ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದದ ಮೀನುಗಾರರ ಸಹಕಾರ ಸಂಘಕ್ಕೆ ಉದ್ಯೋಗಿಗಳೇ ವಂಚಿಸಿರುವ ಘಟನೆ ನಡೆದಿದೆ. ಉಪ್ಪುಂದದಲ್ಲಿರುವ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ನಾವುಂದ ನಿವಾಸಿ ಸುಭಾಶ್ಚಂದ್ರ ಪೂಜಾರಿ (39) ಮತ್ತು ಪ್ರಧಾನ ವ್ಯವಸ್ಥಾಪಕರಾಗಿದ್ದ ಮರವಂತೆ ನಿವಾಸಿ ದೀಪಕ್ ಕುಮಾರ್ (35) ಅವರು ಸೇರಿಕೊಂಡು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು 2023-2024ನೇ ಸಾಲಿನಲ್ಲಿ ಒಟ್ಟು 80,91,996/- ಮೊತ್ತದ ಹಣವನ್ನು ತಮ್ಮ ಸ್ವಂತಕ್ಕೆ ದುರುಪಯೋಗಪಡಿಸಿಕೊಂಡು ಸಂಘಕ್ಕೆ ಮೋಸ ಮಾಡಿ ವಂಚಿಸಿರುವುದು 2023- 2024 ರ ಸಾಲಿನ ಲೆಕ್ಕ ಪರಿಶೋಧನಾವರದಿಯಲ್ಲಿ ಸಂಘದ ಗಮನಕ್ಕೆ ಬಂದಿರುವುದಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಬಗ್ಗೆ ಮಾನ್ಯ ನ್ಯಾಯಾಲಯದ ಆದೇಶದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ನಡೆದಿದೆ. ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಎಂಬವರು ತನ್ನ ಮೊಮ್ಮಗನೊಂದಿಗೆ ಮನೆಯ ಹತ್ತಿರದ ಭಜನಾ ಕಾರ್ಯಕ್ರಮಕ್ಕಾಗಿ ಮನೆಗೆ ಬೀಗ ಹಾಕಿ ತೆರಳಿದ್ದರು. ರಾತ್ರಿ 12 ಗಂಟೆ ನಂತರ ಮನೆಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನಸುಕಿನ ವೇಳೆ 2 ಗಂಟೆಯ ಸುಮಾರಿಗೆ ಮನೆಯ ಹತ್ತಿರದ ದಾರಿಯಲ್ಲಿ ಹೋಗುತ್ತಿದ್ದವ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ, ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ಆದರೆ ಅದಾಗಲೇ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪ್ತಿದ್ದು, ಮನೆಯ ಮಾಡು, ಗೋಡೆಗಳಿಗೆ ಹಾನಿಯಾಗಿದೆ. ಮನೆ ಒಳಗಿದ್ದ ಚಿನ್ನಾಭರಣ, ನಗದು, ಟಿವಿ, ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಬರೆ, ಪಾತ್ರೆಗಳೆಲ್ಲವೂ ಸುಟ್ಟು ಕರಕರಲಾಗಿದೆ. ಇದರಿಂದ ಸುಮಾರು 5 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಬಳಿಕ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ “ಆಳ್ವಾಸ್ ಇಂಟಿಗ್ರೇಟೆಡ್ ಕ್ಲಿನಿಕಲ್ ಡಯಾಗ್ನಾಸ್ಟಿಕ್ಸ್ ಲ್ಯಾಬೋರೇಟರಿ” ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಆಲೈಡ್ ಹೆಲ್ತ್ ಸೈನ್ಸ್ಸ್ನ ಡೀನ್ ಡಾ. ಜಯಪ್ರಕಾಶ್ ಶೆಟ್ಟಿ ಕೆ. ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಕೇಂದ್ರ ಪ್ರಯೋಗಾಲಯ ಮತ್ತು ರೇಡಿಯಾಲಜಿ ವಿಭಾಗಗಳು ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿವೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗೂ ಭಾರತೀಯ ವೈದ್ಯಕೀಯ ಮಂಡಳಿಯ ಪರಿಶೀಲನೆಗಳಲ್ಲಿ ಈ ಎರಡು ವಿಭಾಗಗಳು ಪ್ರಮುಖವಾಗಿ ಗಮನ ಸೆಳೆಯುತ್ತವೆ. ಯಾವುದೇ ವೈದ್ಯಕೀಯ ಸಂಸ್ಥೆಯ ಮೂಲಸೌಕರ್ಯ ಮತ್ತು ಗುಣಮಟ್ಟದ ಮೌಲ್ಯಮಾಪನದಲ್ಲಿ ಈ ವಿಭಾಗಗಳನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದರು. ಕೇಂದ್ರ ಪ್ರಯೋಗಾಲಯದ ಸ್ಥಾಪನೆ, ಕೇವಲ ಸೌಲಭ್ಯವಲ್ಲ, ಅದು ಒಂದು ಸಂಸ್ಥೆಯ ಶೈಕ್ಷಣಿಕ ಹಾಗೂ ವೈದ್ಯಕೀಯ ಗುಣಮಟ್ಟದ ಪ್ರತಿಬಿಂಬವಾಗಿದೆ. ಇಂತಹ ಪ್ರಯೋಗಾಲಯಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಸಹಕಾರಿಯಾಗುವುದರ ಜೊತೆಗೆ, ರೋಗಿಗಳಿಗೆ ನಿಖರ ಮತ್ತು ವೇಗವಾದ ನಿರ್ಧಾರಾತ್ಮಕ ಸೇವೆಯನ್ನು ಒದಗಿಸುತ್ತದೆ ಎಂದರು. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಸ್ ಆ್ಯಂಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ “ಐಕ್ಯಂ 2025–26” ವಾರ್ಷಿಕ ಕ್ರೀಡೋತ್ಸವವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೈಹಿಕ ಸದೃಢತೆ, ಶಿಸ್ತು ಮತ್ತು ಕ್ರೀಡಾಮನೋಭಾವದ ಮಹತ್ವವನ್ನು ಎತ್ತಿ ತೋರಿಸಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಭವ್ಯವಾದ ಪಥ ಸಂಚಲನನೊಂದಿಗೆ ಪ್ರಾರಂಭವಾಯಿತು, ಇದು ಏಕತೆ ಮತ್ತು ಸಮನ್ವಯವನ್ನು ಪ್ರತಿಬಿಂಬಿಸಿತು. ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಪ್ರವೀಶ್, ಹರ್ಷ, ದೀಕ್ಷಿತಾ, ವೈಭವಿ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಕ್ರೀಡಾ ಜ್ಯೋತಿಯನ್ನು ಹೊತ್ತು ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆರಂಭಿಸಲಾಯಿತು. ಮುಖ್ಯ ಅತಿಥಿ ಜೀವನ್ ಕುಮಾರ್ ಶೆಟ್ಟಿ ಅವರು ಸಭೆಯನ್ನು ಉದ್ದೇಶಿಸಿ, ದೈಹಿಕ ಶಕ್ತಿಯ ಮಹತ್ವವನ್ನು, ವಿಶೇಷವಾಗಿ ಪೊಲೀಸ್ ಮತ್ತು ರಕ್ಷಣೆಯಂತಹ ಸರ್ಕಾರಿ ಸೇವೆಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಇಂತಹ ವೃತ್ತಿಜೀವನದಲ್ಲಿ ಶೈಕ್ಷಣಿಕ ಅಂಕಗಳಿಗಿಂತ ದೈಹಿಕ ಸದೃಢತೆ ಹೆಚ್ಚು ನಿರ್ಣಾಯಕವಾಗಿದೆ, ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಭವಿಷ್ಯದಲ್ಲಿ ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿಂದ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ಮಣಿಪಾಲ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದುಕೊಂಡ ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾದ ವಾರೀಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಸೋಮವಾರ ಜರಗಿತು. ಮೊಬೈಲ್ ಕಳೆದುಕೊಂಡು ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದ ಮೊಬೈಲ್ಗಳ ಪೈಕಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದು, ಆ ಮೊಬೈಲ್ಗಳನ್ನು ಜಿಲ್ಲೆಯ ಎಲ್ಲಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಮೂಲ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಹೀಗೆ ಜಿಲ್ಲೆಯಲ್ಲಿ ಒಟ್ಟು 241 ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಿ.ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ಆರ್ಥಿಕ ಸಾಕ್ಷರತಾ ಶಿಕ್ಷಣ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸಿನ ಮಹತ್ವ ಮತ್ತು ಸಮಾತೋಲನ ಆಹಾರ ಮತ್ತು ಆರೋಗ್ಯ ಎನ್ನುವ ವಿಷಯದ ಮಾಹಿತಿ ಕಾರ್ಯಾಗಾರ ಇತ್ತೀಚಿಗೆ ನಡೆಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಸಹಕಾರಿ ವ್ಯವಸಾಯಕ ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಸಣ್ಣವರಿರುವಾಗಲೇ ಹಣಕಾಸಿನ ಮಹತ್ವ ಅರಿತು ಉಳಿತಾಯದ ಜ್ಞಾನ ಬೆಳೆಸಿ ಕೊಳ್ಳಿ ಎಂದರು. ನಾವು ದಿನ ನಿತ್ಯ ಜೀವನದಲ್ಲಿ ಸಮತೋಲನ ಆಹಾರ ಸೇವಿಸಿ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪಲ್ಲವಿ ಮಾಹಿತಿ ನೀಡಿದರು. ಚಿತ್ರಪಾಡಿ ಎಳೆ ಮಹಾಲಿಂಗೇಶ್ವರ ದೇವಸ್ಥಾನ ಮುಖ್ಯಸ್ಥ ವಿಶ್ವೇಶ್ವರ ತುಂಗ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಮ್.ಜಿ.ಎಮ್. ಕಾಲೇಜ್ನ ನಿವೃತ್ತ ಪ್ರಾಂಶುಪಾಲ ಲಕ್ಷ್ಮೀ ನಾರಾಯಣ ಕಾರಂತ್, ನಿವೃತ್ತ ಮುಖ್ಯೋಪಾಧ್ಯಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಸ್ತುತ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕ ಪದ್ಮನಾಭ ಅಡಿಗ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕ ಮಾಧವ ಅವರು ಧನ್ಯವಾದ ಸಮರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವ್ಯಕ್ತಿತ್ವ ವಿಕಸಿನ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಸಿದ್ದಾಪುರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವವನ್ನು ತುಂಬುತ್ತದೆ. ವಿದ್ಯಾರ್ಥಿಗಳು ಈ ಶಿಬಿರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಸಿದ್ದಾಪುರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕುಲಾಲ್, ಸಿದ್ದಾಪುರ ರಾಮದಾಸ ಪ್ರಭು, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭೋಜ ಶೆಟ್ಟಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಭಾನುವಾರ ಬೆಳಗಿನ ಜಾವ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಬಂಧಿಸಿದ್ದಾರೆ. ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್ (29), ಸಲೀಂ ಹುಸೇನ್ ಸಾಬ್ ನದಾಫ್ (33), ಕಂಡ್ಲೂರಿನ ನದೀಂ ಅಬ್ದುಲ್ ಖಾದರ್ (34) ಬಂಧಿತ ಆರೋಪಿಗಳು. ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿದಾಗ ಮೂರು ಎತ್ತುಗಳನ್ನುಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ ರೂ. ಮೌಲ್ಯದ ಮೂರು ಎತ್ತುಗಳನ್ನು, 4 ಲಕ್ಷ ರೂ. ಮೌಲ್ಯದ ವಾಹನ ಮತ್ತು ಬೆಂಗಾವಲಾಗಿದ್ದ 5ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿ ಇಳಿದು ಓಡಿ ಹೋಗಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
