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಲಾಗಿತ್ತು. 11 ಗಂಟೆಯ ಸುಮಾರಿಗೆ ಬಲಿ ವಿಧಿಗಳನ್ನು ನಡೆಸಿ ಉತ್ಸವ ಮೂರ್ತಿಯನ್ನು ಗರ್ಭಗುಡಿಯಿಂದ ಉತ್ಸವಗಳನ್ನು ವಿದ್ಯುಕ್ತವಾಗಿ ನಡೆಸಿದ ಬಳಿಕ ಮೂರ್ತಿಧಾರಕ ಶ್ರೀಶಾ ಭಟ್ ಅವರು ಶ್ರೀ ದೇವಿಯನ್ನು ನೂತನ ರಥದಲ್ಲಿ ಕುಳ್ಳಿರಿಸಿದ್ದರು. ಅಲಂಕಾರ, ಹಣ್ಣು ಕಾಯಿ ಹಾಗೂ ಮಂಗಳಾರತಿ ಸೇವೆ ನಡೆದ ಬಳಿಕ, ರಥದ ಚಕ್ರಗಳಿಗೆ ತೆಂಗಿನಕಾಯಿ ಒಡೆದ ಬಳಿಕ ವೈಭವದಿಂದ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರೊಂದಿಗೆ ಸೇವಾಕರ್ತ ಕುಟುಂಬದವರು ಜೊತೆಯಾಗಿ ಜಯಘೋಷವನ್ನು ಹಾಕುತ್ತಾ. ದೇವಸ್ಥಾನದ ಒಳ ಆವರಣದಲ್ಲಿ ರಥವನ್ನು ಎಳೆದು ಸಂಭ್ರಮಿಸಿದರು. ಆಕರ್ಷಕ ಬೆಳ್ಳಿ ರಥ:ಬೆಂಗಳೂರಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸೈಂಟ್ ಥಾಮಸ್ ಸಿಬಿಎಸ್ ಇ ಶಾಲೆಯ ಮುಕ್ತ ಸಭಾಂಗಣದಲ್ಲಿ ಶಾಲಾ ಪೋಷಕರ ಮಹಾಸಭೆ ಹಾಗೂ ದಿಕ್ಸೂಚಿ  ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಶೈಕ್ಷಣಿಕ ಉಪಪ್ರಾಂಶುಪಾಲರು ಹಾಗೂ ಹಿರಿಯ ಸಮಾಲೋಚಕರಾದ ಡಾ. ನಾಗರಾಜ್ ಎಸ್. (MD Ayu, PhD GAU) ಅವರು ಆಗಮಿಸಿದ್ದರು. ​ಈ ಸಂದರ್ಭದಲ್ಲಿ “ಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಪೋಷಕರಿಗೆ ವಿಶೇಷ ಮಾರ್ಗದರ್ಶನ ನೀಡಿದ ಡಾ. ನಾಗರಾಜ್ ಅವರು, “ಬದಲಾಗುತ್ತಿರುವ ಇಂದಿನ ಆಧುನಿಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಯ ಯಂತ್ರಗಳನ್ನಾಗಿ ಮಾಡದೆ, ಅವರ ಭಾವನೆಗಳನ್ನು ಅರ್ಥಮಾಡಿಕೊಂಡು ಸನ್ಮಾರ್ಗದಲ್ಲಿ ಮುನ್ನಡೆಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ. ಮಕ್ಕಳ ದೈಹಿಕ ಬೆಳವಣಿಗೆಯಷ್ಟೇ ಅವರ ಮಾನಸಿಕ ಹಾಗೂ ಭಾವನಾತ್ಮಕ ಪರಿಪಕ್ವತೆಯೂ ಮುಖ್ಯ” ಎಂದು ತಿಳಿಸಿದರು. ​ಶಾಲೆಯ ಪ್ರಾಂಶುಪಾಲರಾದ ವಂದನೀಯ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ಎಚ್.ಎಮ್.ಎಮ್., ವಿ.ಕೆ.ಆ‌ರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನ್ವಿತಾ ಎಸ್. ನಾಯಕ್ ಇ೦ಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್‌ನ ನೂತನ ವಿಶ್ವದಾಖಲೆ ಪಡೆದಿದ್ದಾರೆ. ಕೇವಲ 7.22 ಸೆಕೆಂಡ್ಸ್‌ಗಳಲ್ಲಿ 200 ಬಲೂನ್‌ಗಳನ್ನು ಕಬ್ಬಿಣದ ಮೊಳೆಯಿ೦ದ ಒಡೆಯುವುದರ ಮೂಲಕ ಈ ಸಾಧನೆಗೈದು ವಿಶ್ವದಾಖಲೆ ಮಾಡಿದ್ದಾರೆ. ವಿಶ್ವದಾಖಲೆ ಮಾಡಿದ ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕರಾದ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಸಾಧಕರ ಸನ್ಮಾನ ಸಮಾರಂಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಉಪಪ್ರಾಂಶುಪಾಲೆ ಸುಭಾ ಕೆ. ಎನ್., ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರೌಢ ಶಾಲಾ ಶಿಕ್ಷಕರು ಹಾಗೂ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More