ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕಾರ್ಕಳ ತಾಲೂಕಿನ ಅಜೆಕಾರಿಗೆ ವರ್ಗವಾಗಿರುವ ಡಾ. ಗಿರೀಶ ಗೌಡ ಅವರನ್ನು ಬುಧವಾರ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ, ವಿದಾಯ ಕೋರಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯ ನಾಗರಾಜ ಪಟಗಾರ್, ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್, ಗ್ರಾಮ ಕರಣಿಕ ಮಹಾಂತೇಶ ಕೋಣಿನವರ್, ಕರ ಸಂಗ್ರಾಹಕ ಶೇಖರ, ಇತರರು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನುಷ್ಯನ ದೇಹಾರೋಗ್ಯಕ್ಕೆ ಔಷಧಗಳಂತೆ ಮಾನಸಿಕ ಆರೋಗ್ಯಕ್ಕೆ ಧರ್ಮ, ಸಾಂಸ್ಕೃತಿಕ ಮನರಂಜನೆಗಳು ಅವಶ್ಯ. ಹಿಂದಿನಿಂದಲೂ ದೇವಾಲಯಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆರಾಧನೆಯ ರೂಪದಲ್ಲಿ ನಡೆಸಲಾಗುತ್ತಿತ್ತು. ಆದ್ದರಿಂದಲೇ ಯಕ್ಷಗಾನದಂತಹ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಯಿತು-ಎಂದು ಉಡುಪಿ ಜಿಲ್ಲಾ ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ ದೇವದಾಸ ಪೈ ಹೇಳಿದರು. ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಾಲಯ ರಥಬೀದಿಯ ಸುಬ್ರಾಯ ಮಲ್ಯ ವೇದಿಕೆಯಲ್ಲಿ ನೂತನ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಮಂಡಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಕಾರ್ಯಕ್ರಮಗಳಿಗಾಗಿ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ೩೩೦ ಕೋಟಿ ರೂ. ಮೀಸಲಿರಿಸಿದೆ. ವಾರ್ಷಿಕ 50 ಲಕ್ಷ ರೂ.ಗಳವರೆಗೆ ಪ್ರತಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಇಲಾಖೆ ಪ್ರಾಯೋಜನೆ ಒದಗಿಸುತ್ತದೆ. ಪ್ರತಿ ಜಿಲ್ಲೆಯಲ್ಲಿ ಸಂಸ್ಕೃತಿ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಬಯಲು ರಂಗಮಂದಿರಕ್ಕೆ ಒಂದು ಲಕ್ಷ ರೂ. ಪ್ರೋತ್ಸಾಹಧನ ಒದಗಿಸುತ್ತದೆ. ಪೌರಾಣಿಕ ನಾಟಕಗಳಿಗೆ 30 ಸಾವಿರ ರೂ. ಪ್ರೋತ್ಸಾಹಧನ ನೀಡಬಹುದಾಗಿದೆ. ಕಂಬಳ ಮಸ್ತಕಾಭಿಷೇಕ ಮೊದಲಾದ ಕಾರ್ಯಕ್ರಮಗಳಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಮನವಮಿ ಅಂಗವಾಗಿ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದೇವರ ಪ್ರಾರ್ಥನೆ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಮಹಾಸಮಾರಾಧನೆ ನಡೆಯಿತು. ದೇವಸ್ಥಾನದ ಮೊಕ್ತೇಸರರು, ಜಿಎಸ್‌ಬಿ ಸಮಾಜ ಭಾಂದವರು ಉಪಸ್ಥಿತರಿದ್ದರು. ದೇವತಾ ವಿಧಿ ವಿಧಾನಗಳನ್ನು ವೇ.ಮೂ.ಶ್ರೀನಿವಾಸ ಭಟ್ ಮತ್ತು ವೇ.ಮೂ.