ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) &(5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕುಂದಾಪುರ ಶಾಸ್ತ್ರಿ ಸರ್ಕಲ್ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು. ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು. 1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರಗತಿಗೆ ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಯುವ ನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಮತ್ತು ಯುವ ನಾಯಕತ್ವದ ಮಹತ್ವ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಕಾಲೇಜು ಐ.ಎಮ್.ಜಿ.ಐಸ್.ಸಿ ಯಂಗ್ ಲೀಡರ್ ಅವಾರ್ಡ್ 2024 ಎಂಬ ಸ್ಪರ್ಧೆಯನ್ನು ನಡೆಯುತ್ತಿದ್ದು ಜನವರಿ 12ರಂದು ಮೂಡ್ಡಕಟ್ಟೆ ಕ್ಯಾಂಪಸ್ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ ಎಂದು ಪ್ರಾಂಶುಪಾಲರಾದ ಡಾ. ಪ್ರತಿಭಾ ಪಟೇಲ್ ಎಮ್ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಯುವ ನಾಯಕತ್ವವನ್ನು ಉತ್ತೇಜಿಸುವುದು ಮತ್ತು ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಸ್ವರ್ಧೆಯ ಉದ್ದೇಶವಾಗಿದೆ. ಒಬ್ಬ ವಿದ್ಯಾರ್ಥಿ ಯುವ ನಾಯಕನಾಗಿ ರೂಪುಗೊಳ್ಳಬೇಕಾದರೆ ಅವನಿಗೆ ಇರಬೇಕಾದ ಅರ್ಹತೆ ಮತ್ತು ತಯಾರಿ ಹೇಗಿರಬೇಕು ಮತ್ತು ಸಂವಹನ ಕಲೆಯು ವಿದ್ಯಾರ್ಥಿ ಜೀವನದಲ್ಲಿ ಹೇಗೆ ಮಹತ್ವದ ಪಾತ್ರ ವಹಿಸುತ್ತದೆ ಎನ್ನುವುದು ಸ್ಪರ್ಧೆ ಆಯೋಜನೆಯ ಪರಿಕಲ್ಪನೆ ಎಂದರು. ಸಂಸ್ಥೆಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ| ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿನೂತನ ಬಗೆಯ ಸಂಗೀತ ರಸಮಂಜರಿಯ ಮೂಲಕ ಸಂಗೀತ ಪ್ರೀಯರ ಮನಗೆದ್ದ ಇನಿದನಿ ಕಾರ್ಯಕ್ರಮ ಜನವರಿ 14ರ ಸಂಜೆ 6 ಗಂಟೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದ ಬಯಲು ರಂಗಮಂದಿರದಲ್ಲಿ ಜರುಗಲಿದ್ದು, ಪ್ರತಿಭಾರಿಯಂತೆಯೇ ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಹೇಳಿದರು. ಅವರು ಮಂಗಳವಾರ ಕುಂದಾಪುರ ಪ್ರೆಸ್ಕ್ಲಬ್ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಈ ಭಾರಿಯ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಬೆಂಗಳೂರಿನ ಗಾಯಕ/ಗಾಯಕಿಯರಾದ ಅಜೇಯ್ ವಾರಿಯರ್, ಮೋಹನಕೃಷ್ಣ, ಶಶಿಕಲಾ ಸುನೀಲ್, ಸಮನ್ವಿತಾ ಶರ್ಮ, ಭಾಗವಹಿಸಲಿದ್ದಾರೆ. ಇವರೊಂದಿಗೆ ಮಂಗಳೂರಿನ ವೈ ಎನ್. ರವೀಂದ್ರ, ಸ್ಥಳೀಯರಾದ ಅಶೋಕ ಸಾರಂಗ್, ಯುವ ಪ್ರತಿಭೆ ಧಾರಿಣಿ ಕುಂದಾಪುರ, ಪ್ರಾಪ್ತಿ ಹೆಗ್ಡೆ ಹಾಗೂ ಕಮಲ್ ಕಿಶೋರ್ ಕುಂದಾಪುರ ಭಾಗವಹಿಸಲಿದ್ದು, ಹಿಮ್ಮೇಳದಲ್ಲಿ ರಾಜೇಶ್ ಭಾಗವತ್-ತಬಲಾ, ವಾಮನ್ ಕಾರ್ಕಳ-ಪ್ಯಾಡ್ ಮತ್ತು ಡ್ರಮ್ಸ್, ಗಣೇಶ್ ನವಗಿರಿ-ಕಾಂಗೋ, ಭಾಸ್ಕರ ಕುಂಬ್ಳೆ- ಡೋಲಕ್, ಶಿಜಿಮೂನ್ ಕ್ಯಾಲಿಕಟ್ ಹಾಗೂ ದೀಪಕ್ ಶಿವಮೊಗ್ಗ-ಕೀಬೋರ್ಡ್, ವರುಣ್-ಕೊಳಲು, ಸುಮುಖ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಇಲ್ಲಿ 25 ವರ್ಷಗಳ ಸಂವತ್ಸರಗಳನ್ನ ಅಂಗವಾಗಿ ಆಯೋಜಿಸಲಾದ ರೌಪ್ಯೋತ್ಸವದ ಉದ್ಘಾಟನಾ ಸಮಾರಂಭವವು ಅದ್ದೂರಿಯಾಗಿ ನೆರವೇರಿತು. ಸಮಾರಂಭವನ್ನು ಉದ್ಘಾಟಿಸಿದ ಉದ್ಯಮಿ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಅವರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 25 ವರ್ಷಗಳ ಪ್ರಗತಿಯನ್ನು ಕೊಂಡಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಲೋಕಾಯುಕ್ತರಾದ ಎನ್. ಸಂತೋಷ ಹೆಗ್ಡೆ ಅವರು ಮಾತನಾಡಿ ನಮ್ಮ ಸಮಾಜದಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಮೋಸ,ವಂಚನೆಗಳ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಬಿತ್ತಿ ಮಾನವರಂತೆ ಬದುಕುವ ಕಲೆಯನ್ನು ಕಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯದ್ವಯರು ಏಳುಬೀಳುಗಳ ಬಗ್ಗೆ ಮಾತನಾಡುತ್ತಾ ಇಪ್ಪತ್ತೈದು ವರ್ಷಗಳ ಪ್ರಯಾಣದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು. ರೌಪ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ ಸೇವಾ ಫೌಂಡೇಶನ್ ಪಡುಕೋಣೆ ಎಜುಕೇಶನ್ & ಸ್ಪೋಟ್ಸ್ ಪ್ರಮೋಟರ್ಸ್, ನಾಡ, ಜನ ಶಕ್ತಿ ಸೇವಾ ಟ್ರಸ್ಟ್ (ರಿ.), ನಾಡ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು. ಉದ್ಯಮಿ ಡಾ. ವಿಜಯಕೃಷ್ಣ ಪಡುಕೋಣೆ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರಿಗೂ ಅಗತ್ಯವಾಗಿದ್ದು,ಕಾಲ ಕಾಲಕ್ಕೆ ಸೂಕ್ತವಾದ ತಪಾಸಣೆ ಮಾಡಿಕೊಂಡಾಗ ಮಾತ್ರ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ-ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅನುಷ್ಠಾನ ಕುರಿತ ಅಂತರ್ ಇಲಾಖೆಯ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟುಗಳ ಜನಾಂಗದವರ ಸಮಗ್ರ ಅಭಿವೃದ್ಧಿ ಸೇರಿದಂತೆ ಅವರುಗಳ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಕೊರಗ ಸಮುದಾಯದವರು