ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮುದಾಯವು ಸಮಾಜದಲ್ಲಿ ಪ್ರಗತಿಯ ಹಾದಿಯಲ್ಲಿದೆ. ಮುಂದೆ ಸಾಗಿದವರು ಎಲ್ಲರನ್ನೂ ಒಂದುಗೂಡಿಸಿಕೊಂಡು ಕೊಂಡೊಯ್ಯುವ ಮಹತ್ತರ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದಾರೆ. ಹಾಗಾಗಿಯೇ ಇಂದು ವಿದ್ಯಾರ್ಥಿವೇತನ, ಮನೆನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಸಾಕಾರಗೊಳಿಸಲು ಸಾಧ್ಯವಾಗಿದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ಹೇಳಿದರು. ಅವರು ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಬೈಂದೂರು ಇದರ 11ನೇ ವರ್ಷದ ಟ್ರಸ್ಟ್ ದಿನಾಚರಣೆ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಇಂದು ಬದುಕಿನಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದು, ಅದಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತಾಗಬೇಕುಎಂದರು. ಪ್ರೊಫೆಸರ್ ಡಾ. ಶಿವಾನಂದ ನಾಯಕ್ ಅವರು ಮಾತನಾಡಿ, ಆಧುನಿಕ ಯುಗದಲ್ಲಿ ಬದಲಾದ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದರೆ ನಮ್ಮ ದೇಹದ ಸಮಸ್ಯೆಗಳ ಬಗ್ಗೆಯೇ ಕಾಳಜಿ ಇಲ್ಲದೇ ಇದ್ದರೆ ಮುಂದೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಳ ಯೋಗಾಭ್ಯಾಸ, ಆಹಾರ ಕ್ರಮಗಳನ್ನು ಅನುಸರಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಪ್ರದೇಶಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯವೂ ಕಡಿಮೆ ಇದೆ. ಈಗಾಗಲೇ ನಿಗದಿತ ಸಮಯಕ್ಕೆ ತೆರಳುತ್ತಿದ್ದ ಬಸ್ ಸಮಯವನ್ನು ಬದಲಿಸಿ ಮತ್ತಷ್ಟು ತೊಂದರೆ ಮಾಡಲಾಗಿದೆ. ಬಸ್ ಸಮಯ ಬದಲಿಸುವಂತೆ ಆಗ್ರಹಿಸಿ ಮುದೂರು, ಕೆರಾಡಿ ಭಾಗದ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶನಿವಾರ ಎದುರು ಪ್ರತಿಭಟನೆ ನಡಸಿದರು. ವಿದ್ಯಾರ್ಥಿ ಪ್ರತಿನಿಧಿ ಕವಿತಾ ಆಚಾರ್ಯ ಮಾತನಾಡಿ, ಕುಂದಾಪುರದಿಂದ ಮುದೂರು ಮತ್ತು ಕೆರಾಡಿ ಭಾಗಕ್ಕೆ ಸಂಜೆ 4:30ಕ್ಕೆ ಇದ್ದ ಸರಕಾರಿ ಬಸ್ ಸಮಯ ಬದಲಿಸಿ ಸಂಜೆ 5 15ಕ್ಕೆ ಮಾಡಿರುವುದು ಸಮಸ್ಯೆ ಉಂಟುಮಾಡಿದೆ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2 ರಿಂದ 3ಕಿ.ಮೀ ನೆಡೆದುಕೊಂಡು ಹೊಳೆ, ಕಾಲುಸಂಕ ದಾಟಿ ಹೋಗುವಷ್ಟರಲ್ಲಿ ರಾತ್ರಿಯಾಗುತ್ತದೆ. ವಿದ್ಯಾರ್ಥಿನಿಯರಿಗೆ ಏನಾದರೂ ಸಮಸ್ಯೆಗಳಾದಲ್ಲಿ ಹೊಣೆ ಯಾರು ಎಂದವರು ಪ್ರಶ್ನಿಸಿದರು. ಮೊದಲಿನ ಸಮಯಕ್ಕೆ ಕುಂದಾಪುರದಿಂದ ಸರಕಾರಿ ಬಸ್ಸುಗಳು ಹೊರಡುವಂತೆ ಮಾಡಬೇಕು, ಅವ್ಯವಸ್ಥೆ ಹೀಗೆಯೇ ಮುಂದುವರಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು. ಈ ವೇಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಎಂಎಫ್ ಉತ್ಪನ್ನವಾದ ನಂದಿನಿ ಹಾಲು ಖರೀದಿ ದರವನ್ನು ಪ್ರತಿ ಲೀಟರಿಗೆ ರೂ.3 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿರುವುದು ರಾಜ್ಯದ ಹೈನುಗಾರರಿಗೆ ಬಲ ತುಂಬಿದಂತಾಗಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುವುದಾಗಿ ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ. ಅವಿಭಜಿತ ದಕ ಜಿಲ್ಲೆಯಲ್ಲಿ ಸುಮಾರು 65 ಸಾವಿರ ಹೈನುಗಾರರಿಂದ ಹಾಲು ಶೇಖರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಪಶು ಆಹಾರದ ಬೆಲೆಯನ್ನು ಹೆಚ್ಚಿಸಲಾಗಿತ್ತು ಆದರೆ ಅದಕ್ಕೆ ತಕ್ಕಂತೆ ಹಾಲು ಖರೀದಿ ದರ ಏರಿಕೆಯಾಗಿರಲಿಲ್ಲ. ಪಶುಪಾಲನೆಯ ಸಂಕಷ್ಟದ ಜೊತೆಗೆ ಹಾಲಿಗೆ ಸರಿಯಾದ ಧಾರಣೆ ಸಿಗದಿರುವುದರಿಂದ ರೈತರು ಕಂಗಾಲಾಗಿದ್ದು, ತಮ್ಮ ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಎಂಎಫ್ ಖರೀದಿ ದರವನ್ನು ರೂ.5ಕ್ಕೆ ಏರಿಸುವ ಬೇಡಿಕೆ ಇರಿಸಿದ್ದು, ಸದ್ಯ ರೂ.3 ಏರಿಸಲು ನಿರ್ಣಯಿಸಲಾಗಿದೆ. ಇದು ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಪ್ರೋತ್ಸಾಹಿಸಿದಂತಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಹಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ , ಕಾರ್ಯದರ್ಶಿಯಾಗಿ ಸುಧಾಕರ್ ಮೊಗವೀರ ಹಾಗೂ ಕೋಶಾಧಿಕಾರಿಯಾಗಿ ಮಾಧವ ಬಿಲ್ಲವ ಆಯ್ಕೆಯಾಗಿದ್ದಾರೆ. ಶುಕ್ರವಾರ ಶಾಲೆಯಲ್ಲಿ ಜರುಗಿದ ಹಳೆ ವಿದ್ಯಾರ್ಥಿಗಳ ಸಂಘದ ಸಭೆಯಲ್ಲಿ ಆಯ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ರಿಕೆಯಲ್ಲಿ ಬರೆದಿರುವುದೆಲ್ಲಾ ಸತ್ಯ ಎಂದು ಸಮಾಜ ನಂಬುತ್ತದೆ. ಹಾಗಾಗಿ ಪತ್ರಕರ್ತರ ಲೇಖನಿ ಸಮಾಜ ಒಗ್ಗೂಡಸಬೇಕೇ ಹೊರತು ಒಡೆಯುವಂತಾಗಬಾರದು. ಪತ್ರಕರ್ತರು ಯಾವತ್ತೂ ನಿಷ್ಠೆ ಬದಲಿಸದೇ ಬದುಕಿದರೆ ಮಾತ್ರ ಸಶಕ್ತ ಸಮಾಜ ಕಟ್ಟಲು ಸಾಧ್ಯ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಹೇಳಿದರು. ಕುಂದಾಪುರ ತಾಲೂಕು ಪತ್ರಕರ್ತರ ಸಂಘ ನೇತೃತ್ವದಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಸಹಕಾರದಲ್ಲಿ ಕಾಲೇಜು ಕೋಯಕುಟ್ಟಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ಸಮಾಜದ ಅವಿಭಾಜ್ಯ ಅಂಗವಾಗಿ ಬೆಳೆದು ಬಂದಿದ್ದು, ಕಟ್ಟಕಡೆಯ ವ್ಯಕ್ತಿಗೂ ಕೂಡಾ ಮಾಹಿತಿ ನೀಡುವ ಜೊತೆ ಸತ್ಯವನ್ನು ಮುಟ್ಟಿಸುವ, ಜಾಗೃತಿ ಮೂಡಿಸು ಕೆಲಸ ಪತ್ರಿಕೆಯಿಂದ ಆಗುತ್ತದೆ ಎಂದರು. ಕುಂದಾಪುರ ಡಿಎಸ್ಪಿ ಬೆಳ್ಳಿಯಪ್ಪ ಕೆ.