ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅನ್ನು ಅಭಿವೃದ್ದಿ ಪಡಿಸಲಾಗಿದ್ದು, ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2026-27” ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡು, ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ತದನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದ್ದಲ್ಲಿ ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್ಲೋಡ್ ಆಗುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ. ಕಚತ್ತಿ 306, ದರ್ಶನ್ ಎಂ. ಯರಗಲ್ 298, ಅನಿರುದ್ಧ ಕೆ.ಕೆ.280, ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ ವಿದ್ಯಾರ್ಥಿಗಳಾದ ಭುವನ್ ಆರ್ ಸಿದ್ದರಾಮ್ 267,ಆದ್ಯ ಎಸ್ ಪಡ್ರೆ 260, ಕೆ ಪಿ ಸಾಯಿ ಕೃಷ್ಣ249, ಅಕ್ಷರ ಎಸ್ ನಾಯಕ್248, ಪವನ್ ಕುಮಾರ್ ಎಲ್.ಎನ್.238, ಭುವನ್ ಎಸ್.227, ಚಿರಾಯು ಎಸ್. ಶೆಟ್ಟಿ 216, ಕಿಶನ್ ಎನ್ 213 ಪೂನಮ್ ಜಿ 209, ಪ್ರೇರಣ ಆರ್. ಹೆಗಡೆ 208, ಹಿತ ರವಿ ಶೆಟ್ಟಿ 206.ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 26 ವಿದ್ಯಾರ್ಥಿಗಳಲ್ಲಿ 14ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರ ಮಟ್ಟದಲ್ಲಿ ಒಟ್ಟು ಫಲಿತಾಂಶದಲ್ಲಿ 14% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಥಮ್ ಜಿ. ಕಾಂಚನ್ 2026ರ ಮೇ ತಿಂಗಳಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪ್ರಥಮ್ ಜಿ. ಕಾಂಚನ್ 230 ಅಂಕ ಹಾಗೂ ಅಭಿನವ್ ಜೆ. ಶೆಟ್ಟಿ 208 ಅಂಕಗಳನ್ನು ಪಡೆಯುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಜೂ.30ರಿಂದ ಜು.29 ತನಕ ನಡೆಯಲಿದ್ದು ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಶನ್ ಫಾರ್ಮ್ ನ್ನು ನೀಡುತ್ತಿದ್ದಾರೆ. ಎಲ್ಲಾ ಮತದಾರರರು ಜು.29ರೊಳಗೆ ಆ ಫಾರ್ಮ್ ತುಂಬಿಸಿ ವಾಪಾಸು ನೀಡಬೇಕಾಗಿದೆ. ಆ ಫಾರ್ಮ್ ನಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಅವರ ವಿವರಗಳನ್ನು, 2002ರಲ್ಲಿ ಅವರ ಹೆಸರು ಇಲ್ಲದಿದ್ದರೆ ಅವರ ತಂದೆ, ತಾಯಿ, ಅಜ್ಜ, ಅಜ್ಜಿ ಯಾರೊಬ್ಬರ ವಿವರವನ್ನಾದರೂ ತುಂಬಿಸಬೇಕಾಗಿದೆ. ಇದು ತುಂಬಿಸಲು ಎಲ್ಲಾ ಮತದಾರರಿಗೆ ಕಷ್ಟವಾಗುತ್ತಿದ್ದು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರರಿಗೆ ಕಷ್ಟವಾಗಬಾರದೆಂದು ಜು.3 ರಿಂದ ವಂಡ್ಸೆ ಗ್ರಾಮ ಪಂಚಾಯತ್ನಲ್ಲಿ ಮತದಾರರ ಸಹಾಯ ಕೇಂದ್ರ (ಎಸ್.ಐ.ಆರ್ ಹೆಲ್ಫ್ ಡೆಸ್ಕ್) ತೆರೆಯಲಾಗಿದೆ. ಇದು ರಜಾ ದಿನಗಳೂ ಸೇರಿದಂತೆ ವಾರದ ಏಳೂ ದಿನವೂ ಬೆಳಿಗ್ಗೆ 9.30 ರಿಂದ ಸಂಜೆ 6.30ರ ತನಕ ಕಾರ್ಯನಿರ್ವಹಿಸಲಿದ್ದು ಅರ್ಜಿ ತುಂಬಿಸಲು ಕಷ್ಟವಾಗುವ ಎಲ್ಲಾ ಮತದಾರರು ಎಸ್.ಐ.ಆರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನೆಡೆದ ’ಕೆಂಚನೂರು ಯಕ್ಷೋತ್ಸವʼದಲ್ಲಿ ಸಂಗ್ರಹವಾದ ಉಳಿಕೆ ಮೊತ್ತದಿಂದ ಕೆಂಚನೂರು ಗ್ರಾಮದಲ್ಲಿ ಆರ್ಥಿಕವಾಗಿ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಯಿತು. ಫಲಾನುಭವಿಗಳಾದ ಸೂರಜ್ ಆಚಾರ್ಯ, ದೀಪಿಕಾ, ಗೋಪಾಲ್ ಮೊಗವೀರ ಕೆಂಚನೂರು, ರಾಜು ಗಾಣಿಗ ಹೆಮ್ಮಾಡಿ ಅವರಿಗೆ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕೆಂಚನೂರು ಯಕ್ಷೋತ್ಸವದ ರೂವಾರಿ ರವಿ ಗಾಣಿಗ ಮಲ್ಲಾರಿ, ಕೆಂಚನೂರು ಆರ್ಥಿಕ ನೆರವು ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್. ಸುಧೀರ್ ಶೆಟ್ಟಿ ಕೆಂಚನೂರು, ಸುಬ್ಬಣ್ಣ ಶೆಟ್ಟಿ ಕೆಂಚನೂರು, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೀವ್ ಶೆಟ್ಟಿ ಕೆಂಚನೂರು, ಜೈನುದ್ದೀನ್ ಶೆಟ್ರಕಟ್ಟೆ, ಗುಂಡು ಶೆಟ್ಟಿ ಕೆಂಚನೂರು ಉಪಸ್ಥಿತರಿದ್ದರು. ಸಮಾಜಮುಖಿ ಕಾರ್ಯಕ್ಕೆ ಸಹಕರಿಸಿದ ದಾನಿಗಳಾದ ರವಿ ಗಾಣಿಗ ಮಲ್ಲಾರಿ – ಕೆಂಚನೂರು ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ ಉಪಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ.ಕೆ. ಮಾತನಾಡಿ, “ಪುರಾಣ ಪುರುಷರು ನಡೆದಾಡಿದ ಈ ನೆಲದಲ್ಲಿ ಉಸಿರಾಡಿದ ಈ ಪರಿಸರದಲ್ಲಿ ವಿದ್ಯಾರ್ಥಿಗಳು ಘನ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಾಧಕರಾಗಿ ಬೆಳೆಯಬೇಕು” ಎಂದು ನುಡಿದರು. ಕಾಲೇಜಿನ ಹಿರಿಯ ವಿಶ್ವಸ್ಥರಾದ ದೇವದಾಸ ಕಾಮತ್ ಸಭೆಯನ್ನುದ್ದೇಶಿಸಿ ಕಣ್ಣಿಗೆ ಕಾಣುವ ದೇವರು ತಾಯಿ ತಂದೆ, ಸತತ ಪರಿಶ್ರಮ, ಪ್ರಯತ್ನದಿಂದ ವಿದ್ಯಾರ್ಥಿ ಗಳು ಸಾಧಕರಾಗಿ ಬೆಳೆಯಿರಿ ಎಂದು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪರೀಕ್ಷೆಯ ಮೊದಲ ಅವಧಿಯಲ್ಲಿ ಪಾಸಾದ ಹೆಮ್ಮೆಯ ಹಳೆ ವಿದ್ಯಾರ್ಥಿ ಕೆ. ಕಿರಣ್ ಕಾಮತ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೇ.2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ 39 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಜಶ್ ಕಾವೇರಿಯಪ್ಪ ಎ.ಎಂ. (297) ಪ್ರತೀಕ್ ಜೈನ್ ಹಾಗೂ ಸುಧೀಕ್ಷಾ ಎಸ್. ಶೆಟ್ಟಿ ತಲಾ 290 ಅಂಕ, ಪ್ರದ್ಯುಮ್ನ ಭೈರಡ್ಡಿ (289) ರಾಹುಲ್ (288), ಬಸವೇಶ್ವರ (287), ವೈಷ್ಣವಿ ರಾವ್ (286), ದಿಶಾ (279), ಮೋಹಿತ್ ಸಂದೇಶ್ ದೇಸಾಯಿ (276) ಶ್ರೇಯಾಂಕ್ ಆರ್. ಶೆಟ್ಟಿ (262) ಬೃಂದಾ ಆರ್.