ಹೆಚ್ಚಿನ ಜನರು ಅನಕ್ಷರಸ್ಥರೇ ಇರುವ ಹಿನ್ನಲೆಯಲ್ಲಿ ಅವರುಗಳಿಗೆ ಯೋಜನೆಗಳ ಅರಿವು ಮೂಡಿಸಿ ಫಲಾನುಭವಿಗಳಾಗಿಸುವ ಕೆಲಸ ಆಗಬೇಕು ಎಂದರು. ಸರ್ಕಾರವು ವಿಶೇಷ ದುರ್ಬಲ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಆರೋಗ್ಯ ಸೇವೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಂಬಳೋತ್ಸವ ಮತ್ತು ರೈತರ ಸಮಾಗಮ ಕಾರ್ಯಕ್ರಮ ʼಬೈಂದೂರು ಕಂಬಳʼ ಜನವರಿ 7ರಂದು ನಡೆಯಲಿದ್ದು, ಕ್ಯಾರ್ತೂರಿನಲ್ಲಿ ಭರದ ತಯಾರಿ ನಡೆದಿದೆ. ಗಂಗಾನಾಡು ಗ್ರಾಮದ ಕ್ಯಾರ್ತೂರು ಶ್ರೀ ನರಸಿಂಹ ದೇವಸ್ಥಾನದ ಪಕ್ಕದ ವಿಶಾಲ ಗದ್ದೆ ಆಯೋಜಿಸಲಾಗಿರುವ ಬೈಂದೂರು ಕಂಬಳ ನಡೆಯಲಿದ್ದು ಅದಕ್ಕಾಗಿ ಸಿದ್ದತೆ ನಡೆಸಲಾಗಿದೆ. ಸಂಜೆ 5ರಿಂದ ಮೆರವಣಿಗೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಂಬಳ ಜರುಗಲಿದೆ. ಕಂಬಳಕ್ಕಾಗಿಯೇ ಹೊಸತಾಗಿ ಎರಡು ಟ್ರ್ಯಾಕ್ ಇರುವ ಕಂಬಳಗದ್ದೆಯನ್ನು ನಿರ್ಮಾಣ ಮಾಡಲಾಗಿದೆ. ಕರ್ತೂರು ಪರಿಸರವನ್ನು ವಿದ್ಯುದಲಂಕಾರಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಸಂಭ್ರಮ ಕಳೆಗಟ್ಟಿದೆ. ಗ್ರಾಮೀಣ ಭಾಗದಲ್ಲಿಯೂ ಕಂಬಳವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಅದ್ಧೂರಿಯಾಗಿ ರೈತರ ಹಬ್ಬವಾಗಿ ಆಚರಿಸಬೇಕು ಎಂಬ ಸದುದ್ದೇಶದೊಂದಿಗೆ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಕಂಬಳದ ನೇತೃತ್ವ ವಹಿಸಿದ್ದು, ಇದಕ್ಕೆ ಬೈಂದೂರಿನ ಮರಾಠಿ ಹಾಗೂ ಗೊಂಡ ಸಮಾಜ, ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರ ಪಶ್ಚಿಮ ಬದಿಯ ರಸ್ತೆಯ ಅಂಚಿನಲ್ಲಿ ನಿಂತಿದ್ದ ಲಾರಿಗೆ ಭಟ್ಕಳ ಕಡೆಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿಯಾಗಿ ಸಹಪ್ರಯಾಣ ಮಾಡುತ್ತಿದ್ದ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಮಾರುತಿ ಸ್ವಿಪ್ಟ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಚಾಲಕ ಹೇಮಂತ್ ಎಂಬುವವರು ತೀರಾ ಎಡ ಬದಿಗೆ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿತ್ತು. ಪರಿಣಾಮ ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಲಾವಣ್ಯ ಎಂಬುವವರಿಗೆ ತಲೆಗೆ ಗಂಭೀರ ಸ್ವರೂಪದದ ರಕ್ತಗಾಯವಾಗಿ ಪ್ರಜ್ಞೆ ತಪ್ಪಿದ್ದು ಕಾರಿನ ಚಾಲಕ ಹೇಮಂತನಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿತ್ತು. ಗಾಯಾಳು ಲಾವಣ್ಯ ಅವರನ್ನುತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರತ್ತದೆ.
