ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್. ಅಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.. ವಿದ್ಯಾರ್ಥಿಗಳಾದ ಹೊನ್ನುಶ್ರೀ (ಇಂಗ್ಲೀಷ ಕಠಪಾಠ), ಮೊಹಮ್ಮದ್ನಬಾನ್ (ಅರೇಬಿಕ್ ಧಾರ್ಮಿಕ ಪಠಣ), ಹರ್ಷಾಲಿ (ಛದ್ಮವೇಷ), ಆರಾಧ್ಯ ದೇವಾಡಿಗ (ಚಿತ್ರ ಕಲೆ) ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟಂಬರ್ 30ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 1984-85ನೇ ಸಾಲಿನ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ಹಳೇ ವಿದ್ಯಾರ್ಥಿಗಳು ಸ್ಥಾಪಿಸಿದ ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆದು, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಣೆ ಮಾಡಲಾಯಿತು. ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಎಮ್. ಅಧ್ಯಕ್ಷತೆ ವಹಿಸಿ, ಸಂಘ ಉತ್ತಮ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, 4.40 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಸಂಘದ ನಿರ್ದೇಶಕರಾದ ದಿನೇಶ ನಾವಡ, ರಘುರಾಮ್ ಶೆಟ್ಟಿ ಸಿ., ಶಾಂತಿ ಕಾಮತ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ನಾಗರಾಜ ಶೇರೆಗಾರ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಪುತ್ರನ್ ವರದಿ ಹಾಗೂ ಆಯವ್ಯಯ ಮಂಡಿಸಿದರು. ನಿರ್ದೇಶಕ ಮಂಜುನಾಥ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಸ್ಥಾಪಕಾಧ್ಯಕ್ಷ ವಿನಯ ಎ. ಪಾಸ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ 21 ರಿಂದ 35 ವರ್ಷದೊಳಗಿನ ಪದವಿ ಅಭ್ಯರ್ಥಿಗಳಿಂದ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್ನಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್ನಿಂದ ಚಾಮರಾಜ ನಗರದವರೆಗೆ 250 ಕಿ.ಮೀ ವರೆಗೆ 25 ಲಕ್ಷ ಜನರು ಮಾನವ ಸರಪಳಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ರೋಟರಿ ಸಂಸ್ಥೆಯ ಸದಸ್ಯರುಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತವಾಗಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಮಾನವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾರಾಹಿಯಂತಹ ನೀರಾವರಿ ಯೋಜನೆ ಬೈಂದೂರು ಕ್ಷೇತ್ರದಲ್ಲಿ ಇದ್ದೂ ಕೂಡ ಇಲ್ಲಿನ ಜನರು ಕೃಷಿ ಹಾಗೂ ಕುಡಿಯುವ ನೀರಿಗಾಗಿ ಪರಿಪಾಟಲು ಪಡುವಂತಾಗಿದೆ. ಕಳೆದ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾರಾಹಿ ಬಲದಂಡೆ ಯೋಜನೆ ಕಾಮಗಾರಿಯನ್ನು ಕೈಗೆತ್ತುಕೊಳ್ಳುವಲ್ಲಿ ಹಾಗೂ ಬೈಂದೂರು ಕ್ಷೇತ್ರದಾದ್ಯಂತ ವಾರಾಹಿ ನೀರು ದೊರೆಯುವಲ್ಲಿ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯ ಎಂಬಂತಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಗುರುವಾರ ಇಲ್ಲಿನ ಆಡಳಿತದ ಸೌಧದಲ್ಲಿ ವಾರಾಹಿ ಬಲದಂಡೆ ಯೋಜನೆ, ಕಸ್ತೂರಿ ರಂಗನ್ ವರದಿ ಹಾಗೂ ಸಿಆರ್ಝಡ್ ಸಮಸ್ಯೆಗಳ ಪರಿಹಾರಕ್ಕಿರುವ ಮಾರ್ಗಗಳ ಬಗ್ಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಡೆದ ಮಾಹಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾರಾಹಿ ಯೋಜನೆಯಿಂದ ಹಲವು ಭಾಗಗಳು ವಂಚಿತ, ಭಾಗಶಃ ವಂಚಿತ ಹಾಗೂ ಸಂತ್ರಸ್ಥ ಗ್ರಾಮಗಳಾಗಿದ್ದು ಎಲ್ಲಾ ಭಾಗಕ್ಕೂ ನೀರು ದೊರೆಕಿಸಿಕೊಡುವ ಅಗತ್ಯವಿದೆ. ಯೋಜನೆ ನೆನೆಗುದಿಗೆ ಬೀಳಲು ಅರಣ್ಯ ಇಲಾಖೆಯ ತಾಂತ್ರಿಕ ತೊಂದರೆಗಳೇ ಕಾರಣ ಎಂಬ ಆರೋಪ ಸಾಮಾನ್ಯವಾಗಿ ಕೇಳಿಬರುತ್ತಿದೆ. ಆದರೆ ಅದಕ್ಕೆ ಸ್ಪಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕೊಡಮಾಡುವ 2024ನೇ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಆಯ್ಕೆಯಾಗಿದ್ದಾರೆ. ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪುರಸ್ಕಾರಕ್ಕೆ ನೀಡುತ್ತಾ ಬಂದಿದ್ದು ವೀರಪ್ಪ ಮೊಯ್ಲಿ, ಶ್ರೀ ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ. ವಿದ್ಯಾಭೂಷಣ್ ಅವರು ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ ಅಮೂಲ್ಯ…