ಪ್ರಶಾಂತ ಭಟ್ ನೇರವೇರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಉಪ್ಪುಂದ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ಮಾಹಿತಿ ಹಾಗೂ ತಪಾಸಣೆ ಶಿಬಿರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮ ಜೋಗಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ ’ಜಗತ್ತಿನ ಎಲ್ಲಾ ದೇಶಗಳ ಜನರು ಆರೋಗ್ಯವಂತರಾಗಿರಬೇಕೆಂಬ ಉದ್ದೇಶದಿಂದ 1950ರ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪಿತವಾಯಿತು. ಅನಂತರ ಪ್ರತಿವರ್ಷವೂ ಒಂದೊಂದು ಧ್ಯೇಯವಾಕ್ಯದಡಿಯಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಜನಸಾಮಾನ್ಯರಲ್ಲಿ ಆರೋಗ್ಯ ಕುರಿತು ಸಮರ್ಪಕವಾದ ಮಾಹಿತಿ ಹಾಗೂ ಜಾಗೃತಿಯ ಕೊರತೆಯಿದೆ. ಅದನ್ನು ನೀಡುವಲ್ಲಿ ಸಂಘಸಂಸ್ಥೆಗಳು ಮುಂದಾಗಬೇಕು’ ಎಂದರು. ರೋಗದ ಬಗೆಗೆ ಹೆದರಿಕೆ, ಭಯ ಪಡುವ ಬದಲು ಅದು ಬರದಂತೆ, ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ಹೇಗೆ ಮುಂಜಾಗೃತೆ ವಹಿಸಬೇಕೆಂಬ ತಿಳುವಳಿಕೆ ಇರಬೇಕು. ನಮ್ಮ ಪರಿಸರವನ್ನು…
ಕುಂದಾಪುರ: ಉಡುಪಿ ಜಿಲ್ಲಾ ಅಬಕಾರಿ ವಿಶೇಷ ದಳ ಎಸ್ಸೈ ಶಂಕರ್ ಎ.ಪಿ.(58) ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 35 ವರ್ಷದಿಂದ ಅಬಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಗುರುವಾರ ಬೆಳಗ್ಗೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಂಜೆಯ ವೇಳೆಗೆ ಮೃತರಾದರು. ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರ ಮನೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮತ್ತು ಸಮಾಜದ ಅನೇಕ ಮುಖಂಡರ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಸ್ವಯಂಪ್ರೇರಿತರವಾಗಿ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರೆಯುತ್ತದೆ. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಬಾರದಂತೆ ಮಾಡಬಹುದು. ಹೀಗಾಗಿ ರಕ್ತದಾನ ಮಾಡುವವರಿಗೆ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸುವವರನ್ನು ನಿರಂತರವಾಗಿ ಪ್ರೋತ್ಸಾಹಿಸಬೇಕು ಎಂದರು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ಶಾಖೆಯ ಚೇರಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಓಂ ಶ್ರೀ ಮಾತೃ ಮಂಡಳಿ ಬಾವಿಕಟ್ಟೆ ಗಂಗೊಳ್ಳಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯೆ ಡಾ.ಕಲಾಶ್ರೀ ಶಿಬಿರವನ್ನು ಉದ್ಘಾಟಿಸಿದರು. ರಕ್ತನಿಧಿ ಕೇಂದ್ರದ ವೈದ್ಯ ಡಾ.ಮಲ್ಲಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋ-ಆರ್ಡಿನೇಟರ್ ಎ.ಮುತ್ತಯ್ಯ ಶೆಟ್ಟಿ, ಶ್ರೀ ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀಧರ ಎನ್., ಮಲ್ಪೆಯ ಮತ್ಸ್ಯೋದ್ಯಮಿ ಜಗದೀಶ…
