ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಜತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸೈಕಲ್ ಸ್ಟ್ಯಾಂಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಇತ್ತಿಚಿಗೆ ನಡೆಯಿತು, ಸೈಕಲ್ ಸ್ಟ್ಯಾಂಡ್ ಉದ್ಘಾಟನೆಯನ್ನು ಮಾಜಿ ಆಡಳಿತ ಮಂಡಳಿಯ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿಯವರು ನೆರವೇರಿಸಿದರು. ಶುದ್ಧ ಕುಡಿಯುವ ನೀರಿನ ಘಟಕವನ್ನು ಮಾಜಿ ಆಡಳಿತ ಮಂಡಳಿ ಸದಸ್ಯರಾದ ಸಬ್ಲಾಡಿ ಮಂಜಯ್ಯ ಶೆಟ್ಟಿ ಮತ್ತು ಮಾಜಿ ಆಡಳಿತ ಮಂಡಳಿ ಸದಸ್ಯ ಡಾ.ಅತುಲ್ ಕುಮಾರ ಶೆಟ್ಟಿ ನೆರವೇರಿಸಿದರು, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ದಾನಿಗಳು ಆದ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಆಡಳಿತ ಮಂಡಳಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿಯವರು ವಹಿಸಿದರು, ಮುಖ್ಯ ಅತಿಥಿಗಳಾಗಿ ಶಾಲಾ ಮಹಾ ಪೋಷಕರಾದ ಶಿವರಾಮ ಶೆಟ್ಟಿ ದೇವಲ್ಕುಂದ, ಚಂದ್ರಶೇಖರ್ ಶೆಟ್ಟಿ, ಕಾನ್ ಬೇರು, ದಿನಕರ ಶೆಟ್ಟಿ ನಿಡೂಟ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ ಎಲ್ ಜಯರಾಮ್ ಶೆಟ್ಟಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು, ಪ್ರಾದೇಶಿಕ ಸಾರಿಗೆ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೈಂದೂರು ವಲಯದ ಎಲ್ಲಾ ಶಾಲೆಗಳ ಶಾಲಾವಾಹನ ಚಾಲಕರಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ “ರೋಟರಿ ಜಿಲ್ಲಾ ಕಾರ್ಯಕ್ರಮ ರಸ್ತೆ ಸುರಕ್ಷತೆಯ ” ಅಂಗವಾಗಿ ಶಾಲಾ ವಾಹನದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಗಾರ ಉಪ್ಪಂದದ ರೈತ ಸಿರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಮುಖ್ಯೋಪಾಧ್ಯಾಯರಾದ ವಿಶ್ವೇಶ್ವರ ಅಡಿಗ ಅವರು ಉದ್ಘಾಟಿಸಿ ಮಾತನಾಡಿ, “ಮಕ್ಕಳು ಬಹಳ ಸೂಕ್ಷ್ಮ ಮತ್ತು ಅವರೇ ನಮ್ಮ ಭವಿಷ್ಯ ; ಅವರ ಸುರಕ್ಷತೆಯ ಬಗ್ಗೆ ನಾವು ಎಷ್ಟು ಕಾಳಜಿ ವಹಿಸಿದರು ಕೂಡ ಅದು ಕಡಿಮೆಯೇ ,ಪ್ರತಿದಿನ ಪ್ರತಿ ಕ್ಷಣ ಮೈಯೆಲ್ಲಾ ಕಣ್ಣಾಗಿ ಮಕ್ಕಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಕಿವಿ ಮಾತು ಹೇಳಿದರು. ಬೈಂದೂರು ತಹಶೀಲ್ದಾರರಾದ ಪ್ರದೀಪ್ ಆರ್ ಅವರು ಉಡುಪಿ ಜಿಲ್ಲಾ ಆರ್.ಟಿ.ಓ ರವಿಶಂಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಪರ್ಸ್ ನಲ್ಲಿದ್ದ ಕರಿಮಣಿ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹುಬ್ಬಳ್ಳಿ ಬೆಂಡಗೇರಿ ಮೂಲದ ಬೀಬಿ ಜಾನ್(58) ಹಾಗೂ ಪಾರವ್ವ (54) ಎಂದು ಗುರುತಿಸಲಾಗಿದೆ. ಮದುವೆ ನಿಮಿತ್ತ ಖರೀದಿಸಿ ತಂದ ಕರಿಮಣಿ ಸರವನ್ನು ಬ್ಯಾಗಿನಲ್ಲಿಟ್ಟು ಡಿ.27ರಂದು ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ಪೂಜೆಗೆ ಹೋಗಿದ್ದ ವೇಳೆ ಕಳ್ಳರು ಚಿನ್ನಾಭರಣವಿದ್ದ ಪರ್ಸ್ ಕಳವು ಮಾಡಿದ್ದರು. ಕುಂದಾಪುರ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರ ತಂಡವು ಸಿಸಿಟಿವಿ ಮತ್ತು ಇತರ ತಾಂತ್ರಿಕ ದಾಖಲೆ ವಿಶ್ಲೇಷಿಸಿ, ಪ್ರಕರಣ ದಾಖಲಾದ ಮೂರೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದರು. ಇವರಿಂದ ಕಳವುಗೈದ 3.5 ಲಕ್ಷ ಮೌಲ್ಯದ 51.900 ಗ್ರಾಂ ತೂಕದ ಚಿನ್ನದ ಕರಿಮಣಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಎಸ್ಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ತೂರು – ಚಿತ್ತೇರಿಯ ನಂದಿಕೇಶ್ವರ ದೈವಸ್ಥಾನದ ಎದುರು ಅತ್ಯಂತ ಅಪರೂಪದ ವೀರಸ್ಥಂಭ ಕಂಡು ಬಂದಿದೆ. ಈ ವೀರಸ್ಥಂಭ ಚಿತ್ತೇರಿ ನಂದಿಕೇಶ್ವರ ದೈವಸ್ಥಾನದ ಎದುರು ನಿಲ್ಲಿಸಲ್ಪಟ್ಟಿದ್ದು, ಸುಮಾರು ಆರು ಅಡಿ ಎತ್ತರವಿದೆ. ನಾಲ್ಕು ಮುಖಗಳನ್ನು ಹೊಂದಿರುವ ಸ್ಥಂಭ, ಪ್ರತಿಯೊಂದು ಮುಖದಲ್ಲಿಯೂ ತಲಾ ಮೂರು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿವೃತ್ತ ಪುರಾತತ್ತ್ವ ವಿದ್ವಾಂಸ ಪ್ರೊ. ಟಿ. ಮುರುಗೇಶಿ ಅವರು, ಪೂರ್ವಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ, ವೀರನೊಬ್ಬ ಅಶ್ವರೋಹಿಯ ಮೇಲೆ ದಾಳಿ ಮಾಡಿದ್ದು, ಅಶ್ವಾರೋಹಿಯನ್ನು ಎರಡು ಭಾಗವಾಗಿ ತುಂಡರಿಸಿದ್ದಾನೆ. ಎರಡನೇ ಪಟ್ಟಿಕೆಯಲ್ಲಿ ವೀರನೊಬ್ಬ ಯುದ್ಧಾನೆಯ ಮೇಲೆ ಅಂಕುಶವನ್ನು ಹಿಡಿದು ಕುಳಿತಿರುವಂತೆ ಚಿತ್ರಿಸಲಾಗಿದೆ. ಮೇಲಿನ ಪಟ್ಟಿಗೆಯಲ್ಲಿ ಕತ್ತಿ ಕಾಳಗದಲ್ಲಿ ತೊಡಗಿರುವಂತೆ ಚಿತ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ಪಶ್ಚಿಮಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ, ಕತ್ತ ಕಾಳಗದ ಚಿತ್ರಣವಿದೆ. ಮಧ್ಯದ ಪಟ್ಟಿಕೆಯಲ್ಲಿ ಕುದುರೆಯ ಮೇಲೆ ಕುಳಿತು ಈಟಿಯನ್ನು ಹಿಡಿದು ಮುನ್ನುಗ್ಗುತ್ತಿರುವಂತೆ ಚಿತ್ರಿಸಲಾಗಿದೆ. ಮೂರನೇ ಪಟ್ಟಿಕೆಯಲ್ಲಿ ಮತ್ತೆ ಕತ್ತಿ ಕಾಳಗದ ಚಿತ್ರಣವಿದೆ. ದಕ್ಷಿಣಾಭಿಮುಖದ ಕೆಳಗಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವುದರ ಮೂಲಕ 2047 ರೊಳಗೆ ಭಾರತ ಸಂಪೂರ್ಣ ವಿಕಸಿತವಾಗಬೇಕು ಎಂಬ ಸಂಕಲ್ಪದೊಂದಿಗೆ ದೇಶದಾದ್ಯಂತ ವಿಕಸಿತ ಭಾರತ ಅಭಿಯಾನ ಆರಂಭಿಸಲಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕೆನರಾ ಬ್ಯಾಂಕ್ ನಾವುಂದ ಶಾಖೆ ಇವರ ಸಹಯೋಗದೊಂದಿಗೆ ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಬರುತ್ತಿದ್ದು ಆರು ಲಕ್ಷ ಹಳ್ಳಿಗಳು ಈ ತಂತ್ರಜ್ಞಾನದ ಪ್ರಯೋಜನ ಪಡೆದು ಯಶಸ್ವಿಯಾಗಿದ್ದಾರೆ ಎಂದರು. ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ ಖಾರ್ವಿ ಅಧ್ಯಕ್ಷತೆವಹಿಸಿದ್ದರು. ಕೆನರಾ ಬ್ಯಾಂಕ್ ಆರ್ಥಿಕ ಸಮಾಲೋಚಕಿ ಮೀರಾ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಜಯಪ್ರಕಾಶ್, ಜಿಲ್ಲಾ ಆಸ್ಪತ್ರೆ ಆರೋಗ್ಯ ಮಿತ್ರ ಸುಷನಮಾಲಾ, ಬ್ರಹ್ಮಾವರ ರುಡ್ಸೆಟ್ ಉಪನ್ಯಾಸಕ ಕರುಣಾಕರ ಜೈನ್, ಕೃಷಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕುಂದಾಪುರ ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಮುಂದಿನ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೆ ಹಕ್ಕು ಪತ್ರಗಳ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು. ಜನಪ್ರತಿನಿಧಿಗಳಿಗೆ ಅಧಿಕಾರ ಮುಖ್ಯ ಅಲ್ಲ, ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಉಡುಪಿ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಭಾಗ್ಯ ಉಡುಪಿ ಜಿಲ್ಲೆ ತನ್ನದೇ ವೈಶಿಷ್ಟ್ಯಗಳನ್ನು ಹೊಂದಿದೆ. ಇಂಥ ಜಿಲ್ಲೆಗೆ ಉಸ್ತುವಾರಿ ಸಚಿವೆ ಆಗಿರುವುದು ನನ್ನ ಭಾಗ್ಯ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕಾಂಗ್ರೆಸ್ ಪಕ್ಷ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು. ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಮ್ಮ ಸರ್ಕಾರ ಬಡವರ ಪರವಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲೇ ಘೋಷಿಸಿದ್ದ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ, ಇದು ನಮ್ಮ ಸರ್ಕಾರದ ಹೆಗ್ಗಳಿಕೆಯಾಗಿದೆ ಎಂದರು. 55 ಜನರಿಗೆ ಹಕ್ಕುಪತ್ರ :ದೇಶದಲ್ಲಿ ಉಳುವವನೇ ಭೂ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದು ನಮ್ಮ ಪಕ್ಷದ ಹೆಗ್ಗಳಿಕೆ. ಹಕ್ಕುಪತ್ರಕ್ಕಾಗಿ 600ಕ್ಕೂ ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿ, ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.17: ಪ್ರಸವ ಪೂರ್ವ ಹಾಗೂ ಪ್ರಸವ ನಂತರದಲ್ಲಿ ತೆಗೆದುಕೊಳ್ಳಬೇಕಾದ ಆರೈಕೆ ಕ್ರಮಗಳ ಅರಿವು ಮೂಡಿಸುವುದು ಹಾಗೂ ಆರೋಗ್ಯ ಸೇವೆಗಳನ್ನು ನೀಡುವುದರೊಂದಿಗೆ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣಕ್ಕೆ ಸಂಬAಧಿಸಿದ ಯಾವುದೇ ಪ್ರಕರಣಗಳು ಆಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಸಾಮಾಜಿಕ ಸವಲತ್ತುಗಳ ಸಮನ್ವಯ ಸಮಿತಿ ಸಭೆ, ಟಿ.ಬಿ. ಫೋರಂ ಸಮಿತಿ ಸಭೆ, ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಲಹಾ ಸಮಿತಿ ಸಭೆ, ಜಿಲ್ಲಾ ಕಣ್ಗಾವಲು ಸಮಿತಿ ಸಭೆ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಾ ಪ್ರಾಧಿಕಾರದ ಆಸ್ಪತ್ರೆಗಳ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಸಭೆ, ವಾಲೆಂಟರ್ ಬ್ಲಡದ ಟಾಸ್ಕ್ ಫೋಸ್ ಮೀಟಿಂಗ್ ಹಾಗೂ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿಕಾರ್ಡನ್ನು ವಿತರಿಸಿ, ನಿಯಮಿತ ಆರೋಗ್ಯ ತಪಾಸಣೆಗೆ ಬಂದಾಗ ಅವರಲ್ಲಿರುವ ತೊಡಕುಗಳನ್ನು ಪರಿಣಾಮಕಾರಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಕಾಂತರ ಸಿನಿಮಾದ ಖ್ಯಾತ ನಟಿ ಸಪ್ತಮಿ ಗೌಡ ಭೇಟಿ ನೀಡಿದರು. ಕಾರಂತರ ನೆನಪಿನಲ್ಲಿ ಥೀಮ್ ಪಾರ್ಕ್ ನಿರ್ಮಾಣದ ಮೂಲಕ ಅವರ ಬದುಕಿನ ಪುಟಗಳನ್ನು ಮುಂದಿನ ಜನಾಂಗ ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗಮಂದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಸಂಗೀತ ಕಾರಂಜಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ನಟಿ ತಾಯಿ ಶಾಂತ, ವಿಧಾನ ಪರಿಷತ್ ವಿಪಕ್ಷ ನಾಯಕರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಬ್ಲಿಕ್ ಸ್ಕೂಲ್ ಕೋಟೇಶ್ವರದ ಸಹ ಶಿಕ್ಷಕಿ ಚೈತ್ರ ಬಿ ಶೆಟ್ಟಿ, ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
