Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್ ಗಳಾದ ರವಿಶಾಸ್ತ್ರಿ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಗೌರವಿಸಿದರು. ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದಿದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಘೋಷಿಸಿದ್ದು, ಮೇ. 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ.13ರಂದು ಮತ ಎಣಿಕೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಎ.13 ಅಧಿಸೂಚನೆ ಹೊರಡಿಸಲಾಗುತ್ತದೆ. ಎ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎ.21 ನಾಮಪತ್ರ ಪರಿಶೀಲಿಸಲು ಕೊನೆಯ ದಿನ,  ಎ.24 ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿದ್ದು, ಮೇ.10ರಂದು ಚುನಾವಣೆ ನಡೆಯಲಿದೆ. ಮೇ.13ರಂದು ಮತಎಣಿಕೆ ನಡೆಯಲಿದೆ ಎಂದರು. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ಹೇಳಿದರು. ಮೊದಲ ಬಾರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಈಗಾಗಲೇ ಸಿದ್ಧಗೊಂಡಿದ್ದು, ಈ ಭಾರಿ ಹೊಸದಾಗಿ ಹೊಸದಾಗಿ 16,827 ಮತದಾರರ ಸೇರ್ಪಡೆಯಾಗಿದೆ. ಇದರಲ್ಲಿ 13,816 ಯುವ ಮತದಾರರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಹಿಂದಿನ ಜನಗಣತಿಯಂತೆ ಒಟ್ಟು 1,177,361 ಜನಸಂಖ್ಯೆ ಇದ್ದು, ಈ ಪೈಕಿ ಒಟ್ಟು 10,16,245 ಮತದಾರರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರ:ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರ:ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರ:ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರ:ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions. (1/2) pic.twitter.com/EE9VEamJKh— Income Tax India (@IncomeTaxIndia) March 28, 2023 1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ನಿರ್ಮಿಸಿದ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೊಂದು ಕೊಡುಗೆಯಾಗಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಅವರು ಇಲ್ಲಿನ ಸಂಗಮ್ ಬಳಿ ಸೋಮವಾರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ (ಟಿಎಪಿಸಿಎಂಎಸ್) ರೂ.14ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರು ನೂತನ ಮಾರುಕಟ್ಟೆಯ ಉಪಯೋಗ ಪಡೆದುಕೊಳ್ಳುವಂತಾಗಲಿ ಎಂದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್‍ಕುಮಾರ ದೀಪ ಬೆಳಗಿಸಿ ಶುಭಹಾರೈಸಿದರು. ಟಿಎಪಿಸಿಎಂಎಸ್ ಕುಂದಾಪುರದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮಾತನಾಡಿ ಸಂಸ್ಥೆಯ ವಜ್ರಮಹೋತ್ಸವ ವರ್ಷಾಚರಣೆಯ ಈ ಹೊತ್ತಿನಲ್ಲಿ ಸ್ವಂತ ನಿವೇಶನದಲ್ಲಿ ರೈತ ಮಾರುಕಟ್ಟೆ ಸ್ಥಾಪಿಸಿದೆ. ರೈತರು ನೇರವಾಗಿ ಮಾರುಕಟ್ಟೆಗೆ ಆಗಮಿಸಿ ವಹಿವಾಟು ನಡೆಸಬಹುದು ಎಂದರು. ಟಿಎಪಿಸಿಎಂಎಸ್ ಉಪಾಧ್ಯಕ್ಷ ಶರತ್‍ಕುಮಾರ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮೊಳಹಳ್ಳಿ ಮಹೇಶ್ ಹೆಗ್ಡೆ, ಎಸ್. ರಾಜು ಪೂಜಾರಿ, ಟಿಎಪಿಸಿಎಂಎಸ್ ನಿರ್ದೇಶಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಜನಪ್ರತಿನಿಧಿ ಕುಂದಾಪುರದ ಸಹಯೋಗದೊಂದಿಗೆ ನಡೆದ ತಿಂಗಳ ಓದು ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಓದು ಕಾರ್ಯಕ್ರಮವು ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ ಕುರಿತು ನಡೆಯಿತು. ಆರಂಭದಲ್ಲಿ ಸಮುದಾಯದ ಬಾಲಕೃಷ್ಣ ಕೆ ಎಂ, ವಾಸುದೇವ ಗಂಗೇರ, ವಿಕ್ರಮ ಕುಂದಾಪುರ, ಅವಂತಿ ಮತ್ತು ಲಂಕೇಶ್ ಇವರು ಕುವೆಂಪುರವರ “ಓ ನನ್ನ ಚೇತನ” ಮತ್ತು “ಹಾಲು ಹಳ್ಳ ಹರಿಯಲಿ” ಹಾಡುಗಳ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಸಮುದಾಯದ ಸದಸ್ಯರಾದ ರಮೇಶ್ ಗುಲ್ವಾಡಿ ಮತ್ತು ವಿಕ್ರಮ ಕುಂದಾಪುರ ಅವರು ಕುವೆಂಪು ಅವರ ಸಾವಿನ ಸಮತೆ ಮತ್ತು ರೈತ ದೃಷ್ಟಿ ಕವನಗಳನ್ನು ವಾಚಿಸಿದರು ಅಂದಿನ ಮುಖ್ಯ ಉಪನ್ಯಾಸಕಾರರಾಗಿ ಸಂತೋಷ್ ಕುಮಾರ್ ಶೆಟ್ಟಿ ಮೊಳಹಳ್ಳಿ ಅವರು ಕುವೆಂಪುರವರ ಕವಿತೆಗಳು, ಕಾದಂಬರಿಗಳು, ನಾಟಕ, ಬದುಕು ಮತ್ತು ಬರಹ ವಿಮರ್ಶೆ ಗಳ ಕುರಿತು ಮಾತನಾಡಿದರು. ಪ್ರತಿಕ್ರಿಯೆಯಾಗಿ ಭಂಡಾರ್ಕರ್ಸ್ ಕಾಲೇಜಿನ ಪ್ರಾಧ್ಯಾಪಕರಾದ ಹಯವದನ ಉಪಾಧ್ಯ ಅವರು ತಮ್ಮ ವಿಚಾರಗಳನ್ನು ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಶ್ರೀ ಶಾರದಾ ಕಾಲೇಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶಾಸ್ತ್ರೀ ವೃತ್ತವನ್ನು ನವೀಕರಣಗೊಳಿಸಲಾಗಿದ್ದು, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಅವರು ಲಾಲ್ ಬಹದ್ದೂರ್ ಶಾಸ್ತ್ರೀಯವರ ನೂತನ ಪುತ್ಥಳಿ ಅನಾವರಣಗೊಳಿಸಿ, ಮಾಲಾರ್ಪಣೆಗೈದು ಲೋಪಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಮಾತನಾಡಿ, ಶಾಸ್ತ್ರೀ ವೃತ್ತದ ಮರು ನಿರ್ಮಾಣ ಕಾರ್ಯ ಸುಂದರವಾಗಿ ಮೂಡಿಬಂದಿದೆ. ಇದು ಸುಂದರ ಕುಂದಾಪುರಕ್ಕೆ ನೂತನ ಕೊಡುಗೆಯಾಗಿದೆ ಎಂದರು. 