ಕುಂದಾಪುರ : ಕಾರ್ಮಿಕ ಹಿರಿಯ ಮುಖಂಡ ಸಿಪಿಎಂ ನೇತಾರ ಸಿ.ನಾರಾಯಣ್ (80) ಸ್ವಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಗ್ಗೆ ಕುಂದಾಪುರ ಚರ್ಚ್ ರಸ್ತೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂರು ಗಂಡು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರದಲ್ಲಿ ಸಿಪಿಎಂ ಪಕ್ಷ ಸಂಘಟನೆಯಲ್ಲಿ ಪ್ರಮುಖ ಮಾತ್ರ ವಹಿಸಿದ, ಮೃತರು ಕಾರ್ಮಿರ, ಅಸಂಘಟಿತ ಕಾರ್ಮಿಕರ ದ್ವನಿಯಗಿದ್ದರು. ಕಾರ್ಮಿಕ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ರಾಮನವಮಿ ದಿನದಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಮಹಾಪೂಜೆ ಇತ್ಯಾದಿ ಧಾರ್ಮಿಕ ವಿಧಿಗಳು ನಡೆದವು. ಕುಂದಾಪುರ ತೇರು ಎಂದೇ ಪ್ರಸಿದ್ಧವಾಗಿರುವ ಜಿಎಸ್‌ಬಿ ಸಮುದಾಯದ ಪೇಟೆ ಶ್ರೀ ವೆಂಕಟರಮಣ ರಥೋತ್ಸವವನ್ನು ನೋಡಲು ದೇವಸ್ಥಾನದ ಆಡಳಿತ ಮೊಕ್ತೇಸರ ರಾಧಾಕೃಷ್ಣ ಶೆಣೈ, ಜತೆ ಮೊಕ್ತೇಸರರಾದ ಕೋಡಿ ಶ್ರೀನಿವಾಸ ಶೆಣೈ, ಪಿ. ಮಾಳಪ್ಪ ಪೈ ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ರಥಾರೂಡ ಶ್ರೀ ವೆಂಕಟರಮಣ ದೇವರ ರಥವನ್ನು ಸ್ಪರ್ಷಿಸುವ ವಿಶಿಷ್ಟ ಪ್ರಕ್ರಿಯೆ ರಥ ಬಳುವಳಿಯಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ರಥಕ್ಕೆ ಸ್ಪರ್ಷಿಸಿ ಆಶಿರ್ವಾದ ಪಡೆದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹೆಚ್ಚಿನ ಸುದ್ದಿಗಳು ಅಪ್ ಡೇಟ್ ಆಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಅಧಿಕಾರ, ಶಿಕ್ಷಣ, ಆರ್ಥಿಕ ಸಬಲೀಕರಣ, ರಾಜಕೀಯ ಸಮಾನತೆ ಡಾ. ಅಂಬೇಡ್ಕರ್ ಆಶಯವಾಗಿತ್ತು. ರಾಜಕೀಯ ಲಾಭಕ್ಕಾಗಿ ಜಾತಿಗಳ ಒಡೆಯಲಾಗಿದೆ. ಒಡೆದ ಜಾತಿಗಳು ಮತ್ತೆ ಒಂದಾಗಿ ಆರ್ಥಿಕ, ರಾಜಕೀಯ, ಶಿಕ್ಷಣ ಮತ್ತು ಸಮಾನತೆ ಸಾಧಿಸುವ ಮೂಲಕ ಅಂಬೇಡ್ಕರ್ ಆಶಯ ಪೂರೈಸಬೇಕಾಗಿದೆ ಎಂದು ಚಿಕ್ಕಮಗಳೂರು ಬಿಎಸ್‌ಪಿ ರಾಜ್ಯ ಕಾರ‍್ಯದರ್ಶಿ ವೆಲಾಯುಧನ್ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕುಂದಾಪುರ ತಾಪಂ. ಕಚೇರಿ ಎದುರು ನಡೆದ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ ಹಾಗೂ ಭೀಮಜ್ಯೋತಿ ವಿವಿದೋದ್ಧೇಶ ಸಹಕಾರಿ ಸಂಘ ಉದ್ಘಾಟನೆ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟೀಸ್ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಕಾಪು ವಿದ್ಯಾನಿಕೇತನ ಉಪನ್ಯಾಸಕಿ ಜ್ಯೋತಿ ಗುರು ಪ್ರಸಾದ್ ಭೀಮಜ್ಯೋತಿ ಸಹಕಾರಿ ಸಂಘ ಉದ್ಘಾಟಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ತಲ್ಲೂರು ಉದಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಪ್ರಶಾಂತ್…
