Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಮಕ್ಕಳಲ್ಲಿ ಭಾಷಾ ಬೆಳವಣಿಗೆ ಹಾಗೂ ಅತ್ಯುತ್ತಮ ಸಂವಹನ ಕೌಶಲ ರೂಢಿಸಲು ಯಕ್ಷಗಾನದ ಕಲಿಕೆ ವಿಶೇಷ ಕೊಡುಗೆ ನೀಡುತ್ತದೆ” ಎಂದು ಕೊಂಕಣ ರೈಲ್ವೆಯ ನಿವೃತ್ತ ಅಧಿಕಾರಿ ರಘುನಾಥ ನಾಯಕ್ ಎಣ್ಣೆಹೊಳೆ ಹೇಳಿದರು. ಅವರು ಸರಕಾರಿ ಹೆಸಕುತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ “ನಿರಂತರ ಯಕ್ಷಗಾನ ತರಗತಿ” ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಯಕ್ಷಗಾನ ತರಗತಿಯನ್ನು ನಡೆಸಿಕೊಡುತ್ತಿರುವ ಯಕ್ಷ ಗುರುಗಳಾದ ಐರೋಡಿ ಮಂಜುನಾಥ ಕುಲಾಲ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯಾ ಆರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕ ರವೀಂದ್ರ ನಾಯಕ್ ನಿರೂಪಿಸಿದರು ಹಾಗೂ ಜಯರಾಮ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಸುನಿಲ್ ಅವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, IAS ಅವರು ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ ಉಡುಪಿ ಜಿಲ್ಲೆಗೆ ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಫಲಪ್ರದವಾಗಲಿ ಎಂದು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಮಾಹೆ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಎಂಐಟಿ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ, ಎಂಐಟಿ ಜಂಟಿ ನಿರ್ದೇಶಕ ಡಾ.ಸೋಮಶೇಖರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಸಹ ನಿರ್ದೇಶಕಿ ಡಾ.ಪೂರ್ಣಿಮಾ ಕುಂದಾಪುರ ಉಪಸ್ಥಿತರಿದ್ದರು.ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ನ್ಯಾಕ್ ಪೀರ್ ತಂಡವು ಇತ್ತೀಚಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪ್ರಸ್ತುತಪಡಿಸಲಾಯಿತು. ತಂಡವು ಕಾಲೇಜಿನ ಎಲ್ಲಾ ವಿಭಾಗಗಳ ಸೌಲಭ್ಯಗಳು, ಕ್ಯಾಂಪಸ್ ಮೂಲಸೌಕರ್ಯಗಳು, ಸಂಘಗಳಿಗೆ ಭೇಟಿ ನೀಡಿದರು. 14 ರಂದು ಸಂಜೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು. 15ರಂದು ಕಾಲೇಜಿನಲ್ಲಿ ನ್ಯಾಕ್ ಪೀರ್ ತಂಡದವರು ನಿರ್ಗಮನ ಸಭೆ ನಡೆಸಿದರು. ತಂಡದ ಸದಸ್ಯರು ತಮ್ಮ ಅವಲೋಕನಗಳ ಆಧಾರದ ಮೇಲೆ ಸಂಸ್ಥೆಯ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು…

Read More

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಆಯೋಜಿಸಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದೆಲ್ಲೆಡೆ ನೆಲೆಸಿರುವ ಕುಂದಾಪ್ರ ಕನ್ನಡಿಗರು ತಮ್ಮದೇ ಅಸ್ಥಿತ್ವ ಉಳಿಸಿಕೊಳ್ಳುವುದರ ಜೊತೆಗೆ ಎಲ್ಲರಿಗೂ ಬೇಕಾಗುವ ವ್ಯಕ್ತಿಯಾಗಿ ಬೆಳೆದಿದ್ದಾರೆ. ಇದು ಕುಂದಾಪುರ ಮಣ್ಣಿನ ತಾಕತ್ತು. ಆಧುನಿಕರಣದ ಭರಾಟೆಯಲ್ಲಿ ಭಾಷೆ – ಸಂಸ್ಕೃತಿ ನಾಶವಾಗುತ್ತದೆ ಎಂಬ ಆತಂಕದ ನಡುವೆಯೂ ಯುವ ಜನತೆ ಮತ್ತೆ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿರುವುದು ಶ್ಲಾಘನಾರ್ಹ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಸೋಮವಾರ ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೈಂದೂರು – ಕುಂದಾಪುರ ಭೌಗೋಳಿಕ ಪ್ರದೇಶ ದೈವದತ್ತವಾದ ಕೊಡುಗೆ. ಇಲ್ಲಿನ ಬದುಕು, ಭಾಷೆ, ಸಂಸ್ಕೃತಿ, ಸಂಪ್ರದಾಯಗಳೆಲ್ಲವೂ ಭಿನ್ನವಾಗಿದೆ. ಭೌಗೋಳಿಕವಾಗಿ ಇರುವ ಸಮಸ್ಯೆಗಳ ನಡುವೆಯೂ ಸಂತಸದ ಬದುಕು ಕಟ್ಟಿಕೊಂಡಿದ್ದೇವೆ. ಇಲ್ಲಿನ ಸಮಸ್ಯೆ ಹಾಗೂ ಮೂಲಭೂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆ ಭಾಷೆಯ ಮೂಲಕವೇ ವ್ಯಕ್ತವಾಗುತ್ತದೆ. ಹಿರಿಯರ ಬಳಸುತ್ತಿದ್ದ ಭಾಷೆಯ ಬಗ್ಗೆ ಹೆಮ್ಮೆ ಹೊಂದಿರುವ ಜೊತೆಗೆ ಹೆಚ್ಚು ಬಳಸುವ ಬಗ್ಗೆಯೂ ಗಮನಹರಿಸಬೇಕಿದೆ ಎಂದು ಕುಂದಾಪ್ರ ಕನ್ನಡದ ಕಲಾವಿದ ಚೇತನ ನೈಲಾಡಿ ಹೇಳಿದರು. ಅವರು ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಹಾಗೂ ಕುಂದಾಪ್ರ ಡಾಟ್ ಕಾಂ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಬೈಂದೂರು, ಜೆಸಿಐ ಬೈಂದೂರು ಸಿಟಿ, ಜೆಸಿಐ ಉಪ್ಪುಂದ, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಬೈಂದೂರು ಹಾಗೂ ಉಪ್ಪುಂದ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಪ್ರತಿ ಆಚರಣೆ, ಸಂಪ್ರದಾಯಗಳೂ ಈಗ ಅಳಿವಿನಂಚಿನಲ್ಲಿದೆ. ಆದರೆ ಅದೆಲ್ಲವನ್ನೂ ಉಳಿಸಿ ಮುಂದಿಸಿ ಜನಾಂಗಕ್ಕೆ ದಾಟಿಸುವ ಕೆಲಸವಾಗಬೇಕು. ಹೊಸತನಕ್ಕೆ ಹೊಂದಿಕೊಳ್ಳುವುದು ತಪ್ಪಲ್ಲ ಆದರೆ ನಮ್ಮತನವನ್ನು ಮರೆಯಬಾರದು ಎಂದರು. ಕುಂದ ಅಧ್ಯಯನ ಕೇಂದ್ರದ ಅಧ್ಯಕ್ಷರಿಗೆ ಉಳುಮೆಯ ನೊಗ ಹಸ್ತಾಂತರಿಸುವ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ – ಬೈಂದೂರು ವಲಯದ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು ದೀಪ ಬೆಳಗಿಸುದರ ಮೂಲಕ ದಿನಕರ್ ನಾಯ್ಕ್ ಉದ್ಯಮಿಗಳು ಬೆಳಂಜೆ ನೇರವೆರಿಸಿದರು. ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಇವರನ್ನು ಸನ್ಮನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ವಹಿಸಿದ್ದರು. ಈ ಸಂಧರ್ಭ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿ ಸುರೇಶ್ ಜಮದಗ್ನಿ, ಸಂಘದ ಮಾಜಿ ಅಧ್ಯಕ್ಷ ರಾಜ ಮಠದಬೆಟ್ಟಿ, ಛಾಯಾ ಕಾರ್ಯದರ್ಶಿ ಅಮೃತ್ ಬೀಜಾಡಿ ,ಕ್ರೀಡಾ ಕಾರ್ಯದರ್ಶಿಗಳಾದ ಸಿರಿ ಕುಂದಾಪುರ,ದಿನೇಶ್ ನಾಗೂರು,ರಾಘವೇಂದ್ರ ಬಸ್ರೂರು ಮೊದಲಾದವರು ಉಪಸ್ಥಿತರಿದ್ದರು. ನಾಗರಾಜ್ ರಾಯಪ್ಪನ ಮಠ ಸ್ವಾಗತಿಸಿದರು, ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್‌ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28ನೇ ರ‍್ಯಾಂಕ್‌ ಪಡೆದಿದ್ದರೇ, ದೀಕ್ಷಾ ಪಾಂಡುಗೆ 42ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಉಳಿದಂತೆ ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌, ದೀಪಕ್‌ ಕೆ ಎಸ್‌ 171 ನೇ ರ‍್ಯಾಂಕ್‌, ಸಂತೃಪ್ತಿ 209 ನೇ ರ‍್ಯಾಂಕ್‌, ಶ್ರವಣ್‌ ಎಸ್‌ 212 ನೇ ರ‍್ಯಾಂಕ್‌, ಅನ್ವಿತಾ ಕೆ 227 ನೇ ರ‍್ಯಾಂಕ್‌, ಹೇಮಂತ್‌ ಗೌಡ ಎಸ್‌ ಆರ್‌ 229 ನೇ ರ‍್ಯಾಂಕ್‌, ಸ್ಪರ್ಶ ಪಾರ್ಶ್ವನಾಥ್‌ 235 ನೇ ರ‍್ಯಾಂಕ್‌, ಅನುಷಾ ಐನಾಪುರ್‌ 254 ನೇ ರ‍್ಯಾಂಕ್‌, ಕುಶಾಲ್‌ ಸೂರ್ಯ ಹೆಚ್‌ ಎಂ 259 ನೇ ರ‍್ಯಾಂಕ್‌, ಸ್ವಸ್ತಿಕ್‌ ಕೃಷ್ಣಮೂರ್ತಿ…