1963ರಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಅವರ ಕುಟುಂಬ ಹೆದ್ದಾರಿ ನಿರ್ಮಾಣ ಸಂದರ್ಭ ಶಾಸ್ತ್ರೀ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿತ್ತು. ನವೀಕೃತ ಪ್ರತಿಮೆಯನ್ನೂ ಅವರದೇ ಕುಟುಂಬ ಕೊಡಮಾಡಿದೆ. ಪುರಸಭಾ ನಗರೋತ್ಥಾನ ನಿಧಿ ಹಾಗೂ ಚಾರ್ಮಕ್ಕಿ ನಾರಾಯಣ ಶೆಟ್ಟಿ ಟ್ರಸ್ಟ್ ಸಹಯೋಗದೊಂದಿಗೆ ಶಾಸ್ತ್ರೀವೃತ್ತ ನಿರ್ಮಿಸಲಾಗಿದೆ ಎಂದರು. ಈ ವೇಳೆ ಕುಂದಾಪುರ ಪುರಸಭೆಯ ನಿಕಟಪೂರ್ವ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಶಾಸ್ತ್ರೀ ಪ್ರತಿಮೆ ನಿರ್ಮಿಸಿದ ಶಿಲ್ಪಿ ಶ್ರೀತನ್ ಶೆಟ್ಟಿಗಾರ್, ಶಿಲಾಮಂಟಕ ಕಾರ್ಯ ನಿರ್ವಹಿಸಿದ ಅನಂತಕೃಷ್ಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಉಪಾಧ್ಯಕ್ಷ ಸಂದೀಪ್ ಖಾರ್ವಿ, ಹಿರಿಯ ಸದಸ್ಯರಾದ ಮೋಹನದಾಸ ಶೆಣೈ, ದೇವಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾ.ಹೆ- 66 ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಕೆ. ಗೋಪಾಲ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆ ಅವರನ್ನು ಅಂತಿಮಗೊಳಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ. ಗೋಪಾಲ ಪೂಜಾರಿ ಅವರ ಮಾತ್ರವೇ ಅರ್ಜಿ ಸಲ್ಲಿಸಿದ್ದರೇ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನೇಶ್ ಹೆಗ್ಡೆ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಪೂಜಾರಿ ಬಿಜಾಡಿ ಟಿಕೇಟ್ ರೇಸಿನಲ್ಲಿದ್ದರು.

Read More

ಕುಂದಾಪುರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಕಾರ್ಯಕ್ರಮ 2023ಮನಸ್ಮಿತ ಫೌಂಡೇಶನ್‌ನ ನೇತೃತ್ವದಲ್ಲಿ ಯುವ ಮೆರಿಡಿಯನ್‌ನಲ್ಲಿ ಆಯೋಜಿಸಿದ ’ಚಿತ್ರಗೀತೆ’ ಕಾರ್ಯಕ್ರಮಖ್ಯಾತ ಹಿನ್ನೆಲೆ ಗಾಯಕಿ ಕೆ.ಎಸ್. ಚಿತ್ರಾ ಅವರಿಗೆ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಪ್ರದಾನಖ್ಯಾತ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ್ ಅವರಿಗೆ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಪ್ರದಾನಮನಸ್ಮಿತ ಫೌಂಡೇಶನ್‌ನ ಡಾ. ಪ್ರಕಾಶ್ ಸಿ. ತೋಳಾರ್, ಡಾ. ಸತೀಶ್ ಪೂಜಾರಿ ನೇತೃತ್ವದ ಕಾರ್ಯಕ್ರಮಡಾ. ಜಿ. ಶಂಕರ್, ಆನಂದ ಸಿ. ಕುಂದರ್ ಹಾಗೂ ಯುವ ಮೆರಿಡಿಯನ್ ವಿನಯ ಕುಮಾರ್ ಶೆಟ್ಟಿ ಉಪಸ್ಥಿತಿಕೆ.ಎಸ್. ಚಿತ್ರಾ ಅವರ ಉಪಸ್ಥಿತಿಯಲ್ಲಿ ನಡೆದ ಸಂಗೀತ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸಾವಿರಾರು ಪ್ರೇಕ್ಷಕರುಕುಂದಾಪುರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿ ಹಾಡಿದ ಖ್ಯಾತ ಗಾಯಕಿ ಕೆ.ಎಸ್. ಚಿತ್ರಾ

Read More