ಯು., ಸಮಾಜಿಕ ಜಾಲತಾಣ ಅನಾವರಣ ಮಾಡಿ, ಪತ್ರಿಕಾ ಧರ್ಮ ಹೋಗಿ ಉದ್ಯಮವಾಗಿ ಬದಲಾಗಿದ್ದು, ಪತ್ರಕರ್ತರು ಹೆಚ್ಚು ಹೆಚ್ಚು ಓದಿ, ಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಮಹಾನಗರಿಯಲ್ಲಿ 5ನೇ ಭಾರಿಗೆ ಆಯೋಜಿಸಲಾಗುತ್ತಿರುವ “ಕುಂದಾಪ್ರ ಕನ್ನಡ ಹಬ್ಬ”ವನ್ನು ಜುಲೈ 23ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕುಂದಗನ್ನಡದ ಮೇಲಿನ ಪ್ರೀತಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಹುಟ್ಟಿದ ಅಭಿಮಾನದ ಕಿಡಿಯೊಂದು ಇಂದು ವಿಶ್ವದಗಲ ಹಬ್ಬಿರುವ ಪರಿಯು ಭಾಷೆಯೊಂದರ ಅಪರಿಮಿತ ಸಾಧ್ಯತೆಯನ್ನು ಎತ್ತಿಹಿಡಿಯುತ್ತದೆ. ಸಮಾನಮನಸ್ಕ ಗೆಳೆಯರ ಸಾರಥ್ಯದಲ್ಲಿ ಆಯೋಜನೆಯಾಗುತ್ತಾ ಬಂದ ಈ ದಿನಾಚರಣೆಯು ಈ ಬಾರಿ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಭಾಷೆಯೆಂಬುದು ಕುಂದಾಪುರ ನೆಲಮೂಲದ ಭಾಷಾ ಸಂಪತ್ತು, ಆಚಾರ-ವಿಚಾರ, ಕಲೆ, ಕ್ರೀಡೆ, ವೈವಿಧ್ಯಮಯ ಆಹಾರ ಮುಂತಾದ ಕುಂದಾಪುರ ಜನಜೀವನ, ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಜೊತೆಗೆ ಇಲ್ಲಿ ನೆಲೆಸಿರುವ ಕುಂದಗನ್ನಡಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿರುತ್ತದೆ. ಬೆಂಗಳೂರಿನಲ್ಲಿ ಲಕ್ಷಾಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾಹನಕ್ಕೆ ಅಡ್ಡ ಬಂದ ಕಾರಣಕ್ಕೆ ಆರಂಭವಾದ ಮಾತು ಪರಸ್ಪರ ಹಲ್ಲೆ, ವಾಹನ ಜಖಂಗೊಳಿಸುವುದರಲ್ಲಿ ಅಂತ್ಯವಾಗಿದ್ದು ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ವಿವರ:ಉಪ್ಪುಂದದ ರಮೇಶ್ ದೇವಾಡಿಗ ಎಂಬುವವರು, ಟಾಟಾ ಏಸ್ ವಾಹನದಲ್ಲಿ ತನ್ನ ಸ್ನೇಹಿತ ರವಿ ಎಂಬುವವರೊಂದಿಗೆ ಪ್ಲೈವುಡ್ ತರಲು ಉಪ್ಪುಂದದಿಂದ ಬೈಂದೂರಿನ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಮನೀಶ್ ಬಾರ್ & ರೆಸ್ಟೊರೆಂಟ್ ಮುಂದೆ ನಿಖಿಲೇಶ್, ನಿತೇಶ್, ಹಾಗೂ ಕಿಶೋರ್ ಎಂಬುವವರು ವಿರುದ್ಧ ದಿಕ್ಕಿನಲ್ಲಿ ಬಂದು ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ. ಪಕ್ಕದಲ್ಲಿ ಕುಳಿತಿದ್ದ ರವಿಯ ಕುತ್ತಿಗೆಗೆ ಕೈಹಾಕಿ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದು ಆಗ ಸ್ಥಳಿಯರು ಗಲಾಟೆಯನ್ನು ಬಿಡಿಸಿ ಕಳುಹಿಸಿದ್ದಾರೆ. ರಮೇಶ್ ದೇವಾಡಿಗ ತಮ್ಮ ಕೆಲಸವನ್ನು ಮುಗಿಸಿಕೊಂಡು ಸಂಜೆ 5 ಗಂಟೆ ವೇಳೆಗೆ ಶೆಟ್ಟಿ ಬಾರ್ & ರೆಸ್ಟೊರೆಂಟ್ ಪಕ್ಕದಲ್ಲಿದ್ದ ಟೀ ಸ್ಟಾಲ್ ನಲ್ಲಿ ಟೀ ಕುಡಿಯಲು ವಾಹನವನ್ನು ನಿಲ್ಲಿಸಿದ್ದ ಸಂದರ್ಭ ನಿಖಿಲೇಶ್, ನಿತೇಶ್, ಕಿಶೋರ್ , ಪ್ರಜ್ವಲ್ ಶೆಟ್ಟಿ ಹಾಗೂ ಮಣಿಕಂಠ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ಉಡುಪಿ, ಕೋಟ ವಿದ್ಯಾ ಸಂಘದ ಆಶ್ರಯದಲ್ಲಿ ಬುಧವಾರ ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯಸ್ಥರ ಜಿಲ್ಲಾ ಮಟ್ಟದ ಸಮ್ಮೇಳನ ಜರುಗಿತು. ಕಳೆದ 25 ವರ್ಷಗಳಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆ, ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಗುರುತಿಸಿ, ಕಾರ್ಯಕ್ರಮದಲ್ಲಿ ಸಂಸ್ಥೆಯ ಶಮಿತಾ ರಾವ್ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ದಾಖಲಿಸಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿಯೂ ಪ್ರಥಮ ಸ್ಥಾನ ( 95.18%) ಪಡೆದುಕೊಂಡಿತ್ತು. ಪದವಿಪೂರ್ವ ಶಿಕ್ಷಣದಲ್ಲಿಯೂ ಉತ್ತಮ ಫಲಿತಾಂಶ ದಾಖಲಿಸಿದೆ. ಇದನ್ನೂ ಓದಿ:► ಎಸೆಸೆಲ್ಸಿ ಫಲಿತಾಂಶ: ಕುಂದಾಪುರ ವಲಯದಲ್ಲಿ ಪ್ರಥಮ ಸ್ಥಾನ ಪಡೆದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ – https://kundapraa.com/?p=66902 .►…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲಕಿಯೋರ್ವಳು ನಿದ್ದೆ ಮಂಪರಿನಲ್ಲಿ ಎದ್ದು ಸುಮಾರು ಒಂದು 50ಮೀ. ದೂರ ರಸ್ತೆಯಲ್ಲಿ ನಡೆದು ಬಂದಿದ್ದು, ಯುವಕರ ತಂಡವೊಂದು ಬಾಲಕಿಯನ್ನು ರಕ್ಷಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತಾಲೂಕಿನ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಮೀಪ ದಬ್ಬೆಕಟ್ಟೆ – ತೆಕ್ಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಚಾರುಕೊಟ್ಟಿಗೆ ಬಾರ್‌ನ ಸಿಬ್ಬಂದಿ ವಿಶ್ವನಾಥ್ ಎಂಬುವವರು ಬಾಲಕಿ ರಸ್ತೆ ಪಕ್ಕದಲ್ಲಿ ನಿಂತಿರುವುದನ್ನು ಗಮನಿಸಿದ್ದು, ಪೂರ್ವಾಪರ ವಿಚಾರಿಸಿ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ. ಬುಧವಾರ ರಾತ್ರಿ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ಕೆಲಸ ಮುಗಿಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರಸ್ತೆಯಲ್ಲಿ 6 ವರ್ಷದ ಬಾಲಕಿ ಸ್ವಾಮಿ ಕೊರಗಜ್ಜನ ನಾಮಫಲಕದ ಕೆಳಗೆ ನಿಂತಿರುವುದನ್ನು ಗಮನಿಸಿದ್ದಾರೆ. ಈ ಹೊತ್ತಿನಲ್ಲಿ ಒಂಟಿ ಮಗು ಇಲ್ಲಿಗೆ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಮಗುವಿನ ರಕ್ಷಣೆಗೆ ಧಾವಿಸುತ್ತಾರೆ. ಮಗುವಿನ ಪೂರ್ವಾಪರ ವಿಚಾರಿಸಿ ಮಗುವನ್ನ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ನಿದ್ರೆಯಲ್ಲಿದ್ದ ಪೋಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ತವ್ಯ ನಿರತ ವಿಜಯಪುರ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ನಾಯಕ್ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಮೂಲದ ಅರುಣ್ ನಾಯಕ್ ಅವರು ಪಿಎಸ್ಐ, ವೃತ್ತ ನಿರೀಕ್ಷಕರಾಗಿ ಬೈಂದೂರು ಬ್ರಹ್ಮಾವರ ಉಡುಪಿ ಮೊದಲಾದೆಡೆ ಸೇವೆ ಸಲ್ಲಿಸಿ ಖ್ಯಾತಿ ಗಳಿಸಿದ್ದರು. ಅರುಣ್ ನಾಯಕ್ ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಮಗನೊಂದಿಗೆ ವಾಸವಾಗಿದ್ದಾರೆ.