Read More

ಬಡವರಿಗೆ ಯಾರೇ ಅಕ್ಕಿ ಕೊಟ್ಟರೂ ಒಳ್ಳೆಯದೇ. ಆದರೆ ಅದು ಆಡಳಿತದ ವಿಚಾರವಾಗಬಾರದು – ಶಾಸಕ ಗುರುರಾಜ ಗಂಟಿಹೊಳೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಕುಂದಾಪುರ ಕನ್ನಡ ಹಬ್ಬದ ಸಂಭ್ರಮ ಮನೆಮಾಡಿತ್ತು. ಟೀಮ್ ಕುಂದಾಪುರಿಯನ್ಸ್ ವತಿಯಿಂದ ಬಸವೇಶ್ವರ ನಗರದಲ್ಲಿ ಮಾತಿನ್ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಇಲ್ಲಿ ಕುಂದಾಪುರಿಗರು ಎದುರಿಸುತ್ತಿರೋ ಸಮಸ್ಯೆ ಹಾಗೂ ಕನಸಿನ ಕುಂದಾಪುರದ ಬಗ್ಗೆ ಹಲವು ನಿರ್ಣಯ ಕೈಗೊಳ್ಳಲಾಯ್ತು. ಬದುಕು ಕಟ್ಟಕೊಳ್ಳುವ ಸಲುವಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ನೆಲೆಯಾದ ಕುಂದಾಪುರ ಭಾಗದವರೇ ಸೇರಿ ಕಟ್ಟಿದ ತಂಡವೇ ಟೀಂ ಕುಂದಾಪುರಿಯನ್ಸ್. ಈಗಾಗಲೇ ಹತ್ತು-ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಹಾನಗರಿಯಲ್ಲಿ ಮನೆಮಾತಾದ ತಂಡ, ಇಂದು ಕುಂದಾಪುರದ ಹಬ್ಬದ ಮೂಲಕ ತಮ್ಮ ಭಾಷಾ ಪ್ರೇಮ ಮತ್ತು ಬದ್ದತೆಯನ್ನ ಮೆರೆದಿದೆ. ಕುಂದಾಪುರದ ಗ್ರಾಮೀಣ ಸೊಗಡಿನ ಅಟ:ಮಾತಿನ ಹಬ್ಬ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ದೀಪಕ್ ಶೆಟ್ಟಿ ಬಾರ್ಕೂರು, ನಟ ಕವೀಶ್ ಶೆಟ್ಟಿ, ಸಮಾಜಸೇವಕ ಗೋವಿಂದ್ ಪೂಜಾರಿ, ಅಜಿತ್ ಶೆಟ್ಟಿ ಉಳ್ತೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದೇ…

Read More