ಟಿ. (252), ಸ್ಪೂರ್ತಿ ವೀರೇಶ್ ಪಟ್ಟಣಶೆಟ್ಟಿ (251), ಗಾನಶ್ರೀ ಟಿ. (244), ಸಂಶ್ರಿತ್ (240), ಆದರ್ಶ್ ಬಾಲಚಂದ್ರ (239), ಎಸ್.ಜಿ. ಪ್ರತ್ಯೂಷ್ (239), ಶಾರೇಲ್ ಲವಿಟಾ ರೋಡ್ರಿಗ್ಸ್ (236), ಮೊಹಮ್ಮದ್ ಫಹೀಮ್ (232), ವಿಕ್ಯಾತ್ (232), ಸಿಂಚನಾ ಶ್ಯಾಮಸುಂದರ್ ಡಂಬಳ (231), ನಿಹಾರಿಕಾ ಜೆ. ಶೆಟ್ಟಿ (231), ಟಿ. ಸೃಷ್ಟಿ (230), ಶ್ರಾವ್ಯ (230), ಮೋಹಿತ್ ಗೌಡ ಆರ್.ಎಸ್. (229), ಯಶಸ್ವಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರದ ವ್ಯಾಪ್ತಿಗೆ ಬರುವ ವಡ್ಡರ್ಸೆ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬುಧವಾರ ಬನ್ನಾಡಿಯ ಸುಬ್ಬಣ್ಣ ಹೆಗ್ಡೆ ಸಭಾಭವನದಲ್ಲಿ ಯಶಸ್ವಿಯಾಗಿ ನೆರವೇರಿತು. ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಉಪಸ್ಥಿತರಿದ್ದ ಈ ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೂತ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಶಕ್ತಿ ಕೇಂದ್ರದ ಮಹತ್ವ ಮತ್ತು ಮುಂದಿನ ಗುರಿ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ ಪಕ್ಷ ಸಂಘಟನೆಯ ಸೂಕ್ಷ್ಮ ರಚನೆಯ ಕುರಿತು ಸ್ಪಷ್ಟ ನಿರ್ದೇಶನ ನೀಡಿದರು. “ಶಕ್ತಿ ಕೇಂದ್ರ ಎಂದರೆ ಪಕ್ಷದ ನಿಜವಾದ ಶಕ್ತಿ. ಬೂತ್ ಮಟ್ಟದ ಕೊನೆಯ ಕಾರ್ಯಕರ್ತನವರೆಗೂ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳು ತಲುಪಬೇಕು. ಅದಕ್ಕಾಗಿ ನಮ್ಮ ಗುರಿ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಆಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಜೂನ್ 1ರಂದು ಮುಂಜಾನೆ 8:30ರ ಸುಮಾರಿಗೆ ಬ್ರಹ್ಮಾವರ ಬಸ್ ನಿಲ್ದಾಣದ ಬಳಿಯಿಂದ ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಅಪಹರಿಸಿಕೊಂಡು ಕೇರಳದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿಗೆ ಕರೆದೊಯ್ದಿದ್ದರು. ಅಲ್ಲಿ ಆರೋಪಿಗಳು ಬಾಲಕನನ್ನು ಬಲಾತ್ಕಾರವಾಗಿ ವುಡ್ ಕಂಪೆನಿಗೆ ಕೆಲಸಕ್ಕೆ ಸೇರಿಸಿದ್ದರು. ಬಾಲಕ ತನಗೆ ಮನೆಗೆ ಹೋಗಬೇಕೆಂದು ಹಠ ಹಿಡಿದಾಗ, ಜೂ.9ರಂದು ಸುಚಿತ್ ತಾವಿದ್ದ ರೂಮಿನಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ್ದು, ವಿಖ್ಯಾತ್ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿ ನಿಂದಿಸಿದ್ದ. ಈ ಕೃತ್ಯವನ್ನು ಇನ್ನೊಬ್ಬ ಮೊಬೈಲ್ನಲ್ಲಿ ವಿಡಿಯೋ ಮಾಡಿರುವುದಾಗಿ ಬಾಲಕನ ತಂದೆ ಬ್ರಹ್ಮಾವರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿ ತಂತ್ರಾಂಶವಾದ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು…
